Blog Archive

ಬಿಜೆಪಿ ಎದುರಿಸುತ್ತಿದೆಯೇ ಭಿನ್ನಮತೀಯರ ಕಾಟ

Thursday, May 3rd, 2018
BJP

ಮಂಗಳೂರುಃ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಗುಂಪುಗಾರಿಕೆ  ಭಿನ್ನಮತೀಯರು ಹೆಚ್ಚುತ್ತಿದೆಯೇ. ಚುನಾವಣಾ ಸಂದರ್ಭದಲ್ಲಿ ಭಿನ್ನಮತೀಯರು ಕನಿಷ್ಟ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿಗಳಿಗೆ ಆತಂಕ ಉಂಟು ಮಾಡುವ ಸಾಧ್ಯತೆ ಇದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಈಗಾಗಲೇ ಶ್ರೀಕರ ಪ್ರಭು ಕಣದಲ್ಲಿದ್ದಾರೆ, ಮತ್ತೊಬ್ಬ ಟಿಕೇಟ್ ಆಕಾಂಕ್ಷಿ ಬದರಿನಾಥ್ ಕಾಮತ್ ಬೆಂಗಳೂರು ಮಹಾನಗರ ಸೇರಿರುವ ಸುದ್ದಿ ಇದೆ. ಕಳದೆ ಬಾರಿ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಂಜನ್ ಗೌಡ ತಂದೆ  ಮಾಜಿ ಸಚಿವ ಕೆ.ಗಂಗಾಧರ ಗೌಡ ಕಾಂಗ್ರೆಸ್  ಸೇರಿದ್ದಾರೆ […]

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Thursday, May 3rd, 2018
join-congress

ಮಂಗಳೂರು: ಕೇಂದ್ರದ ಬಿಜೆಪಿ ಸರಕಾರದ ಆಡಳಿತ ನೀತಿ, ಡಿಮಾನಿಟೈಸೇಶನ್, ಉದ್ಯೋಗ ಕಡಿತ, ಆರ್ಥಿಕ ಪ್ರಗತಿ ಕುಂಟಿತ, ಅಭಿವೃದ್ಧಿಯಲ್ಲಿ ಹಿನ್ನಡೆ ಮುಂತಾದ ಸಮಸ್ಯೆಗಳಿಂದ ಯುವ ಜನತೆ ನಿರುದ್ಯೋಗದ ಭೀತಿ ಎದುರಿಸುತ್ತಿದ್ದಾರೆ. ಇದರಿಂದಾಗಿ ಮತ್ತೆ ಕಾಂಗ್ರೆಸ್ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅಧಿಕರಕ್ಕೆ ಬರಬೇಕು ಎಂಬ ಉದ್ದೇಶದಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊದಿನ್ ಬಾವಾ ಹೇಳಿದರು. ಚೊಕ್ಕಬೆಟ್ಟುವಿನಲ್ಲಿ ಆಯೋಜಿಸಲಾದ ಕಾಂಗ್ರೆಸ್ ಸಭೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಮಾತನಾಡಿದರು. ಕೇಂದ್ರ […]

ಉಳ್ಳಾಲದಲ್ಲಿ ಜೆಡಿಎಸ್ ಅಶ್ರಫ್ ಪರ ಭರ್ಜರಿ ಪ್ರಚಾರ

Thursday, May 3rd, 2018
ashraf

ಮಂಗಳೂರು: ಆಹಾರ ಸಚಿವ ಯ.ಟಿ. ಖಾದರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಂಗಳೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಚುರುಕು ಪಡೆದುಕೊಂಡಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಖಾದರ್ ನಾಲ್ಕನೇ ಬಾರಿ ಆಯ್ಕೆಯಾಗಲು ಮತದಾರರನ್ನು ಎದುರಿಸುತ್ತಿದ್ದಾರೆ. ಬಿಜೆಪಿಯಿಂದ ಯುವ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬೋಳಿಯಾರ್ ಸಂತೋಷ್ ರೈ ಸ್ಪರ್ಧೆ ನಡೆಸುತ್ತಿದ್ದಾರೆ. ಕಳೆದ ಬಾರಿ 29 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಖಾದರ್ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಂದ ಕಠಿಣ […]

ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ

Thursday, May 3rd, 2018
shashiraj

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಪಕ್ಷದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ವಿವಿಧ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು. ಪಕ್ಷಕ್ಕೆ […]

ಕಾಂಗ್ರೆಸ್ ಸೇರುತ್ತಿದ್ದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಗಂಗಾಧರ ಗೌಡ

Thursday, May 3rd, 2018
ele-congress

ಮಂಗಳೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗು ಮಾಜಿ ಸಚಿವ ಗಂಗಾಧರ ಗೌಡ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅವರು ಕಾಂಗ್ರೆಸಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ತನ್ನ ಪುತ್ರ ರಂಜನ್ ಗೌಡ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಗಂಗಾಧರ ಗೌಡ ಕಾಂಗ್ರೆಸ್ ನತ್ತ ತಮ್ಮ ಚಿತ್ತ ಹರಿಸಿದ್ದಾರೆ. ಬೆಳ್ತಂಗಡಿ ಬಿಜೆಪಿಗೆ ಆಘಾತ, ಕಮಲ ಬಿಟ್ಟು ‘ಕೈ’ ಹಿಡಿದ ಗೌಡದ್ವಯರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಂಗಾಧರ ಗೌಡರನ್ನು […]

ಕೆಪಿಎಸ್‌‌ಸಿ ಹಗರಣದಲ್ಲಿ ಹರೀಶ್ ಪೂಂಜಾ ಕರ್ಮಕಾಂಡವಿದೆ: ಗಂಗಾಧರ ಗೌಡ ಆರೋಪ

Thursday, May 3rd, 2018
harish-poonja

ಮಂಗಳೂರು: ಕೆಪಿಎಸ್‌‌ಸಿ ಹಗರಣದಲ್ಲಿ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಕರ್ಮಕಾಂಡವಿದೆ ಎಂದು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗಂಗಾಧರ ಗೌಡ ಆರೋಪಿಸಿದ್ದಾರೆ. ಬೆಳ್ತಂಗಡಿಯಲ್ಲಿ ಆಯೋಜಿಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ವಿರುದ್ಧ ವಾಗ್ದಾಳಿ ನಡೆಸಿದರು. ಕೆಪಿಎಸ್‌‌ಸಿ ಹಗರಣದಲ್ಲಿ ಪಾಲು ಪಡೆದಿದ್ದಲ್ಲದೇ, ಏಜೆಂಟಾಗಿ ಕೋಟ್ಯಂತರ ರೂ. ನುಂಗಿದ್ದಾರೆ. ಹಗರಣದ ಬಗ್ಗೆ ಸುಪ್ರೀಂಕೋರ್ಟ್ ತನಿಖೆಗೆ ಆದೇಶಿಸಿದೆ. ಈ ಬಗ್ಗೆ ತನಿಖೆಯಾದರೆ ಬಿಜೆಪಿ ಅಭ್ಯರ್ಥಿ ಜತೆ ಕೆಪಿಎಸ್‌‌ಸಿ […]

ಹಲವು ಕಾಂಗ್ರೆಸಿಗರು ಬಿಜೆಪಿಗೆ ಸೇರ್ಪಡೆ

Wednesday, May 2nd, 2018
bharat-shetty

ಮಂಗಳೂರು: ಕಾಂಗ್ರೆಸ್‌ ಸರಕಾರದ ಹಿಂದೂ ವಿರೋಧಿ ನೀತಿಯಿಂದ ಬೇಸತ್ತು ಹಲವಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡರು. ಕಾವೂರು ಮುಲ್ಲಕಾಡಿನ ಫೋರ್ತ್‌ ಮೈಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಭರತ್‌ ಶೆಟ್ಟಿ ವೈ. ಅವರು ಬಿಜೆಪಿ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಅವರು, ಹಿಂದೂ ವಿರೋಧಿ ಆಡಳಿತದ ಬಿಸಿ ಕಾಂಗ್ರೆಸ್‌ಗೆ ತಟ್ಟಲಿದೆ. ಓಲೈಕೆ ರಾಜಕಾರಣ ಶಾಶ್ವತ ಅಲ್ಲ. ಸರ್ವರನ್ನೂ ಒಗ್ಗೂಡಿ ಕರೆದುಕೊಂಡು ಹೋಗುವುದೇ ಉತ್ತಮ ಆಡಳಿತದ […]

