Blog Archive

ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ

Monday, April 16th, 2018
Abhaya

ಮಂಗಳೂರು : ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಹಿಂದಿನ ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳನ್ನು ಸೇರಿಸಿ ಮತ್ತೆ ಕಣಕ್ಕಿಳಿಸಿದೆ. ಮಂಗಳೂರು ಉತ್ತರ ದಕ್ಷಿಣ ಕೇತ್ರದಿಂದ ಶಾಸಕರದ ಜೆ.ಆರ್.ಲೋಬೊ, ಉತ್ತರ ಕ್ಷೇತ್ರದಿಂದ ಬಿ.ಎ.ಮೊಯ್ದಿನ್ ಬಾವ, ಮಂಗಳೂರು ಕ್ಷೇತ್ರದಿಂದ ಸಚಿವ ಯು.ಟಿ.ಖಾದರ್, ಮೂಡುಬಿದ್ರೆ ಕ್ಷೇತ್ರದಿಂದ ಅಭಯ ಚಂದ್ರ ಜೈನ್, ಬಂಟ್ವಾಳ ಕ್ಷೇತ್ರದಿಂದ ಸಚಿವ ರಮಾನಾಥ ರೈ, ಬೆಳ್ತಂಗಡಿ ಕ್ಷೇತ್ರದಿಂದ ವಸಂತ ಬಂಗೇರ ಹಾಗೂ ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಸುಳ್ಯ ಕ್ಷೇತ್ರದಿಂದ […]

ಕಾಂಗ್ರೆಸ್‌ ಮುಖಂಡರೇ ಬಿಜೆಪಿ ಸೇರಲಿದ್ದಾರೆ : ನಳಿನ್‌ ಕುಮಾರ್‌

Thursday, April 12th, 2018
nalin-bjp

ಸುಳ್ಯ: ಬಿಜೆಪಿಯ ಕಾರ್ಯಕರ್ತರು ಅಥವಾ ಮುಖಂಡರು ಕಾಂಗ್ರೆಸ್‌ ಪಕ್ಷದತ್ತ ಹೋಗುವ ಪ್ರಶ್ನೆಯೇ ಉದ್ಭವಿಸಿಲ್ಲ. ಆದರೆ ಕಾಂಗ್ರೆಸ್‌ ಪಕ್ಷದ ನೀತಿಯಿಂದ ಬೇಸತ್ತು, ಕೆಲವೇ ದಿನಗಳಲ್ಲಿ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆಗೊಳ್ಳುವುದು ನಿಶ್ಚಿತ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಸಚಿವ ರಮಾನಾಥ ರೈ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮುಖಂಡರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದು ಶೀಘ್ರ ಪಕ್ಷವನ್ನು ಸೇರಲಿದ್ದಾರೆ ಎಂಬ ಸಚಿವ ರಮಾನಾಥ ರೈ ಅವರ ಹೇಳಿಕೆಯನ್ನು ಅಲ್ಲಗಳೆದರು. […]

50ಕ್ಕೂ ಅಧಿಕ ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Thursday, April 12th, 2018
congress

ಕಾಪು: ಬಿಜೆಪಿ ಮತ್ತು ಜೆಡಿಎಸ್‌ನ ಉಚ್ಚಿಲ ಭಾಗದ 50ಕ್ಕೂ ಅಧಿಕ ಜಿಲ್ಲಾ ಮತ್ತು ರಾಜ್ಯ ಮುಖಂಡರು ಇತ್ತೀಚೆಗೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ಲತೀಫ್ ದಾವೂದ್ ನೇತೃತ್ವದಲ್ಲಿ ಶಾಬಾನ್ ಉಚ್ಚಿಲ, ಗುರುಪ್ರಸಾದ್ ಭಟ್ ಉಚ್ಚಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರನ್ನು ಶಾಸಕ ವಿನಯ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ […]

