Blog Archive

ಕೃಷ್ಣಾ ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

Tuesday, February 18th, 2014
Siddaramaiah

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2013 ನವೆಂಬರ್ 29 ರಂದು ಕೃಷ್ಣಾ ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮಂಗಳವಾರ ನಿರ್ಧರಿಸಿದೆ. ಹಿರಿಯ ವಕೀಲ ನಾರಿಮನ್ ಅವರ ಸಲಹೆಯಂತೆ ಕೃಷ್ಟಾ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಪಾಡು ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಸ್ಪಷ್ಟಿಕರಣಕ್ಕಾಗಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ ತೀರ್ಪಿಗೆ […]

ರಾಜೀವ್ ಗಾಂಧಿ ಹಂತಕರಿಗೆ ಜೀವಾವಧಿ ಶಿಕ್ಷೆ

Tuesday, February 18th, 2014
Rajiv-Gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಮಂಗಳವಾರ ಪರಿವರ್ತಿಸಿದೆ. ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂದು ಮೂವರು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ‘ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರಿಗೆ ಕ್ಷಮಾದಾನ ಇಲ್ಲ. ಅವರಿಗೆ ಗಲ್ಲು ಶಿಕ್ಷೆಯೇ ಸೂಕ್ತ’ ಎಂದು  ಸುಪ್ರೀಂಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ ಕೇಂದ್ರ […]

ವೀರಪ್ಪನ್ ಸಹಚರರ ಶಿಕ್ಷೆ ಇಳಿಸಬೇಡಿ

Thursday, February 6th, 2014
Rajiv-gandhi

ಮೈಸೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿಗಳಿಗೆ ಮರಣದಂಡನೆಯನ್ನು ಜೀವಾವಧಿಗಿಳಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ವಿರೋಧಿಸಿರುವಂತೆ ಕಾಡುಗಳ್ಳ, ನರಹಂತಕ ವೀರಪ್ಪನ್‌ನ ನಾಲ್ವರು ಸಹಚರರಿಗೆ ಮರಣದಂಡನೆಯನ್ನು ಜೀವಾವಧಿಗಿಳಿಸುವುದಕ್ಕೆ ಸಬ್ ಇನ್‌ಸ್ಪೆಕ್ಟರ್ ಶಕೀಲ್ ಅಹ್ಮದ್ ಅವರ ಸಹೋದರ ಎಂ.ಜಮೀಲ್ ಅಹ್ಮದ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿಗೆ ಬರೆದಿರುವ ಪತ್ರ ‘ಕನ್ನಡಪ್ರಭ’ಕ್ಕೆ ಲಭ್ಯವಾಗಿದೆ. ಸ್ವಾತಂತ್ರ್ಯೋತ್ಸವದ ಮುನ್ನಾ ದಿನ ಅಂದರೆ 1992ರ ಆ.14ರಂದು ವೀರಪ್ಪನ್ ಕೊಳ್ಳೇಗಾಲ ತಾಲೂಕು ಮೀಣ್ಯಂ ಬಳಿ ನಡೆಸಿದ ಹತ್ಯಾಕಾಂಡದಲ್ಲಿ ಮೈಸೂರು […]

ಮಡೆಸ್ನಾನ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Wednesday, December 19th, 2012
Made Snana

ಮಂಗಳೂರು :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಡೆಸ್ನಾನ ಸೇವೆಗೆ ಸಂಬಧಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಮಡೆಸ್ನಾನವನ್ನು ಬೆಂಬಲಿಸುತ್ತಿದ್ದ ವರ್ಗದ ಕಾನೂನು ಹೋರಾಟ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಈ ಹಿಂದೆ ಕೆಲ ಪ್ರಗತಿಪರ ಹೋರಾಟಗಾರರು ಹಾಗೂ ಬುದ್ಧಿಜಿವಿಗಳು ಈ ಪದ್ಧತಿಯನ್ನು ವಿರೋಧಿಸಿದ್ದರು ಮತ್ತು ನಿಷೇಧಿಸುವಂತೆ ಕೇಳಿಕೊಂಡಿದ್ದರು ಅಲ್ಲದೆ ಇತ್ತೀಚೆಗಷ್ಟೇ ಮಡೆಸ್ನಾನವನ್ನು ತಾತ್ಕಾಲಿಕವಾಗಿ ನಿಷೇಧಿಸುವಂತೆ ಹೈಕೋರ್ಟ್ ನಿಂದ ಆದೇಶ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ರಾಜ್ಯ ಹೈಕೋರ್ಟ್ ನೀಡಿದ ಆದೇಶದ […]