ಪ್ರಮಾಣವಚನ ಸ್ವೀಕರಿಸಿದ ಬಳಿಕ ರೈತರ ಸಾಲಮನ್ನಾ: ಬಿಎಸ್‌ವೈ

Wednesday, May 2nd, 2018
yedeyurappa

ಶಿವಮೊಗ್ಗ: ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ನಿರ್ಧಾರವಾಗಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‌‌ಗಳಲ್ಲಿನ ಬೆಳೆ ಸಾಲಮನ್ನಾ ಮಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಪ್ರೆಸ್ ಟ್ರಸ್ಟ್‌ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀರಾವರಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, 1 ಲಕ್ಷ ಕೋಟಿ ರೂ. ಹಣ ನಿಗದಿ ಮಾಡುತ್ತೇವೆ ಎಂದರು. ಬಿಜೆಪಿ ಪ್ರಣಾಳಿಕೆಯನ್ನು ಮೇ4 ರಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು. ಪ್ರಣಾಳಿಕೆ ಬಿಡುಗಡೆಯಾದ ಮೇಲೆ ಕನಿಷ್ಠ ಶೇ.3 ರಷ್ಟು ಬಿಜೆಪಿ […]

ಸಾವಿರ ಬೀಡಿಗೆ ಮಜೂರಿ ಎಷ್ಟೆಂದು ಗೊತ್ತಿಲ್ಲದವರು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು: ಮುನೀರ್ ಕಾಟಿಪಳ್ಳ

Wednesday, May 2nd, 2018
muneer-katipall

ಮಂಗಳೂರು: ತುಳುನಾಡಿನ ಬಹುತೇಕ ಮನೆಗಳಲ್ಲಿ ಇಂದು ಒಂದಿಷ್ಟು ಬೆಳಕು ಕಾಣುತ್ತಿದ್ದರೆ, ಅದರ ಹಿಂದೆ ಬೀಡಿ ಕಟ್ಟುವ ತಾಯಂದಿರ ಪರಿಶ್ರಮವಿದೆ. ಕಷ್ಟಪಟ್ಟು ಮನೆ ಕೆಲಸ ಮಾಡುತ್ತಲೇ ಬೀಡಿಯನ್ನೂ ಕಟ್ಟಿ ಕುಟುಂಬಗಳನ್ನು ನಡೆಸಿದ್ದಾರೆ, ಅನ್ನ, ಬಟ್ಟೆಗಳನ್ನು ಹೊಂದಿಸಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮುನೀರ್ ಕಾಟಿಪಳ್ಳ ಹೇಳಿದರು. ಇಂದು ಕುಳಾಯಿ ಜಂಕ್ಷನ್ ನಲ್ಲಿ ಸಿಪಿಐಎಂ ಪಕ್ಷದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಮುನೀರ್ ಕಾಟಿಪಳ್ಳ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಇಂದು ಬೀಡಿ […]

ಬಿಜೆಪಿಯನ್ನು ಬೆಂಬಲಿಸುವಂತೆ ವೇದವ್ಯಾಸ್ ಕಾಮತ್ ಮನವಿ

Wednesday, May 2nd, 2018
vedavyas-kamath

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ್ ಕಾಮತ್ ಅವರು ಕಾಂತರಾಜ್ ಶೆಟ್ಟಿ ಲೈನ್ ಮಣ್ಣಗುಡ್ಡ ವಾರ್ಡ್ ನಂ.28 ರಲ್ಲಿ ಮನೆ ಮನೆಗೆ ಭೇಟಿ ನೀಡಿ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಒಂದೆಡೆ ಕತ್ತಲೆ ಸರಿದು ಬೆಳಕು ಮೂಡುತ್ತಿದೆ. ಅಂತೆಯೇ ರಾಜ್ಯಕ್ಕೆ ಕವಿದಿರುವ ಕತ್ತಲೆಯೂ ಸರಿಯಲಿದೆ, ಬೆಳಕು ಮೂಡಲಿದೆ. ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಮ್ಮಂತಹ ನಾಗರಿಕರು ನೆಮ್ಮದಿಯ ಬದುಕು ಸಾಗಿಸಲಿದ್ದೇವೆ ಎಂದು ಹೇಳುವ ಮೂಲಕ ಹಲವು ಮನೆಗಳ […]