ಸೌದಿ ಅರೇಬಿಯಾದಲ್ಲಿ ಕಾಂಗ್ರೆಸ್ ಸಭೆ

Thursday, April 12th, 2018
saudi-arabia

ಮಂಗಳೂರು: ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಸಭೆಯು ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ ನೇತೃತ್ವದಲ್ಲಿ ಜರಗಿತು. ಜೀವನೋಪಾಯಕ್ಕಾಗಿ ದೇಶ ಬಿಟ್ಟು ವಿದೇಶದಲ್ಲಿ ನಾವು ದುಡಿಯುತ್ತಿದ್ದರೂ ದೇಶದ ಹಿತ ಚಿಂತನೆಯಿಂದ ದೇಶಕ್ಕೆ ತೆರಳಿ ಮತದಾನ ಮಾಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಚುನಾವಣೆಯಲ್ಲಿ ಮತದಾನ ಮಾಡುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಯೋಗ್ಯ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಹಿತದೃಷ್ಟಿಯಿಂದ ಮತ್ತು ಎನ್‌ಆರ್‌ಐಗಳ ಭವಿಷ್ಯದ ದೃಷ್ಟಿಯಿಂದ ಮುಂದಿನ ಕರ್ನಾಟಕ ವಿಧಾನಸಭಾ […]

ಚನ್ನಪಟ್ಟಣ ಕ್ಷೇತ್ರದಿಂದ ಹೆಚ್‌‌.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್‌‌‌ ಚಿಂತನೆ?

Wednesday, April 11th, 2018
h-m-revanna

ಬೆಂಗಳೂರು: ಜಿದ್ದಾಜಿದ್ದಿಯ ಅಖಾಡವಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಹೆಚ್.ಎಂ.ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಸಿ.ಪಿ.ಯೋಗೇಶ್ವರ್‌ಗೆ ಪ್ರಬಲ ಸ್ಪರ್ಧೆ ಒಡ್ಡಲಿದ್ದಾರೆ. ಚನ್ನಪಟ್ಟಣದಲ್ಲಿ ರೇವಣ್ಣ ಅವರನ್ನು ನಿಲ್ಲಿಸಲು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಸಮ್ಮತಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ನಲ್ಲೇ ಇದ್ದು, ಪಕ್ಷಾಂತರವಾಗಿ ಕಾಂಗ್ರೆಸ್ ವಿರುದ್ಧವೇ ಹರಿಹಾಯ್ದಿದ್ದ ಸಿ.ಪಿ.ಯೋಗೇಶ್ವರ್‍ ಅವರನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲಿ ತಂತ್ರ ಹೆಣೆದಿದ್ದು, ಅದರಂತೆ […]

ಕೇಂದ್ರದ ವಿರುದ್ಧ ಕಾಂಗ್ರೆಸ್ ನ ಧನಂಜಯ ಅಡ್ಪಂಗಾಯ ತರಾಟೆ

Wednesday, April 11th, 2018
dananjay

ಮಂಗಳೂರು: ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಆಡಳಿತಾವಧಿಯ 2015-17ನೆ ಸಾಲಿನಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ನಡೆದ ವಂಚನೆಯನ್ನು ನಿಂಯತ್ರಿಸಲಾಗದವರು ರಾಜ್ಯಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಕಿಡಿಕಾರಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡು ವರ್ಷಗಳ ಅವಧಿಯಲ್ಲಿ ಪಿಎನ್‌ಬಿ, ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿರುವ ಭಾರೀ ವಂಚನೆ ಸೇರಿದಂತೆ ಒಟ್ಟು 17504 ಪ್ರಕರಣಗಳು ದಾಖಲಾಗಿವೆ. ಬ್ಯಾಂಕ್‌ಗಳಿಗೆ ಒಟ್ಟು […]

ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಪರ್ಕದಲ್ಲಿ -ರಮನಾಥ ರೈ ಬಾಂಬ್

Tuesday, April 10th, 2018
ramanath-rai

ಮಂಗಳೂರು: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಗೊಂದಲದಲ್ಲಿದ್ದು ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಬಿ ರಮನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮತನಾಡಿದ ಅವರು ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ಘೋಷಣೆಯ ಬೆನ್ನಿಗೆ ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ ಎಂದರು. ಬಿಜೆಪಿಯು ಅಭ್ಯ್ರಥಿ ಘೋಷಣೆ ಮಾಡುವುದನ್ನು ಕಾಯುತ್ತಿದ್ದು ಈ ಘೋಷಣೆ ಬೆನ್ನಿಗೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬರುವ ಸಾಧ್ಯತೆಯಿದ ಎಂದವರು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಬರುವ ಬಿಜೆಪಿ ಕಾರ್ಯಕ್ತರು […]

ಕಾಂಗ್ರೆಸ್‌ ಉಪವಾಸ ಸತ್ಯಾಗ್ರಹ…ನಾಯಕರ ಉಪಹಾರ ಸೇವನೆ ಫೋಟೋ ಹರಿಬಿಟ್ಟ ಬಿಜೆಪಿ!

Monday, April 9th, 2018
delhi-congress-2

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಉಪವಾಸ ನಿರಶನ ಕೈಗೊಂಡಿದೆ. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದ ರಾಜ್‌ಘಾಟ್‌ನಲ್ಲಿ ಕೈ ನಾಯಕರು ಸತ್ಯಾಗ್ರಹ ನಡೆಸಿದರು. ದಲಿತರ ಮೇಲಿನ ದೌರ್ಜನ್ಯ ತಡೆ ಹಾಗೂ ಸಂಸತ್ತಿನ ಕಲಾಪ ಸರಿಯಾಗಿ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ. ದೆಹಲಿಯಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗಿತು. ಈ ವೇಳೆ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ […]

100 ಜನರಿಗೆ ಊಟ: ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಪ್ರಕರಣ

Monday, April 9th, 2018
kapu-congress

ಕಾಪು: ನೀತಿ ಸಂಹಿತೆ ಉಲ್ಲಂಘಿಸಿ 100 ಜನರಿಗೆ ಊಟ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಶೆಟ್ಟಿ ಎಂಬುವವರ ಮೇಲೆ ಚುನಾವಣಾಧಿಕಾರಿಗಳು ರವಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. 2 ದಿನಗಳ ಹಿಂದೆ ಶಿರ್ವ ಠಾಣೆ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದ ಕಾಂಗ್ರೆಸ್‌ನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದ ವೀಡಿಯೊ ಚಿತ್ರೀಕರಣ ಮಾಡಲಾಗಿದ್ದು, ಇಂದು ವೀಡಿಯೊ ತಪಾಸಣೆ ನಡೆಸುವಾಗ ಊಟ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ವೀಡಿಯೊ ಚಿತ್ರೀಕರಣದ […]

ಎ.12ರಂದು ಕಾಂಗ್ರೆಸ್ ನ ಅಭ್ಯರ್ಥಿಗಳ ಪಟ್ಟಿ ಪ್ರಕಟ

Monday, April 9th, 2018
rahul-gandhi

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನ ಸ್ಕ್ರೀನಿಂಗ್ ಸಮಿತಿ ಸಭೆ ಸೋಮವಾರ ಹೊಸದಿಲ್ಲಿಯಲ್ಲಿ ನಡೆಯಲಿದೆ. ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮಧುಸೂಧನ ಮಿಸ್ತ್ರೀ ಅಧ್ಯಕ್ಷೆಯಲ್ಲಿ ನಡೆಯಲಿರುವ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅರ್ಜಿಯ ಪರಿಶೀಲನೆ ನಡೆಯಲಿದೆ. ಎರಡು ದಿನಗಳ ಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ , ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂ ರಾವ್, ಎಸ್ ಆರ್ ಪಾಟೀಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಎರಡು ದಿನಗಳ […]