Blog Archive

ಎರಡು ಆದೇಶಗಳಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ : ಆರ್.ಅಶೋಕ್

Saturday, October 5th, 2019
R-Ashok

ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ ಆಗಿರುವ ಒಟ್ಟು ಅಂದಾಜು ಹಾನಿ 38,000 ಕೋಟಿ ರೂ. ಆದರೆ ಎನ್‍ಡಿಆರ್‍ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 3,810.80 ಕೋಟಿ ರೂ. ಬರಬೇಕು. ಅದರಲ್ಲಿ ಮೊದಲ ಕಂತು 1,200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಎರಡು ಪ್ರತ್ಯೇಕ ಆದೇಶಗಳಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳುಹಿಸಿದ ಅಂದಾಜು ನಷ್ಟದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ, […]

150ನೇ ಗಾಂಧಿ ಜನ್ಮದಿನಾಚರಣೆ : ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

Wednesday, October 2nd, 2019
BSY

ಬೆಂಗಳೂರು : 150ನೇ ಗಾಂಧಿ ಜಯಂತಿ ಆಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಖ್ಯಸ್ಥಿಕೆಯಲ್ಲಿ ವಿಧಾನಸೌಧ– ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ವಿಶ್ವನಾಥ, ಬಿಬಿಎಂಪಿ ನೂತನ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.  

ತುರ್ತು ಕಾಮಗಾರಿ, ಪರಿಹಾರಕ್ಕಾಗಿ ಹಣ ಬಿಡುಗಡೆ : ಕಂದಾಯ ಸಚಿವ ಆರ್‌.ಅಶೋಕ್‌

Friday, September 6th, 2019
R-Ashok

ಬೆಂಗಳೂರು : ಪ್ರವಾಹ ಹಿನ್ನೆಲೆಯಲ್ಲಿ ಬೆಳಗಾವಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ತುರ್ತು ಕಾಮಗಾರಿ ಹಾಗೂ ಪರಿಹಾರಕ್ಕಾಗಿ ಆಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸ್ಥಾಪಿಸಿರುವ ಗಂಜಿ ಕೇಂದ್ರಗಳನ್ನು ಕಾಳಜಿ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುವುದು. ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 20 ರಿಂದ 30 ಎಕರೆ ಪ್ರದೇಶದಲ್ಲಿ ಸುಸಜ್ಜಿತ […]

ರಾಜ್ಯದ ಜನರ ಮುಲಾಜಿನಲ್ಲಿಲ್ಲ ಎಂದಿರುವ ಸಿಎಂ ಕ್ಷಮೆ ಕೇಳಬೇಕು: ಆರ್.ಅಶೋಕ್

Monday, May 28th, 2018
r-ashok

ಬೆಂಗಳೂರು: ಜೆಡಿಎಸ್ ಶಾಸಕರನ್ನು ಗೆಲ್ಲಿಸಿರುವ 38 ಕ್ಷೇತ್ರದ ಜನ ನಮ್ಮ ರಾಜ್ಯದವರೇ ಹೊರತು ಬೇರೆ ರಾಜ್ಯದವರಲ್ಲ. ಹೀಗಾಗಿ ಸಿಎಂ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆಗ್ರಹಿಸಿದ್ದಾರೆ. ಆರ್‌ಆರ್‌ ನಗರದ ಜಾಲಹಳ್ಳಿ ವಿಲೇಜ್ ಮತಗಟ್ಟೆ 22ರಲ್ಲಿ ಮತದಾನದ ಬಳಿಕ ಮಾತನಾಡಿದ ಅವರು, ನಾನು ರಾಜ್ಯದ ಜನತೆ ಮುಲಾಜಿನಲ್ಲಿ ಇಲ್ಲ ಬದಲಿಗೆ ಕಾಂಗ್ರೆಸ್‌ನ ಮುಲಾಜಿನಲ್ಲಿದ್ದೇನೆ ಎಂಬ ಸಿಎಂ ಹೇಳಿಕೆಗೆ ಅಶೋಕ್ ತಿರುಗೇಟು ನೀಡಿದರು. ನಾನು ಮತದಾನ ಮಾಡಿದ್ದೇನೆ. ಎಲ್ಲರೂ ತಮ್ಮ ಹಕ್ಕನ್ನ ಚಲಾಯಿಸಿ. […]

