Blog Archive

ಕಾಂಗ್ರೆಸ್ ಬಿಜೆಪಿಗೆ ವ್ಯತ್ಯಾಸ ಇಲ್ಲ: ಸುನೀಲ್ ಕುಮಾರ್ ಬಜಾಲ್

Saturday, May 5th, 2018
sunil Kumar

ಮಂಗಳೂರು  : ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಬಿಜೆಪಿ ಕೊಡುಗೆ ಶೂನ್ಯ. ಕಳೆದೆರಡು ಅವಧಿಯಲ್ಲಿ ಈ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಯೋಗೀಶ್ ಭಟ್ ಹಾಗೂ ಕಾಂಗ್ರೆಸ್‌ನ ಜೆ.ಆರ್.ಲೋಬೋ ಇವರಿಬ್ಬರ ಆಡಳಿತಾವಧಿಯಲ್ಲಿ ಅಭಿವೃದ್ಧಿಯ ಕೊರತೆ, ಜನಸಾಮಾನ್ಯರ ಸಂಕಷ್ಟಗಳ ಯಥಾಸ್ಥಿತಿ, ಸರಕಾರಿ ಆಸ್ಪತ್ರೆಗಳ ಕಡೆಗಣನೆ, ಮುಕ್ತಿ ಕಾಣದ ಒಳಚರಂಡಿ ವ್ಯವಸ್ಥೆ ಹೀಗೆ ಕ್ಷೇತ್ರದ ಜನರ ಬಗ್ಗೆ ನೀರಾ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತಕ್ಕೆ ಯಾವುದೇ ವ್ಯತ್ಯಾಸ ಇಲ್ಲ ಎಂದು ಮಂಗಳೂರು ನಗರ ದಕ್ಷಿಣ […]

ಕಾಂಗ್ರೆಸ್, ಬಿಜೆಪಿಯಿಂದ ಕಾರ್ಯಕರ್ತರ ಒಪ್ಪಿಗೆ ಇಲ್ಲದೆ ಅಭ್ಯರ್ಥಿಗಳ ಆಯ್ಕೆ – ಶ್ರೀಕರ ಪ್ರಭು

Saturday, May 5th, 2018
sreekar-prabhu

ಮಂಗಳೂರು  : ಈ ಬಾರಿಯ ವಿಧಾನ ಸಭಾ ಚುನಾವಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ಅಭ್ಯರ್ಥಿಗಳ ಆಯ್ಕೆ ಮಾಡಿರುವುದು ತನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಶ್ರೀಕರ ಪ್ರಭು ಅವರು ತಮ್ಮ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ತಿಳಿಸಿದರು. ಇದರಿಂದ ಕೆಲವು ನಾಯಕರುಗಳ ಸ್ವಾರ್ಥಕ್ಕೆ ಕಾರ್ಯಕರ್ತರನ್ನು ಕಡೆಗಣಿಸಿರುವುದರಿಂದ ಆ ಪಕ್ಷಗಳಲ್ಲಿ ಅಸಮಾಧಾನ ಶುರುವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ನುಡಿದರು. ಈಗ […]

ಕೈ ಕಾಲು ಕಟ್ಟಿ ಬಿಜೆಪಿಗೆ ಮತ ಹಾಕಿಸಿ: ಬಿಎಸ್‌ವೈ ವಿವಾದಾತ್ಮಕ ಕರೆ

Saturday, May 5th, 2018
yedeyurappa

ಬೆಳಗಾವಿ: ಬಿಜೆಪಿಗೆ ಯಾರು ಮತ ನೀಡುವುದಿಲ್ಲ ಎಂದನಿಸುತ್ತದೆಯೋ ಅಂಥವರ ಕೈ ಕಾಲು ಕಟ್ಟಿ ಕರೆತಂದು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ವಿವಾದಾತ್ಮಕ ಕರೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ‌ ಇಂದು ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಯಾರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು‌ ತಮಗೆ ಅನಿಸುತ್ತೋ ಅಂಥವರ ಕೈ ಕಾಲು ಕಟ್ಟಿ ಕರೆತಂದು ಮತ ಹಾಕಿಸಬೇಕು ಎಂದರು. ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿಎಸ್‌ವೈ, ಬಿಜೆಪಿ […]

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ಸಿಗೆ ಸೇರ್ಪಡೆ

Saturday, May 5th, 2018
resigns

ಮಂಗಳೂರು: ಮನಪಾ 25ನೇ ದೇರೆಬೈಲು ಪಶ್ಚಿಮ ವಾರ್ಡಿನ ಕೊಟ್ಟಾರ ಪರಿಸರದ ಸುಮಾರು 35ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕದ್ರಿಯಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊರ ಸಮ್ಮುಖ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬಿಜೆಪಿ ಪಕ್ಷದ ದುರ್ಬಲ ಆಡಳಿತ, ನಾಯಕರಿಂದ ಕಾರ್ಯಕರ್ತರ ಶೋಷಣೆ, ಧರ್ಮದ ರಾಜಕೀಯದಿಂದ ಬೇಸತ್ತು ಮತ್ತು ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ, ಜಾತ್ಯತೀತ ನಿಲುವುಗಳಿಂದ ಆಕರ್ಷಿತರಾಗಿ ಹಿರಿಯರಾದ ಚಂದ್ರಶೇಖರ, ರಾಜೇಶ್ ಶೆಟ್ಟಿ, ದುರ್ಗೇಶ್ ಹಾಗೂ ಯುವ ನಾಯಕರಾದ ಕಿಶನ್, ಪ್ರಜ್ವಲ್, […]

ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ನಮೋ ಪಕ್ಷ ಕಾರ್ಯಕರ್ತರಲ್ಲಿ ಹೊಸ ಹುರುಪು

Saturday, May 5th, 2018
narendra-modi

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಮೇ 1ರಂದು ಉಡುಪಿಗೆ ಆಗಮಿಸಿದ್ದ ಮೋದಿ ಕಮಲ ಪಾಳಯದಲ್ಲಿ ಸಂಚಲನ ಉಂಟು ಮಾಡಿದ್ದರು. ಇದೀಗ ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ನಮೋ ಪಕ್ಷ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದ್ದಾರೆ. ಮಂಗಳೂರಿನ ಕೇಂದ್ರ(ನೆಹರೂ) ಮೈದಾನದಲ್ಲಿ ಸಂಜೆ ಆರು ಗಂಟೆಗೆ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಕರಾವಳಿಯಲ್ಲಿ ಇದು ಅವರ ಏಕೈಕ ಕಾರ್ಯಕ್ರಮವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯ ಸ್ವಾಗತಕ್ಕೆ ಬಿಜೆಪಿ ವತಿಯಿಂದ ಭರ್ಜರಿ ತಯಾರಿಯನ್ನು ಮಾಡಲಾಗಿದೆ. ಈಗಾಗಲೇ […]

ಉಡುಪಿ ಮಸೀದಿಯಲ್ಲಿ ರಘುಪತಿ ಭಟ್ ಮತಯಾಚನೆ

Friday, May 4th, 2018
raghupati-bhat

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ರಘುಪತಿ ಭಟ್ ಉಡುಪಿ ಜಾಮಿಯ ಮಸೀದಿಯ ಆವರಣದಲ್ಲಿ ಇಂದು ಜುಮಾ ನಮಾಝಿನ ಬಳಿಕ ಮತ ಯಾಚನೆ ಮಾಡಿದರು. ಮುಸ್ಲಿಮರ ಮತ ಬಿಜೆಪಿಗೆ ಅಗತ್ಯ ಇಲ್ಲ ಎಂಬ ಈಶ್ವರಪ್ಪ ಅವರ ಹೇಳಿಕೆ ಕುರಿತ ಸುದ್ದಿಗಾರ ಪ್ರಶ್ನೆಗೆ ಈ ವೇಳೆ ಉತ್ತರಿಸಿದ ರಘುಪತಿ ಭಟ್, ಮುಸ್ಲಿಮರ ಮತ ಬಿಜೆಪಿಗೆ ಅಗತ್ಯ ಇಲ್ಲ ಅಂತ ನಾನು ಎಲ್ಲೂ ಹೇಳಿಲ್ಲ. ಹಾಗೆ ಇದಿದ್ದರೆ ನಾನು ಇಂದು ಇಲ್ಲಿಗೆ ಬರುತ್ತಿರಲಿಲ್ಲ. ನಮಗೆ […]

