Blog Archive

ಕುತೂಹಲ ಮೂಡಿಸಿದ ಗೌಡ-ಇಬ್ರಾಹಿಂ ಭೇಟಿ

Wednesday, February 5th, 2014
HD-Deve-Gowda

ಬೆಂಗಳೂರು:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೃತೀಯ ರಂಗ ಸ್ಥಾಪನೆಯತ್ತ ಹೆಚ್ಚು ಒಲವು ತೋರಿರುವ ಎಚ್.ಡಿ. ದೇವೇಗೌಡ ಅವರು ಈ ಸಂದರ್ಭದಲ್ಲಿ ಸಿ.ಎಂ. ಇಬ್ರಾಹಿಂ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಸಿ.ಎಂ. ಇಬ್ರಾಹಿಂ ಅವರು ಗೌಡರಿಗೆ […]

ಸದನದಲ್ಲಿ ಆಂಜನೇಯ, ನರೇಂದ್ರ ಸ್ವಾಮಿ ಜಟಾಪಟಿ

Friday, January 31st, 2014
assembly

ಬೆಂಗಳೂರು: ಕೊನೆಯ ದಿನವಾದ ಗುರುವಾರ ವಿಧಾನಸಭೆ ಕಲಾಪದ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಮತ್ತು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಸರ್ಕಾರವನ್ನು ಮುಜುಗರ ಉಂಟುಮಾಡಿತು. ಗುರುವಾರದ ಕಲಾಪದಲ್ಲಿ ಮೀಸಲು ಕ್ಷೇತ್ರಗಳ ಶಾಸಕರ ಕುರಿತು ಸಚಿವ ಆಂಜನೇಯ ಅವರು ಆಡಿದ ಮಾತಿನಿಂದ ಅಸಮಾಧಾನಗೊಂಡ ನರೇಂದ್ರಸ್ವಾಮಿ, ಒಂದು ಹಂತದಲ್ಲಿ ಆಂಜನೇಯ ಅವರ ಮೇಲೆ ಏರಿ ಹೋಗುವ ಯತ್ನವನ್ನೂ ಮಾಡಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸುಳಿವು ಅರಿತ ಇತರ ಸದಸ್ಯರು ಇಬ್ಬರನ್ನೂ ಸಮಾಧಾನಪಡಿಸಿದರು. ಪ್ರತಿಪಕ್ಷದ ನಾಯಕ ಜಗದೀಶ್‌ […]

ಶಾಸಕ ವಸಂತ ಬಂಗೇರ ವಿಧಾನಸಭೆಯಲ್ಲಿ ತುಳು ಭಾಷೆಯಲ್ಲಿ ಪ್ರಮಾಣ ವಚನಕ್ಕೆ ಸ್ಪೀಕರ್ ಆಕ್ಷೇಪ

Wednesday, June 5th, 2013
Vasanth Bangera

ಬೆಳ್ತಂಗಡಿ  : ಬೆಳ್ತಂಗಡಿ ಶಾಸಕ ವಸಂತ ಬಂಗೇರ ಅವರು ವಿಧಾನಸಭೆಯಲ್ಲಿ ಮೇ 30ರಂದು ತುಳುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದರೆ, ಆ ಸಂದರ್ಭದಲ್ಲಿ ಹಂಗಾಮಿ ಸ್ಪೀಕರ್ ಆಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ತುಳುಭಾಷೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಲ್ಲ. ನೀವು ತುಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಅದು ಅಸಿಂಧುವಾಗಲಿದೆ ಎಂದಿದ್ದರು. ಶಾಸಕ ವಸಂತ ಬಂಗೇರ ಅವರು ತುಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷೆಯ ಅಸ್ತಿತ್ವ ಹಾಗೂ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ.  ಇದು ತುಳುವರ […]

ಸಚಿವರಿಂದ ಸದನದಲ್ಲಿ ಬ್ಲೂಫಿಲ್ಮ್ ವೀಕ್ಷಣೆ, ಪಾಲೇಮಾರ್ ಕೂಡ ಬಾಗಿ

Wednesday, February 8th, 2012
watching porn Video at Assembly

ಬೆಂಗಳೂರು : ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಕುರಿತು ವಿಪಕ್ಷಗಳ ಸದಸ್ಯರು ಸರ್ಕಾರದ ಗಮನ ಸೆಳೆಯಲು ಗಂಭೀರವಾಗಿ ಮಾತನಾಡುತ್ತಿದ್ದ ವೇಳೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಅಶ್ಲೀಲ ದೃಶ್ಯಗಳನ್ನು ಒಳಗೊಂಡ ಬ್ಲೂಫಿಲ್ಮ್ ತನ್ನ ಮೊಬೈಲ್‌ನಲ್ಲಿ ವೀಕ್ಷಿಸಿ ಸಿಕ್ಕಿಬಿದ್ದ ಆಘಾತಕಾರಿ ಪ್ರಸಂಗ ಬೆಳಕಿಗೆ ಬಂದಿದೆ. ಶಾಸಕಾಂಗದ ಪರಮೋಚ್ಚ ಸ್ಥಳವಾದ ವಿಧಾನಸಭೆಯಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಾದಲ್ಲಿ ತಲೆತಗ್ಗಿಸುವಂಥ ಘಟನೆಯೊಂದು ನಡೆದಿದೆ. ದೇಶದಲ್ಲೇ ಇಂಥದೊಂದು ಹೀನ ಸಂಸ್ಕೃತಿಯ ಬೆಳವಣಿಗೆ ನಡೆದಿರುವುದು ಇದೇ […]