Blog Archive

ಆಡುಭಾಷೆಯನ್ನು ಮರೆತರೆ ನಮ್ಮ ಮೂಲವನ್ನು ಮರೆತಂತೆ: ಡಿ ವಿ ಸದಾನಂದ ಗೌಡ

Sunday, May 30th, 2021
DV Sadananda-gowda

ಮಂಗಳೂರು: ಜಾಗತೀಕರಣದ ಪ್ರಭಾವದಿಂದ ಇಂಗ್ಲಿಷ್‌ ಅನಿವಾರ್ಯ ಎಂಬಂತಾಗಿದೆ. ಇದರಿಂದ ತುಳು ಸೇರಿದಂತೆ ಹಲವು ಭಾಷೆಗಳು ನಲುಗುತ್ತಿವೆ. ಹೀಗಾಗಿ ತುಳುವರು ತಮ್ಮ ಭಾಷೆಯನ್ನು ಮರೆತು ಮೂಲವನ್ನೇ ಮರೆಯದಿರೋಣ, ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆಯ ವರ್ಷಾಚರಣೆಯ ಪ್ರಯುಕ್ತ ಶನಿವಾರ […]

ಅರಮನೆಗೆ ಗೌರವಧನ ನೀಡುವ ಬಗ್ಗೆ ವಿವಾದ ಬೇಡ: ಸಚಿವ ಜಿಟಿಡಿ

Tuesday, September 18th, 2018
aramane

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಅರಮನೆ ಹಾಗೂ ಸರ್ಕಾರ ಒಟ್ಟಿಗೆ ಹೋಗಲಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ. ದಸರಾ ಮಹೋತ್ಸವದ ಸಂದರ್ಭದಲ್ಲಿ ರಾಜವಂಶಸ್ಥರಿಗೆ ಸರ್ಕಾರದಿಂದ ಪ್ರತಿ ವರ್ಷದಂತೆ ಗೌರವಧನ ನೀಡಲಿದ್ದು, ಈ ವಿಷಯದ ಬಗ್ಗೆ ಯಾವುದೇ ವಿವಾದ ಸೃಷ್ಟಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕ್ರಾಫರ್ಡ್ ಭವನದಲ್ಲಿ ರಾಜ್ಯದ ಎಲ್ಲಾ ಕುಲಪತಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜವಂಶಸ್ಥರು ಹೇಳಿರುವಂತೆ ಸರ್ಕಾರದಿಂದ ನಡೆಸುವುದು ನಾಡಹಬ್ಬವಾಗಿದ್ದು, ಇದು ಸಹ […]

ವಸಾಹತುಶಾಹಿ ಆಡಳಿತ ಕಾಲದ ವಿಶ್ವವಿದ್ಯಾನಿಲಯ ಕಾಲೇಜಿನ 149 ವರ್ಷಗಳ ಸಾರ್ಥಕ ಸೇವೆ

Thursday, October 12th, 2017
university collage

ಮಂಗಳೂರು: ವಸಾಹತುಶಾಹಿ ಆಡಳಿತ ಕಾಲದಲ್ಲಿ (1860ರಲ್ಲಿ) ಮಂಗಳೂರಿನ ನಾಗರಿಕರ ದೂರದೃಷ್ಟಿ, ಸಮಾಜಮುಖಿ ಚಿಂತನೆಯ ಫಲವಾಗಿ ಅಸ್ತಿತ್ವಕ್ಕೆ ಬಂದ ಅಂದಿನ ಸರಕಾರಿ ಕಾಲೇಜು ಈ ಸೆಪ್ಟೆಂಬರ್‌ಗೆ 149 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ಣಗೊಳಿಸಿದೆ. ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮ. ಡಾ. ಶಿವರಾಮ ಕಾರಂತ, ಡಾ. ಎಂ.ವೀರಪ್ಪ ಮೊಯ್ಲಿ, ಡಾ. ಮನಮೋಹನ್ ಅತ್ತಾವರ, ಮಂಜೇಶ್ವರ ಗೋವಿಂದ ಪೈ, ಎ.ಬಿ.ಶೆಟ್ಟಿ, ಯು.ಪಿ.ಮಲ್ಯ, ವೈಕುಂಠ ಬಾಳಿಗ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ರಮಾನಾಥ ರೈ, ವಿಜಯಕುಮಾರ್ ಶೆಟ್ಟಿ, ಪಿ.ಎಂ.ಸಯೀದ್, ವಿನಯಕುಮಾರ್ ಸೊರಕೆ, ಡಿ.ಕೆ.ಚೌಟ… ಹೀಗೆ ಪಟ್ಟಿ ಬೆಳೆಯುತ್ತಲೇ […]

`ಯುವಜನಾಂಗಕ್ಕೆ ಉತ್ತಮ ಮಾರ್ಗದರ್ಶನ ಅಗತ್ಯ’

Friday, January 7th, 2011
ಅಪರಾಧ ತಡೆ ಮಾಸ

ಮಂಗಳೂರು, ಜ.7 : ಸಮಾಜವನ್ನು ಅಪರಾಧಮುಕ್ತವಾಗಿಸಲು 16ರಿಂದ 18ರ ಹರೆಯದ ಯುವಜನಾಂಗಕ್ಕೆ ಉತ್ತಮ ಮಾರ್ಗದರ್ಶನ ನೀಡಬೇಕಿದೆ. ಈ ಹರೆಯದಲ್ಲೇ ಮಕ್ಕಳು ಹಾದಿ ತಪ್ಪುವ ಅವಕಾಶಗಳು ಹೆಚ್ಚಿದ್ದು, ಅವರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಮೂಡಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಟಿ. ಸಿ ಶಿವಶಂಕರಮೂರ್ತಿ ಹೇಳಿದರು. ಅವರಿಂದು ಮಂಗಳೂರು ಪೊಲೀಸ್ ಕಮಿಷನರೇಟ್ ಮತ್ತು ರೋಶನಿ ಕಾಲೇಜಿನ ಅಪರಾಧಶಾಸ್ತ್ರ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಪಾರ […]

ಇಕೋಲಾರ್ಟ್ 2010 ಪ್ರದರ್ಶನ

Saturday, August 21st, 2010
ಇಕೋಲಾರ್ಟ್ 2010 ಪ್ರದರ್ಶನ

ಮಂಗಳೂರು : ಇಕೋಲಾರ್ಟ್-2010, ಪ್ರಕೃತಿ ಹಾಗೂ ಜಾಗತಿಕ ತಾಪಮಾನ ಬದಲಾವಣೆಯ ಕುರಿತು ಚಿತ್ರಕಲಾ ಪ್ರದರ್ಶನ ಮತ್ತು ಸಿನಿಮಾ ಪ್ರದರ್ಶನವು ಮಂಗಳೂರು ವಿಶ್ವವಿದ್ಯಾನಿಲಯ, ಎನ್.ಜಿ ಪಾವಂಜಿ ಚೇರ್ ಇನ್ ಫೈನ್ ಆರ್ಟ್ಸ್, ಬ್ರಿಟೀಷ್ ಕೌನ್ಸಿಲ್, ಚೆನೈ ಅಸೋಸಿಯೇಶನ್ ಆಫ್ ಬ್ರಿಟೀಷ್ ಸ್ಕಾಲರ್ಸ್ ಆರ್ಟಿಸ್ಟ್ ಕಂಬೈನ್ ಸಯನ್ಸ್ ಪೋರಮ್, ವಿಶ್ವವಿದ್ಯಾನಿಲಯ ಕಾಲೇಜಿನ ಸಹಬಾಗಿತ್ವದಲ್ಲಿ ಶುಕ್ರವಾರ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಟಿ.ಸಿ ಶಿವಶಂಕರ ಮೂರ್ತಿಯವರು, ಕಂಚದಲ್ಲಿ ಚಿತ್ರ ಬಿಡಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]