Blog Archive

ಚುನಾವಣೆ ಹೊಸ್ತಿಲಲ್ಲಿ ಭರವಸೆಗಳ ಸುಗ್ಗಿ, ಸರ್ಕಾರಿ ನೌಕರ, ಪಿಂಚಣಿದಾರರೇ ಟಾರ್ಗೆಟ್, ಇದು ಕೊಡುಗೈ ಸಂಪುಟ

Saturday, March 1st, 2014
K.H.-Muniyappa

ನವದೆಹಲಿ: ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಯುಪಿಎ ಸರ್ಕಾರ ತನ್ನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮತದಾರರ ಓಲೈಕೆಗೆ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.10ರಷ್ಟು ಹೆಚ್ಚಳ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ 54 ಕೇಂದ್ರೀಯ ವಿದ್ಯಾಲಯ ಹಾಗೂ 3,500 ಮಾದರಿ ಶಾಲೆ, ಕೋಲಾರದಲ್ಲಿ ರೈಲು ಬೋಗಿ ಕಾರ್ಖಾನೆ ಸ್ಥಾಪನೆ ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ಸೂಚಿಸಿದೆ. ಕೇಂದ್ರ ಸರ್ಕಾರಿ ನೌಕರರ ಓಲೈಕೆ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ನೌಕರರ ತುಟ್ಟಿ […]

ಲೋಕಸಮರ: ಬಿಹಾರ, ಉ.ಪ್ರದೇಶದಲ್ಲಿ ಬಿಜೆಪಿಗೆ ಶೇ.50ರಷ್ಟು ಸ್ಥಾನ

Saturday, February 22nd, 2014
Narendra-Modi

ನವದೆಹಲಿ: ದೇಶಾದ್ಯಂತ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ ಚುನಾವಣಾ ಸಮೀಕ್ಷೆ ಹೇಳಿದೆ. ಎಲ್ಲೆಡೆ ಯುಪಿಎ ವಿರೋಧಿ ಮತ್ತು ಮೋದಿ ಪರ ಅಲೆ ಇರುವುದರಿಂದ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಒಟ್ಟು 61 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40 ಕಡೆ ಗೆಲವು […]

ಲೋಕಸಮರ: ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ

Friday, February 21st, 2014
Geetha-Shivaraj-Kumar

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಶಿವಮೊಗ್ಗ ಕ್ಷೇತ್ರ ಈ ಬಾರಿ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಡಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದ್ದ ಜೆಡಿಎಸ್ ಅಂತಿಮವಾಗಿ ಗೀತಾ […]

ಕೇಂದ್ರ ಮಧ್ಯಂತರ ರೇಲ್ವೆ ಬಜೆಟ್ -2014 ಮಂಡನೆ

Wednesday, February 12th, 2014
Mallikarjun-karge

ನವದೆಹಲಿ: ಲೋಕಸಭೆಯಲ್ಲಿ ತೆಲಂಗಾಣ ಗದ್ದಲದ ನಡುವೆಯೇ ಯುಪಿಎ-2 ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಬುಧವಾರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು 4 ತಿಂಗಳುಗಳಿಗಾಗಿ ಇರುವ ಮಧ್ಯಂತರ ಬಜೆಟ್‌ನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಖರ್ಗೆ ಅವರ ಪಾಲಿಗೆ ಇದು ಚೊಚ್ಚಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಮಂಡನೆಗೆ ಮುನ್ನ “ಕಳಬೇಡ ಕೊಲಬೇಡ” ವಚನ ಪಠಿಸಿದ ಸಚಿವ ಖರ್ಗೆ , ದೇಶದ ಅಭಿವೃದ್ಧಿಗೆ ರೇಲ್ವೇ ವಿಕಾಸ ಅವಶ್ಯಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರೇಲ್ವೆ ಬಜೆಟ್ ಮುಖ್ಯಾಂಶಗಳು ಜಮ್ಮು ಕಾಶ್ಮೀರದಲ್ಲಿ ಸಂಪರ್ಕ ಕಲ್ಪಿಸಲು […]

ಸೋನಿಯಾಗೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರವಾನೆ: ಸಿಎಂ

Wednesday, February 5th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋನಿಯಾಗಾಂಧಿಗೆ ಅಭ್ಯರ್ಥಿಗಳ ಪಟ್ಟಿ ರವಾನೆಯಾಗಿದೆ ಎಂದು ಹೇಳಿದ್ದಾರೆ. ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಭಾಗಿಯಾಗುವೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಭಾಗವಹಿಸಲಿದ್ದು, ಕೇಂದ್ರ ಸಚಿವ ವಯಲಾರ್ ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ರಾಜ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ […]

ನಾನು ಲೋಕಸಭೆಗೆ ಸ್ಪರ್ಧಿಸುತ್ತೇನೆ : ಅಡ್ವಾಣಿ

Monday, January 27th, 2014
Adwani

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಆಡ್ವಾಣಿ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ ಮೋದಿ ಅವರ ಕೈಗೆ ಚುನಾವಣೆ ಹೊಣೆ ಸಿಕ್ಕ ಮೇಲೆ ಅಡ್ವಾಣಿ ಅವರು ರಾಜ್ಯಸಭೆ ಕಣಕ್ಕಿಳಿಯಬಹುದು ಎನ್ನುವ ಊಹಾಪೋಹ ಎದ್ದಿತ್ತು. ಆದರೆ, ಎಲ್ಲಾ ಸುದ್ದಿಗಳನ್ನು ಬದಿಗೊತ್ತಿ ಲೋಕಸಭೆ ಸ್ಪರ್ಧೆ ಬಗ್ಗೆ ಅಡ್ವಾಣಿ ಖಚಿತಪಡಿಸಿದ್ದಾರೆ. ರಾಜ್ಯಸಭೆಗೆ ಸ್ಪರ್ಧಿಸುವ ಕುರಿತು ಈವರೆಗೆ ನಾನು ಏನೂ ಹೇಳಿಲ್ಲ. ಯಾರಾದರೂ ಈ ಕುರಿತು ಹೇಳಿದರೆ ಈ ಕುರಿತು ಯೋಚಿಸುತ್ತೇನೆ. ಒಂದು ವೇಳೆ ರಾಜ್ಯಸಭೆಗೆ […]

ಗುಜರಾತ್ 6 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

Wednesday, June 5th, 2013
Narendra Modi

ಅಹಮದಾಬಾದ್:  ಗುಜರಾತ್ ವಿಧಾನಸಭೆಯ ನಾಲ್ಕು ಹಾಗೂ ಎರಡು ಲೋಕಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಆರು ಸ್ಥಾನಗಳಲ್ಲೂ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಮತ್ತಷ್ಟು ಬಲ ಬಂದಂತಾಗಿದೆ. ಪೋರಬಂದರ್ ಮತ್ತು ಬನಸ್ಕಾಂತ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಲಿಂಬ್ಡಿ, ಚೆತ್ಪುರ್, ಧೋರ್ಜಿ ಹಾಗೂ ಮಾರ್ವ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ. ಈ ಎಲ್ಲ ಕ್ಷೇತ್ರಗಳಿಗೆ ಕಳೆದ ಭಾನುವಾರ ಮತದಾನ ನಡೆದಿತ್ತು. ಗುಜರಾತ್ ಉಪ […]