Blog Archive

ಫ್ರಿಡಂ ಪಾರ್ಕ್‍ನಲ್ಲಿ ತುರ್ತುಪರಿಸ್ಥಿತಿ ಹೇರಿಕೆ ವಿರೋಧಿಸಿ ಕರಾಳ ದಿನ ಆಚರಣೆ

Friday, June 25th, 2021
freedom Park

ಬೆಂಗಳೂರು  : ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಶುಕ್ರವಾರ ಜೂನ್ 25 ರಂದು  ಫ್ರಿಡಂ ಪಾರ್ಕ್‍ನಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಕರಾಳ ದಿನ ಆಚರಣೆ ಮಾಡಿದರು. ಈ ವೇಳೆ ಅಂದಿನ ದಿನಗಳನ್ನ ನೆನಪಿಸಿಕೊಂಡು ಸಚಿವರು,” ಜಯಪ್ರಕಾಶ್ ನಾರಾಯಣ್ ಅವರ ಕರೆಯ ಮೇರೆಗೆ ನಾನು ಮತ್ತು ನಮ್ಮ ಕಾಲೇಜಿನ ವಿದ್ಯಾರ್ಥಿ ನಾಯಕರುಗಳು ಯಶವಂತಪುರ ವೃತ್ತದ ಬಳಿ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಹೋರಾಟ ಮಾಡಿದ್ದೇವು. ಆ ವೇಳೆ ನಮ್ಮನ್ನ ಬಂಧಿಸಿ ಕೇಂದ್ರ […]

ರೈತರಿಗೆ ಮತ್ತೊಂದು ಅವಕಾಶ ನೀಡಲು ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ: ಆರ್ ಅಶೋಕ

Wednesday, June 23rd, 2021
R Ashok

ಬೆಂಗಳೂರು  : ಕರ್ನಾಟಕ ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು,”ರಾಜ್ಯದಲ್ಲಿ 70 ಸಾವಿರ ಏಕರೆಗಿಂತ ಹೆಚ್ಚಿನ ಭೂಮಿ ಇನಾಮ್ತಿ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ 500, 1000 ಏಕರೆ ಇನಾಮ್ತಿ ಜಮೀನುಗಳನ್ನ ನೀಡಲಾಗಿತ್ತು. ರೈತರು ಅಲ್ಲಿ ಉಳುಮೆ ಮಾಡಿಕೊಂಡಿದ್ದರು. ಇನಾಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಪಹಣಿ ಕೊಡುವ […]

ಸಿಎಂ ವಿರುದ್ಧ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ಆರ್ ಅಶೋಕ

Monday, June 7th, 2021
R Ashoka

ಬೆಂಗಳೂರು  : ನಿಸ್ಸಂಶಯವಾಗಿ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ಬದಲಾವಣೆ ಕೇವಲ ಊಹಾಪೋಹ. ಈ ವಿಚಾರ ಮುಗಿದು ಹೋಗಿದ್ದು, ಪಕ್ಷದ ನಾಯಕರು ಸಿಎಂ ಬದಲಾವಣೆ ಕುರಿತಂತೆ ಹೇಳಿಕೆಗಳನ್ನ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ ಎಚ್ಚರಿಸಿದರು. ಈ ಕುರಿತಂತೆ ಮಾಹಿತಿ ನೀಡಿದ ಆರ್ ಅಶೋಕ,”ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನ ರಚಿಸಿದ್ದು, ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಮೂವರು […]

ಸಿಎಂ ಬದಲಾವಣೆ ಊಹಾಪೋಹಕ್ಕೆ ಇಂದು ಫುಲ್ ಸ್ಟಾಪ್: ಆರ್ ಅಶೋಕ

Sunday, June 6th, 2021
R Ashoka

ಬೆಂಗಳೂರು : ಇಂದಿಗೂ ಮುಂದೆಯೂ ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ನಾಯಕತ್ವದಲ್ಲೇ ಪಕ್ಷ ಈ ಸಾಧನೆ ಮಾಡಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ ತಿಳಿಸಿದರು. ಸಿಎಂ ಪ್ರತಿಕ್ರಿಯೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪದೇ, ಪದೇ ಸಿಎಂ ಬದಲಾವಣೆ‌ ಎಂಬ ಮಾತುಗಳು ಕೇಳಿ ಬರುತಿರುವುದರಿಂದ ಮುಖ್ಯ ಮಂತ್ರಿಗಳ ಮನಸಿಗೆ ನೋವಾಗಿದೆ. ದೇಶದಲ್ಲೇ ಎಲ್ಲಾ ಸಿಎಂಗಳಿಗಿಂತ ಹೆಚ್ಚು ಕ್ರಿಯಾಶೀಲರಾಗಿ‌ ಜನಪರ‌ ಕಾಳಜಿಯಿಟ್ಟುಕೊಂಡು ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸಿದ್ದಾರೆ. ಹಗಲು ರಾತ್ರಿ ಕೆಲಸ […]