ಬಿಜೆಪಿ ಅಧಿಕಾರಕ್ಕೇರಿದರೆ 30 ದಿನಗಳಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ನಾಮಕರಣ: ನಾಗರಾಜ ಶೆಟ್ಟಿ

Friday, May 4th, 2018
sundar-shetty

ಮಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ 30 ದಿನಗಳಲ್ಲಿ ಲೈಟ್‌ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ನಾಮಕರಣವನ್ನು ಕಾರ್ಯಗತಗೊಳಿಸುವುದಾಗಿ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ನಾಗರಾಜ ಶೆಟ್ಟಿ ತಿಳಿಸಿದ್ದಾರೆ. ಬಿಜೆಪಿ ಮಂಗಳೂರು ದಕ್ಷಿಣ ಪ್ರಚಾರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದರು. ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ನಾಮಕರಣವಾಗಿ, ರಾಜ್ಯ ಸರಕಾರದಿಂದ ಅಧಿಸೂಚನೆಯೂ ಆಗಿತ್ತು. ಹಾಗಿದ್ದರೂ ಶಾಸಕರಾಗಿದ್ದ ಜೆ.ಆರ್. ಲೋಬೋ ಅದಕ್ಕೆ ತಡೆ […]

ಮೋದಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ: ಪ್ರಕಾಶ್ ರೈ

Friday, May 4th, 2018
bollywood

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಯಾವುದೇ ಪಾತ್ರಗಳ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಟೀಕಿಸಿದ ಬಳಿಕ ತಮ್ಮನ್ನು ಹಿಂದಿ ಸಿನಿಮಾರಂಗ ಮೂಲೆಗುಂಪು ಮಾಡಿತು ಎಂದು ಸಂದರ್ಶನವೊಂದರಲ್ಲಿ ರೈ ದೂರಿದ್ದಾರೆ. ಆದರೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಯಾವುದೇ ಸಮಸ್ಯೆ […]

ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನ

Friday, May 4th, 2018
vijay-kumar

ಬೆಂಗಳೂರು: ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ. ಚುನಾವಣಾ ಪ್ರಚಾರ ಮಾಡುವ ವೇಳೆ ಕುಸಿದು ಬಿದ್ದು ಜಯದೇವ ಆಸ್ಪತ್ರೆ ಸೇರಿದ್ದ ವಿಜಯ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಜಯದೇವ ಆಸ್ಪತ್ರೆಯಲ್ಲೇ ಸಾವನಪ್ಪಿದ್ದಾರೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್, ಜಯನಗರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನವೇ ಹೃದಯಾಘಾತದಿಂದ ಬಳಲುತ್ತಿದ್ದ ವಿಜಯ್ ಕುಮಾರ್, ಹೃದಯನಾಳಕ್ಕೆ […]

ಬಿಜೆಪಿ ಪರ ಪ್ರಚಾರ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ..!

Friday, May 4th, 2018
narendra-modi

ಮಂಗಳೂರು: ಬಿಜೆಪಿ ಪರ ಪ್ರಚಾರ ಕೈಗೊಳ್ಳಲು ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರಿನ ನೆಹರೂ ಮೈದಾನಕ್ಕೆ ಆಗಮಿಸಿ ವಾಪಸ್ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಸಮಯದಲ್ಲಿ ವಿವಿಐಪಿ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯನ್ನು ಬದಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ […]