Blog Archive

ಬೆಳಿಗ್ಗೆ ಕಾಂಗ್ರೆಸ್, ಮಧ್ಯಾಹ್ನ ಬಿಜೆಪಿ, ಸಂಜೆ ಮತ್ತೆ ಕಾಂಗ್ರೆಸ್ ಗೆ ವಾಪಸ್!

Monday, April 9th, 2018
congress

ಮಂಗಳೂರು: ಹೀಗೊಂದು ಪಕ್ಷಾಂತರ ನಾಟಕಕ್ಕೆ ಕರಾವಳಿ ಕರ್ನಾಟಕದ ರಾಜಕೀಯ ಶನಿವಾರ ಸಾಕ್ಷಿಯಾಗಿತ್ತು. ಹೀಗೆ ಗಂಟೆಗೊಂದು ಪಕ್ಷ ಬದಲಿಸಿದವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುಂದರ ದೇವಿನಗರ. ಭಾನುವಾರ ಬೆಳಿಗ್ಗೆ ಸುಂದರ ದೇವಿನಗರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ತದ ನಂತರ ಅವರು ಸಮಾರಂಭವೊಂದರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಂಟ್ವಾಳದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ರಮಾನಾಥ ರೈ ವಿರುದ್ಧ ಕಣಕ್ಕಿಳಿಯಲಿರುವ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ಬಿಜೆಪಿ ಧ್ವಜ ನೀಡಿ ಪಕ್ಷಕ್ಕೂ ಬರ ಮಾಡಿಕೊಂಡಿದ್ದರು. ಆದರೆ ಮತ್ತೆ ನಡೆದ ಮಿಂಚಿನ […]

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಕಾಂಗ್ರೆಸ್‌ನಿಂದ ದೂರು

Saturday, April 7th, 2018
prabhakar-bhat

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ದೂರು ದಾಖಲಿಸಿದೆ. ಚುನಾವಣಾಧಿಕಾರಿ ವೈಶಾಲಿಗೆ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ. ಬಿಜೆಪಿ ಮುಖಂಡ ರಾಜಾರಾಂ ಭಟ್ ಆಯೋಜಿಸಿದ್ದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಕಲ್ಲಡ್ಕ ಪ್ರಭಕರ್ ಭಟ್‌ ಕೋಮು ದ್ವೇಷದಿಂದ ಕೂಡಿದ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ. ಚುನಾವಣೆ ಮುಗಿಯುವವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ […]

ಕರ್ನಾಟಕ ಬಿಟ್ಟು ಸೌದಿಯಲ್ಲಿ ಚುನಾವಣಾ ಪ್ರಚಾರ: ಇದು ಕರಾವಳಿಯ ‘ಕೈ’ ನಾಯಕರ ಪಾಲಿಟಿಕ್ಸ್‌

Saturday, April 7th, 2018
congress

ಮಂಗಳೂರು: ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿಯೇ ವಾಸ್ತವ್ಯವಿದ್ದು ಚುನಾವಣೆ ಪ್ರಚಾರ ಮಾಡುವುದು ಮಾಮೂಲಿ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಾಂಗ್ರೆಸ್‌‌ನ ಅಭ್ಯರ್ಥಿಗಳು ದೂರದ ಸೌದಿಯಲ್ಲಿ ಚುನಾವಣೆ ಪ್ರಚಾರ ನಡೆಸುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಹೌದು. ದ.ಕ ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್‌ ರೈ, ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ. ಖಾದರ್, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಮೊಯ್ದಿನ್ ಬಾವ ಸೇರಿದಂತೆ […]

