Blog Archive

ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Monday, August 10th, 2020
anush

ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ. […]

ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

Monday, July 27th, 2020
ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗನಿಗೆ ಹಾಲೆರೆಯುವ ಸಂದರ್ಭದಲ್ಲಿ ನಿಜ ನಾಗರ ದರ್ಶನ ನೀಡಿ ಅರ್ಚಕರಿಗೆ ಮತ್ತು ಅಲ್ಲಿ ನೆರೆದಿದ್ದವರಿಗೆ ಆಶ್ಚರ್ಯಮೂಡಿಸಿದೆ. ಮೊದಲಿಗೆ ದೇಗುಲದ ನಾಗಪ್ರತಿಷ್ಟೆ ಮಂಟಪದ ಬಳಿ, ನಂತರ ಅರ್ಚಕರು ನಾಗಮಂಟಪದಲ್ಲಿ ಪೂಜೆ ನಡೆಸುತ್ತಿದ್ದ ವೇಳೆ ಹೊರಾಂಗಣದಲ್ಲಿ ಹಾವು ಪ್ರತ್ಯಕ್ಷವಾಗಿದೆ ಎನ್ನಲಾಗಿದೆ. ನಾಗರಪಂಚಮಿಯನ್ನು ಶನಿವಾರ ಪೂರ್ವ ಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. […]

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ

Friday, July 3rd, 2020
Bihari

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 25 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮದ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಕುಕ್ಕೆ ಸುಬ್ರಹ್ಮಣ್ಯ : 237 ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ವಿತರಣೆ

Saturday, May 16th, 2020
Angara MLA

ಸುಳ್ಯ: ಕುಕ್ಕೆಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಿತ್ಯ ನಡೆಯುತ್ತಿದ್ದ ಸರ್ಪ ಸಂಸ್ಕಾರ ಪೂಜೆ ಕೋವಿಡ್-19 ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡಿತ್ತು.  ಇದರಿಂದಾಗಿ ಕಷ್ಟಕ್ಕೆ ಸಿಲುಕಿರುವ ಕ್ರಿಯಾಕರ್ತರಿಗೆ ಗೌರವ ಧನವನ್ನು ಶಾಸಕ ಎಸ್. ಅಂಗಾರ ಅವರು ಶನಿವಾರ ವಿತರಿಸಿದರು. ಒಟ್ಟು 237 ಮಂದಿ ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ನೀಡಿದರು. ಕ್ರಿಯಾಕರ್ತರ ಪರವಾಗಿ ದೇವಸ್ಥಾನದ ವತಿಯಿಂದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಧನ ಸಹಾಯಕ್ಕೆ ಮನವಿ ಸಲ್ಲಿಸಲಾಗಿತ್ತು. ಧನ ಸಹಾಯ ವಿತರಿಸಿದ ಶಾಸಕ ಎಸ್.ಅಂಗಾರ ಕ್ರಿಯಾಕರ್ತರ […]

ಮುಜುರಾಯಿ ಅರ್ಚಕರ ಮೇಲೆ ಪೋಲೀಸ್ ಹಲ್ಲೆ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಘಟನೆ, ಪೇದೆ ಅಮಾನತು

Sunday, March 29th, 2020
priest

ಸುಳ್ಯ :  ಕುಕ್ಕೆ ಸುಬ್ರಹ್ಮಣ್ಯದ ಅರ್ಚಕ ಶ್ರೀನಿವಾಸ್ ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅರ್ಚಕರನ್ನು ಬೈಯ್ದದಲ್ಲದೆ , ಅರ್ಚಕರು ತಾನು ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ ಇರುವುದಾಗಿ ದೇವಳದ ಕೀಯನ್ನ ತೋರಿಸಿ ಹೇಳಿದರೂ ಬಿಡದ ಈ ಪೋಲೀಸ್ ಸಿಬ್ಬಂದಿ ಅರ್ಚಕರ ಮೇಲೆ ತನ್ನ ಕೈಯಲ್ಲಿದ್ದ ಕೋಲಿನಿಂದ ಬಾಸುಂಡೆ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್.ಕೆ. ಕೃಷ್ಣಮೂರ್ತಿ ನೇಮಕ

Monday, September 30th, 2019
krishnamurthy

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಷನರ್ ಆದ ಹೆಚ್.ಕೆ. ಕೃಷ್ಣಮೂರ್ತಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಕುಕ್ಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ರವೀಂದ್ರ ಅವರಿಗೆ ಈ ಹಿಂದೆಯೇ ವರ್ಗಾವಣೆ ಪ್ರಕ್ರಿಯೆ ಆಗಿದ್ದರೂ, ಇದೀಗ ಆದೇಶ ಜಾರಿಯಾಗಿದೆ. ಹೆಚ್.ಕೆ. ಕೃಷ್ಣಮೂರ್ತಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.    

ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ, ಜೂನ್ 10 ಕ್ಕೆ ಮತ್ತೆ ಸಭೆ

Saturday, June 8th, 2019
Kukke-Math

ಮಂಗಳೂರು : ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂನ್ 7ರ ಸಂಜೆ ಭೇಟಿ ನೀಡಿ ಎರಡೂ ಕಡೆಯಿಂದ ಅಭಿಪ್ರಾಯ ಸಂಗ್ರಹಿಸಿದರೂ ಮತ್ತೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಜೂನ್ 10ರ ಒಳಗೆ ಮತ್ತೊಮ್ಮೆ ಸಭೆ ಕರೆಯಲು ಸ್ವಾಮೀಜಿ ನಿರ್ಧರಿಸಿದ್ದಾರೆ. ದಕ್ಷಿಣ ಭಾರತದ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನದ ನಡುವಿನ ತಿಕ್ಕಾಟ ಮುಂದುವರಿದಿದೆ. ಸರ್ಪ ಸಂಸ್ಕಾರ ವಿಚಾರದಲ್ಲಿ ಹಲವಾರು ವರ್ಷಗಳ ಕಾಲದ ಸಂಘರ್ಷಕ್ಕೆ ಮಂಗಳ ಹಾಡಲು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಹಿರಿಯ ಯತಿ ಪೇಜಾವರ […]

ಚೈತ್ರಾಗೆ ಜಾಮೀನು ಮಂಜೂರು, ನಿಮ್ಮ ನಾಟಕ ಎಲ್ಲ ಬೇಡ ಎಂದ ನ್ಯಾಯಾಧೀಶ

Wednesday, November 7th, 2018
chaitra

ಸುಳ್ಯ: ಸೋಮವಾರ ಬೆಳಗ್ಗೆ ಕೋರ್ಟಿಗೆ ಹಾಜರಾದ ಚೈತ್ರಾ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ಚೈತ್ರಾಳ ಆರೋಗ್ಯ ವಿಚಾರಿಸಿದರು. ಈ ವೇಳೆ ಆಕೆಗೆ ಬುದ್ಧಿವಾದ ಹೇಳಿದ ನ್ಯಾಯಾಧೀಶರು, “ನಿಮ್ಮ ನಾಟಕ ಎಲ್ಲ ಬೇಡ. ಉತ್ತರ ಕನ್ನಡದ ನಾಟಕ ಯಕ್ಷಗಾನ, ತಾಳಮದ್ದಳೆ ಎಲ್ಲವನ್ನು ನಾನು ಕಂಡಿದ್ದೇನೆ. ನ್ಯಾಯಾ ಲಯಕ್ಕೆ ಹಾಜರಾಗುವ ಮೊದಲ ದಿನ ಆರೋಗ್ಯವಾಗಿಯೇ ಇದ್ದ ನಿಮಗೆ ತತ್‌ಕ್ಷಣ ಏನಾಯಿತು? ನಿಯತ್ತಿನಿಂದ ಜಾಮೀನು ಪಡೆಯಲು ಪ್ರಯತ್ನಿಸಿ. ಬದಲಿ ಸುಳ್ಳು ಹೇಳಿ ಆಸ್ಪತ್ರೆ ಸೇರಿಕೊಂಡು ತಪ್ಪಿಸಿಕೊಳ್ಳಬೇಡಿ’ ಎಂದರು. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ […]

ಸರ್ಪ ಸಂಸ್ಕಾರ ವಿಚಾರದಲ್ಲಿ ಹಲ್ಲೆ ಆರೋಪ: ಕುಕ್ಕೆ ಸುಬ್ರಹ್ಮಣ್ಯ ಬಂದ್

Thursday, October 25th, 2018
subramanya

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ವಿಚಾರದಲ್ಲಿ ನಡೆದ ವಾದ ವಿವಾದದಲ್ಲಿ ಚೈತ್ರಾ ಕುಂದಾಪುರ ಮತ್ತು ತಂಡ ನಿನ್ನೆ ಹಿಂದೂ ಜಾಗರಣ ವೇದಿಕೆಯ ಮುಖಂಡನಿಗೆ ನಡೆಸಿದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ ಆಚರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಿನ್ನೆ ಸಂಜೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಮತ್ತು ಇತರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಡೆದಾಟ: ಚೈತ್ರಾ ಕುಂದಾಪುರ ಸಹಿತಾ ಏಳು ಮಂದಿ ಪೊಲೀಸರ ವಶಕ್ಕೆ

Thursday, October 25th, 2018
chaitra-kundapura

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ಪೂಜೆಯೊಂದಕ್ಕೆ ಸಂಬಂಧಪಟ್ಟಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಯೊಂದರ ನಾಯಕಿ ಚೈತ್ರಾ ಕುಂದಾಪುರ ತಂಡದ ನಡುವೆ ನಡೆದ ಘರ್ಷಣೆಯಿಂದ ಓರ್ವ ಗಾಯಗೊಂಡಿದ್ದು, ಚೈತ್ರಾ ಕುಂದಾಪುರ ಸಹಿತಾ ಆಕೆಯ ಬೆಂಬಲಿಗರೆನ್ನಲಾದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂದು ಹೆಸರಿಸಲಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ […]