Blog Archive

ಬಿಜೆಪಿಯ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನಕ್ಕೆ ಕಾಂಗ್ರೆಸ್ ವಿರೋಧ

Wednesday, April 25th, 2018
ivan-douza

ಮಂಗಳೂರು: ಬಿಜೆಪಿಯು ಎ.25ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನವು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಚುನಾವಣಾಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮನೆಯ ಮೇಲಿನ ಬಿಜೆಪಿ ಧ್ವಜವನ್ನು ಚುನಾವಣಾ ಆಯೋಗ ತೆರವುಗೊಳಿಸಿದ್ದರಿಂದ ಅಸಮಾಧಾನಗೊಂಡ ಬಿಜೆಪಿಯು ಎ.25ರಂದು ರಾಜ್ಯಾದ್ಯಂತ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನ ಹಮ್ಮಿಕೊಂಡಿದೆ. ಅಂದು ಮನೆಯ ಮೇಲೆ […]

ಅಂಬಿ ವರ್ತನೆಗೆ ಬೇಸರ… ರವಿಕುಮಾರ್‌‌‌ಗೆ ಬಿ ಫಾರಂ ಕೊಟ್ಟ ಕೈ ಹೈಕಮಾಂಡ್‌…!

Tuesday, April 24th, 2018
ambarish

ಮಂಡ್ಯ: ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಹೇಳಿದ್ದ ನಟ ಹಾಗೂ ಮಾಜಿ ಸಚಿವ ಅಂಬರೀಷ್ ಅವರ ವರ್ತನೆಗೆ ಬೇಸತ್ತು ಕಾಂಗ್ರೆಸ್‌‌ ಹೈಕಮಾಂಡ್‌ ಇದೀಗ ರವಿ ಕುಮಾರ್‌‌‌ ಗಣಿಗ ಅವರಿಗೆ ಬಿ ಫಾರಂ ಕೊಟ್ಟಿದೆ ಎನ್ನಲಾಗುತ್ತಿದೆ. ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸಲ್ಲ. ನಾನು ಸ್ಪರ್ಧಿಸಿದರೂ, ಸೋಲುತ್ತೇನೆ ಎನ್ನುವ ಮಾತನ್ನು ಪಕ್ಷದವರೇ ಆಡಿಕೊಂಡು ತಿರುಗುತ್ತಿದ್ದಾರೆ. ಹೀಗಿರುವಾಗ ನಾನೇಕೆ ಸ್ಪರ್ಧೆ ಮಾಡಲಿ ಎಂದು ಅಂಬಿ ಪ್ರಶ್ನಿಸಿದ್ದರು. ಅವರ ಹೇಳಿಕೆಗೆ ಬೇಸತ್ತು ಕಾಂಗ್ರೆಸ್‌‌ ಹೈಕಮಾಂಡ್‌ ಯೂಟರ್ನ್ […]

ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

Tuesday, April 24th, 2018
gopal-pojary

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಕೆ. ಗೋಪಾಲ ಪೂಜಾರಿ ಇಂದು ಬೈಂದೂರು ಚುನಾವಣಾಧಿ ಕಾರಿ ಶ್ರೀನಿವಾಸ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬೈಂದೂರು ಸೇಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗೋಪಾಲ ಪೂಜಾರಿ, ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ತಾಪಂ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಅವರು, ಐದು […]

ಬಿಜೆಪಿ ಸೇರ್ಪಡೆ ಕುರಿತ ಅಪಪ್ರಚಾರಕ್ಕೆ ಇಂದು ತೆರೆ: ಮಧ್ವರಾಜ್

Monday, April 23rd, 2018
pramod-madhwaraj

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸೋಮವಾರ ನಾಮಪತ್ರವನ್ನು ಸಲ್ಲಿಸಿದರು. ಸಚಿವ ಪ್ರಮೋದ್ ಮಧ್ವರಾಜ್ ಬ್ರಹ್ಮಗಿರಿಯ ಕಾಂಗ್ರೆಸ್ ಭವನಕ್ಕೆ ತೆರಳಿ ತನ್ನ ತಾಯಿ ಮನೋರಮಾ ಮಧ್ವರಾಜ್ ಜೊತೆಗೂಡಿ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ವಿಜಯ ಹೆಗ್ಡೆ, ವರೋನಿಕಾ ಕರ್ನೆಲಿಯೋ ಹಾಜರಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಮಧ್ವರಾಜ್, ತಾಯಿ ಹಾಗೂ ಕಾರ್ಯಕರ್ತರ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ್ದೇನೆ. ಈ […]

ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

Monday, April 23rd, 2018
u-t-kader

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಯು.ಟಿ ಖಾದರ್ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ನಾಲ್ಕನೇ ಬಾರಿಗೆ ಖಾದರ್ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಸರ್ವಧರ್ಮ ಸಮನ್ವಯತೆ ಮೆರೆದ ವಿನಯ್ ಕುಮಾರ್ ಸೊರಕೆ

Monday, April 23rd, 2018
vinay-kumar

ಕಾಪು: ನಾಮಪತ್ರ ಸಲ್ಲಿಕೆಗೂ ಮುನ್ನ ಕಾಪು ಕಾಂಗ್ರೆಸ್ ಅಭ್ಯರ್ಥಿ ಕಾಪು ಶಾಸಕ ವಿನಯ್ ಕುಮಾರ್ ಸೊರಕೆಯವರು ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ದೇವಸ್ಥಾನ, ಚರ್ಚ್ , ಮಸೀದಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ಕದ್ರಿ ಮಂಜುನಾಥೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಮೊದಲು ಪೂಜೆ ಸಲ್ಲಿಸಿದ ವಿನಯ್ ಕುಮಾರ್ ಸೊರಕೆ ಯವರು ಪಡುಬಿದ್ರಿ ನಾಗ ಬ್ರಹ್ಮ ಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಾಪು ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ , ಕಾಪು ಮಾರಿಗುಡಿಯಲ್ಲಿ ಪ್ರಾರ್ಥಿಸಿದರು. […]

ಕುಂದಾಪುರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆ

Saturday, April 21st, 2018
rakesh-malli

ಕುಂದಾಪುರ : ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕುಂದಾಪುರ ಸಹಾಯಕ ಆಯುಕ್ತರ ಮೂಲಕ ಉಡುಪಿಯ ಕುಂದಾಪುರದ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭ ದಲ್ಲಿ ಶಾಸ್ತ್ರೀ ಸರ್ಕಲ್‌ನಿಂದ ಮಿನಿವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ಹಾಗೂ ಸಾವಿರಾರು ಕಾರ್ಯಕರ್ತರಿಂದ ಪಾದಯಾತ್ರೆ ನಡೆಯಿತು.

ಕಾಂಗ್ರೆಸ್‌ ಗೆಲ್ಲಿಸಲು ಪ್ರಾಮಾಣಿಕವಾಗಿ ದುಡಿಯಿರಿ: ಅಭಯಚಂದ್ರ ಜೈನ್‌

Friday, April 20th, 2018
abhaychandra-jain

ಮೂಡಬಿದಿರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳಲ್ಲಿ ಕರ್ನಾಟಕವನ್ನು ಹಸಿವು ಮುಕ್ತ, ಸ್ವಾಭಿಮಾನಿ ಬದುಕಿನ ರಾಜ್ಯವನ್ನಾಗಿ ರೂಪಿಸಿದವರು. ಅವರ ಕೈ ಬಲಪಡಿಸಲು ಈ ಬಾರಿಯ ಚುನಾವಣೆಯಲ್ಲಿ ಜನರನ್ನು ಪ್ರೇರೇಪಿಸುವ ಕಾರ್ಯದಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿಯಬೇಕಾಗಿದೆ ಎಂದು ಶಾಸಕ, ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಐದನೇ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿರುವ ಅಭಯಚಂದ್ರ ಅವರು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಶಾಹುಲ್‌ ಹಮೀದ್‌ ಮಾತನಾಡಿದರು. […]

ಪಕ್ಷಭೇದ ಮರೆತು ಅಭಿವೃದ್ಧಿ: ಶಾಸಕ ಮೊದಿನ್ ಬಾವಾ

Friday, April 20th, 2018
meating

ಮಂಗಳೂರು: ಯಾವುದೇ ಜಾತಿ, ಧರ್ಮ, ಪಕ್ಷ ಭೇದ ಮರೆತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡಿರುತ್ತೇನೆ. ಆದುದರಿಂದ ಕಾಂಗ್ರೆಸ್ ಈ ಬಾರಿ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತ ಕೇಳಲಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಕವಿತಾ ಸನಿಲ್ ನೇತೃತ್ವದಲ್ಲಿ ಪಚ್ಚನಾಡಿ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ಮಂಗಳೂರು ಉತ್ತರ ವಿಧಾನಸಭಾ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿ ರಸ್ತೆ ವಿಸ್ತರಣೆ, ಒಳಚರಂಡಿ ಯೋಜನೆ, ಕುಡಿಯುವ ನೀರು ಮತ್ತಿತರ […]

ಜನಾರ್ದನ ಪೂಜಾರಿ ಕಾಲಿಗೆರಗಿ ಆಶೀರ್ವಾದ ಪಡೆದ ಶಾಸಕ ಸೊರಕೆ

Thursday, April 19th, 2018
janardhan-poojary

ಮಂಗಳೂರು: ಉಡುಪಿ ಜಿಲ್ಲೆಯ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಅವರು ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರನ್ನು ದ.ಕ ಜಿಲ್ಲೆಯ ಬಂಟ್ವಾಳದ ಮನೆಯಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಿದರು. ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕರಾವಳಿಯಲ್ಲಿ ಬಿಲ್ಲವ ಸಮುದಾಯದ ಹಿರಿಯ ಮುಖಂಡರಾಗಿದ್ದು, ಸ್ವಪಕ್ಷದಲ್ಲಿನ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದರು. ಬಿಲ್ಲವ ಸಮುದಾಯದಿಂದ ಬಂದ ಕಾಂಗ್ರೆಸ್ ಶಾಸಕ ವಿನಯಕುಮಾರ್ ಸೊರಕೆ ಅವರು ಪೂಜಾರಿ ಅವರ ಕಾಲಿಗೆರಗಿದರು, ಅವರಿಗೆ ಪೂಜಾರಿ ಶುಭ ಹಾರೈಸಿದರು […]