ಶಿವಮೊಗ್ಗದಲ್ಲಿ ಬಿಎಸ್‌ವೈ ಆಪ್ತರಿಗೆ ಬಿಜೆಪಿ ಮಣೆ: ಸಾಗರದಿಂದ ಹರತಾಳು ಸ್ಪರ್ಧೆ
Monday, April 16th, 2018ಶಿವಮೊಗ್ಗ: ಬಹುನಿರೀಕ್ಷಿತ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಆರು ತಿಂಗಳುಗಳಿಂದ ಸಾಗರ ವಿಧಾನಸಭಾ ಕ್ಷೇತ್ರ ಸಾಕಷ್ಟು ಗೊಂದಲ ಗಲಾಟೆಗಳಿಗೆ ಸಾಕ್ಷಿಯಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ಆರೋಪಮುಕ್ತರಾಗಿ ಬಂದ ಮಾಜಿ ಸಚಿವ ಹಾಲಪ್ಪ ಸಾಗರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದರು. ಇದರಿಂದ ಕಳೆದ ನಾಲ್ಕುವರೆ ವರ್ಷದಿಂದಲೂ ನಾನೇ ಅಭ್ಯರ್ಥಿ ಎಂದು ಪಕ್ಷ ಸಂಘಟನೆ ಮಾಡಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ರೊಚ್ಚಿಗೆದ್ದು ನೇರಾನೇರ ಆರೋಪಗಳನ್ನು […]