Blog Archive

8 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಮೋನಪ್ಪ ಭಂಡಾರಿ

Thursday, May 10th, 2018
nalin-kumar

ಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ದ.ಕ. ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೆ ಪಕ್ಷದ ಕಾರ್ಯಕರ್ತರು 2-3 ಸುತ್ತಿನ ಮನೆ ಮನೆ ಭೇಟಿ ನೀಡಿದ್ದಾರೆ. ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಇದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವರಿಗೆ ನಡುಕ ಶುರುವಾಗಿದೆ. ಹಾಗಾಗಿ ಅವರೀಗ ಹಿಂದುತ್ವದ ಪರ ಮಾತನಾಡುತ್ತಿದ್ದಾರೆ. ಜಿಲ್ಲೆಯ […]

ಬೋಳಾರ್ ನಲ್ಲಿ ಬಿಜೆಪಿ ಬೆಂಬಲಿಸುವಂತೆ ವೇದವ್ಯಾಸ್ ಕಾಮತ್ ಮನವಿ

Thursday, May 10th, 2018
vedvyas-kamath

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ್ ಕಾಮತ್ ಅವರು ಬೋಳಾರ ವಾರ್ಡ್ ನಂ. 57 ರಲ್ಲಿ ಮನೆ ಮನೆಗೆ ಭೇಟಿ ನೀಡಿ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ್ ಶ್ರೀ ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ಶಿವ ಪ್ರಸಾದ್, ಗಿರಿ ಪ್ರಸಾದ್, ಸುಧೀಂದ್ರ, ವಸಂತ್ ಜೆ ಪೂಜಾರಿ, ಸಾತ್ವಿಕ್, ಅಜಿತ್, ಭಾಸ್ಕರ್ […]

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ: ಐವನ್ ಡಿಸೋಜ

Thursday, May 10th, 2018
ivan-desouza

ಮಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ. ಚುನಾವಣೆಯ ಬಳಿಕ ಒಳಒಪ್ಪಂದ ಮಾಡಿಕೊಳ್ಳಬೇಕಾದ ಈ ಎರಡು ಪಕ್ಷಗಳು ಚುನಾವಣಾ ಪೂರ್ವದಲ್ಲೇ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಜನತೆಗೆ ಅನ್ಯಾಯ ಎಸಗಿದೆ. ಅವರ ಈ ತಂತ್ರ ಚುನಾವಣೆಯಲ್ಲಿ ಫಲಿಸುವುದಿಲ್ಲ. ಈ ಬಾರೀ ಕಾಂಗ್ರೆಸ್ ಪಕ್ಷ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ಸತ್ಯಜಿತ್ ಕಣ್ಣೀರು ಬಿಜೆಪಿಯ ಯುವಕರಿಗೆ ಪಾಠವಾಗಲಿ – ಮುನೀರ್ ಕಾಟಿಪಳ್ಳ

Thursday, May 10th, 2018
satyajith

ಮಂಗಳೂರು: “ಬಿಜೆಪಿಯಿಂದ ಧರ್ಮರಾಜಕಾರಣಕ್ಕೆ ಬಳಸಲ್ಪಡುವ ಹಿಂದುಳಿದ ವರ್ಗದ ಯುವಕರನ್ನು ರಾಜಕೀಯ ಪ್ರಾತಿನಿಧ್ಯದ ಪ್ರಶ್ನೆ ಬಂದಾಗ ಕ್ರಿಮಿನಲ್ ಗಳೆಂದು ದೂರ ಇಡಲಾಗುತ್ತದೆ. ಬಿಜೆಪಿ ಹಿರಿಯ ಮುಖಂಡ ಸತ್ಯಜಿತ್ ಸುರತ್ಕಲ್ ಇದಕ್ಕೊಂದು ಉದಾಹರಣೆ” ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ಅವರು ಸಂಜೆ ಕೋಡಿಕಲ್ ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತಾಡುತ್ತಿದ್ದರು. “ಬಿಜೆಪಿ ಹಿಂದುಳಿದ ವರ್ಗಗಳ ಯುವಕರಿಗೆ ಪ್ರಚೋದನೆ ಕೊಟ್ಟು ಅವರನ್ನು ಹಿಂಸಾ ರಾಜಕೀಯಕ್ಕೆ ಬಳಸಿಕೊಳ್ಳುತ್ತದೆ. ಧರ್ಮದ ಅಮಲಿನಲ್ಲಿ ಕೊಲೆ ಆರೋಪ […]

ಪುತ್ತೂರು ನಗರದಲ್ಲಿ ಬಿಜೆಪಿಯಿಂದ ರೋಡ್ ಶೋ..!

Thursday, May 10th, 2018
putturu

ಪುತ್ತೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಪುತ್ತೂರು ನಗರದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ನಗರದ ಬೊಳುವಾರ ಆಂಜನೇಯ ಮಂತ್ರಾಲಯದ ಬಳಿಯಲ್ಲಿ ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ ಡಾ. ಮಹೇಂದ್ರ ಸಿಂಗ್ ಪಕ್ಷದ ಧ್ವಜವನ್ನು ಹಿರಿಯ ಕಾರ್ಯಕರ್ತ ಗೋಪಾಲ್ ನಾಯ್ಕಿ ಅವರಿಗೆ ಹಸ್ತಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೊಳವಾರಿನಿಂದ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ದರ್ಬೆಯ ತನಕ ರೋಡ್ ಶೋ ನಡೆಸಲಾಯಿತು. ಪಕ್ಷದ ಅಭ್ಯರ್ಥಿ ಸಂಜೀವ ಮಠಂದೂರು, ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ […]

2019 ರಲ್ಲಿ ನಾನೇ ಪ್ರಧಾನಿಯಾಗಿ ಆಯ್ಕೆಯಾಗುತ್ತೇನೆ: ರಾಹುಲ್ ಗಾಂಧಿ

Tuesday, May 8th, 2018
rahul-prime

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್‌ ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿ ಈ ಹೇಳಿಕೆ ನೀಡಿದ್ದಾರೆ. ‘2019 ರಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದಿಲ್ಲ,ನಾನೇ ಪ್ರಧಾನಿಯಾಗಿ ಆಯ್ಕೆಯಾಗುತ್ತೇನೆ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ‘ಬಿಜೆಪಿಯವರು ವ್ಯವಸ್ಥಿತವಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿದ್ದಾರೆ.ಪ್ರಧಾನಿ ಮೋದಿ ಅವರು ನಿರಂತರವಾಗಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನನ್ನ ಪ್ರಶ್ನೆ ಏನೆಂದರೆ ಯಾಕೆ ಭ್ರಷ್ಟ, ಜೈಲು ಪಾಲಾಗಿದ್ದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸಿದ್ದೀರಿ ? ಯಾಕೆ ಸ್ವಚ್ಛ ಚಾರಿತ್ರ್ಯ […]

ಬಿಜೆಪಿ ಕೈಗೆತ್ತಿಕೊಂಡ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ನೀಡಲಿ : ಮೊದಿನ್ ಬಾವಾ ಸವಾಲು

Tuesday, May 8th, 2018
programme-congress

ಮಂಗಳೂರು: ಕಳೆದ ಐದು ವರ್ಷದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳ ಪಟ್ಟಿಯನ್ನು ಈಗಾಗಲೇ ಜನರ ಮುಂದಿಟ್ಟಿದ್ದೇನೆ. ತಾನು ಅಭಿವೃದ್ಧಿ ಕೆಲಸ ಮಾಡಲಿಲ್ಲ ಎನ್ನುವ ಬಿಜೆಪಿಯು ಕೈಗೆತ್ತಿಕೊಂಡ ಕಾಮಗಾರಿಗಳ ಪಟ್ಟಿಯನ್ನು ಜನತೆಯ ಮುಂದಿಡಲಿ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ.ಮೊದೀನ್ ಬಾವಾ ಸವಾಲು ಹಾಕಿದ್ದಾರೆ. ಸುರತ್ಕಲ್ ನಗರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಭಾರಿಯ ಚುನಾವಣೆ ಕೈಗೆತ್ತಿಕೊಂಡ ಅಭಿವೃದ್ಧಿಯ ಹಿನ್ನೆಲೆಯಲ್ಲಿ ನಡೆಯಲಿದೆ ಎಂದ ಅವರು, ಸುರತ್ಕಲ್‌ನಲ್ಲಿ ೧೨೬ ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ, ಬೋಂದೆಲ್‌ನಲ್ಲಿ ೭ […]

ಬಿಜೆಪಿ ಪ್ರಣಾಳಿಕೆ ಭಗವದ್ಗೀತೆ ಇದ್ದ ಹಾಗೆ : ಡಿ ವಿ ಸದಾನಂದಗೌಡ

Monday, May 7th, 2018
sadananda-gowda

ಮೈಸೂರು: ನಾನೇ ಅಭ್ಯರ್ಥಿ ಎಂದು ಭಾವಿಸಿ ಚಾಮರಾಜ ಕ್ಷೇತ್ರದಲ್ಲಿ ಎಲ್.ನಾಗೇಂದ್ರ ಅವರನ್ನು ಗೆಲ್ಲಿಸಿಕೊಡಿ ಎಂದು ಕೇಂದ್ರ ಸಚಿವ ವಿ.ಸದಾನಂದಗೌಡ ಮನವಿ ಮಾಡಿದರು. ಚಾಮರಾಜ ಕ್ಷೇತ್ರದ ಕೆ.ಜಿ.ಕೊಪ್ಪಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆದರೆ, ಎಲ್.ನಾಗೇಂದ್ರ ಸ್ಥಳೀಯ ಎನ್ನುವ ಕಾರಣಕ್ಕೆ ಭಾರತೀಯ ಜನತಾ ಪಕ್ಷ ಅವಕಾಶ ನೀಡಿದೆ. ನಾಗೇಂದ್ರ ಅವರು ಗೆದ್ದರೆ ನಾನೇ ಗೆದ್ದಂತೆ, ಚಾಮರಾಜ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡು ಹೋಗಲಿದ್ದೇವೆ ಎಂದು ಭರವಸೆ ನೀಡಿದರು. ಸಿದ್ದರಾಮಯ್ಯ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಸದಾನಂದಗೌಡ ಇದೇ ವೇಳೆ ಕೆ.ಜಿ.ಕೊಪ್ಪಲು, […]

ಬಿಜೆಪಿ ಅಭ್ಯರ್ಥಿ ಪರ ಮುಂಬೈ ಲೋಕಸಭಾ ಸದಸ್ಯ ಪ್ರಚಾರ

Monday, May 7th, 2018
gopal-shetty

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಇಂದು ಮುಂಬೈ ಲೋಕಸಭಾ ಸದಸ್ಯ ಗೋಪಾಲ ಶೆಟ್ಟಿ ಪ್ರಚಾರ ನಡೆಸಿದರು. ಕರಾವಳಿಯಿಂದ ಮುಂಬೈಗೆ ಹೋಗಿ ನೆಲೆಸಿ ಅಲ್ಲಿ ಬಿಜೆಪಿಯಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಗೋಪಾಲ ಶೆಟ್ಟಿ ಬಿಜೆಪಿ ಪರ ಮತಯಾಚನೆ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರಿನ ಕಂಕನಾಡಿ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮತಯಾಚನೆ ಮಾಡಿದರು. ಮನೆ ಮನೆಗೆ ತೆರಳಿ ಪ್ರಚಾರ ನಡೆಸುವ ವೇಳೆ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ […]

ದಕ್ಷಿಣ ಕನ್ನಡ ಜಿಲ್ಲೆಯ ‘ಬಿಜೆಪಿ’ ಪ್ರಣಾಳಿಕೆ ಬಿಡುಗಡೆ

Monday, May 7th, 2018
nalin-kumar

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಉತ್ತರ ಪ್ರದೇಶ ಸಚಿವ ಮಹೇಂದ್ರ ಸಿಂಗ್ ಸಮ್ಮುಖದಲ್ಲಿ ಸಂಸದರು ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಸಂಸದರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ಮುಂದೆ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ. ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿದೆ ಎಂದು ತಿಳಿಸಿದರು.