ಪಕ್ಷ ಹಾಗೂ ಸರ್ಕಾರದ ವರ್ಚಸ್ಸು ವೃದ್ಧಿಸಲು ವಿಶೇಷ ಕಾರ್ಯಕ್ರಮ: ಆರ್ ಅಶೋಕ

Friday, June 4th, 2021
R Ashoka

ಬೆಂಗಳೂರು  : ಮುಂಬರುವ ಚುನಾವಣೆಗಳಲ್ಲಿ ಪಕ್ಷ ಹೇಗೆಲ್ಲಾ ಸಿದ್ಧಗೊಳ್ಳಬೇಕು ಮತ್ತು ಅದಕ್ಕಾಗಿ ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಶಾಸಕರನ್ನ ಒಟ್ಟಿಗೆ ತೆಗೆದುಕೊಂಡು ಹೋಗುವ ತುರ್ತು ಅಗತ್ಯವು ಪಕ್ಷದ ಮುಂದಿದ್ದು ಆ ನಿಟ್ಟಿನಲ್ಲಿ ಚರ್ಚೆ ಕೈಗೊಳ್ಳಲಾಯಿತು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. “ಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,”ನಮ್ಮ ಮುಂದೆ ಸಿಂಧಗಿಯ ಉಪ ಚುನಾವಣೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಇದ್ದು, ಆ ನಿಟ್ಟಿನಲ್ಲಿ ಪಕ್ಷವನ್ನ ಬಲ ಪಡಿಸುವ ಹಾಗೂ ಸಂಘಟಿಸುವ ಕುರಿತಂತೆ ಚರ್ಚೆ […]

ವಾಡಿಕೆಯಂತೆ ಶ್ರೀ ವೆಂಕಟೇಶ್ವರಸ್ವಾಮಿ ದರ್ಶನ ಪಡೆದ ಆರ್ ಅಶೋಕ

Thursday, June 3rd, 2021
RAshoka

ಬೆಂಗಳೂರು  : ಅಪರ ಕ್ರಿಯೆ ನಂತರ ಕ್ಷೇತ್ರ ದರ್ಶನ ಮಾಡುವುದು ವಾಡಿಕೆ ಹಿನ್ನೆಲೆಯಲ್ಲಿ ಇಂದು ಕಂದಾಯ ಸಚಿವ ಆರ್ ಅಶೋಕ ನಗರದ ಪುರಾತನ ಕೋಟೆ ಶ್ರೀ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಂತನ ದರ್ಶನ ಪಡೆದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ,”ನಿನ್ನೆ ಕಾರ್ಯ ಮಾಡಿದ ನಂತರ ಎಲ್ಲ ಸತ್ ಸಂಪ್ರದಾಯಗಳನ್ನ ಪಾಲಿಸಿದ್ದೇನೆ. ಅದೇ ರೀತಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದೇನೆ. ಕೋವಿಡ್ ನಿಯಮಾವಳಿಯ ಹಿನ್ನೆಲೆಯಲ್ಲಿ ಹೊರಗಿನಿಂದಲೇ ದರ್ಶನ ಪಡೆದಿದ್ದೇನೆ. ನಿನ್ನೆ 566 ಜನರ […]

ಒಂದೇ ತಿಂಗಳಲ್ಲಿ ಸಕಲ ಸೌಲಭ್ಯಗಳ ಮೇಕ್ ಶಿಫ್ಟ್ ಆಸ್ಪತ್ರೆ ಸಿದ್ಧ

Monday, May 31st, 2021
makeshift

ಬೆಂಗಳೂರು : ಕೋವಿಡ್ ನ ಮೂರನೇ ಅಲೆ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಈ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದು, ಕೇವಲ ಒಂದೇ ತಿಂಗಳ ಅವಧಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸೋಂಕಿತರ ಚಿಕಿತ್ಸೆಗೆ ಸಿದ್ಧಗೊಳ್ಳಲಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್ ಅಶೋಕ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಭಾರತ ಸರ್ಕಾರ, ಅಮೆರಿಕನ್ ಇಂಡಿಯನ್ ಫೌಂಡೇಷನ್ ಮತ್ತು ವಿಶ್ವಸಂಸ್ಥೆಯ ಯು ಎನ್ ಡಿ ಪಿ ಅಡಿಯಲ್ಲಿ ಸುಮಾರು […]

