Blog Archive

ವಿಧಾನಸಭಾ ಚುನಾವಣೆ: ದ.ಕ. ಜಿಲ್ಲೆಯಲ್ಲಿ 66 ನಾಮಪತ್ರ ಕ್ರಮಬದ್ಧ

Thursday, April 26th, 2018
election

ಮಂಗಳೂರು: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧವಾಗಿದೆ. ನಾಮಪತ್ರ ಹಿಂಪಡೆಯಲು ಏ. 27 ಅಂತಿಮ ದಿನವಾಗಿದೆ. ಕ್ರಮಬದ್ಧ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ (ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ (ಜೆಡಿಎಸ್), ಹರೀಶ್ ಪೂಂಜಾ (ಬಿಜೆಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ (ಎಂಇಪಿ), ಪ್ರಸಾದ್ ಕುಮಾರ್ (ಶಿವಸೇನೆ), ಸೈಯದ್ ಹಸನ್ (ಪಕ್ಷೇತರ) ಮೂಡಬಿದ್ರೆ ಕ್ಷೇತ್ರ – […]

ವಿಧಾನಸಭಾ ಚುನಾವಣೆಗೆ ದ.ಕ ಜಿಲ್ಲೆಯಲ್ಲಿ 98 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Wednesday, April 25th, 2018
Bantwal

ಮಂಗಳೂರು : ಕರ್ನಾಟಕ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಮುಕ್ತಾಯಗೊಂಡಿದೆ. ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ 98 ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಲಿದೆ. ನಾಮಪತ್ರ ಹಿಂದೆಗೆಯಲು ಎಪ್ರಿಲ್ 27 ಅಂತಿಮ ದಿನ. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ). ಮೂಡಬಿದ್ರ್ರೆ ಕ್ಷೇತ್ರ – ಕೆ. ಅಭಯಚಂದ್ರ(ಕಾಂಗ್ರೆಸ್), […]

ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ

Saturday, April 21st, 2018
pooja-gandhi

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಅವರು ಇಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಪೂಜಾಗಾಂಧಿ ಪಿಜಿಆರ್ ಸಿಂಧ್ಯಾ ನೇತೃತ್ವದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ನಟಿ ಪೂಜಾಗಾಂಧಿ ಕಳೆದ ಚುನಾವಣೆಯಲ್ಲಿ ರಾಯಚೂರಿನಿಂದ ಬಿಎಸ್ ಆರ್ ಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿರುವ ಪೂಜಾಗಾಂಧಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.

ವಿಧಾನಸಭಾ ಚುನಾವಣೆ: 30 ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ಧೆ

Friday, April 20th, 2018
election

ಮಂಗಳೂರು: ಅಖಿಲ ಭಾರತ ಹಿಂದೂ ಮಹಾಸಭಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಸಭಾದ ರಾಜ್ಯಾಧ್ಯಕ್ಷ ನಾ. ಸುಬ್ರಹ್ಮಣ್ಯ ರಾಜು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಿಂದೂ ಕೇಸರಿ ಪಡೆಗಳು ಒಟ್ಟಾಗಿ 150 ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈ ಹಿಂದೆ ಹೇಳಿಕೆ ನೀಡಿದ್ದೆ. ಅದರಂತೆ ಇದೀಗ ಹಿಂದೂ ಮಹಾಸಭಾವಲ್ಲದೆ, ಸಂಪೂರ್ಣ ಭಾರತೀಯ ಕ್ರಾಂತಿ ಪಕ್ಷ 15 ಕ್ಷೇತ್ರಗಳಲ್ಲಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ 35 ಮಂದಿಯನ್ನು ಚುನಾವಣಾ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮುಂದಿನ […]

ಕರ್ತವ್ಯ ಲೋಪ ಚುನಾವಣಾಧಿಕಾರಿಗೆ ಜಿಲ್ಲಾಧಿಕಾರಿ ನೋಟಿಸ್‌

Thursday, April 12th, 2018
sesikanth-senthil

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ನಡೆಯುತ್ತಿದ್ದು, ಚುನಾವಣೆ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ವ್ಯಾಪಕ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ, ಕರ್ತವ್ಯಲೋಪ ಎಸಗುವ ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಮುಂದಾಗಿರುವ ಘಟನೆ ನಡೆದಿದೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಅಳವಡಿಸಿರುವ ಬ್ಯಾನರ್‌ಗಳು ಹಾಗೂ ಬಂಟಿಂಗ್‌ಗಳನ್ನು ತೆರವುಗೊಳಿಸದೇ ಇರುವ ಹಿನ್ನೆಲೆಯಲ್ಲಿ ಮೂಡಬಿದಿರೆ ಚುನಾವಣಾಧಿಕಾರಿಗೆ ದ.ಕ. ಜಿಲ್ಲಾಧಿಕಾರಿ ಅವರು ಕಾರಣ ಕೇಳಿ ನೋಟಿಸ್‌ […]

ಚುನಾವಣಾ ಅಖಾಡಕ್ಕೆ ಹುಚ್ಚ ವೆಂಕಟ್‌‌… ಯಾರ ವಿರುದ್ಧ ಸ್ಪರ್ಧೆ!

Saturday, April 7th, 2018
huccha-venkat

ಬೆಂಗಳೂರು: ಮೇ ತಿಂಗಳಿನಲ್ಲಿ‌ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇವೆ ಎಂದು‌ ನಟ ಹುಚ್ಚ ವೆಂಕಟ್ ಹೇಳಿದ್ದಾರೆ. ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಇತರ ಪಕ್ಷಗಳ ಅಭ್ಯರ್ಥಿಗಳು ಸೀರೆ, ಕುಕ್ಕರ್, ಹೆಂಡ ನೀಡುತ್ತಿದ್ದಾರೆ. ಹಾಲಿ ಶಾಸಕ ಮುನಿರತ್ನ ವಿರುದ್ಧ ನಾನು ಮಾಡೋ ಚುನಾವಣಾ ಪ್ರಚಾರ ಯಾರೂ ಮಾಡಕ್ಕಾಗಲ್ಲ. ಮೋದಿ, ಒಬಾಮಾ ಯಾರಿಂದಲೂ ನನ್ನಂತೆ ಪ್ರಚಾರ ಮಾಡೋಕೆ ಆಗಲ್ಲ. ಕಾರಣ ನಾನು ಕುಕ್ಕರ್, ಸೀರೆ ಕೊಟ್ಟು ಪ್ರಚಾರ ಮಾಡಲ್ಲ. […]

ಜಾಣಮೌನದ ಹಿಂದಿದೆ ಸರಳ ರಹಸ್ಯ

Wednesday, February 21st, 2018
mangaluru

ಮಂಗಳೂರು: ಅನೈತಿಕ ಪೊಲೀಸ್‌ಗಿರಿಯ ಘಟನೆಗಳಿಂದಾಗಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ದೇಶದಾದ್ಯಂತ ಆಗಾಗ ಸುದ್ದಿ ಮಾಡಿದರೂ, ಅನೈತಿಕ ಪೊಲೀಸ್‌ಗಿರಿಯು ಚುನಾವಣೆಯ ವಿಷಯವಾಗಿ ಗುರುತಿಸಿಕೊಳ್ಳದೇ ಇರುವುದು ವಿಪರ್ಯಾಸ. ಅಭಿವೃದ್ಧಿಯ ಸಮಸ್ಯೆಗಳು, ನಿರುದ್ಯೋಗದ ಪರಿಣಾಮವಾದ ನಿರಂತರ ವಲಸೆ ಅಥವಾ ನೀರು ನಿರ್ವಹಣೆಯ ಸ್ಥಳೀಯ ಸಮಸ್ಯೆಗಳು ಕರಾವಳಿಯಲ್ಲಿ ಚುನಾವಣೆಯ ವಿಷಯವಾಗುತ್ತಿಲ್ಲ. ಇದೇ ಸಾಲಿಗೆ ಅನೈತಿಕ ಪೊಲೀಸ್‌ಗಿರಿಯೂ ಸೇರಿದೆ ಎನ್ನಬಹುದು. ಜಿಲ್ಲೆಯಲ್ಲಿ ಶಿಕ್ಷಣ ಪಡೆದ ಜನರೇ ಇರುವುದರಿಂದ ರಾಜ್ಯ ರಾಜಕೀಯ ವಿದ್ಯಮಾನ ಮತ್ತು ದೇಶದ ರಾಜಕೀಯ ಚಿತ್ರಣವೂ ಇಲ್ಲಿನ ಮತದಾರರ ಮನಸ್ಸಿನ ಮೇಲೆ […]

ಇಂದು ಸಿದ್ದು ಸರ್ಕಾರದ ಕೊನೆ ಬಜೆಟ್… ರಾಜ್ಯದ ಜನತೆಗೆ ಸಿಗ್ತಾವಾ ಭರ್ಜರಿ ಭಾಗ್ಯಗಳು!?

Friday, February 16th, 2018
siddaramaih

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ಆಯವ್ಯಯವನ್ನು ಇಂದು ಬೆಳಗ್ಗೆ 11.30ಕ್ಕೆ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 6ನೇ ಹಾಗೂ ಹಣಕಾಸು ಸಚಿವರಾಗಿ 13ನೇ ಬಜೆಟ್‌ಅನ್ನು ಇಂದು ಮಂಡಿಸಲಿದ್ದು, ರಾಜ್ಯದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಆಡಳಿತ ಸರ್ಕಾರದ ಕೊನೆಯ ಬಜೆಟ್ ಕೂಡ ಇದಾಗಲಿದ್ದು, ಚುನಾವಣಾ ವರ್ಷವೂ ಆಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಹೆಚ್ಚು ಒತ್ತುಕೊಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು […]

‘ಮತ ಹಾಕಿದರೆ ಪ್ರಜಾಪ್ರಭುತ್ವ ಬೆಂಬಲಿಸಿದಂತೆ’

Thursday, February 8th, 2018
ivan-desouza

ಮಂಗಳೂರು: ಮತದಾನದ ಹಕ್ಕನ್ನು ಯುವಜನತೆಗೆ ನೀಡಲು ಸಂವಿಧಾನದ ತಿದ್ದುಪಡಿ ತಂದಾಗ ದೇಶದ ಯುವಜನತೆಯ ಬಗ್ಗೆ ಹಿರಿಯರಿಗೆ ಅಪಾರವಾದ ಭರವಸೆ ಇತ್ತು. ಆ ಭರವಸೆ ಸಾಕಾರವಾಗುವುದು ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಕರ್ತವ್ಯ ನಿಭಾಯಿಸಿದಾಗ. ಸಂವಿಧಾನಕ್ಕೆ ತಿದ್ದುಪಡಿ ತಂದು ಅಂದಿನ ಪ್ರಧಾನಿಯಾಗಿದ್ದ ದಿವಂಗತ ರಾಜೀವ್ ಗಾಂಧಿಯವರು ಸುಮಾರು 45 ಶೇಕಡಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿರುವ 18 ರಿಂದ 30ವರ್ಷ ವಯಸ್ಸಿನವರೆಗಿನ ಯುವಕರಿಗೆ ಮತದಾನದ ಹಕ್ಕನ್ನು ನೀಡಬೇಕು ಎಂದರು ಹಾಗೂ ಮತದಾನದ ಹಕ್ಕನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲಾಯಿತು. ದೇಶದ […]

ಉಳ್ಳಾಲದಲ್ಲಿ ಡಿವಿಎಸ್, ಬಂಟ್ವಾಳದಲ್ಲಿ ಶೋಭಾ ಸ್ಪರ್ಧೆಯ ಸವಾಲ್

Tuesday, July 11th, 2017
election

ಮಂಗಳೂರು : ದಕ್ಷಿಣ ಕನ್ನಡದಲ್ಲಿ ನಡೆದ ಕೋಮು ಗಲಭೆಯ ಬಿಸಿ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಉಂಟು ಮಾಡಿದ್ದು. ನಾಯಕರು ಚುನಾವಣಾ ಸ್ಪರ್ಧೆಯ ಸವಾಲನ್ನು ಒಡ್ಡಿದ್ದಾರೆ.  ಸಂಸದೆ ಶೋಭಾ ಹಾಗೂ ಸಚಿವ ಡಿ.ವಿ. ಸದಾನಂದ ಗೌಡರು  ವಿಧಾನಸಭಾ ಚುನಾವಣೆಯಲ್ಲಿ ನನ್ನ ಹಾಗೂ ಖಾದರ್ ವಿರುದ್ಧ ಸ್ಪರ್ಧಿಸಿ ಗೆಲ್ಲಲಿ ಎಂದು ಸಚಿವ ಬಿ. ರಮಾನಾಥ ರೈ ಸವಾಲೆಸೆದಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈ ಸಂಸದೆ ಶೋಭಾ ಹಾಗೂ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮಾಹಿತಿ ಕೊರತೆಯಿದೆ. ಅವರು ತಮ್ಮ ಹೇಳಿಕೆ ಮೂಲಕ ಜಿಲ್ಲೆಯ […]