Blog Archive

ಅಂಗನವಾಡಿ ನೌಕರರ ಸಮಾವೇಶ, ಹಕ್ಕೊತ್ತಾಯ ಹಾಗೂ ನೆರವು ವಿತರಣಾ ಕಾರ್ಯಕ್ರಮ

Thursday, December 12th, 2019
anganavady

ಮಂಗಳೂರು : ದ.ಕ.ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಹಾಗೂ ದ.ಕ.ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಹಕಾರ ಸಂಘದ ಸಮಾಜ ಸೇವಾಂಜಲಿ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಗುರುವಾರ ಕದ್ರೋಳಿ ಗೋಕರ್ಣನಾಥ ದೇವಳದಲ್ಲಿ ಆಯೋಜಿಸಲಾದ ಅಂಗನವಾಡಿ ನೌಕರರ ಸಮಾವೇಶ, ಹಕ್ಕೊತ್ತಾಯ ಹಾಗೂ ನೆರವು ವಿತರಣಾ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ಸರ್ಕಾರ ಯಾವುದೇ ಯೋಜನೆಗಳನ್ನು ಯಶಸ್ವಿಯಾಗಿ ಜನರ ಬಳಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಶ್ಲಾಘನೀಯವಾಗಿದ್ದು, ಅವರ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ […]

ಶಾಸಕ ವೇದವ್ಯಾಸ ಕಾಮತ್ ವಿನಂತಿ ಮೇರೆಗೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆ

Wednesday, August 22nd, 2018
Vedavyas kamath

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿ ಮೇರೆಗೆ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆಯನ್ನು ವೈಯ್ಯಕ್ತಿಕವಾಗಿ ನೀಡಿದ್ದಾರೆ. ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿರು ಹಾನಿಗೆ ಪರಿಹಾರವಾಗಿ ನಾಗಾಲ್ಯಾಂಡ್ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ರೂಪಾಯಿಯನ್ನು ಶಾಸಕರ ಮನವಿಯಂತೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನೆರೆ ರಾಜ್ಯ ಕೇರಳಕ್ಕೂಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿಯ ಮೇರೆಗೆ […]

ತ್ಯಾಜ್ಯ ಸಂಗ್ರಹ ಗುತ್ತಿಗೆದಾರರು ಮುಷ್ಕರಕ್ಕೆ ಇಳಿಯದಂತೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ

Saturday, June 16th, 2018
Vedavyasa

ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ಸಂಗ್ರಹದ ಗುತ್ತಿಗೆದಾರರು ಯಾವುದೇ ಕಾರಣಕ್ಕೂ ಮುಷ್ಕರ ಹೂಡಬಾರದು, ಯಾವ ಸಮಸ್ಯೆ ಇದ್ದರೂ ಮೊದಲು ತಮ್ಮ ಗಮನಕ್ಕೆ ತರಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ತ್ಯಾಜ್ಯ ವಿಲೇವಾರಿಯ ಗುತ್ತಿಗೆ ವಹಿಸಿಕೊಂಡಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನ ಗುತ್ತಿಗೆದಾರರು ಮತ್ತು ಸಿಬ್ಬಂದಿಗಳು ಏಕಾಏಕಿ ಮುಷ್ಕರ ಹೂಡುವುದರಿಂದ ಮಂಗಳೂರಿನ ಜನರಿಗೆ ತುಂಬಾ ತೊಂದರೆಯಾಗುತ್ತದೆ. ಗುತ್ತಿಗೆದಾರರ ಮತ್ತು ಪಾಲಿಕೆಯ ನಡುವೆ ಸಂವಹನ ಕೊರತೆಯಿಂದ ಗುತ್ತಿಗೆದಾರರ ಸಿಬ್ಬಂದಿಗಳು ಕೆಲಸದ […]

ಹಾರ ತುರಾಯಿಗಳ ಸನ್ಮಾನ ಸಾರ್ಥಕತೆಯನ್ನು ಪಡೆಯುವುದು ಕಡಿಮೆ : ಶಾಸಕ ವೇದವ್ಯಾಸ ಕಾಮತ್

Tuesday, June 12th, 2018
chetana-school

ಮಂಗಳೂರು : ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಭುವನೇಂದ್ರ ಸ್ವಾಮಿ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಬ್ಯಾಂಕ್ ಜಂಟಿಯಾಗಿ ಮಂಗಳೂರು ನಗರ ದಕ್ಷಿಣದ ನೂತನ ಶಾಸಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ ಹಮ್ಮಿಕೊಂಡಿತ್ತು. ಮಂಗಳೂರಿನ ವಿಠೋಭ ದೇವಸ್ಥಾನ ರಸ್ತೆಯಲ್ಲಿರುವ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಮೂಲಕ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾಜಕ್ಕೆ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಸಾಮಾನ್ಯವಾಗಿ ಯಾವುದೇ ಸನ್ಮಾನ ಕಾರ್ಯಕ್ರಮ ಹಾರ ತುರಾಯಿಗಳ ಅಬ್ಬರದಲ್ಲಿಯೇ […]