Blog Archive

ರಾಹುಲ್ ಗಾಂಧಿ ಕೂಡಲೇ ದೇಶದ ಜನತೆಯ ಕ್ಷಮೆ ಯಾಚಿಸಬೇಕು: ಶೋಭಾ ಕರಂದ್ಲಾಜೆ

Friday, September 21st, 2018
shobha-karandlaje

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ ರಾಹುಲ್ ಗಾಂಧಿ ಕಳ್ಳ ಎಂದು ಕರೆದಿರುವುದು ಕಾಂಗ್ರೆಸ್ ‌ಪಕ್ಷಕ್ಕೆ ಶೋಭೆ ತರುವುದಿಲ್ಲ. ಈ ಹಿಂದಿನ ಯಾವ ಕಾಂಗ್ರೆಸ್ ಅಧ್ಯಕ್ಷರು ಈ ರೀತಿ ನಡೆದುಕೊಂಡಿರಲಿಲ್ಲ. ಆದ್ರೆ ರಾಹುಲ್ ಗಾಂಧಿ ಬಚ್ಚಾ ರೀತಿ ವರ್ತಿಸಿ […]

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಅವರ 74 ನೇ ಜನ್ಮದಿನೋತ್ಸವ

Monday, August 20th, 2018
rajiv-gandhi

ನವದೆಹಲಿ: ದೇಶದ ಐಟಿ ಹರಿಹಾರ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 74 ನೇ ಜನ್ಮದಿನೋತ್ಸವ ಇಂದು. ಅವರ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಗೌರವ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನ ಟ್ವೀಟ್ ಮಾಡುವ ಮೂಲಕ ಸ್ಮರಿಸಿಕೊಂಡಿದ್ದಾರೆ. ಈನಡುವೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನದ ಹಿನ್ನೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ನೆನಪಿಸಿಕೊಂಡಿದ್ದಾರೆ. ಕರುಣೆ ಹಾಗೂ ಶಾಂತಿಯ ಪ್ರತೀಕವಾಗಿ ನನ್ನ ತಂದೆ ನನ್ನ ಬದುಕಿನಲ್ಲಿ ಆಳವಾದ ಶೂನ್ಯವನ್ನ […]

ನನಗೆ ಈಗಾಗಲೇ ಮದುವೆಯಾಗಿದೆ..ಯುವತಿಯೊಂದಿಗೆ ಅಲ್ಲ ಪಕ್ಷದೊಂದಿಗೆ: ರಾಹುಲ್ ಗಾಂಧಿ

Tuesday, August 14th, 2018
rahul-congress

ನವದೆಹಲಿ: ದೇಶದ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್‌ಗಳ ಪೈಕಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕೂಡ ಒಬ್ಬರು. 47 ರಾಹುಲ್ ಮದುವೆ ಸುತ್ತ ಈವರೆಗೆ ಸಾಕಷ್ಟು ಗಾಳಿಸುದ್ದಿಗಳು ಹರಿದಾಡಿವೆ. ಮದುವೆಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಸಲ ಪ್ರಶ್ನೆ ಉದ್ಭವವಾಗಿದ್ದು, ಅದರಿಂದ ಅವರು ತಪ್ಪಿಸಿಕೊಂಡಿದ್ದಾರೆ. ಆದರೆ, ಇದೀಗ ಪತ್ರಕರ್ತನೊಬ್ಬ ಕೇಳಿರುವ ಪ್ರಶ್ನೆಗೆ ನನಗೆ ಈಗಾಗಲೇ ಮದುವೆಯಾಗಿದೆ ಎಂಬ ಉತ್ತರ ನೀಡಿದ್ದಾರೆ. ಆದರೆ ನಾನು ಮದುವೆಯಾಗಿದ್ದು ಯುವತಿಯೊಂದಿಗೆ ಅಲ್ಲ ಬದಲಿಗೆ ಪಕ್ಷದೊಂದಿಗೆ ಎಂದಿದ್ದಾರೆ. ಎರಡು ದಿನಗಳ ಹೈದರಾಬಾದ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ […]

