Blog Archive

ನನ್ನನ್ನು ಯಾರು ಹೆದರಿಸಿ-ಬೆದರಿಸಿ ಗೆಲ್ಲಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

Tuesday, June 26th, 2018
shivkumar

ರಾಮನಗರ: ಕನಕಪುರ ಶಾಸಕ, ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ರಿಂದ ಅಭಿನಂದನಾ ಸಮಾವೇಶ ನಡೆಯುತ್ತಿದೆ. ಕನಕಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮಾವೇಶವನ್ನ ಉದ್ಘಾಟಿಸಿದ ಸಚಿವ ಅವರು ವೇದಿಕೆಗೆ ಬರುತ್ತಿದ್ದಂತೆ ಕೆಳಭಾಗದಲ್ಲಿ ಕುಳಿತಿದ್ದ ಕಾರ್ಯಕರ್ತರನ್ನ ಭೇಟಿ ಮಾಡಿ ಮಾತನಾಡಿಸಿದರು. ಸಚಿವರಾದ ಬಳಿಕ ಕ್ಷೇತ್ರದಲ್ಲಿ ಮೊದಲ ಬಾರಿ ಬೃಹತ್ ಕಾರ್ಯಕರ್ತರ ಸಮಾವೇಶ ಇದಾಗಿದ್ದು, ಈ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು ವಿಶೇಷವಾಗಿದೆ. ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ನನ್ನ ಮೇಲೆ ಐಟಿ ದಾಳಿ ಹಿನ್ನಲೆ ಜೈಲಿಗೆ ಹೋಗಲು ನಾನು ಸಿದ್ಧ. ತಪ್ಪು […]

ರಾಮನಗರ ಕ್ಷೇತ್ರದಿಂದ ಮಧು ಬಂಗಾರಪ್ಪ ಕಣಕ್ಕೆ..?

Saturday, June 2nd, 2018
madhu-bangarappa

ರಾಮನಗರ: ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಹೊಂದಾಣಿಕೆಯಾಗಿ ಏಕೈಕ ಅಭ್ಯರ್ಥಿ ನಿಲ್ಲಿಸುವ ಇಂಗಿತ ವ್ಯಕ್ತಪಡಿಸಿವೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧುಬಂಗಾರಪ್ಪ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಮಧುಬಂಗಾರಪ್ಪ ಅಭ್ಯರ್ಥಿಯಾಗುವ ಬಗ್ಗೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕುಮಾರಸ್ವಾಮಿ ಜೊತೆ ಚರ್ಚೆ ಮಾಡಿದ್ದು, ಇಬ್ಬರೂ ಮುಖಂಡರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರದಿಂದ ಸಿಎಂ‌ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿ ಗೆದ್ದಿದ್ದರು. […]

ರಾಮನಗರ ಉಪ ಚುನಾವಣೆ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್..!

Saturday, May 26th, 2018
yogishwar

ರಾಮನಗರ: ರಾಮನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಎದುರು ಸೋತಿದ್ದ ಸಿಪಿ ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಿದ್ದು ಸಿಪಿ ಯೋಗೀಶ್ವರನ್ನು ಕಳೆದುಕೊಳ್ಳುವುದು ಬೇಡ ಎಂಬ ಉದ್ದೇಶದಿಂದ ಯೋಗೇಶ್ವರ್‌ಗೆ ಮತ್ತೊಂದು ಅವಕಾಶವನ್ನು ಬಿಜೆಪಿ ನೀಡಿದೆ. ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಎದುರು ಸೋಲನ್ನನುಭವಿಸಿದ್ದರು. ರಾಮನಗರದಲ್ಲೂ ಚುನಾವಣೆಗೆ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರು ಅಲ್ಲಿ ಗೆದ್ದ ನಂತರ ಚನ್ನಪಟ್ಟಣದ ಸ್ಥಾನ ಉಳಿಸಿಕೊಂಡು ರಾಮನಗರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು […]

ಉತ್ತರ ಕರ್ನಾಟಕ ಬಂದ್ ಗೆ ರಾಮನಗರದಲ್ಲಿ ಬೆಂಬಲ

Wednesday, December 27th, 2017
Ramanagara

ರಾಮನಗರ: ಮಹದಾಯಿ ವಿವಾದ ವಿಚಾರವಾಗಿ ಉತ್ತರ ಕರ್ನಾಟಕ ಬಂದ್ ಆಚರಣೆ ಹಿನ್ನೆಲೆಯಲ್ಲಿ ಉತ್ತರದ ಕನ್ನಡಿಗರಿಗಾಗಿ ದಕ್ಷಿಣದಲ್ಲಿ ಸ್ಪಂದನೆ ಸಿಕ್ಕಿದೆ. ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಚೆ ಕಚೇರಿ ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಹಾದಾಯಿ ವಿಚಾರದಲ್ಲಿ ರಾಜ್ಯದ ಹಿತ ಕಾಯದ ಬಿಜೆಪಿ, ಕೇಂದ್ರ ಸರ್ಕಾರ ಹಾಗೂ ಗೋವಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಗೋವಾ ಮುಖ್ಯಮಂತ್ರಿ […]