Blog Archive

ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ

Monday, November 28th, 2016
subramanya lakshadeepothsava

ಸುಬ್ರಹ್ಮಣ್ಯ: ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ ನೆರವೇರಲಿದೆ. ಲಕ್ಷ ದೀಪೋತ್ಸವದೊಂದಿಗೆ ರಥಬೀದಿಯಲ್ಲಿ ಶ್ರೀ ದೇವರ ರಥೋತ್ಸವ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಲಕ್ಷ ದೀಪೋತ್ಸವದಂದು ಲಕ್ಷ ಹಣತೆ ಬೆಳಗಿಸಲಾಗುತ್ತದೆ. ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಕೆಲವು ಹಣತೆ ದೀಪಗಳನ್ನು ಹಚ್ಚಲಾಗುತ್ತಿತ್ತು. ಈ ಬಾರಿ ಕ್ಷೇತ್ರದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಲಕ್ಷ ಹಣತೆಗಳನ್ನು ಹಚ್ಚುವ ವ್ಯವಸ್ಥೆ ಮಾಡಲಾಗಿದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಣ್ಣಿನ […]

ಧರ್ಮಸ್ಥಳದ ಲಕ್ಷದೀಪೋತ್ಸವದ ಅಮೃತವರ್ಷಿಣಿ ಸಭಾಭವನದಲ್ಲಿ 84 ನೇ ಸರ್ವಧರ್ಮ ಸಮ್ಮೇಳನ

Monday, November 28th, 2016
Sarvadharma Sammelana

ಬೆಳ್ತಂಗಡಿ: ಬಹುಮತೀಯ ರಾಷ್ಟ್ರ ನಮ್ಮದು. ನಮ್ಮ ಸಂವಿಧಾನ ಎಲ್ಲರಿಗೂ ರಕ್ಷಣೆ ನೀಡಿದೆ. ಮತೀಯ ವೈಚಾರಿಕತೆಯನ್ನು ಜನರಿಗೆ ಹೇಳಿ ಪ್ರಜ್ಞಾವಂತಿಕೆಯನ್ನು ಮೂಡಿಸುವ ಕೆಲಸವನ್ನು ಇಂತಹ ಸಮ್ಮೇಳನಗಳಿಂದ ಸಾಧ್ಯ ಎಂದು ಸುಪ್ರೀಂಕೋರ್ಟ್‍ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಅಭಿಪ್ರಾಯಪಟ್ಟರು. ಭಾನುವಾರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಿದ್ದ 84 ನೇ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ವಧರ್ಮೀಯ ಯುವಜನತೆ ಧರ್ಮ, ಅರ್ಥ, ಕಾಮ, ಮೋಕ್ಷಗಳ ಬಗ್ಗೆ ಚಿಂತಿಸಿದಾಗ ಶಾಂತಿಯುತ ನಾಗರಿಕ ವ್ಯವಸ್ಥೆ ರೂಪುಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು. ಚತುರ್ವಿಧ […]

ಧರ್ಮಸ್ಥಳ : ಸಮವಸರಣ ಪೂಜಾ ವೈಭವ

Saturday, December 12th, 2015
Dharmasthala

ಧರ್ಮಸ್ಥಳ : ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಮಹೋತ್ಸವ ಸಭಾ ಭವನದಲ್ಲಿ ಸಮವಸರಣ ಪೂಜಾ ವೈಭವವನ್ನು ಊರ-ಪರವೂರ ಶ್ರಾವಕ-ಶ್ರಾವಕಿಯರು ವೀಕ್ಷಿಸಿ ಪೂನ್ಯ ಸಂಚಯ ಮಾಡಿಕೊಂಡರು. ಉತ್ಸಾಹದಿಂದ ಭಾಗವಹಿಸಿದರು. ಬೀಡಿನಿಂದ (ಹೆಗ್ಗಡೆಯವರ ನಿವಾಸ) ಸಭಾ ಭವನಕ್ಕೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ತೀರ್ಥಂಕರರ ಭವ್ಯ ಮೆರವಣಿಗೆ ಬಳಿಕ ಮಹೋತ್ಸವ ಸಭಾ ಭವನದಲ್ಲಿ ಸಮವಸರಣ ಪೂಜೆ ನಡೆಯಿತು. ಪಂಚ ನಮಸ್ಕಾರ ಮಂತ್ರ ಪಠಣ, ಅಷ್ಟವಿಧಾರ್ಚನೆ ಪೂಜೆ, ಸಂಗೀತ ಪೂಜೆ ಇತ್ಯಾದಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಾಕ್ಷಾತ್ ಸಮವಸರಣವನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದಂತಾಯಿತು. ಧರ್ಮಾಧಿಕಾರಿ […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ:

Thursday, December 10th, 2015
Darmasthala Deepotsava

ಧರ್ಮಸ್ಥಳ : ಲಕ್ಷದೀಪೋತ್ಸವ ಸಂದರ್ಭದಲ್ಲಿ ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ ಎಂಬತ್ತಮೂರನೆ ಅಧಿವೇಶನವನ್ನು ಖ್ಯಾತ ಸಂಶೋಧಕ ಡಾ. ಷ. ಶೆಟ್ಟರ್ ಉದ್ಘಾಟಿಸಿ ಮಾತನಾಡಿದರು. ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ. ಮುಕ್ತ ಮನಸ್ಸಿನಿಂದ ಇಂದು ಸಂಶೋಧನೆ ಮಾಡುವುದೇ ಅಪರಾಧವಾಗಿದೆ ಎಂದು […]

ಧರ್ಮಸ್ಥಳದ ಎಲ್ಲಾ ವ್ಯವಹಾರಗಳು ಕಾನೂನು ಬದ್ಧವಾಗಿವೆ

Monday, December 7th, 2015
Laksha Deepotsava

ಧರ್ಮಸ್ಥಳ : ಲಕ್ಷದೀಪೋತ್ಸವದ ಪ್ರಾರಂಭದ ದಿನವಾದ ಭಾನುವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾ ಭವನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಧರ್ಮಸ್ಥಳದ ಎಲ್ಲಾ ವ್ಯವಹಾರಗಳು ಕಾನೂನು ರೀತಿಯಲ್ಲಿ ಕ್ರಮ ಬದ್ಧವಾಗಿವೆ. ಶ್ರೀ ಮಂಜುನಾಥ ಸ್ವಾಮಿ, ಧರ್ಮದೇವತೆಗಳು ಹಾಗೂ ಅಣ್ಣಪ್ಪ ಸ್ವಾಮಿಯ ಅನುಗ್ರಹದಿಂದ ಕ್ಷೇತ್ರದ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತಿವೆ. ಯಾವುದನ್ನೂ ನಾನು ಮಾಡುವುದಲ್ಲ. ದೇವರು ನನ್ನಿಂದ ಮಾಡಿಸುತ್ತಾರೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಾರಂಭದ ದಿನವಾದ […]

ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನದ 82ನೇ ಅಧಿವೇಶನ

Saturday, November 22nd, 2014
deepotsava

ಧರ್ಮಸ್ಥಳ : ತನಗಾಗಿ ಬದುಕುವುದು ಜೀವನವಲ್ಲ. ನಾವು ಇತರರಿಗಾಗಿ ಬದುಕುವುದೇ ಸಾರ್ಥಕ ಜೀವನ. ನೈತಿಕತೆ ಮತ್ತು ಉತ್ತಮ ಸಂಸ್ಕಾರ ಸರ್ವಧರ್ಮಗಲ ಸಾರವಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 82ನೇ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಶಕ್ತಿ ಇದೆ. ಅದನ್ನು ಬೆಳಕಿಗೆ ತರುವುದೇ ಧರ್ಮ ಆಗಿದೆ. ನಾವು ಧರ್ಮ ಮತ್ತು ನೈತಿಕತೆಯನ್ನು ದೈನಂದಿನ ಬದುಕಿನಲ್ಲಿ ಅನುಷ್ಠಾನಗೋಲಿಸಿದಾಗ ಮಾತ್ರ ಇತತರಿಗೆ ಉಪದೇಶ […]