38 ಸ್ಥಾನ ಗೆದ್ದವರಿಗೇ ಆಸೆ ಇದ್ದಾಗ ಇನ್ನು 104 ಸ್ಥಾನ ಗೆದ್ದ ನಮಗೆ ಆಸೆ ಇರಲ್ವಾ: ಆರ್.ಅಶೋಕ್

Thursday, May 17th, 2018
R-Ashok

ಬೆಂಗಳೂರು: ಕರ್ನಾಟಕದ ಜನತೆ ನಮಗೆ ಹೆಚ್ಚಿನ ಸ್ಥಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿಯೇ ರಾಜ್ಯಪಾಲರು ಸಂವಿಧಾನಬದ್ಧ ಸ್ಥಾನ ನೀಡಿದ್ದಾರೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಅಧಿಕಾರದ ದುರಾಸೆ ಇದೆ. ಈ ದುರಾಸೆಯಿಂದ ಆಡಳಿತ ಮಾಡಲು ಹೊರಟಿದ್ದಾರೆ. ಡಿಪಾಸಿಟ್ ಕಳೆದುಕೊಂಡ ಸಚಿವರು ಕಾಂಗ್ರೆಸ್‌ನಲ್ಲಿದ್ದಾರೆ ಎಂದು ಲೇವಡಿ ಮಾಡಿದರು. 38 ಸ್ಥಾನ ಗೆದ್ದವರಿಗೇ ಆಸೆ ಇದ್ದಾಗ ಇನ್ನು 104 ಸ್ಥಾನ ಗೆದ್ದ ನಮಗೆ ಆಸೆ ಇರಲ್ವಾ ಎಂದು ಪ್ರಶ್ನಿಸಿದರು. ಈ ಮೊದಲು ಅವರು ನಾಯಿ, ನರಿಗಳ ತರಹ ಕಿತ್ತಾಡ್ತಿದ್ರು. […]

ದೀಪಕ್ ರಾವ್ ಹತ್ಯೆ ಖಂಡಿಸಿ ಜ.8ರಂದು ರಾಜ್ಯಾದ್ಯಂತ ಬಿಜೆಪಿ ಧರಣಿ

Saturday, January 6th, 2018
BJP-rally

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಮತ್ತು ಹದಗೆಟ್ಟ ಕಾನೂನು-ಸುವ್ಯವಸ್ಥೆಯನ್ನು ಸುಧಾರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ, ಬೆಂಗಳೂರಿನಲ್ಲಿ ಜ.8ರಂದು ಬಿಜೆಪಿ ವತಿಯಿಂದ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಆಯೋಜನೆಗೊಂಡಿದೆ. ಅಂದು ಪಕ್ಷದ ಮುಖಂಡರು, ಶಾಸಕರು, ಬಿ.ಬಿ.ಎಂ.ಪಿ. ಸದಸ್ಯರು ಮತ್ತು ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ […]

ರಾಜ್ಯ ಸರ್ಕಾರ ದೊಣ್ಣೆ ಕೊಟ್ಟು ಹೊಡೆಸಿಕೊಂಡಿದೆ: ಮಾಜಿ ಡಿಸಿಎಂ ಅಶೋಕ್‌‌‌

Tuesday, September 13th, 2016
r-ashok

ಬೆಂಗಳೂರು: ಕರ್ನಾಟಕದ ಪಾಲಿಗೆ ಈ ತೀರ್ಪು ದೊಡ್ದ ನೋವುಂಟು ಮಾಡಿದೆ. ಇದೊಂದು ಮಾರಣಾಂತಿಕ ತೀರ್ಪು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದೊಣ್ಣೆ ಕೊಟ್ಟು ಹೊಡೆಸಿಕೊಂಡಿದೆ. ಈ ಹಿಂದೆ ನೀಡಿದ ತೀರ್ಪಿನಲ್ಲಿ 15 ಸಾವಿರ ಕ್ಯೂಸೆಕ್‌‌ ನೀರು ಬಿಡಲು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈಗ ಮತ್ತೊಂದು ಅಘಾತ ನೀಡಿದೆ. ಸರ್ಕಾರ ಪ್ರಾರಂಭದಲ್ಲಿ ತಪ್ಪು ಮಾಡಿದೆ. ಇದು ಎರಡನೇ ಮುಖಭಂಗ ಎಂದು ದೂರಿದರು. ಸರ್ಕಾರದ ತಪ್ಪು […]