Blog Archive

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಕಾನೂನು ಬಿಜೆಪಿ ಅವರನ್ನೇ ಕಾಡುತ್ತಿದೆ – ಐವನ್ ಡಿಸೋಜಾ

Tuesday, April 24th, 2018
ivan-desouza

ಮಂಗಳೂರು: ‘ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು, ಮೋದಿ ಸರ್ಕಾರದ ಕಠಿಣ ಕ್ರಮ. ಸಿದ್ದು ಸರ್ಕಾರಕ್ಕೆ ಈಗಲೂ ನಿದ್ದೆ’ ಎಂದು ಬಿಜೆಪಿಯವರು ಇಂದಿನ ಪತ್ರಿಕೆಗಳಲ್ಲಿ ಜಾಹಿರಾತು ನೀಡಿದ್ದಾರೆ. ಆದರೆ ಈ ಕಾನೂನು ಬಿಜೆಪಿಗೇ ಮುಖ್ಯವಾಗಿ ಅನ್ವಯಿಸುತ್ತದೆ. ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಲ್ಲಿ ಬಿಜೆಪಿಯವರೇ ಭಾಗಿಯಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆದ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ ನೀಡಲು ಕೇಂದ್ರ […]

ನಳಿನ್ ಗೆ ಬಿಜೆಪಿ ಕಾರ್ಯಕರ್ತರೇ ವಿಶ್ರಾಂತಿ ನೀಡಲಿದ್ದಾರೆ: ರಮಾನಾಥ್ ರೈ

Tuesday, April 24th, 2018
congress

ಮಂಗಳೂರು : ಬಿಜೆಪಿ ಪೂರ್ತಿ ಗೊಂದಲದ ಗೂಡಾಗಿದೆ. ಬಿಜೆಪಿ ಹಿರಿಯ ನಾಯಕರನ್ನೇ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸುತ್ತಿದ್ದಾರೆ . ಬಿಜೆಪಿ ಕಾರ್ಯಕರ್ತರೇ ಬಿಜೆಪಿ ನಾಯಕರಿಗೆ ವಿಶ್ರಾಂತಿ ಕೊಡಲಿದ್ದಾರೆ ಎಂದು ಸಚಿವ ರಮಾನಾಥ್ ರೈ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಗೆ ಬೆಂಗಳೂರಿನಲ್ಲಿ ಎಂಟು ಬಾಗಿಲು ಇದೆ. ದಕ್ಷಿಣ ಕನ್ನಡದ ಬಿಜೆಪಿಗೆ ಐದು ಬಾಗಿಲು ತೆರೆದುಕೊಂಡಿದೆ ಎಂದು ಲೇವಡಿ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಬಿಜೆಪಿ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲಾ ಕಾಂಗ್ರೆಸ್ ಗೆ ಶೀಘ್ರದಲ್ಲೇ ಸೇರ್ಪಡೆಯಾಗಲಿದ್ದಾರೆ. […]

ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

Tuesday, April 24th, 2018
umanath-kotiyan

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಸೋಮವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಪಕ್ಷದ ಕ್ಷೇತ್ರಾಧ್ಯಕ್ಷ ಈಶ್ವರ ಕಟೀಲ್, ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ, ಜಿಲ್ಲಾ ವಕ್ತಾರ ಕೆ.ಕೃಷ್ಣರಾಜ ಹೆಗ್ಡೆ, ನಾಯಕರಾದ ಕೆ.ಆರ್. ಪಂಡಿತ್ ಮತ್ತು ಮೇಘನಾಥ ಶೆಟ್ಟಿ ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿಯಾಗಿ ಲಾಲಾಜಿ ಮೆಂಡನ್ ನಾಮಪತ್ರ ಸಲ್ಲಿಕೆ

