Blog Archive

ಅನರ್ಹರಿಗೆ ಅನ್ಯಾಯವಾಗಲು ಬಿಡಲ್ಲ, ಎಲ್ಲರಿಗೂ ಟಿಕೆಟ್ ಸಿಗುತ್ತೆ : ಕಂದಾಯ ಸಚಿವ ಆರ್.ಅಶೋಕ್

Wednesday, November 13th, 2019
R-Ashok

ಬೆಂಗಳೂರು : ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅನರ್ಹರು ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು ಸಹ ಇದಕ್ಕೆ ಪೂರಕವಾದ ಹೇಳಿಕೆಯನ್ನು ನೀಡುತ್ತಿದ್ದಾರೆ. ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿ, ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಎಲ್ಲರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ನಿರಾಳರಾಗಿದ್ದೇವೆ. ಅನರ್ಹರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಎಲ್ಲರಿಗೂ ಟಿಕೆಟ್ ನೀಡಲಾಗುವುದು. ಮತ್ತೆ ಶಾಸಕರಾಗಿ […]

ಅನರ್ಹ ಶಾಸಕರಿಗೆ‌ ಟಿಕೆಟ್ ನೀಡುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ : ನಳಿನ್ ಕುಮಾರ್​ ಕಟೀಲ್

Wednesday, November 13th, 2019
Nalin-Kumar

ಬೆಂಗಳೂರು : ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಬಿಜೆಪಿ ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅನರ್ಹ ಶಾಸಕರಿಗೆ‌ ಟಿಕೆಟ್ ನೀಡುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ 17 ಶಾಸಕರ ಅನರ್ಹತೆಯ ವಿವಾದ ನ್ಯಾಯಾಲಯದ ಮುಂದೆ ಇತ್ತು. ಮಾಜಿ ಸಭಾಧ್ಯಕ್ಷರ ತೀರ್ಮಾನವನ್ನ ನ್ಯಾಯಾಲಯ ಎತ್ತಿ‌ಹಿಡಿದಿದೆ. ಜೊತೆಗೆ ಬರುವ ಚುನಾವಣೆಯಲ್ಲಿ ಸ್ಪರ್ಧೆಗೂ ಅವಕಾಶ ಕೊಟ್ಟಿದೆ. ನ್ಯಾಯಾಲಯದ […]

ಐದು ಶತಮಾನದ ಹೋರಾಟ ಇಂದು ಅಂತ್ಯ : ಸಂಸದೆ ಶೋಭಾ ಕರಂದ್ಲಾಜೆ

Saturday, November 9th, 2019
shobha

ಬೆಂಗಳೂರು : ಐದು ಶತಮಾನದ ಹೋರಾಟ ಇಂದು ಅಂತ್ಯವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎನ್ನವ ಹೋರಾಟ ಇತ್ತು. ಐದು ಶತಮಾನದ ಹೋರಾಟ ಇದು. ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎಂಬ ಹೋರಾಟ ಇತ್ತು. ಜನ ಚಾತಕ ಪಕ್ಷಿಯಂತೆ ಈ ದಿನಕ್ಕಾಗಿ ಕಾಯುತ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು. ಹಿಂದೂಗಳಿಗೆ ಜಾಗ ಬಿಟ್ಟುಕೊಡುವ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದರು. […]

ಸುಪ್ರೀಂ ಕೋರ್ಟ್ ತೀರ್ಪು ನ್ಯಾಯ ಸಮ್ಮತವಾಗಿದೆ : ಪೇಜಾವರಶ್ರೀ

Saturday, November 9th, 2019
pejashree

ಉಡುಪಿ : ರಾಮಮಂದಿರ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನ್ಯಾಯ ಸಮ್ಮತವಾಗಿದೆ. ಮುಸಲ್ಮಾನರಿಗೆ ಐದು ಎಕರೆ ಭೂಮಿ ಕೊಟ್ಟದ್ದು ಖುಷಿಯಾಗಿದೆ ಎಂದು ಪೇಜಾವರಶ್ರೀ ಅವರು ಹರ್ಷ ವ್ಯಕ್ತಪಡಿಸಿದರು. ಈ ಬಗ್ಗೆ ಮಾತನಾಡಿದ ಅವರು, ನನ್ನ ನಿರೀಕ್ಷೆಯಂತೆ ತೀರ್ಪು ಬಂದಿದೆ. ತೀರ್ಪು ನಮ್ಮ ಪರವಾಗಿ ಬರಲು ಪುರಾತತ್ತ್ವ ಇಲಾಖೆಯ ಉತ್ಕನನ ಮಹತ್ವದ ಪಾತ್ರ ವಹಿಸಿತು ಎಂದು ಮಾಹಿತಿ ನೀಡಿದರು. ಮುಸಲ್ಮಾನರಿಗೆ ಈ ತೀರ್ಪಿನಿಂದ ಅಸಮಾಧಾನ ಆಗಿರಲಿಕ್ಕಿಲ್ಲ. ವಿವಾದವನ್ನು ಹೆಚ್ಚು ಎಳೆಯುವುದು ಬೇಡ ಎಂಬ ಭಾವನೆ ಅವರಲ್ಲಿ ಇತ್ತು. ಅವರು […]

2.77 ಎಕರೆ ಮಂದಿರ ನಿರ್ಮಾಣವಾಗಲಿ, ಮಸೀದಿಗೆ 5 ಎಕರೆ ಪರ್ಯಾಯ ನಿವೇಶನ : ಸುಪ್ರೀಂ ಕೋರ್ಟ್

Saturday, November 9th, 2019
supreem-court

ನವದೆಹಲಿ : ಸುಪ್ರೀಂ ಕೋರ್ಟ್ನ ಪಂಚ ಸದಸ್ಯ ಸಾಂವಿಧಾನಿಕ ಪೀಠ ದಶಕಗಳಿಂದ ಬಾಕಿ ಇದ್ದ ರಾಮ ಜನ್ಮಭೂಮಿ, ಬಾಬರಿ ಮಸೀದಿ ಭೂವಿವಾದವನ್ನು ಶುಕ್ರವಾರ ಇತ್ಯರ್ಥಗೊಳಿಸಿದೆ. ಇದರಂತೆ, ವಿವಾದಕ್ಕೀಡಾಗಿದ್ದ 2.77 ಎಕರೆ ಪ್ರದೇಶ ಕಂದಾಯ ದಾಖಲೆಗಳ ಪ್ರಕಾರ ಸರ್ಕಾರಕ್ಕೆ ಸೇರಿದೆ. ಅಲ್ಲಿ ರಾಮಮಂದಿರ ನಿರ್ಮಿಸಬಹುದು. ಆದರೆ, ಮಸೀದಿ ನಿರ್ಮಾಣಕ್ಕಾಗಿ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ನಿವೇಶನವನ್ನು ಸರ್ಕಾರ ಒದಗಿಸಬೇಕು ಎಂದು ಕೋರ್ಟ್ ನಿರ್ದೆಶಿಸಿದೆ. ಭಾರತ ನ್ಯಾಯಾಂಗ ಇತಿಹಾಸದಲ್ಲೇ ಅತ್ಯಧಿಕ ಸಂಚಲನ ಸೃಷ್ಟಿಸಿದ್ದ ಪ್ರಕರಣದ ಐತಿಹಾಸಿಕ ತೀರ್ಪು ನೀಡಿದ […]

ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು : ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

Saturday, November 9th, 2019
rama-mandira

ನವದೆಹಲಿ : ಅಯೋಧ್ಯೆಯಲ್ಲಿನ 2.77 ಎಕರೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ 5 ಎಕರೆ ಪ್ರತ್ಯೇಕ ಜಾಗ ನೀಡಬೇಕೆಂದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನಿಕಾ ಪೀಠ ಸರ್ವ ಸಮ್ಮತದ ತೀರ್ಪು ಪ್ರಕಟಿಸಿದೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ. ಮುಸ್ಲಿಮರಿಗೆ 5 ಎಕರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ […]

ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ

Saturday, November 9th, 2019
modi

ಹೊಸದಿಲ್ಲಿ : ವಿಶ್ವದ ಗಮನ ಸೆಳೆದಿರುವ ಅಯೋಧ್ಯೆ ಭೂ ವಿವಾದ ಸಂಬಂಧ ಅಂತಿಮ ತೀರ್ಪು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಲಿ, ಅದು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ. ಶಾಂತಿ, ಏಕತೆ, ಸದ್ಭಾವನೆಯನ್ನು ಗಟ್ಟಿಗೊಳಿಸಬೇಕು ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.  

ನಾಳೆ ಸಿಎಂ ಯಡಿಯೂರಪ್ಪ ಆಡಿಯೋ ಸಾಕ್ಷ್ಯವನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

Monday, November 4th, 2019
Supreem-Court

ನವದೆಹಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಪರಿಗಣಿಸಿದೆ. ಈ ಕುರಿತು ನಾಳೆ(ಮಂಗಳವಾರ) ಆಡಿಯೋ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ ಇಂದು ನ್ಯಾಯಾಧೀಶ ಎನ್.ವಿ.ರಮಣ ಅವರ ಮುಂದೆ ಆಡಿಯೋ ಬಗ್ಗೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಪ್ರಸ್ತಾಪ ಮಾಡಿದರು. ಈಗಾಗಲೇ ವಿಚಾರಣೆ ಮುಗಿದಿದ್ದು, ಈಗ ಏನು ಹೇಳಬೇಕು ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು. ವಿಚಾರಣೆ ಮುಗಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಆಡಿಯೋ ಕ್ಲಿಪ್ ಲೀಕ್ ಆಗಿದೆ. ಹಾಗಾಗಿ ನ್ಯಾಯಾಲಯದ ಗಮನಕ್ಕೆ ತರಬೇಕಿದೆ. […]

ಐಎನ್ ಎಕ್ಸ್ ಮೀಡಿಯಾ ಪ್ರಕರಣ : ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಜಾಮೀನು

Tuesday, October 22nd, 2019
P.-Chidambaram

ನವದೆಹಲಿ : ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲಾಗಿದೆ. ಸಿಬಿಐ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂಗೆ ಜಾಮೀನು ಸಿಕ್ಕಿದ್ದರೂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕಾರಣ ಅವರು ತಿಹಾರ್ ಜೈಲಿನಲ್ಲೇ ಮುಂದುವರಿಯಬೇಕಾಗಿದೆ. ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅವರು ಸುಪ್ರೀಂ ಮೆಟ್ಟಿಲೇರಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಇನ್ನೂ ಇಡಿ ವಶದಲ್ಲಿದ್ದು, ಅವರ ಬಂಧನದ ಅವಧಿ ಅಕ್ಟೋಬರ್ […]

370 ನೇ ವಿಧಿ ರದ್ದತಿ : ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭ

Tuesday, October 1st, 2019
supreemcourt

ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ಇಂದಿನಿಂದ ವಿಚಾರಣೆ ಆರಂಭವಾಗಲಿದ್ದು, ನ್ಯಾ.ಎನ್ ವಿ ರಮಣ ನೇತೃತ್ವದ ಪಂಚಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಕಳೆದ ಆಗಸ್ಟ್ 05 ರಂದು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು […]