Blog Archive

“ಜನಾಶೀರ್ವಾದ’ ಕ್ಕೆ ಸಿದ್ದರಾಮಯ್ಯ ಸಮಾಲೋಚನೆ

Friday, November 3rd, 2017
janashirvada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್‌ ರ್ಯಾಲಿಗೆ ಸಡ್ಡು ಹೊಡೆಯಲು  “ಜನಾಶೀರ್ವಾದ’ ರ್ಯಾಲಿಗೆ ಮುಂದಾಗಿದ್ದಾರೆ. ಸರಕಾರದ ನಾಲ್ಕೂವರೆ ವರ್ಷಗಳ ಸಾಧನೆಗಳನ್ನು ಜನರ ಮುಂದಿಟ್ಟು ಮತ್ತೂಮ್ಮೆ ಮತದಾರರು ಆಶೀ ರ್ವಾದ ಮಾಡಿ ಎಂದು ಮನವಿ ಮಾಡುವ ಉದ್ದೇಶ ಈ ರ್ಯಾಲಿಯದು ಎನ್ನಲಾಗಿದೆ. ರಾಜ್ಯದ 224  ಕ್ಷೇತ್ರ ಗಳಲ್ಲೂ ರ್ಯಾಲಿ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸುವುದು ಜನಾಶೀರ್ವಾದ ರ್ಯಾಲಿಯ ಗುರಿ. ಈ ಬಗ್ಗೆ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದು, ರ್ಯಾಲಿಯ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ […]

ನೆಹರೂ ಮೈದಾನದಲ್ಲಿ 4 ಹಾಗೂ 5ರಂದು ಇಂಡಿಯನ್‌ ಕರಾಟೆ ಚಾಂಪಿಯನ್‌ಶಿಪ್‌

Friday, November 3rd, 2017
karate

ಮಂಗಳೂರು: ಇಂಡಿಯನ್‌ ಕರಾಟೆ ಚಾಂಪಿಯನ್‌ಶಿಪ್‌ ನಗರದ ನೆಹರೂ ಮೈದಾನದಲ್ಲಿ ಈ ತಿಂಗಳ 4 ಹಾಗೂ 5ರಂದು ನಡೆಯಲಿದೆ. ಕರಾಟೆ ಚಾಂಪಿಯನ್‌ಶಿಪ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಲಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ 2 ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದು ಕರಾಟೆಯ ರೋಚಕ ಅನುಭವ ನೀಡುವ ಜತೆಗೆ ಉತ್ಸಾಹಿ ತರುಣರಿಗೆ ಸ್ಫೂರ್ತಿಯಾಗಲಿದೆ. ಈ ನಿಟ್ಟಿನಲ್ಲಿ ಕರಾವಳಿ ಮಣ್ಣಿನಲ್ಲಿ ಅರಳಿದ ಕರಾಟೆಯ ಕುರಿತ ಡೀಟೈಲ್ ಸ್ಟೋರಿ ಇಲ್ಲಿದೆ. ಕರಾಟೆ ಅತ್ಯಂತ ಪ್ರಾಚೀನ ಸಮರಕಲೆಗಳಲ್ಲೊಂದು. ಭಾರತದಲ್ಲಿ ಕೂಡಾ […]

ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಸಿಎಂ ಭೇಟಿ

Monday, October 23rd, 2017
Darmasthala

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ, ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್‌ ಡಿಸೋಜ ಸೇರಿದಂತೆ ಹಲವರು ಜೊತೆಯಲ್ಲಿದ್ದು ಸಾಥ್‌ ನೀಡಿದರು

ಗ್ರಾಮೀಣ ಜನತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕೊಡುಗೆ ನೀಡಿದೆ: ಸಿದ್ದರಾಮಯ್ಯ

Monday, October 23rd, 2017
SKDRDP

ಮಂಗಳೂರು: ಗ್ರಾಮೀಣ ಪ್ರದೇಶಗಳ ಪ್ರಗತಿ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೊಡ್ಡ ಕೊಡುಗೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಗ್ರಾಮೀಣ ಜನತೆಯ ನೆಮ್ಮದಿಯ ಜೀವನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕೊಡುಗೆ ನೀಡಿದೆ. ಯೋಜನೆಯ ಕಾರ್ಯಕ್ರಮಗಳು ಬಡತನ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದರು. ಜನ ಸ್ವಾಭಿಮಾನದಿಂದ […]

ಟಿಪ್ಪು ಜಯಂತಿ ಸರ್ಕಾರದ ವತಿಯಿಂದ ಮಾಡುತ್ತೇವೆ: ಸಿದ್ದರಾಮಯ್ಯ

Monday, October 23rd, 2017
tippu jayanthi

ಮಂಗಳೂರು:  ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ,  ಬಿಜೆಪಿ ರಾಜಕೀಯ ಕಾರಣದಿಂದ ಟಿಪ್ಪು ಜಯಂತಿ ವಿರೋಧಿಸುತ್ತಿದೆಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಆಗಮಿಸಿದ ಅವರು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದಾರೆ. ಶೋಭಾ ಕೂಡಾ ಅವರಿಗೆ ಸಾಥ್ ನೀಡಿದ್ದರು. ಟೊಪ್ಪಿ ಹಾಕಿ ಖಡ್ಗ ಝಳಪಿಸಿ ಅಂದು ಯಡಿಯೂರಪ್ಪ ಫೋಸ್ ನೀಡಿದ್ದರು ಎಂದು ವ್ಯಂಗ್ಯವಾಡಿದರು. ಸಚಿವ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ ಪ್ರೋಟೊಕಾಲ್ ಪ್ರಕಾರ […]

ಮಂಗಳೂರು-ಬಂಟ್ವಾಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

Monday, October 23rd, 2017
Bantwal

ಮಂಗಳೂರು: ಸಚಿವ ರಮಾನಾಥ ರೈ  ಕೈ-ಬಾಯಿ ಶುದ್ಧವಾಗಿಟ್ಟುಕೊಂಡ ಮಾನವೀಯತೆ ಹೊಂದಿರುವ ರಾಜಕಾರಣಿ.  ಅವರು ಓರ್ವ ಸಜ್ಜನ ರಾಜಕಾರಣಿ.  ಕೋಮುವಾದವನ್ನು ಅವರು ಮಾಡಿಲ್ಲ, ಮುಂದೆನೂ ಮಾಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳೂರು-ಬಂಟ್ವಾಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತಮಾಡಿದ ಅವರು, ಕೋಮುವಾದ‌ ಮಾಡುವವರು ವಿನಾ ಕಾರಣ ಅವರ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಆದರೆ, ರೈ ಎಲ್ಲರೂ ಅನುಸರಿಸಬೇಕಾದ ಆದರ್ಶ ರಾಜಕಾರಣಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದಿಗಳ ಕಾಟ ಜಾಸ್ತಿ ಆಗಿದೆ. ಆಕ್ರೋಶ ಭರಿತರಾಗಿ […]

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ :ರಮಾನಾಥ ರೈ

Thursday, October 19th, 2017
Ramanath rai

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಒಟ್ಟು 252.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅ. 22ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಈಗಾಗಲೇ ಪೂರ್ಣಗೊಂಡಿರುವ ಒಟ್ಟು ರೂ. 148.29 ಕೋಟಿಯ ಯೋಜನೆಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಲಿದ್ದು, 104.21 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದರು. ಒಟ್ಟು ರೂ. 252.50 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ […]

ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಮಾನನಷ್ಟ ಮೊಕದ್ದಮೆ : ಐವನ್ ಡಿ.ಸೋಜಾ

Thursday, October 12th, 2017
Ivan d souza

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿನೋಟಿಫಿಕೇಷನ್ ಆರೋಪ ಮಾಡಿರುವ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ, ರಾಜ್ಯ ಬಿಜೆಪಿ ವಕ್ತಾರ ಗೋ. ಮಧುಸೂದನ್, ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ.ಸೋಜಾ ಹೇಳಿದ್ದಾರೆ. ಸುಪ್ರೀಂ ತೀರ್ಪು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲೂಕು ಭೂಪಸಂದ್ರ ಗ್ರಾಮದಲ್ಲಿ ಸುಮಾರು 300 ಕೋಟಿ ಮೌಲ್ಯದ 6 ಎಕರೆ 26 ಗುಂಟೆ ಜಮೀನನ್ನು ಮೂಲ ಮಾಲೀಕರಿಗೆ ಬಿಟ್ಟುಕೊಡುವ ಪಿತೂರಿ ನಡೆದಿದ್ದು, ಸಿಎಂ ಸಿದ್ದರಾಮಯ್ಯ […]

ಅಕ್ರಮ ಡಿ ನೋಟಿಫಿಕೇಶನ್ ಆಧಾರ ರಹಿತ ಆರೋಪ :ಸಂಸದ ಎಂ.ವೀರಪ್ಪ ಮೊಯ್ಲಿ

Wednesday, October 11th, 2017
virappa moily

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮ ಡಿ ನೋಟಿಫಿಕೇಶನ್ ಮಾಡಿದ್ದಾರೆ ಎಂಬ ಬಿಜೆಪಿಯ ಆರೋಪದಲ್ಲಿ ಹುರುಳಿಲ್ಲ. ಇದು ಆಧಾರ ರಹಿತ ಆರೋಪ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.ಸಿದ್ದರಾಮಯ್ಯವರ ಅಧಿಕಾರದ ಅವಧಿಯಲ್ಲಿ ಯಾವ ಅಕ್ರಮ ಡಿ ನೋಟಿಫಿಕೇಶನ್ ನಡೆದಿಲ್ಲ. ಬಿಜೆಪಿಯವರಿಗೆ ಸರಕಾರದ ವಿರುದ್ಧ ಟೀಕೆ ಮಾಡಲು ಬಂಡವಾಳವಿಲ್ಲದ ಕಾರಣ ಆಧಾರ ರಹಿತ, ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ. ಇದರಿಂದ ಸರಕಾರಕ್ಕೆ ಏನು ಧಕ್ಕೆಯಾಗದು. […]

‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಡಿಸೆಂಬರ್‌ನಿಂದ ಜಾರಿಗೆ :ಯು.ಟಿ. ಖಾದರ್

Tuesday, October 10th, 2017
kadher

ಬೆಂಗಳೂರು: ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್‌, ಒಲೆ ವಿತರಿಸುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ಡಿಸೆಂಬರ್‌ನಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು, ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ   ಪಂಚಾಯಿತಿಯಲ್ಲಿ ಅರ್ಜಿ        […]