ನಾವು ಎಲ್ಲರೂ ಸೇರಿ ಪ್ರಧಾನಿ ಮೋದಿಯನ್ನು ಸೋಲಿಸಲು ಹೋಗುತ್ತಿದ್ದೇವೆ: ರಾಹುಲ್ ಗಾಂಧಿ

Friday, July 20th, 2018
rahul-gandhi

ಹೊಸದಿಲ್ಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ವೇಳೆ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಬಳಿಕ ಪ್ರಧಾನಿ ಬಳಿ ತೆರಳಿ ಅವರನ್ನು ಆಲಂಗಿಸಿಕೊಂಡರು. ತನ್ನನ್ನು ಆಲಂಗಿಸುತ್ತಿದ್ದಂತೆ ಪ್ರಧಾನಿ ಮೋದಿ ಅವರು ರಾಹುಲ್ ಬೆನ್ನು ತಟ್ಟಿದರು. “ನಾನು ನಿಮಗೆ ಪಪ್ಪು ಇರಬಹುದು. ಆದರೆ ಕಾಂಗ್ರೆಸ್ ಪಕ್ಷ ದೇಶ ಕಟ್ಟಿದೆ. ಈ ಭಾವನೆ ನಿಮ್ಮಲ್ಲಿಯೂ ಇದೆ. ನಾನು ಬಿಜೆಪಿ, ಆರ್ ಎಸ್ ಎಸ್ ಗೆ ಅಭಾರಿಯಾಗಿದ್ದೇನೆ. ನಿಮ್ಮಲ್ಲಿನ ಭಾವನೆ ಹೊರತರುವೆ. ನಿಮ್ಮನ್ನೂ ಕಾಂಗ್ರೆಸ್ ಗರನ್ನಾಗಿ ಮಾಡುವೆ” ಎಂದು ರಾಹುಲ್ ಭಾಷಣದಲ್ಲಿ […]

ಜುಲೈ5ರಂದು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಬಜೆಟ್ ಮಂಡನೆ?

Wednesday, June 20th, 2018
kumarswamy

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಬಳಿಕ ಬಜೆಟ್ ಮಂಡನೆಗೆ ಹಸಿರು ನಿಶಾನೆ ಪಡೆದಿರುವ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಜುಲೈ ಮೊದಲವಾರ ಜಂಟಿ ಅಧಿವೇಶನ‌ ನಡೆಸಿ ಜು.5ರಂದು ಬಜೆಟ್ ಮಂಡಿಸಿ ಆಡಳಿತಕ್ಕೆ ವೇಗ ನೀಡುವ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಜುಲೈ 4ರಿಂದ 24ವರೆಗೆ ಬಜೆಟ್ ಅಧಿವೇಶನ ನಡೆಸಿ ಹೊಸ ಸರ್ಕಾರದ ಬಜೆಟ್ ಮಂಡಿಸಿ ಅದಕ್ಕೆ ಅನುಮೋದನೆ ಪಡೆಯುವ ಇರಾದೆ ಕುಮಾರಸ್ವಾಮಿಯವರದ್ದಾಗಿದೆ. ಜುಲೈ ಮೊದಲವಾರ ಬಜೆಟ್ ಮಂಡನೆ ಮಾಡುವ ಸಂಬಂಧ ಅಗತ್ಯ ಸಿದ್ಧತೆ ನಡೆಸಿರುವ ಸಿಎಂ, ಬಜೆಟ್ […]

ಸಾಲ ಮನ್ನಾ ಘೋಷಣೆಗೆ ನಾನು ಈಗಲೂ ಬದ್ಧ, ಹಿಂದೆ ಸರಿಯುವ ಮಾತೇ ಇಲ್ಲ: ಕುಮಾರಸ್ವಾಮಿ

Tuesday, June 19th, 2018
kumarswamy

ಬೆಂಗಳೂರು: ಸಾಲ ಮನ್ನಾ ಘೋಷಣೆಗೆ ನಾನು ಈಗಲೂ ಬದ್ಧ. ಸಾಲಮನ್ನಾದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಈ ವಿಷಯದಲ್ಲಿ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ನನ್ನ ಪ್ರಯತ್ನ ಮಾಡಿದ್ದೇನೆ. ಆದ್ರೆ, ಅವರು ಮಾಡೇ ಬಿಡ್ತಾರೆ ಅಂತ ತಿಳಿದುಕೊಂಡಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಹೆಚ್‌ಡಿಕೆ ಸಂವಾದ ನಡೆಸಿದರು. ಈ ವೇಳೆ, ಮೊದಲ ವಾರದಲ್ಲಿ ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸುಳಿವು ನೀಡಿದರು. ರಾಹುಲ್ ಗಾಂಧಿ ಅವರ ಸಲಹೆಗಳನ್ನ […]

ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ!

