Blog Archive

ಪ್ರತಾಪ್, ಶೋಭಾ ಸೇರಿ 5 ಮಂದಿಗೆ ಟಿಕೆಟ್ ಫೈನಲ್

Thursday, March 13th, 2014
BJP

ಬೆಂಗಳೂರು: ಅಂಕಣಕಾರ ಪ್ರತಾಪ್ ಸಿಂಹ ಸೇರಿದಂತೆ ಐವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬುಧವಾರ ಅಂತಿಮಗೊಳಿಸಿದ್ದು, 3 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ದಿಲ್ಲಿ ನಾಯಕರ ಅಂಗಳ ತಲುಪಿದೆ. ಬೀದರ್, ತುಮಕೂರು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದಿಲ್ಲಿಯಲ್ಲೇ ಆಗಲಿದೆ. ಗುರುವಾರ ಮಧ್ಯಾಹ್ನ ನಡೆಯುವ ಸಮಿತಿ ಸಭೆಯಲ್ಲಿ ಎಲ್ಲ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಅಧಿಕೃತವಾಗಿ ಹೊರಬೀಳಲಿದೆ. ಇದೇ ಸಂದರ್ಭದಲ್ಲಿ ಬಿಎಸ್‌ಆರ್ ವಿಲೀನ ಪ್ರಕ್ರಿಯೆ ಕುರಿತಂತೆಯೂ ಅಂತಿಮ ನಿರ್ಣಯವಾಗಲಿದೆ. ಬೆಂಗಳೂರಿನಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಮೈಸೂರು, […]

ದಕ್ಷಿಣಾರ್ಧ ಗೆಲವು ನಮ್ಮದೇ: ವೆಂಕಯ್ಯ ನಾಯ್ಡು

Wednesday, March 12th, 2014
M.-Venkaiah-Naidu

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ 272ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಅಭಿಯಾನ ನಡೆಸುತ್ತಿರುವ ಬಿಜೆಪಿ, ದಕ್ಷಿಣ ಭಾರತದ ಲೋಕಸಭಾ ಕ್ಷೇತ್ರಗಳಲ್ಲಿ ಅರ್ಧದಷ್ಟು ಗೆಲ್ಲುವ ಗುರಿ ಹಾಕಿಕೊಂಡಿದೆ. ದಕ್ಷಿಣ ಭಾರತದಲ್ಲಿರುವ 132 ಕ್ಷೇತ್ರಗಳಲ್ಲಿ 66ಕ್ಕೂ ಅಧಿಕ ಸೀಟುಗಳನ್ನು ಎನ್‌ಡಿಎ ಅಥವಾ ಬಿಜೆಪಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಇದಕ್ಕೆ ಪೂರಕವಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಬಲವರ್ಧನೆಯಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಹೊಸ ಪಕ್ಷಗಳು ಬರುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು ಹೇಳಿದ್ದಾರೆ. ತಮಿಳುನಾಡಿನಲ್ಲಿ […]

ಬೆಂಬಲಿಗರಿಗೆ ಟಿಕೆಟ್; ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಎಸ್‌ವೈ ತಂತ್ರ

Wednesday, March 12th, 2014
yeddyurappa

ಬೆಂಗಳೂರು: ಬಿಜೆಪಿಗೆ ಮರಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತನ್ನ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಬಗ್ಗೆ ಒತ್ತಡತಂತ್ರ ಅನುಸರಿಸುತ್ತಿದ್ದು, ಇದು ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಘೋಷಣೆಗೆ ಅಡ್ಡಿಯಾಗಿ ಪರಿಣಮಿಸಿದೆ. ಒತ್ತಡ ತಂತ್ರಗಳು ಫಲಿಸದೇ ಇದ್ದಲ್ಲಿ, ಅಂತಿಮವಾಗಿ ಶಿವಮೊಗ್ಗ ಕಣದಿಂದ ಹಿಂದೆ ಸರಿಯುವ ಬೆದರಿಕೆ ಒಡ್ಡುವ ಸಿದ್ಧತೆಯಲ್ಲಿ ಯಡಿಯೂರಪ್ಪ ಇದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪತ್ರ ಬರೆವ ಮೂಲಕ ಒತ್ತಡ ತಂತ್ರ: ಲೋಕಸಭೆ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ಅಂತಿಮ ಹಂತದಲ್ಲಿ ಯಡಿಯೂರಪ್ಪ ದಾಳ ಉರುಳಿಸಿದ್ದು, ಶೋಭಾ […]

ಗುಜರಾತಿಗೆ ಹೋಗಿ ಜನಪ್ರಿಯತೆ ಕಳೆದುಕೊಂಡ ಕೇಜ್ರಿವಾಲ್

Tuesday, March 11th, 2014
Arvind-Kejriwa

ಅಹಮದಾಬಾದ್: ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲಾ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಮುಖತಃ ಭೇಟಿಯಾಗಲು ಗುಜರಾತಿಗೆ ಹೋಗಿದ್ದರಲ್ಲ. ಅದರ ಪ್ರಭಾವ/ ಪರಿಣಾಮ ಗೋಚರವಾಗಿದೆ. ಆದರೆ ಅದು ಅವರಿಗೇ ಮುಳುವಾಗಿದೆ. ಕಳೆದ ವಾರ ನಾಲ್ಕು ದಿನಗಳ ಕಾಲ ಗುಜರಾತಿನಲ್ಲಿ ಅಡ್ಡಾಡಿದ ಅರವಿಂದ್ ಕೇಜ್ರಿವಾಲಾ ಭಾರಿ ಯಶಸ್ಸು ಸಾಧಿಸಿದರು ಎಂದು AAP ಬೆಂಬಲಿಗರು ಹೇಳಿಕೊಂಡಿದ್ದರೆ ಅವರ ಟೀಕಾಕಾರರು ಅದೊಂದು ದೊಡ್ಡ ಫ್ಲಾಪ್ ಷೋ ಎಂದು ಜರಿದಿದ್ದಾರೆ. ಇನ್ನು, ಟ್ವಿಟ್ಟರ್ ಮೂಲಕ ನಡೆದಿರುವ […]

ಬೆಂಬಲಿಗರ ಬಂಡಾಯಕ್ಕೆ ಮಣಿದ ಬಿಎಸ್‌ವೈ, ರಾಜನಾಥ್ ಸಿಂಗ್‌ಗೆ ಪತ್ರ

Monday, March 10th, 2014
Yaddyurappa

ಬೆಂಗಳೂರು: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಮಾತೃ ಪಕ್ಷಕ್ಕೆ ಮರುಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಡೆಗೂ ತಮ್ಮ ಬೆಂಬಲಿಗರ ಬಂಡಾಯಕ್ಕೆ ಮಣಿದು, ಅತಂತ್ರವಾಗಿರುವ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಪತ್ರದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ. ಇತ್ತೀಚಿಗಷ್ಟೆ ಯಡಿಯೂರಪ್ಪ ಅವರ ಕೆಲವು ಬೆಂಬಲಿಗರನ್ನು ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ, ಅವರ ವಿರುದ್ಧವೇ ಬಂಡಾಯವೆದ್ದಿದ್ದರು.

ಲೋಕಸಮರ: ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಸ್ಪರ್ಧೆ?

Monday, March 10th, 2014
Chiranjeev

ಬೆಂಗಳೂರು: ತೆಲುಗು ಸೂಪರ್ ಸ್ಟಾರ್ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಈಗ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಪ್ರತಿನಿಧಿಸುತ್ತಿರುವ ಆಂಧ್ರಪ್ರದೇಶದ ಗಡಿ ಜಿಲ್ಲೆ ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹೀಗಾಗಿ ಮೊಯಿಲಿ ಅವರು ಸುಲಭವಾಗಿ ಜಯ ಗಳಿಸಿ, ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಆದರೆ ಈ ಬಾರಿ […]

ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಮೋದಿ ಪಾಲಿಗೆ ವಾರಣಸಿ ಪಕ್ಕಾ ಅಟಲ್‌ರ ಲಖನೌ ಲಕ್ ಯಾರಿಗೆ?

Monday, March 10th, 2014
Murli-Manohar-Joshi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಬಗೆಗಿನ ಗೊಂದಲಗಳಿಗೆ ಭಾನುವಾರ ಬಹುತೇಕ ತೆರೆ ಬಿದ್ದಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಡಾ. ಮುರಳಿ ಮನೋಹರ ಜೋಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ನಾನು ಪಾಲಿಸುತ್ತೇನೆ’ ಎಂದು ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ. 13ರ ಸಭೆಯಲ್ಲಿ ನಿರ್ಧಾರ: ಮಾ.13ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.  […]

ಲೋಕಸಮರ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, 4 ಹಾಲಿ ಸಂಸದರಿಗೆ ಕೊಕ್

Saturday, March 8th, 2014
BJP

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ ನಾಲ್ವರು ಹಾಲಿ ಸಂಸದರಿಗೆ ಕೊಕ್ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]

ಇಂದು ಮಹಿಳಾ ದಿನಾಚರಣೆಗೆ ಮೋದಿ ಜತೆ ಚಾಯ್ ಪೆ ಚರ್ಚಾ

Saturday, March 8th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಸಂದರ್ಭ ಮಾ.8ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಲಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]

ನಾಳೆ ಮಹಿಳಾ ದಿನಾಚರಣೆಗೆ ಮೋದಿ ಜತೆ ‘ಚಾಯ್ ಪೆ ಚರ್ಚಾ’

Friday, March 7th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯಂಗವಾಗಿ ಮಾ.8 ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]