ಧರ್ಮಸ್ಥಳದಲ್ಲಿ 81ನೇ ಸರ್ವಧರ್ಮ ಸಮ್ಮೇಳನ ಸಂಪನ್ನ

Monday, December 2nd, 2013
dharmasthala

ಧರ್ಮಸ್ಥಳ :  ಲಕ್ಷದೀಪೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾ ಭವನದಲ್ಲಿ ಏರ್ಪಡಿಸಿದ ಸರ್ವಧರ್ಮ ಸಮ್ಮೇಳನವನ್ನು ಕಾನೂನು ಸಚಿವ ಟಿ.ಬಿ. ಜಯಚಂದ್ರ ಭಾನುವಾರ ಉದ್ಘಾಟಿಸಿದರು. ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಜಾತಿ, ಮತ, ಧರ್ಮದ ಹೆಸರಿನಲ್ಲಿ ನಡೆಯುವ ಅನ್ಯಾಯ, ಶೋಷಣೆ, ಮೂಢನಂಬಿಕೆ ಹಾಗೂ ಇತರ ಅನಿಷ್ಟ ಪದ್ಧತಿ ಸಾಮಾ ಜಿಕ ಆಂದೋಲನದ ರೀತಿಯಲ್ಲಿ ನಿವಾರಣೆ ಮಾಡಬೇಕು. ದೇವನೊಬ್ಬ ನಾಮ ಹಲವು ಎಂಬಂತೆ ನಾವೆಲ್ಲರೂ ಒಬ್ಬರೇ ದೇವರ ಮಕ್ಕಳು ಎಂಬ ಭಾವನೆಯಿಂದ ಪರಸ್ಪರ ಪ್ರೀತಿ-ವಿಶ್ವಾಸ ದಿಂದ ಸಾರ್ಥಕ ಜೀವನ ನಡೆಸಬೇಕು […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹರಿದು ಬರುತ್ತಿರುವ ಜನ ಸಾಗರ

Thursday, November 28th, 2013
Dharmasthala

ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮವು ನ.28 ರಿಂದ ಡಿ. 3ರವರೆಗೆ ನಡೆಯಲಿವೆ. 36ನೇ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಪ್ರಧಾನ ಗುರು ಫಾ.ಜೇಮ್ಸ್ ಡಿ’ ಸೋಜರವರು ಇಂದು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಧರ್ಮಾಧಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. ಈ ವಸ್ತು ಪ್ರದರ್ಶನ ಡಿ.3ರ ತನಕವಿದ್ದು, ಉಚಿತ ಪ್ರವೇಶವಿರುತ್ತದೆ.  ಬಳಿಕ ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ 6 ಗಂಟೆಯಿಂದ ಶಿವಮೊಗ್ಗದ ಮ್ಯಾಜಿಕ್ […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆರಂಭ

Monday, November 21st, 2011
lakhadeep

ಬೆಳ್ತಂಗಡಿ,: ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಏರ್ಪಡಿಸಿದ 34ನೇ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ದ.ಕ. ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಿರಿ ಸಂಸ್ಥೆಯ ಮೂಲಕ ವಿರೇಂದ್ರ ಹೆಗ್ಗಡೆಯವರು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಚೈತನ್ಯ ತುಂಬುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದರು. ವಿದ್ಯಾ ಸಂಸ್ಥೆಗಳು ವ್ಯಾಪಾರಿ ಕ್ಷೇತ್ರವಾಗುತ್ತಿರುವ ಈ ದಿನಗಳಲ್ಲಿ ಶ್ರೀಕ್ಷೇತ್ರ ನೀಡುತ್ತಿರುವ ಶೈಕ್ಷಣಿಕ ಸೇವೆ ಅಮೂಲ್ಯ ಎಂದು ಹೇಳಿದರು, ಪ್ರತ್ಯಕ್ಷ, ಪರೋಕ್ಷವಾಗಿ ದೇವರನ್ನು ಸ್ಮರಿಸುವುದರಿಂದ ಉತ್ತಮ ಸಮಾಜ […]