ಕಂದಾಯ ಸಚಿವರಿಂದ ಬೆಂಗಳೂರು ದಕ್ಷಿಣಕ್ಕೆ 1000 ಪಲ್ಸ್ ಆಕ್ಸಿಮೀಟರ್ ವಿತರಣೆ

Tuesday, May 25th, 2021
pulse-oximeters

ಬೆಂಗಳೂರು : ಕಂದಾಯ ಸಚಿವ ಆರ್ ಅಶೋಕ ಅವರು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1000 ಪಲ್ಸ್ ಆಕ್ಸಿಮೀಟರ್ ವಿತರಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವ ಅಶೋಕ,”ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿನ ಒ ಎಸ್ ಎ ಪ್ರತಿಷ್ಠಾನವು ದಾನವಾಗಿ ನೀಡಿರುವ 1000 ಪಲ್ಸ್ ಆಕ್ಸಿಮೀಟರ್ ಗಳನ್ನ ಬೆಂಗಳೂರಿನ ಭಾರತೀಯ ಕೈಗಾರಿಕೆಗಳ ಒಕ್ಕೂಟದ ಮೂಲಕ ಕಂದಾಯ ಇಲಾಖೆಯು ಪಡೆದುಕೊಂಡಿರುತ್ತದೆ. ಈ ಕುರಿತಂತೆ ಬೆಂಗಳೂರು ದಕ್ಷಿಣದ ಆರು ವಿಧಾನಸಭಾ ಕ್ಷೇತ್ರಗಳಲ್ಲಿರುವ ಪ್ರಾಥಮಿಕ ಆರೋಗ್ಯ […]

ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ 100 ಹಾಸಿಗೆ ಮೀಸಲು

Monday, May 24th, 2021
R Ashoka

ಬೆಂಗಳೂರು : ಬ್ಲ್ಯಾಕ್ ಫಂಗಸ್ ಗೆ ತುತ್ತಾದವರಿಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ನೂರು ಹಾಸಿಗೆಗಳನ್ನ ಮೀಸಲಿಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜೊತೆಗೆ ಬ್ಲ್ಯಾಕ್ ಫಂಗಸ್‍ಗೆ ತುತ್ತಾದವರ ಜೊತೆ ವೀಡಿಯೋ ಸಂವಾದದ ಮೂಲಕ ಅವರ ಆರೊಗ್ಯ ವಿಚಾರಿಸಿದರು. ಆ ನಂತರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,” ಮ್ಯೂಕೋರ್ ಮೈಕೊಸಿಸ್ ಕಾಯಿಲೆಗೆ ತುತ್ತಾದವರಿಗೆ ಚಿಕಿತ್ಸೆ ನೀಡಲು ಒಟ್ಟು 200 ಹಾಸಿಗೆಗಳನ್ನ ಮೀಸಲಿಡಲಾಗಿದೆ. ಅದರಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 100 ಹಾಸಿಗೆಗಳನ್ನ […]

ಸೋಂಕಿತರ ಚಿಕಿತ್ಸಾ ಹಂತ ನಿರ್ಧರಿಸಲು ರಕ್ತ ಪರೀಕ್ಷೆ

Monday, May 24th, 2021
corona

ಬೆಂಗಳೂರು : ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿತ್ತಿದೆ. ಈಗಾಗಲೇ ಲಾಕ್ ಡೌನ್ ಮೂಲಕ ಒಂದು ಹಂತದಲ್ಲಿ ಚೈನ್ ಕತ್ತರಿಸುವ ಪ್ರಕ್ರಿಯೆ ಯಶಸ್ವಿಯಾಗಿದ್ದು, ಗ್ರಾಮೀಣ ಭಾಗದಲ್ಲಿಯೂ ಮೊಬೈಲ್ ಕ್ಲಿನಿಕ್, ಮನೆ, ಮನೆಯಲ್ಲಿಯೂ ಲಕ್ಷಣವುಳ್ಳವರ ಕೋವಿಡ್ ಪರೀಕ್ಷೆ ಸೇರಿದಂತೆ ಸೋಂಕಿತರನ್ನ ಗುರುತಿಸಿ ಚಿಕಿತ್ಸೆ ನೀಡುವಲ್ಲಿ ಪರಿಣಾಮಕಾರಿ ಮಾರ್ಗಗಳನ್ನ ಅನುಸರಿಸುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ಭಾಗದಲ್ಲಿ ಮತ್ತೊಂದು ವಿಶಿಷ್ಟ ಮಾರ್ಗ ಅನುಸರಿಸುತ್ತಿದ್ದು, ಆ ಮೂಲಕ ಸೋಂಕಿನ ಪ್ರಭಾವವನ್ನ ನಿರ್ದಿಷ್ಟವಾಗಿ ಗುರುತಿಸುವಲ್ಲಿ […]