Blog Archive

ತಲಪಾಡಿ, ಹೆಜಮಾಡಿ ಹಾಗೂ ಸಾಸ್ತಾನ ಟೋಲ್‌ಗಳ ದರ ಹೆಚ್ಚಳ

Wednesday, March 31st, 2021
Sasthana Toll

ಮಂಗಳೂರು :  ಎಪ್ರಿಲ್ 1ರಿಂದ ತಲಪಾಡಿ,  ಹೆಜಮಾಡಿ ಹಾಗೂ ಸಾಸ್ತಾನ  ಟೋಲ್‌ಗಳ ದರ ವನ್ನು  ನವಯುಗ ಸಂಸ್ಥೆಯು ಪರಿಷ್ಕರಣೆ ಮಾಡದೆ.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇರ ನಿರ್ವಹಣೆ ಮಾಡುವ ಬ್ರಹ್ಮರಕೂಟ್ಲು ಮತ್ತು ಎನ್‌ಐಟಿಕೆ ಟೋಲ್‌ಗೇಟ್‌ಗಳ ಪರಿಷ್ಕೃತ ದರ ಎಪ್ರಿಲ್ 1ರಂದು ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ತಲಪಾಡಿ: ಲಘುವಾಹನ- ಏಕಮುಖ ಸಂಚಾರಕ್ಕೆ ಯಥಾವತ್ 40 ರೂ., ದ್ವಿಮುಖ ಸಂಚಾರಕ್ಕೆ 60ರಿಂದ 65ರೂ.ಗೆ ಏರಿಕೆ. ಮಾಸಿಕ ಪಾಸ್ ದರ 1,400 ರೂ. ಲಘು ವಾಣಿಜ್ಯ ವಾಹನ- ಮಿನಿ ಬಸ್ ಏಕಮುಖ ಸಂಚಾರಕ್ಕೆ 65 […]

ಹೊತ್ತಿ ಉರಿದ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ : ಚಾಲಕ ಸಜೀವ ದಹನ

Thursday, March 25th, 2021
lorry

ನೆಲ್ಯಾಡಿ : ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಮಾರ್ಚ್ 24 ರ ಬುಧವಾರ ತಡರಾತ್ರಿ ನಡೆದಿದೆ. ಘಟನೆಯ ಪರಿಣಾಮ ಬಸ್ ಸಂಪೂರ್ಣ ಭಸ್ಮಗೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಟ್ರಾವೆಲ್ಸ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. […]

ದಕ್ಷಿಣ ಕನ್ನಡ ಜಿಲ್ಲೆಯ 5 ಅಭಿವೃದ್ಧಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಚಾಲನೆ

Saturday, December 19th, 2020
Nithin Gadkari

ಮಂಗಳೂರು : ದ.ಕ ಜಿಲ್ಲೆಯ 214.22 ಕೋಟಿ ರೂ. ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 69.02 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಕೂಳೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಸಂಪಾಜೆ ಘಾಟ್ನ ತಡೆಗೋಡೆ ಹಾಗೂ ರಸ್ತೆ 2.53 ಕಿ.ಮೀ. […]

ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿ : ಯುವ‌ಮೋರ್ಚಾ ಕಾರ್ಯಕರ್ತರಿಂದ ರಸ್ತೆ ತಡೆ

Monday, September 16th, 2019
kasaragod

ಕಾಸರಗೋಡು : ತಲಪಾಡಿ ಯಿಂದ ಕಾಸರಗೋಡು ತನಕ ಸಂಪೂರ್ಣ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ನಡೆಸದೆ ಜನತೆಯನ್ನು ಸಂಕಷ್ಟಕ್ಕೆ ತಳ್ಳಿರುವ ಕೇರಳದ ಎಡರಂಗ ಸರಕಾರದ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ – 66 ದುರಸ್ತಿ ಕಾಮಗಾರಿಗೆ ಶೀಘ್ರ ಕ್ರಮಕೈಗೊಳ್ಳ ಬೇಕೆಂದು ಆಗ್ರಹಿಸಿ ಯುವ‌ಮೋರ್ಚಾ ಕಾರ್ಯಕರ್ತರು ಕಾಸರಗೋಡಿನ ಅಶ್ವಿ‌ನಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ  ನಡೆಸಿದರು. ರಸ್ತೆ ತಡೆ ಚಳವಳಿಯನ್ನು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ವಿಜಯ ಕುಮಾರ್‌ ರೈ ಅವರು ಉದ್ಘಾಟಿಸಿದರು. ಕೇಂದ್ರ ಸರಕಾರ ಈಗಾಗಲೇ ತಲಪಾಡಿ […]

