Blog Archive

ಸ್ವಾವಲಂಬಿ ಬದುಕು ರೂಪಿಸಲು ಸರ್ಕಾರದಿಂದ ಎಲ್ಲ ನೆರವು : ಸಚಿವ ಯು ಟಿ ಖಾದರ್

Tuesday, December 4th, 2018
vedvyas-kamath-2

ಮಂಗಳೂರು : ಮುಖ್ಯವಾಹಿನಿಯಲ್ಲಿ ಎಲ್ಲರೂ ಸಮಾನರಾಗಿ ಬದುಕಲು ವಿಕಲಚೇತನರಿಗೆ ಸರ್ಕಾರ ಸಂಘಸಂಸ್ಥೆಗಳ ಮೂಲಕ ಎಲ್ಲ ನೆರವು ನೀಡುತ್ತಿದ್ದು, ಈ ಸಂಬಂಧ ಸ್ವೀಕರಿಸಿದ ಮನವಿಗಳನ್ನು ಪರಿಶೀಲಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನಗರಾಭಿವೃದ್ಧಿ ಹಾಗೂ ವಸತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ, ವಿಕಲಚೇತನರಿಗಾಗಿ […]

ಅನಂತಕುಮಾರ್ ನಿಧನಕ್ಕೆ ಸಚಿವ ಯು. ಟಿ. ಖಾದರ್ ಸಂತಾಪ

Tuesday, November 13th, 2018
u-t-khader

ಮಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಯು. ಟಿ.‌ ಖಾದರ್ ಸಂತಾಪ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಧೀಮಂತ ನಾಯಕರಲ್ಲಿ ಅನಂತಕುಮಾರ್ ಒಬ್ಬರಾಗಿದ್ದರು. ನಾನು ಸಚಿವನಾಗಿ ಕೆಲಸ ಮಾಡಿದ್ದಾಗ ಹಲವಾರು ವಿಚಾರಗಳ ಬಗ್ಗೆ ಅನಂತಕುಮಾರ್ ಸಲಹೆ ನೀಡಿದ್ದಾರೆ. ಅನಂತ್ ಕುಮಾರ್ ಅಗಲಿಕೆ ದುಃಖ ತಂದಿದೆ. ಅವರ ಅಗಲಿಕೆ ರಾಜ್ಯಕ್ಕೆ ಭರಿಸಲಾರದ ನಷ್ಟ ಎಂದು ಅವರು ಹೇಳಿದ್ದಾರೆ.

ಕಸಾಯಿಖಾನೆ ವಿವಾದ: ಪ್ರಧಾನಮಂತ್ರಿ ಮತ್ತು ಅರ್ಬನ್ ಡೆವಲಪ್​ಮೆಂಟ್ ಸಚಿವರಿಗೆ ಪತ್ರ ಬರೆದ ಯು ಟಿ ಖಾದರ್

Tuesday, October 16th, 2018
u-t-kadher

ಮಂಗಳೂರು: ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕಸಾಯಿಖಾನೆಯ ಸ್ವಚ್ಛತ ಮತ್ತು ಅಭಿವೃದ್ಧಿಗೆ ಹೋಲಿಸುವ ಸಂಬಂಧ ನೀಡಿರುವ ಸಲಹೆ ವಿವಾದಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರಧಾನಮಂತ್ರಿ ಮತ್ತು ಅರ್ಬನ್ ಡೆವಲಪ್ಮೆಂಟ್ ಸಚಿವರಿಗೆ ಪತ್ರ ಬರೆಯುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಸ್ವಚ್ಛತೆ ಅಭಿವೃದ್ಧಿಗೆ ಉತ್ತಮವಾದ ಆಹಾರ ಜನರಿಗೆ ಸಿಗಬೇಕೆಂದು ಈ ಪ್ರಪೋಸಲ್ ಅನ್ನು ಸ್ಮಾರ್ಟ್ ಸಿಟಿ ಸಮಿತಿಯ ಮುಂದೆ ಇಟ್ಟಿದ್ದೆ. ಆದರೆ ಈ ಬಗ್ಗೆ ಚುನಾಯಿತ […]

ಕುದ್ರೋಳಿ ಕಸಾಯಿಖಾನೆ ವಿವಾದ: ಯು ಟಿ ಖಾದರ್ ಸ್ಪಷ್ಟನೆ‌

Monday, October 8th, 2018
u-t-kadher

ಮಂಗಳೂರು: ಕುದ್ರೋಳಿ ಕಸಾಯಿಖಾನೆ ವಿವಾದಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸ್ಪಷ್ಟನೆ‌ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಟಿಯಲ್ಲಿ, ಕುದ್ರೋಳಿ ಕಸಾಯಿಖಾನೆಗೆ 15 ಕೋಟಿ ರೂ. ಸ್ಮಾರ್ಟ್ ಯೋಜನೆಯ ಅನುದಾನ ನೀಡುವೆ ಎಂದು ಅವರು ಹೇಳಿದ್ದರು. ಇಂದು ಈ ವಿಚಾರ ವಿವಾದಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಚಿವ ಖಾದರ್ ಪ್ರತಿಕ್ರಿಯಿಸಿದ್ದಾರೆ. ನಾವು ತಿನ್ನುವ ಆಹಾರ ಸ್ವಚ್ಛವಾಗಿರಬೇಕು. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಕಸಾಯಿಖಾನೆಗೆ ಜನರ ಆರೋಗ್ಯಕ್ಕೆ ಹಾನಿಯಾಗದ ಮಾಂಸ ಬರಬೇಕು. ಕಸಾಯಿಖಾನೆ ಪರಿಸರ […]

ಕನಿಷ್ಟ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿ ಯು.ಟಿ ಖಾದರ್ ಸಂಪೂರ್ಣ ವಿಫಲ: ಸಂತೋಷ್ ಬಜಾಲ್

Monday, October 1st, 2018
santhosh

ಮಂಗಳೂರು: ಜನರಿಗೆ ಒಂದು ಪ್ರದೇಶದಿಂದ ಇನ್ನೊಂದೆಡೆಗೆ ಓಡಾಟ ನಡೆಸಲು ಸಾರಿಗೆ ವ್ಯವಸ್ಥೆ ಕಲ್ಪಿಸೋದು ಸರಕಾರದ ಆದ್ಯ ಕರ್ತವ್ಯ.ಆದರೆ ಹರೇಕಳ ಗ್ರಾಮಕ್ಕೆ ಕಳೆದ ಕಲವು ವರುಷಗಳಿಂದ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ಜನ ಬೀದಿಗಿಳಿದು ಹೋರಾಟ ನಡೆಸಿದರೂ ಮನವಿಗೆ ಸ್ಪಂಧಿಸದ ಸ್ಥಳೀಯ ಶಾಸಕ ಯು.ಟಿ ಖಾದರ್ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸೋದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಇಂದು ಹರೇಕಳದಲ್ಲಿ ಸಮರ್ಮಕ ಬಸ್ ವ್ಯವಸ್ಥೆ ಹಾಗೂ ಸರಕಾರಿ ಬಸ್ಸಿಗೆ ಒತ್ತಾಯಿಸಿ ನಡೆದ […]

ಸಿಗರೇಟ್, ಬೀಡಿ ಹಾಗೂ ಇತರ ತಂಬಾಕು ಮಾರಾಟಕ್ಕೂ ಲೈಸೆನ್ಸ್

Wednesday, September 26th, 2018
zp meeting

ಮಂಗಳೂರು : ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.  ಸಿಗರೇಟ್, ಬೀಡಿ ಹಾಗೂ ಇತರ ತಂಬಾಕು ಮಾರಾಟಕ್ಕೂ ಲೈಸೆನ್ಸ್ ಕಾನೂನು ತರುವುದಕ್ಕೆ ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂದು ರಾಜ್ಯ ವಸತಿ ಹಾಗು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕೆ ಡಿ ಪಿ ಸಭೆಯಲ್ಲಿ ಮಾತನಾಡಿದ ಅವರು  ಮದ್ಯ ಮಾರಾಟಕ್ಕೆ ಲೈಸೆನ್ಸ್ ಮಾದರಿಯಲ್ಲೇ  ಸಿಗರೇಟ್, ಬೀಡಿ ಹಾಗೂ ಇತರ […]

ಕರಾವಳಿ ಮರಳು ಸಮಸ್ಯೆ: 24ರಂದು ಬೆಂಗಳೂರಿನಲ್ಲಿ ಸಭೆ

Thursday, September 20th, 2018
ut-khader

ಮಂಗಳೂರು : ಸೆಪ್ಟೆಂಬರ್ 24ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮರಳು ಸಮಸ್ಯೆ ಮತ್ತು ಭೂಪರಿವರ್ತನೆ ಸಂಬಂಧ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಪೂರ್ವಭಾವಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ರಾಜಶೇಖರ್ ಪಾಟೀಲ್ ಅವರು 24ರಂದು ಅಪರಾಹ್ನ ಎರಡು ಗಂಟೆಗೆ ವಿಶೇಷ ಸಭೆಯನ್ನು ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅದೇ ದಿನ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕರಾವಳಿಯ ಮರಳು ಸಮಸ್ಯೆಗೆ ಪರಿಹಾರ […]

ಪುರಭವನಕ್ಕೆ `ಕುದ್ಮುಲ್ ರಂಗರಾವ್ ಪುರಭವನ’ ಎಂದು ಮರು ನಾಮಕರಣ

Thursday, August 30th, 2018
Kudmal-Ranga rao

ಮಂಗಳೂರು :  ಮನಪಾ ವತಿಯಿಂದ  472.41 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಪುರಭವನಕ್ಕೆ ಕುದ್ಮುಲ್ ರಂಗರಾವ್ ಪುರಭವನ ಎಂದು ಮರು ನಾಮಕರಣ ವನ್ನು ವಸತಿ ಮತ್ತು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನೆರವೇದಿಸಿದರು. ಕುದ್ಮುಲ್ ರಂಗರಾವ್ ದಲಿತ ವರ್ಗದ ವಿಶೇಷ ಕಾಳಜಿಯೊಂದಿಗೆ ಸಾಮಾಜಿಕ ಬದಲಾವಣೆಗೆ ಕಾರಣಕರ್ತರಾದವರು. ಅವರ ಹೆಸರನ್ನು ಪುರಭವನಕ್ಕೆ ನಾಮಕರಣ ಮಾಡುವ ಮೂಲಕ ಉತ್ತಮ ಕಾರ್ಯವನ್ನು ಮನಪಾ ಮಾಡಿದೆ ಎಂದು ಅವರು ಹೇಳಿದರು. ಅತೀ ಶೀಘ್ರದಲ್ಲೇ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಗದ ರಹಿತ, ಅಟೊಮೈಸೇಶನ್ ಹಾಗೂ […]

ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ಯು.ಟಿ.ಖಾದರ್ ಭೇಟಿ..!

Saturday, August 18th, 2018
u-t-kadher

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊದಲು ಬಂಟ್ವಾಳ ತಾಲೂಕಿನ ಗೂಡಿನಬಳಿ, ಆಲಡ್ಕ ಮತ್ತು ಪಾಣೆಮಂಗಳೂರಿಗೆ ಭೇಟಿ ನೀಡಿ ನೇತ್ರಾವತಿ ಹಳೆ ಸೇತುವೆ ಸಮೀಪ ನೆರೆ ನೀರನ್ನು ವೀಕ್ಷಿಸಿದ ಸಚಿವರು, ಬಳಿಕ ಆಲಡ್ಕ ಪ್ರದೇಶದಲ್ಲಿ ನೆರೆ ನೀರಿನಿಂದ ಮುಳುಗಿದ ಜನ ವಸತಿ ಪ್ರದೇಶಗಳನ್ನು ವೀಕ್ಷಿಸಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಅಹವಾಲು ಆಲಿಸಿದರು. ಬಳಿಕ […]

ಭೋಜೇ ಗೌಡರಿಗೆ ನಮ್ಮ ಜಿಲ್ಲೆಯ ಬಗ್ಗೆ ಗೊತ್ತಿಲ್ಲ : ಯು.ಟಿ.ಖಾದರ್

Saturday, August 4th, 2018
ut-khader

ಮಂಗಳೂರು : ಕಾಂಗ್ರೆಸ್ ಪಕ್ಷ ದೇಶದ ಸಂವಿಧಾನದ ಆಶಯದಂತೆ ನಡೆದುಕೊಂಡು ಬಂದಿದೆ. ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನತೆಯಿಂದ ಕಾಣುತ್ತಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾರನ್ನೂ ಕಡೆಗಣಿಸಿಲ್ಲ. ಕಾಂಗ್ರೆಸ್ ಬಗ್ಗೆ ಭೋಜೇಗೌಡರ ಹೇಳಿಕೆ ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ‘ಕರಾವಳಿಯಲ್ಲಿ ಕಾಂಗ್ರೆಸ್ ನೆಲಕಚ್ಚಿರುವುದಕ್ಕೆ ಹಿಂದೂಗಳನ್ನು ಕಾಂಗ್ರೆಸ್ ಕಡೆಗಣಿಸಿರುವುದು ಕಾರಣ’ಎಂದು ಜೆಡಿಎಸ್ ಮುಖಂಡ ಭೋಜೇ ಗೌಡರು ಪತ್ರಿಕಾಗೋಷ್ಟಿಯಲ್ಲಿಂದು ನೀಡಿದ ಹೇಳಿಕೆ ಸರಿಯಲ್ಲ. ಈ ರೀತಿಯ ರಾಜಕೀಯ ಪ್ರೇರಿತ ಹೇಳಿಕೆ ಅವರ ಘನತೆಗ ಕಪ್ಪು ಚುಕ್ಕೆ. ಅವರು ಈ […]