Blog Archive

ವಿಜಯ ಬ್ಯಾಂಕ್ ಉಳಿಸಿ : ರಮಾನಾಥ ರೈ, ವೇದವ್ಯಾಸ್ ಕಾಮತ್ ಮಾತಿನ ಚಕಮಕಿ

Saturday, February 23rd, 2019
Rai Kamath

ಮಂಗಳೂರು: ವಿಜಯ ಬ್ಯಾಂಕ್ ಉಳಿಸಿ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮತ್ತು ಶಾಸಕ ವೇದವ್ಯಾಸ್ ಕಾಮತ್ ನಡುವೆ ಮಾತಿನ ಚಕಮಕಿ ನಡೆಯಿತು. ನಗರದ ಪುರಭವನದಲ್ಲಿ ಇಂದು ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು. ಮಂಗಳೂರಿನ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿಯವರ ಮುತುವರ್ಜಿಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಎಲ್ಲ ಪಕ್ಷದವರನ್ನು ಒಟ್ಟು ಸೇರಿಸಿ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಾಜಿ ಸಚಿವ […]

ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ‌ ಕೆಲಸವನ್ನು ಕೇಂದ್ರ ಸರ್ಕಾರದ ಪ್ರತಿನಿಧಿ ಮಾಡುತ್ತಿದ್ದಾರೆ: ರಮಾನಾಥ ರೈ

Wednesday, November 28th, 2018
ramanatha

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಕೇಂದ್ರ ಸರ್ಕಾರ ಮತ್ತು ಲೋಕಸಭೆ ಚುನಾಯಿತ ಜನಪ್ರತಿನಿಧಿ ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದರು. ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಇರುವಾಗ ಈ ಯೋಜನೆ ಪ್ರಾರಂಭವಾಗಿದ್ದು, ಎಲ್ಎನ್ಟಿ ಗುತ್ತಿಗೆದಾರ ಕಂಪೆನಿಯು ಈ ಕಾಮಗಾರಿಯನ್ನು ವಹಿಸಿಕೊಂಡಿತ್ತು. ರಸ್ತೆ ರಚನೆ ಮಾಡುವ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದ್ದು, ಭೂಸ್ವಾಧೀನ‌ […]

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ..!

Tuesday, November 20th, 2018
indira-gandhi-4

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಿನ್ನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸುಮಾರು ಹದಿನಾರು ವರ್ಷಗಳ ಕಾಲ ಓರ್ವ ಹೆಣ್ಣು ಮಗಳಾಗಿ ದೇಶದ ಚುಕ್ಕಾಣಿ ಹಿಡಿದು, ಉಕ್ಕಿನ ಮಹಿಳೆ ಎಂದು ಹೆಸರಾದವರು ಇಂದಿರಾ ಗಾಂಧಿ ಎಂದು ಬಣ್ಣಿಸಿದರು. ಸ್ವಾತಂತ್ರ್ಯ ಸಿಕ್ಕರೂ ದೇಶಕ್ಕೆ ಸಾಮಾಜಿಕ ಸ್ವಾತಂತ್ರ್ಯ ಬಂದಿರಲಿಲ್ಲ. ಇಂದಿರಾ ಗಾಂಧಿಯವರು ಅಧಿಕಾರಕ್ಕೆ ಬಂದು ಕಠಿಣವಾದ ನಿಲುವುಗಳ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿತರಾದ […]

ರಮಾನಾಥ ರೈಯವರು ಕಾಂಗ್ರೆಸ್​​ನಲ್ಲಿ‌ ಈಗ ಸಕ್ಕರೆ ಇಲ್ಲದ ಚಹಾದಂತಾಗಿದ್ದಾರೆ: ಹರಿಕೃಷ್ಣ ಬಂಟ್ವಾಳ

Friday, November 16th, 2018
harikrishna

ಮಂಗಳೂರು: ರಮಾನಾಥ ರೈಯವರು ಕಾಂಗ್ರೆಸ್ನಲ್ಲಿ‌ ಈಗ ಸಕ್ಕರೆ ಇಲ್ಲದ ಚಹಾದಂತಾಗಿದ್ದಾರೆ. ಅಧಿಕಾರ ಇಲ್ಲದೆ ಚಡಪಡಿಸುವ ಸ್ಥಿತಿಯಲ್ಲಿದ್ದಾರೆ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ನಡೆದ ಸಭೆಯಲ್ಲಿ ವ್ಯಂಗ್ಯವಾಡಿದರು. ರಮಾನಾಥ ರೈ ಅವರು ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರಲ್ಲಿ ಸಂಸದ ನಳಿನ್‌ಕುಮಾರ್ ಕಟೀಲು ಸತ್ತ ಹಾಗೆ. ಇನ್ನು ಅವರ ಶವ ಸಂಸ್ಕಾರ ಬಾಕಿ ಇದೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಒಬ್ಬ ಜನಪ್ರತಿನಿಧಿಯ ಶವ ಸಂಸ್ಕಾರವನ್ನು‌ ನೋಡಬೇಕೆಂಬ ಹಸಿವು ಇರುವ ರಮಾನಾಥ ರೈ ಅವರು ಜಿಹಾದಿ […]

ದಸರಾ ಕಾರ್ಯಕ್ರಮ: ಸಚಿವೆ ಡಾ.ಜಯಮಾಲ ರಿಂದ ಆರೋಗ್ಯ ಕಾರ್ಡ್ ವಿತರಣೆ

Friday, October 19th, 2018
jayamala-3

ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಸಚಿವೆ ಡಾ.ಜಯಮಾಲ ಅವರು ಭಾಗವಹಿಸಿದರು. ದೇವಸ್ಥಾನದ ವತಿಯಿಂದ ಆರಂಭಿಸಲಾದ ಆರೋಗ್ಯ ಯೋಜನೆಗೆ ಸಚಿವರು ಚಾಲನೆ ನೀಡಿ ಅರ್ಹ ಫಲಾನುಭವಿಗಳಿಗೆ ಸಚಿವರು ಆರೋಗ್ಯ ಕಾರ್ಡ್ ವಿತರಣೆ ಮಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ ಸೊರಕೆ, ಮಾಜಿ ಶಾಸಕ ಜೆ.ಆರ್. ಲೊಬೊ, ನಟಿ ನಿರೂಪಕಿ ಅನುಶ್ರೀ, ಕೆ.ಪಿ.ಸಿ.ಸಿ. ಪಧಾಧಿಕಾರಿಗಳಾದ ರಾಜಶೇಖರ ಕೊಟ್ಯಾನ್, ರಕ್ಷಿತ್ ಸುವರ್ಣ, ದೇವಾಲಯದ ಪಧಾಧಿಕಾರಿಗಳು ಭಾಗವಹಿಸಿದ್ದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಾಶ್ವತ ಪರಿಹಾರ ಬೇಕಾಗಿಲ್ಲ: ಜಿ.ಪರಮೇಶ್ವರ್

Friday, August 10th, 2018
ramanath-rai

ಮಂಗಳೂರು: ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಾಶ್ವತ ಪರಿಹಾರ ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಇದು ಬೇಕಾಗಿಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಕಿಡಿಕಾರಿದರು. ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ 2017-18 ರಲ್ಲಿ 12,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದರಿಂದ ರಾಷ್ಟ್ರೀಯ ಬ್ಯಾಂಕ್ನಲ್ಲಿರುವ 30 ಸಾವಿರ ಕೋಟಿ ರೂ. ಸರ್ಕಾರಕ್ಕೆ ಹೊರೆಯಿದೆ. ಆ ಹೊರೆ ತಪ್ಪಿಸಿದರೆ ಅದೇ ಹಣದಲ್ಲಿ ರೈತರಿಗೆ ಬೇಕಾದ ಹನಿ ನೀರಾವರಿ, […]

ತಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ: ರಮಾನಾಥ ರೈ

Wednesday, June 27th, 2018
ramanath-rai

ಬಂಟ್ವಾಳ: ಹೈಕಮಾಂಡ್ ಅವಕಾಶ ನೀಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪಕ್ಷವು ಪಾರ್ಲಿಮೆಂಟ್‌ ಚುನಾವಣೆಗೆ ಸಿದ್ಧವಾಗುತ್ತಿದ್ದು, ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ತಾನು ಕೈಗೊಂಡ ಎಲ್ಲ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಇವುಗಳ ಟೆಂಡರ್ ಪ್ರಕ್ರಿಯೆ […]

ನಾನೇನೂ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ: ರಮಾನಾಥ ರೈ

Friday, June 15th, 2018
ramanath-rai

ಮಂಗಳೂರು: ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಾಲಯಕ್ಕೆ ನೀಡಲಾದ ಕೊಡಿಮರಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ವಾಗುತ್ತಿರುವುದಾಗಿ ನೊಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಇಂದು ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಜೀರ್ಣೋದ್ಧಾರ ವೇಳೆ ದೇವಾಲಯದ ಮುಂಭಾಗದಲ್ಲಿ ಕೊಡಿಮರವನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲದ ಮುಂಭಾದಲ್ಲಿ ಕೊಡಿಮರವನ್ನು ಧ್ವಜಸ್ತಂಭವಾಗಿ ಬಳಸಲಾಗುತ್ತದೆ. ಧ್ವಜಸ್ತಂಭಕ್ಕಾಗಿ ಅರಣ್ಯ ಇಲಾಖೆಯ ಬೆಲೆಬಾಳುವ ಮರವನ್ನು ಕಡಿಯಲಾಗಿತ್ತು. ಮರಕ್ಕೆ ಅರಣ್ಯ ಇಲಾಖೆಯು 21 ಲಕ್ಷ ರೂಪಾಯಿ ಶುಲ್ಕ ವಿಧಿಸಿತ್ತು. ಪೊಳಲಿ ದೇವಸ್ಥಾನದ ಗೌರವಾಧ್ಯಕ್ಷರಾಗಿದ್ದ ರಮಾನಾಥ ರೈಯವರು ಈ […]

ವಿಧಾನಸಭಾ ಚುನಾವಣಾ ಸೋಲನ್ನು ಸವಾಲಾಗಿ ಸ್ವೀಕರಿಸಿ: ರಮಾನಾಥ ರೈ

Wednesday, May 30th, 2018
ramanath-rai

ಮಂಗಳೂರು: ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದ.ಕ.ಜಿಲ್ಲೆಯಲ್ಲಿ ಸೋತಿದ್ದರೂ ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಸೋಲನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ದ.ಕ.ಜಿಲ್ಲಾ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಮಂಗಳವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಾಮರ್ಶೆಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಕ್ಷದ ಸೋಲಿಗೆ ಅಪಪ್ರಚಾರವೇ ಮುಖ್ಯ ಕಾರಣ. ಸೋಲಿನಿಂದ ಯಾರೂ ಧೃತಿಗೆಡಬೇಡಿ. ಈ ಸೋಲು ಶಾಶ್ವತವಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಚುನಾವಣೆಯ […]

ಎಲ್ಲರ ಪ್ರೀತಿ ಪಾತ್ರರಾದ ರಮಾನಾಥ ರೈ

Friday, May 11th, 2018
congress

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರ ಬಂಟ್ವಾಳ. ಕ್ಷೇತ್ರದ ಶಾಸಕರು ರಾಜ್ಯ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ ರಮಾನಾಥ ರೈ. ಹಲವಾರು ವಿವಾದಗಳಿಂದ ಸುದ್ದಿ ಮಾಡಿದ್ದ ಸಚಿವ ರಮಾನಾಥ ರೈ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಬೇಬಿಯಣ್ಣ ಎಂದೇ ಖ್ಯಾತರಾದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕ್ಷೇತ್ರದಲ್ಲಿ ಜಾರಿ ಮಾಡಿರುವ ಅಸಂಖ್ಯ ಅಭಿವೃದ್ಧಿ ಕಾಮರ್ಯಗಳು ಮತ್ತು […]