ಕಾಂಗ್ರೆಸ್‌‌ ಉತ್ತರ ಕನ್ನಡ ಜಿಲ್ಲೆಯ ಆರು ಕ್ಷೇತ್ರದಲ್ಲಿ ಗೆಲ್ಲಲಿದೆ: ಸಚಿವ ದೇಶಪಾಂಡೆ

Friday, April 6th, 2018
deshpandey

ಕಾರವಾರ: ಕಾಂಗ್ರೆಸ್ ಅಭಿವೃದ್ಧಿಯಲ್ಲಿ ನಂಬಿಕೆಯಿಟ್ಟ ಪಕ್ಷ. ಜನರನ್ನು ಒಡೆದು, ದ್ವೇಷ ಹಬ್ಬಿಸಿ ನಾವು ಮತ ಕೇಳಲ್ಲ. ಅಭಿವೃದ್ಧಿ ಮಾಡಿದ ಕಾರ್ಯವನ್ನು ಜನರಿಗೆ ವಿವರಿಸಿ ಮತ ಕೇಳುತ್ತೇವೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಜಿಲ್ಲೆಯಲ್ಲಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಮತ್ತು ರಾಜ್ಯದಲ್ಲೂ ಅಧಿಕಾರಕ್ಕೆ ಬರಲಿದೆ ಎಂದು ಕಾರವಾರದಲ್ಲಿ ಸಚಿವ ದೇಶಪಾಂಡೆ ಹೇಳಿದರು. ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ. ಮಾರ್ಗರೇಟ್ ಆಳ್ವಾ ಮತ್ತು ನಮ್ಮ ಮಧ್ಯೆ ಒಳ್ಳೆಯ ಬಾಂಧವ್ಯವಿದೆ. ಭೀಮಣ್ಣ ಸಹ ಶಿರಸಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಪಕ್ಷದ ವರಿಷ್ಠರ […]

ಬಿಎಸ್‌ವೈ ವಿರುದ್ಧ ಇಂದು ಸ್ಫೋಟಕ ಮಾಹಿತಿ ನೀಡ್ತಾರಂತೆ ಕೈ ನಾಯಕರು

Friday, April 6th, 2018
yedeyurappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸ್ಫೋಟಕ ಮಾಹಿತಿಯನ್ನು ಇಂದು ಹೊರಹಾಕುವುದಾಗಿ ರಾಜ್ಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಇದಕ್ಕೆ ಇಂದು ಮಧ್ಯಾಹ್ನ 1.30ಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಆಪ್ತ ಸಚಿವರು ಸುದ್ದಿಗೋಷ್ಠಿ ಕರೆದಿದ್ದು, ಮಹತ್ವದ ಮಾಹಿತಿ ಹೊರಗೆಡವುತ್ತೇವೆ ಎಂದು ತಿಳಿಸಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿಯ ಸಿಎಂ ಅಭ್ಯರ್ಥಿಯಾಗಿರುವ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಾಗಿ ತಿಳಿಸಿರುವ ಕಾರಣ ರಾಜ್ಯದಲ್ಲಿ ಇದೊಂದು […]

ಬಂಟ್ವಾಳದಲ್ಲಿ 71ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Thursday, April 5th, 2018
Bantwala Congress

ಬಂಟ್ವಾಳ: ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ 71 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಸಿದ್ಧಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಸಚಿವ ರಮಾನಾಥ್ ರೈ ಅವರು ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇತ್ತೀಚೆಗೆ ಕಾಂಗ್ರೆಸ್ ನಲ್ಲಿದ್ದ ಮುಖಂಡ ಪ್ರಭಾಕರ್ ಪ್ರಭು ಬಿಜೆಪಿ ಸೇರ್ಪಡೆಗೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ 71ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ತನ್ನತ್ತ ಸೆಳೆದುಕೊಂಡಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಕೇಂದ್ರ ಕಾನೂನು ಸಚಿವ, ಯಡಿಯೂರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರತಿಭಾ ಕುಳಾಯಿ

Wednesday, April 4th, 2018
prathibha-kulai

ಮಂಗಳೂರು: ತನ್ನ ಭಾವಚಿತ್ರ ಹಾಗೂ ಹೆಸರು ಬಳಸಿ ಮಾನಸಿಕ ಹಿಂಸೆ, ಮಾನಹಾನಿ ಮಾಡಿದ್ದಾರೆಂದು ಆರೋಪಿಸಿ ಕೇಂದ್ರ ಕಾನೂನು ಸಚಿವ ಹಾಗೂ ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಸಹಿತ ವಿರುದ್ಧ ಮೂವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಮಹಿಳಾ ಕಾಂಗ್ರೆಸ್ ಮುಖಂಡೆ, ಕಾರ್ಪೊರೇಟರ್ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇತ್ತೀಚೆಗೆ ಬಿಡುಗಡೆ ಮಾಡಿದ ಕಾಂಗ್ರೆಸ್ ಪಕ್ಷದ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ ನನಗೆ ಸಂಬಂಧಪಡದ ವಿಷಯದಲ್ಲಿ ನನ್ನ ಭಾವಚಿತ್ರ ಹಾಗೂ ಹೆಸರು ಬಳಸಿ ಮಾನಹಾನಿ […]

ರಂಗೇರಿದ ಚುನಾವಣೆ… ರಾಮನಗರದಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Saturday, March 31st, 2018
D-K-shivkumar

ರಾಮನಗರ: ರಾಜ್ಯ ವಿಧಾನಸಭಾ ಸಾರ್ವತಿಕ ಚುನಾವಣೆಯ ದಿನಾಂಕ ಘೊಷಣೆಯಾಗುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಿವೆ. ಮಾಗಡಿಯಲ್ಲಿ ಕಳೆದ ಭಾನುವಾರ ಜೆಡಿಎಸ್ ಪಕ್ಷ ಪಟ್ಟಣದ ನಾಡಪ್ರಭು ಕೆಂಪೇಗೌಡರ ಕೋಟೆ ಮೈದಾನದಲ್ಲಿ ವಿಕಾಸ ಪರ್ವ ಸಮಾವೇಶ ಏರ್ಪಡಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿತ್ತು. ಈಗ ಕಾಂಗ್ರೆಸ್ ಕೂಡ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಏಪ್ರಿಲ್ 4 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಗಡಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ರಾಮನಗರ ಜಿಲ್ಲೆಯ […]

ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ

Saturday, March 31st, 2018
congress

ಮಂಗಳೂರು: ಕ್ಷೇತ್ರದ ಉಸ್ತುವಾರಿ ದೇವಿಪ್ರಸಾದ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಶಾಸಕ ಮೊದಿನ್ ಬಾವಾ ಅವರು ಮಾತನಾಡಿ ಕಾಂಗ್ರೆಸ್ ಸರಕಾರ ಮಾಡುದ ಉತ್ತಮ ಕೆಲಸ ಕಾರ್ಯಗಳನ್ನು ಮತದಾರರಿಗೆ ತಿಳಿ ಹೇಳುವ ಮೂಲಕ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಕೆಲಸ ಮಾಡ ಬೇಕು ಎಂದರು. ದೀಪಕ್ ಪೂಜಾರಿ, ಮುಖಂಡರಾದ ಕೆ.ಸದಾಶಿವ ಶೆಟ್ಟಿ,ಪುರುಷೋತ್ತಮ್ ಚಿತ್ರಾಪುರ, ಅಶೋಕ್ ಶೆಟ್ಟಿ, ಮಹಾಬಲ ಮಾರ್ಲ,ಕವಿತಾ ಸನಿಲ್, ಕುಮಾರ್ ಮೆಂಡನ್, ಪ್ರತಿಭಾ ಕುಳಾಯಿ,ಶಕುಂತಳಾ ಕಾಮತ್‌ ಮತ್ತಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ಸರಕಾರ ಜೈಲ್‌ಗೆ ಕಳುಹಿಸುವ ಬದಲು ಹಕ್ಕು ಪತ್ರ ನೀಡುವ ಮೂಲಕ ನೆಮ್ಮದಿಯ ಬದುಕನ್ನು ಕಲ್ಪಿಸಿದೆ: ಮೊಹಿಯುದ್ದೀನ್ ಬಾವಾ

Thursday, March 29th, 2018
mohiuddin-bava

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಹಿಯುದ್ದೀನ್ ಬಾವಾ ಅವರು ಬುಧವಾರ ತಮ್ಮ ನಿವಾಸದ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ವಿವಿಧ ಕ್ಷೇತ್ರಗಳ ಸಮಸ್ಯೆಗಳ ಕುರಿತಾಗಿ ಕ್ಷೇತ್ರದ ಜನರಿಂದ ಮನವಿ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಅವರು ಇದೀಗ ಚುನಾವಣೆ ಘೋಷಣೆಯಾಗಿದ್ದು, ಯಾವುದೇ ಅನುದಾನ ನೀಡುವ ಬಗ್ಗೆ ಹೇಳುವುದಿಲ್ಲ. ಐದು ವರ್ಷದ ಹಿಂದೆ ತಾನು ನೀಡಿದ ಭರವಸೆಗಳನ್ನು ಆದ್ಯತಾ ನೆಲೆಯಲ್ಲಿ ಪೂರ್ಣಗೊಳಿಸಿದ್ದೇನೆ. ಆದರೂ ಇನ್ನಷ್ಟು ಅಭಿವೃದ್ಧಿ ಕೆಲಸ ಕಾರ‍್ಯಗಳು ನಡೆಯಬೇಕಿದೆ. ಈಗಾಗಲೇ ನಾನಾ ದೈವಸ್ಥಾನಗಳಿಗೆ ಒಟ್ಟು […]