Tuesday, April 24th, 2018
kapu-BJP

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಇಂದು ನಾಮಪತ್ರ ಸಲ್ಲಿಸಿದರು. ಕಾಪು ಬಿಜೆಪಿ ಕಚೇರಿಯಿಂದ ಹೊರಟ ಲಾಲಾಜಿ ಆರ್.ಮೆಂಡನ್, ಕಾಪು ಜರ್ನಾದನ ದೇವಸ್ಥಾನ, ಮಾರಿಗುಡಿ, ವೆಂಕರಮಣ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಜೊತೆಗೂಡಿ ಉಡುಪಿಯಲ್ಲಿರುವ ಚುನಾವಣಾ ಕಚೇರಿ ಆಗಮಿಸಿ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ನಿ ಇಂದಿರಾ, ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಶಶಾಂಕ್ ಶಿವತ್ತಾಯ, ಗಂಗಾಧರ ಸುವರ್ಣ ಮೊದಲಾದವರು […]

ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ

Tuesday, April 24th, 2018
raghupathi-bhat

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ರಘುಪತಿ ಭಟ್ ಇಂದು ನಾಮಪತ್ರ ಸಲ್ಲಿಸಿದರು. ಕರಂಬಳ್ಳಿ ವೆಂಕಟರಮಣ ದೇವಸ್ಥಾನ, ರಥಬೀದಿಯ ಭೂತರಾಜ ದೇವ ಸ್ಥಾನ, ಅನಂತೇಶ್ವರ ಹಾಗೂ ಚಂದ್ರವೌಳಿಶ್ವರ, ಶ್ರೀಕೃಷ್ಣ ಮಠ, ಮುಖ್ಯಪ್ರಾಣ ದರ್ಶನ, ಪರ್ಯಾಯ ಸ್ವಾಮೀಜಿಯ ಆಶೀರ್ವಾದ ಪಡೆದ ರಘುಪತಿ ಭಟ್, ಚಿತ್ತರಂಜನ್ ಸರ್ಕಲ್‌ನಲ್ಲಿ ನಡೆದ ಕಾರ್ಯಕರ್ತರ ಸಮಾವೇಶದ ಬಳಿಕ ಪಾದಯಾತ್ರೆಯ ಮೂಲಕ ಚುನಾವಣಾ ಕಚೇರಿಗೆ ಆಗಮಿಸಿದರು. ತನ್ನ ಪತ್ನಿ ಶಿಲ್ಪಾ ಜೊತೆ ಬಂದ ರಘುಪತಿ ಭಟ್, ಚುನಾವಣಾ ಕಚೇರಿ ಯಲ್ಲಿದ್ದ ತಾಯಿ […]

ಎದುರಾಳಿ ರಘುಪತಿ ಭಟ್ ತಾಯಿ ಕಾಲಿಗೆ ಬಿದ್ದ ಪ್ರಮೋದ್ ಮಧ್ವರಾಜ್

Monday, April 23rd, 2018
pramod-congress

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ ಮಧ್ವರಾಜ್ ಉಡುಪಿಯ ತಾಲೂಕು ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ತಾಯಿ ಮನೋರಮಾ ಮಧ್ವರಾಜ್ ಜೊತೆ ಪ್ರಮೋದ್ ತಮ್ಮ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕಾಂಗ್ರೆಸ್ ನಲ್ಲಿ ಶಾಸಕಿಯಾಗಿ, ಸಚಿವೆಯಾಗಿ ಬಳಿಕ ಬಿಜೆಪಿ ಸಂಸದೆಯಾಗಿದ್ದ ಮನೋರಮಾ ಮಧ್ವರಾಜ್ ಪುತ್ರ ಪ್ರಮೋದ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದುದು ವಿಶೇಷವಾಗಿತ್ತು. ಅದಕ್ಕಿಂತಲೂ ವಿಶೇಷ ಎಂದರೆ ಪ್ರಮೋದ್ ಮಧ್ವರಾಜ್ […]

ಬಿಜೆಪಿ ಸೇರ್ಪಡೆ ಕುರಿತ ಅಪಪ್ರಚಾರಕ್ಕೆ ಇಂದು ತೆರೆ: ಮಧ್ವರಾಜ್

Monday, April 23rd, 2018
pramod-madhwaraj

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸೋಮವಾರ ನಾಮಪತ್ರವನ್ನು ಸಲ್ಲಿಸಿದರು. ಸಚಿವ ಪ್ರಮೋದ್ ಮಧ್ವರಾಜ್ ಬ್ರಹ್ಮಗಿರಿಯ ಕಾಂಗ್ರೆಸ್ ಭವನಕ್ಕೆ ತೆರಳಿ ತನ್ನ ತಾಯಿ ಮನೋರಮಾ ಮಧ್ವರಾಜ್ ಜೊತೆಗೂಡಿ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ವಿಜಯ ಹೆಗ್ಡೆ, ವರೋನಿಕಾ ಕರ್ನೆಲಿಯೋ ಹಾಜರಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಮಧ್ವರಾಜ್, ತಾಯಿ ಹಾಗೂ ಕಾರ್ಯಕರ್ತರ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ್ದೇನೆ. ಈ […]

ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ

Monday, April 23rd, 2018
vedavyas-kamath

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಸಿದ್ದಾರೆ. ವೇದವ್ಯಾಸ್ ಕಾಮತ್ ಅವರು ಇದೇ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆ ಮುನ್ನ ಬೃಹತ್ ಪಾದಯಾತ್ರೆ ನಡೆಯಿತು. ಕುದ್ರೋಳಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಟಿಕೆಟ್ ತಪ್ಪಲು ಸಂಸದ ಕಟೀಲ್‌ ನೇರ ಕಾರಣ: ಸತ್ಯಜಿತ್‌‌

Monday, April 23rd, 2018
sathyajith

ಮಂಗಳೂರು: ತಮಗೆ ಬಿಜೆಪಿ ಟಿಕೆಟ್ ತಪ್ಪಲು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಪ್ರಾಂತ ಪ್ರಮುಖ್ ಪಿ.ಎಸ್. ಪ್ರಕಾಶ್ ಸಹ ಕಾರಣ ಎಂದು ಬಿಜೆಪಿ ಮುಖಂಡ ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಹೊಸಬೆಟ್ಟು ಬಬ್ಬುಸ್ವಾಮಿ ದೇವಸ್ಥಾನದಲ್ಲಿ ನಡೆದ ಸತ್ಯಜಿತ್ ಅಭಿಮಾನಿಗಳ ಸಭೆಯಲ್ಲಿ ಅವರು ಮಾತನಾಡಿದರು. ತಮಗೆ ಟಿಕೆಟ್‌ ಕೈತಪ್ಪಲು ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ನೇರ ಕಾರಣ. ಇದರ ಜೊತೆಗೆ ಆರ್‌‌ಎಸ್‌ಎಸ್‌‌ ಎಂದು ಆರೋಪ ಮಾಡಿದ ಸತ್ಯಜಿತ್ ಸುರತ್ಕಲ್, ಟಿಕೆಟ್ ಕೈತಪ್ಪಿದ್ದಕ್ಕೆ ಸೂಕ್ತ ಕಾರಣ […]

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ: ಧರ್ಮೇಂದ್ರ ‌ಪ್ರಧಾನ್‌‌‌‌‌‌

Monday, April 23rd, 2018
darmendra-prasad

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ವೈಫಲ್ಯ,‌ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಈ ಬಾರಿಯ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ನೋಟ್ ಬ್ಯಾನ್ ನಿರ್ಧಾರದ ಬಳಿಕವೂ ಜನರು ಕೇಂದ್ರದ ಜೊತೆಗಿದ್ದಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ‌ಪ್ರಧಾನ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕೂಡಾ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಪಕ್ಷದ ವರಿಷ್ಠರು ಅಭ್ಯರ್ಥಿಗಳ ನಿರ್ಧಾರ ಕೈಗೊಂಡಿದ್ದಾರೆ. ಕೆಲವು ಸಮಸ್ಯೆಗಳು ಇದ್ದರೂ […]