Tuesday, June 19th, 2018
rahul-gandhi

ನವದೆಹಲಿ: ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇವತ್ತು 48ನೇ ವಸಂತಕ್ಕೆ ಕಾಂಗ್ರೆಸ್‌‌ನ ಯುವರಾಜ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಹುಲ್‌ ಗಾಂಧಿ ಅವರಿಗೆ ಇದು ಮೊದಲ ಜನ್ಮದಿನದ ಸಂಭ್ರಮವಾಗಿದೆ. ಪ್ರಧಾನಿ ಮೋದಿ, ರಾಜಕಾರಣಿಗಳು ಮತ್ತು ಕಾಂಗ್ರೆಸ್‌ನ ನಾಯಕರು ರಾಗಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯಸ್ಸು ಮತ್ತು ಆರೋಗ್ಯಕ್ಕಾಗಿ ನಾನು […]

ರಾಜ್ಯದ ಅಭಿವೃದ್ಧಿಯ ಬಗ್ಗೆ ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

Monday, June 18th, 2018
rahul-gandhi

ಹೊಸದಿಲ್ಲಿ: ರಾಜ್ಯದಲ್ಲಿ ಐದು ವರ್ಷಗಳ ಕಾಲ ಸುಭದ್ರವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸರಕಾರವನ್ನು ಮುನ್ನಡೆಸಿಕೊಂಡು ಹೋಗುವ ಬಗ್ಗೆ, ರಾಜ್ಯದ ಅಭಿವೃದ್ಧಿಯ ಬಗ್ಗೆ ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದಾಗಿ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಹೊಸದಿಲ್ಲಿಯಲ್ಲಿರುವ ಅವರ ನಿವಾಸದಲ್ಲಿಂದು ಭೇಟಿಯಾದ ಬಳಿಕ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಹುಲ್ ಅವರೊಂದಿಗೆ ಸೌಹಾರ್ದಯುತ ಮಾತುಕತೆಗಾಗಿ ಭೇಟಿಯಾಗಿದ್ದೇನೆ. ಈ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. […]

ಘಟಾನುಘಟಿಗಳನ್ನೇ ಸಂಪುಟದಿಂದ ಕೈಬಿಟ್ಟ ಕಾಂಗ್ರೆಸ್-ಜೆಡಿಎಸ್..!

Wednesday, June 6th, 2018
congress-JDs

ಬೆಂಗಳೂರು: ಹಲವು ಕಸರತ್ತಿನ ಮೂಲಕ ರಚನೆಗೊಂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಕೊನೆಗೂ ಸಚಿವ ಸಂಪುಟ ರಚನೆಯ ಕಸರತ್ತು ಪೂರ್ಣಗೊಳಿಸಿದೆ. ಸಮ್ಮಿಶ್ರ ಸರ್ಕಾರದ ಸಚಿವರಾಗಿ ಜೆಡಿಎಸ್ ನ 10 ಮಂದಿ ಮತ್ತು ಕಾಂಗ್ರೆಸ್ ನ 15 ಮಂದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತ್ತ ಸಂಪುಟದಲ್ಲಿ ಸ್ಥಾನ ಪಡೆದವರು ಸಂಭ್ರಮಿಸುತ್ತಿದ್ದರೆ, ಹಲವು ಲಾಬಿಗಳನ್ನು ನಡೆಸಿದ ಹೊರತಾಗಿಯೂ ಸ್ಥಾನ ವಂಚಿತರಾದವರು ಬಹಿರಂಗವಾಗಿಯೇ ತಮ್ಮ ಅಸಮಾಧಾನಗಳನ್ನು ಹೊರಹಾಕುತ್ತಿದ್ದಾರೆ. ಸಚಿವ ಸಂಪುಟಕ್ಕೆ ಆಯ್ಕೆ ಸಂದರ್ಭದಲ್ಲಿ ಎರಡೂ ಪಕ್ಷಗಳಲ್ಲಿ ಹಲವು ಹಿರಿಯರನ್ನು ದೂರ ಇಡಲಾಗಿದೆ. ಅವರ ಸ್ಥಾನದಲ್ಲಿ […]

ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ ರಾಹುಲ್ ಗಾಂಧಿ

Thursday, May 17th, 2018
rahul-gandhi

ಹರ್ಯಾಣ : ಹರ್ಯಾಣದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. “ಭಾರತದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ತಲೆದೂರಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ಸರ್ಕಾರಕ್ಕೆ ಹೆದರುವಂಥ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿ ಪಾಕಿಸ್ಥಾನದಂತ ಸರ್ವಾಧಿಕಾರಿ ದೇಶಗಳಲ್ಲಿ ಮಾತ್ರ ಇರುತ್ತಿತ್ತು” ಎಂದು ಅವರು ಹೇಳಿಕೆ ನೀಡಿದ್ದರು. ಹರ್ಯಾಣದಲ್ಲಿ ಇಂದು ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಅವರು ಕರ್ನಾಟಕದ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದರು. ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿದ, ಮುಖ್ಯಮಂತ್ರಿಯಾಗಿ ಬಿ ಎಸ್ […]