ಜ. 6ರಂದು ಪ್ರತಿಭಟನೆ-ಮೀನು ಮಾರಾಟ ಬಂದ್

Saturday, January 5th, 2019
Boat

ಮಲ್ಪೆ:  ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಜ. 6ರಂದು ಆಯೋಜಿಸಿರುವ ಬೃಹತ್‌ ಪ್ರತಿಭಟನ ಜಾಥಾ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಮನವಿ ಮಾಡಿದ್ದಾರೆ. ಮೀನುಗಾರಿಕೆಯ ಇತಿಹಾಸದಲ್ಲೇ ಕಂಡು ಕೇಳರಿಯದ ಈ ಪ್ರಕರಣದಿಂದ ಮೀನುಗಾರರು ಮಾನಸಿಕವಾಗಿ ಕುಗ್ಗಿದ್ದು ರಾಜ್ಯ ಸರಕಾರ ಸೂಕ್ತವಾಗಿ ಸ್ಪಂದಿಸದೇ ಮೀನುಗಾರರನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ. ಈ ಘಟನೆ ಮೀನುಗಾರರ ನೈತಿಕ ಸ್ಥೈರ್ಯವನ್ನೇ ಅಡಗಿಸಿದೆ. […]

ಬೆದ್ರೋಡಿಯಲ್ಲಿ ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆ

Monday, December 3rd, 2018
tankar

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ ನಿನ್ನೆ ತಡ ರಾತ್ರಿ 1:50 ಕ್ಕೆ ಗ್ಯಾಸ್ ಟ್ಯಾಂಕರೊಂದು ಮಗುಚಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ‌ ಸ್ಥಳೀಯ ನಿವಾಸಿಗಳಿಗೆ ಬೆಂಕಿ‌ ಉರಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಭಾರತ್ ಪೆಟ್ರೋಲಿಯಂ ಕಂಪೆನಿಯ ಅನಿಲ ಟ್ಯಾಂಕರ್ ತೆರಳುತ್ತಿತ್ತು. ಈ ವೇಳೆ ಬೆದ್ರೋಡಿಯ ತೂಗು ಸೇತುವೆ ಬಳಿಯ ತಿರುವಿನಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಅನಿಲ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸರದ ನಿವಾಸಿಗಳನ್ನು ಸುರಕ್ಷಿತಾ ಸ್ಥಳಗಳಿಗೆ […]

ಪಂಪುವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ

Saturday, October 13th, 2018
tokattu

ಮಂಗಳೂರು: ಪಂಪುವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು, ನಂತೂರು ಮೇಲ್ಸೇತುವೆ ನಿರ್ಮಿಸಲು ಹಾಗೂ ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಇಂದು (ತಾ. 12-10-2018) ಪಂಪುವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ದೇಶದ ಜೀವನಾಡಿಗಳಿದ್ದಂತೆ ಹೆದ್ದಾರಿಗಳಲ್ಲಿ ವಾಹನಗಳು ನಿರಾತಂಕವಾಗಿ ಚಲಿಸುವಂತೆ ಸುಸ್ಥಿತಿಯಲ್ಲಿಡುವುದು ಹೆದ್ದಾರಿ ಪ್ರಾಧಿಕಾರದ ಕರ್ತವ್ಯವಾಗಿರುತ್ತದೆ. ಆದರೆ ಮಂಗಳೂರಿನ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಪುವೆಲ್, ತೊಕ್ಕೊಟ್ಟಿನ ಮೇಲ್ಸೇತುವೆ ಕಾಮಗಾರಿ ಕಳೆದ ೮ ವರುಷಗಳಿಂದ ಪೂರ್ಣಗೊಂಡಿಲ್ಲ. ಹೆದ್ದಾರಿಯುದ್ದಕ್ಕೂ ಸರ್ವಿಸ್ […]

ಕೊಡಗಿನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟ NDRF ತಂಡ

Friday, September 14th, 2018
kodagu

ಕೊಡಗು: ನಿರಂತರವಾಗಿ ಸುರಿದ ಮಳೆ ಪರಿಣಾಮ ಮಡಿಕೇರಿ ಮತ್ತು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹಾನಿಯಾಗಿತ್ತು. ಈ ರಸ್ತೆ ನಿರ್ಮಾಣ ಮಾಡಲು ಇನ್ನೂ ಆರು ತಿಂಗಳು ಬೇಕಾಗಲಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದರು. ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭ ಭರವಸೆ ನೀಡಿ ಹೋದರೇ ವಿನಾ ಕಾಮಗಾರಿ ಕೈಗೊಳ್ಳಲು ಮುಂದಾಗಿರಲಿಲ್ಲ. ಆದರೆ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಸರ್ಕಾರದ NDRF ತಂಡ ಕೇವಲ 20 ದಿನಗಳಲ್ಲಿ ಸುದೀರ್ಘ ಕಾರ್ಯ ನಡೆಸಿ ತಾತ್ಕಾಲಿಕವಾಗಿ ರಸ್ತೆ ಮೇಲೆ ಓಡಾಟಕ್ಕೆ ಅನುಕೂಲ […]

ಖಾಸಗಿ ಬಸ್ಸಿಗೆ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ..15ಕ್ಕೂ ಹೆಚ್ಚು ಮಂದಿ ಗಾಯ!

Saturday, August 11th, 2018
accident

ಮಂಗಳೂರು: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸೋಮೇಶ್ವರ ಅಡ್ಕ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಕೊಣಾಜೆಯಿಂದ ಮಾಡೂರು ಮಾರ್ಗವಾಗಿ ಮಂಗಳೂರಿನ ಕೊಟ್ಟಾರಕ್ಕೆ ಸಂಚರಿಸುವ ಬಸ್ಸು ಅಡ್ಕ ಬಳಿ ಜನರನ್ನು ಇಳಿಸಲು ನಿಂತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿಯೊಂದನ್ನು ಓವರ್ ಟೇಕ್ ಮಾಡಿ ಬಂದ ಕಾಸರಗೋಡು ನಿಂದ ಮಂಗಳೂರಿಗೆ ಸಂಚರಿಸುವ ಸರಕಾರಿ ಬಸ್ಸು […]

ಉತ್ತರ ಭಾರತದಲ್ಲಿ ಭಾರಿ ಮಳೆ ಬೋರ್ಗರೆಯುತ್ತಿದ್ದಾಳೆ ಯಮುನೆ

Saturday, July 28th, 2018
heavy-rain

ನವದೆಹಲಿ: ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಯಮುನಾನದಿ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟವನ್ನು ಮೀರಿ ಪ್ರತಾಪ ತೋರುತ್ತಿದ್ದಾಳೆ. ಈ ಪರಿಣಾಮ ದೆಹಲಿಯ ಕಾಶ್ಮೀರಿ ಗೇಟ್ ಬಳಿಯ ಹಳೆಯ ಕಬ್ಬಿಣದ ಸೇತುವೆ ಮೇಲೆ ನೀರು ಬಂದಿದ್ದು, ಸಂಚಾರಕ್ಕೆ ಸಂಚಕಾರ ಬಂದಿದೆ. ಈ ನಡುವೆ ನಡುವೆ ಅಪಾಯದಲ್ಲಿ ಸಿಲುಕಿದವರ ರಕ್ಷಣೆಗೆ ದೆಹಲಿ ಆಡಳಿತ 43 ಬೋಟ್ಗಳನ್ನ ಕಳುಹಿಸಿಕೊಡಲಾಗಿದೆ. ಇನ್ನು ಉತ್ತರಪ್ರದೇಶದಲ್ಲಿ ಘಾಜಿಯಾಬಾದ್ನ ವಸುಂಧರಾ ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳೆಲ್ಲ ಮಣ್ಣಿನಿಂದ ಆವೃತ್ತವಾಗಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಹಿಮಾಚಲ […]