Blog Archive

ಉಳ್ಳಾಲ ನೇತ್ರಾವತಿ ಸೇತುವೆಯ ಮೇಲೆ ಶೀಘ್ರವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ : ಶಾಸಕ ವೇದವ್ಯಾಸ್ ಕಾಮತ್

Saturday, January 18th, 2020
kamath

ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ […]

ವೇದವ್ಯಾಸ್ ಕಾಮತ್ ರಿಂದ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಕಾಮಗಾರಿಯ ಪ್ರಗತಿ ಪರಿಶೀಲನೆ

Thursday, December 12th, 2019
vidhavyas

ಮಂಗಳೂರು :ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ವಿವಿಧ ಇಲಾಖೆಗಳ ಕಾಮಗಾರಿಯ ಕುರಿತು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಲೋಕೋಪಯೋಗಿ ಇಲಾಖೆ,ಪ್ರವಾಸೋದ್ಯಮ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತ ಇಲಾಖೆ ಹಾಗೂ ಮತ್ತಿತರ ಅಧಿಕಾರಿಗಳೊಂದಿಗೆ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಲಕ್ಷ್ಮಣ ಪೂಜಾರಿ, ರಮೇಶ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಉದಯ್ ಶೆಟ್ಟಿ, ಕರಾವಳಿ […]

ಶಾಸಕ ವೇದವ್ಯಾಸ್ ಕಾಮತ್ ಸೂಚನೆಯ ಮೇರೆಗೆ 5.65 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

Wednesday, October 16th, 2019
kamath

ಮಂಗಳೂರು : ನಗರದ ಯೆಯ್ಯಾಡಿ ಕೈಗಾರಿಕಾ ವಲಯದಲ್ಲಿ 5.65 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಗುದ್ದಲಿಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಸ್ಥಳೀಯರು, ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಆಗಬೇಕಿರುವ ಅಭಿವೃದ್ಧಿಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರ ಬಳಿ ಬೇಡಿಕೆಯಿಟ್ಟಿದ್ದೆವು. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೊಳಿಸಿದರೆ ಕೈಗಾರಿಕಾ ವಲಯದ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತದೆ. […]

29 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್

Thursday, October 10th, 2019
vedhavyas-kamath

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಜಯನಗರದಲ್ಲಿ 29 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿ ಬಳಿಕ ಪ್ರತಿಕ್ರಿಯಿಸಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಈ ರಸ್ತೆಯನ್ನು 29 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಕ್ಷೇತ್ರವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿಕೊಂಡು […]

ಮಂಗಳೂರು ನಗರ ದಕ್ಷಿಣಕ್ಕೆ 65 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ : ವೇದವ್ಯಾಸ್ ಕಾಮತ್

Wednesday, September 25th, 2019
kamath

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 65 ಕೋಟಿ ಅನುದಾನವನ್ನು ಕ್ಷೇತ್ರದ ವಿವಿಧ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯನ್ನು ಕರ್ನಾಟಕ ರಾಜ್ಯ ಸರಕಾರದಿಂದ 2018-19 ರಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಗೆ 125 ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಹೆಚ್ಚುವರಿ ಕಾಮಗಾರಿಗಳನ್ನು ಹೊರತುಪಡಿಸಿ 105 […]

ಪಾರ್ಸೆಲ್ ನಲ್ಲಿ ಪ್ಲಾಸ್ಟಿಕ್ ಬದಲು ಬಾಳೆ ಎಲೆ ಬಳಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

Thursday, June 20th, 2019
Banana leaf

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ ಎಂದು ಝೊಮೊಟೋ, ಸ್ವಿಗ್ಗಿ, ಊಬರ್ ಈಟ್ಸ್ ಗೆ ಮನವಿ ಮಾಡಿದ್ದಾರೆ. ಆಹಾರವನ್ನು ಬಾಳೆ ಎಲೆಯಲ್ಲಿ ಕಟ್ಟುವುದು ಕರಾವಳಿಯ ಸಂಪ್ರದಾಯ. ಕರಾವಳಿಯ ಹೆಚ್ಚಿನ ಹೋಟೆಲ್ ಗಳಲ್ಲಿ ತಿಂಡಿ ಅಥವಾ ಊಟವನ್ನು ಬಾಳೆ ಎಲೆಯಲ್ಲೇ ಬಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಿ ಎಂದು ಆಹಾರ ಡೆಲಿವರಿ ಸಂಸ್ಥೆಗಳಿಗೆ ಶಾಸಕರು ಮನವಿ ಮಾಡಿದ್ದಾರೆ. ಝೊಮೊಟೋ, […]

ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪ್ರತಿಭಟನೆ

Monday, June 10th, 2019
Kamath

ಮಂಗಳೂರು :  ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಎದುರು ಸೋಮವಾರ ಬೆಳಿಗ್ಗೆ ಪ್ರತಿಭಟನಾ ಪ್ರದರ್ಶನ ನೆಡೆಯಿತು. ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆ ಸರಿಪಡಿಸದಿದ್ದರೆ ಸರಕಾರದ ವಿರುದ್ಧ ಪ್ರತಿಭಟನೆಯನ್ನು ಮತ್ತಷ್ಟೂ ತೀವ್ರಗೊಳಿಸುವುದಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಎಚ್ಚರಿಸಿದ್ದಾರೆ. ಪ್ರಾಪರ್ಟಿ ಕಾರ್ಡ್ ಸಮಸ್ಯೆಯ ವಿರುದ್ಧ ಶಾಸಕರಾದ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆಯಿಂದ ಜನ ಸಾಮಾನ್ಯರು ಅನುಭವಿಸುವ […]

ವಿಜಯ ಬ್ಯಾಂಕ್ ಉಳಿಸಿ : ರಮಾನಾಥ ರೈ, ವೇದವ್ಯಾಸ್ ಕಾಮತ್ ಮಾತಿನ ಚಕಮಕಿ

Saturday, February 23rd, 2019
Rai Kamath

ಮಂಗಳೂರು: ವಿಜಯ ಬ್ಯಾಂಕ್ ಉಳಿಸಿ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮತ್ತು ಶಾಸಕ ವೇದವ್ಯಾಸ್ ಕಾಮತ್ ನಡುವೆ ಮಾತಿನ ಚಕಮಕಿ ನಡೆಯಿತು. ನಗರದ ಪುರಭವನದಲ್ಲಿ ಇಂದು ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು. ಮಂಗಳೂರಿನ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿಯವರ ಮುತುವರ್ಜಿಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಎಲ್ಲ ಪಕ್ಷದವರನ್ನು ಒಟ್ಟು ಸೇರಿಸಿ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಾಜಿ ಸಚಿವ […]

ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಶಾಸಕರ ಮೇಲೆ ಹಲ್ಲೆಗೆ ಯತ್ನ: ವೇದವ್ಯಾಸ್ ಕಾಮತ್ ತೀವ್ರ ಖಂಡನೆ

Tuesday, December 11th, 2018
rajesh-naik

ಮಂಗಳೂರು : ಬಂಟ್ವಾಳದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಂದರ್ಭದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳದ ಜನಪ್ರಿಯ ಶಾಸಕ ರಾಜೇಶ್ ನಾಯ್ಕ್ ಅವರ ಮೇಲೆ ಹಲ್ಲೆ ಮಾಡಲು ಮುಂದಾದಂತಹ ಘಟನೆ ಮತ್ತು ಶಾಸಕರಿಗೆ ಅಗೌರವ ತೋರಿಸಿ, ಸರಕಾರಿ ಕಾರ್ಯಕ್ರಮದಲ್ಲಿ ಅವಮಾನ ಆಗುವಂತೆ ವರ್ತಿಸಿ ಗೂಂಡಾಗಿರಿ ರೀತಿಯ ವಾತಾವರಣ ವನ್ನು ಸೃಷ್ಟಿಸಿರುವುದನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಟುಶಬ್ದಗಳಲ್ಲಿ ಖಂಡಿಸಿದ್ದಾರೆ. ಬಂಟ್ವಾಳದ ಇಂದಿರಾ ಕ್ಯಾಂಟಿನ್ ಕಾರ್ಯಕ್ರಮ ಸರಕಾರಿ ಕಾರ್ಯಕ್ರಮವೇ ವಿನ: ಅದು ಕಾಂಗ್ರೆಸ್ ಪಕ್ಷದ […]

ಅನ್ನ ವಿಲ್ಲದೇ ಪರದಾಡಿದ ಪ್ರಯಾಣಿಕರಿಗೆ ಆಪತ್ಭಾಂದವ ನಾದ ಎಂಎಲ್ಎ

Monday, September 10th, 2018
mla vedavyas

ಮಂಗಳೂರು : ಭಾರತ ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಹೆಚ್ಚಿನ ಹೋಟೆಲ್ ಬಂದ್ ಆಗಿ ಜನ ಪರದಾಡುವಂತಾಯಿತು.  ಅದರಲ್ಲೂ ಬೇರೆ  ಊರುಗಳಿಂದ ಬಂದ ಮಂಗಳೂರಿಗೆ ಬಂದ ಪ್ರಯಾಣಿಕರಿಗೆ ಸಮಸ್ಯೆಯುಂಟಾಯಿತು. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ನಗರದಾದ್ಯಂತ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಯಿತು. ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು, ಹೋಟೆಲ್ ಇಲ್ಲದ ಕಾರಣ ಜನರು ಆಹಾರ ಪದಾರ್ಥಗಳಿಗಾಗಿ ಸಮಸ್ಯೆ ಎದುರಿಸಿದರು. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಆಹಾರ ಮತ್ತು ಪಾನೀಯಗಳ […]