ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ
Wednesday, September 16th, 2020ಉಡುಪಿ : ಇಲ್ಲಿನ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ. ಸ್ಥಳಕ್ಕೆ ನಗರ ಸಭಾ ಸದಸ್ಯರು ಮತ್ತು ಅಧಿಕಾರಿಗಳು ಬೇಟಿ ನೀಡಿ ದ್ದಾರೆ.