Blog Archive

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮೈಸೂರು ವಿವಿ ಉಚಿತ ಸೀಟು

Saturday, May 29th, 2021
Hemanth-Kumar

ಮೈಸೂರು: ಕೋವಿಡ್‌-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಕೊರೋನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ವಿದ್ಯಾಭ್ಯಾಸ ಮಾಡಲು ಅಶಕ್ತರಾದವರಿಗೆ ‘ಉಚಿತ ಸೀಟು’ ನೀಡುವ ಮಹತ್ವದ ತೀರ್ಮಾನವನ್ನು ಮೈಸೂರು ವಿಶ್ವವಿದ್ಯಾನಿಲಯ ತೆಗೆದುಕೊಂಡಿದೆ. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು. ಕೋವಿಡ್-19 ವೈರಾಣು 2ನೇ ಆಲೆಯಿಂದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಸಾವು- ನೋವು ಉಂಟಾಗಿ ಅನೇಕರು ತಂದೆ […]

ಕೊರೋನ ಸೋಂಕು ಮೇ 23 : ದ.ಕ. 860 – ಸಾವು 6, ಉಡುಪಿ 909 – ಸಾವು 4, ಕಾಸರಗೋಡು 555

Sunday, May 23rd, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಭಾನುವಾರ 860 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 873 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಭಾನುವಾರ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 861ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,27,671 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,57,332 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 70,339 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 59,084 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,395 […]

ಕಾಂಗ್ರೇಸಿನ ಟೂಲ್ ಕಿಟ್ ಪ್ರಮಾದವನ್ನು ದೇಶ ಎಂದಿಗೂ ಕ್ಷಮಿಸದು – ಶಾಸಕ ಕಾಮತ್

Friday, May 21st, 2021
Vedavyas Kamath

ಮಂಗಳೂರು : ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೇಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೇಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವೇದವ್ಯಾಸ್ ಶಾಸಕ ಕಾಮತ್ ಹೇಳಿದ್ದಾರೆ. ದೇಶವು ಕೋವಿಡ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಕಾಂಗ್ರೇಸ್ ತನ್ನ ಕಾರ್ಯಕರ್ತರಿಗೆ ನೀಡಿರುವ ಟೂಲ್ ಕಿಟ್ ಒಂದು‌ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ದೇಶದ ಹಿತವನ್ನು ಬಲಿಗೊಡಲು ಕಾಂಗ್ರೇಸ್ ಪ್ರಯತ್ನಿಸುತ್ತಿದೆ. ಕಳೆದ 70 ವರ್ಷಗಳ ಕಾಲ ಜನರನ್ನು ವಂಚಿಸಿ ಆಡಳಿತಕ್ಕೆ ಬಂದ […]

ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕಿಂಗ್‌ಪಿನ್‌ ಶಿವಕುಮಾರ್ ಕೋವಿಡ್‌ನಿಂದ ಸಾವು

Wednesday, May 19th, 2021
shivakumar

ತುಮಕೂರು  : ಶಿಕ್ಷಣ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದ ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಶಿವಕುಮಾರ್ ಕೋವಿಡ್‌ನಿಂದ  ಸಾವನ್ನಪ್ಪಿದ್ದಾನೆ. ಶಿವಕುಮಾರ್ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು,  ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಿಸದೆ ಮಂಗಳವಾರ  ಸಾವನ್ನಪ್ಪಿದ್ದಾನೆ. ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಆತನಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಗುಬ್ಬಿ ಪೊಲೀಸ್‌ ಠಾಣೆಯಲ್ಲಿ 2011ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. 2012ರಲ್ಲಿ […]

ಏಳು ತಿಂಗಳ ಗರ್ಭಿಣಿ, ಪ್ರೊಬೇಷನರಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಶಾಮಿಲಿ ಕೋವಿಡ್ ಗೆ ಬಲಿ

Tuesday, May 18th, 2021
Shalini

ಮಂಗಳೂರು : ದಕ್ಷಿಣ ಕನ್ನಡ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ 24 ವರ್ಷದ ಶಾಮಿಲಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋಲಾರ ಮೂಲದ ಶಾಮಿಲಿ ದಕ್ಷಿಣ ಕನ್ನಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದು 7 ತಿಂಗಳ ಗರ್ಭಿಣಿ ಯಾಗಿದ್ದರು. ಅತಿ ಸಣ್ಣ ವಯಸ್ಸಿನ ಶಾಮಿಲಿ ಮಾರಕ ಕೊರೋನಾ ಗೆ ಬಲಿಯಾಗಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಶಾಮಿಲಿ ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಕನ್ನಡ ಸೂಪರಿಂಡೆಂಟ್ ರಿಷಿಕೇಶ್ ಸೋನಾವಾನೆ ಟ್ವೀಟ್ ಮಾಡಿದ್ದಾರೆ. […]

ಕೊರೋನಾ ಅಲೆ ನಿಯಂತ್ರಿಸಲು ಸಾಧ್ಯವಾಗದೇ ಬಿಜೆಪಿ ಪ್ರತಿಪಕ್ಷಗಳನ್ನು ಗುರಿ ಮಾಡಿಕೊಂಡಿದೆ : ರಕ್ಷಾ ರಾಮಯ್ಯ

Saturday, May 15th, 2021
Raksha Ramaiah

ಬೆಂಗಳೂರು : ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ತನ್ನ ಮಾನವೀಯ ಸೇವೆಯಿಂದ ದೇಶ ವಿದೇಶಗಳಲ್ಲಿ ಮೆಚ್ಚುಗೆ ಪಡೆದಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರನ್ನು ಬಿಜೆಪಿ ಸರ್ಕಾರ ದೆಹಲಿ ಪೊಲೀಸರ ಮೂಲಕ ವಿಚಾರಣೆಗೆ ಒಳಪಡಿಸಿರುವುದು ಖಂಡನೀಯ. ಕೇಂದ್ರದ ಧೋರಣೆಯಿಂದ ಭವಿಷ್ಯದಲ್ಲಿ ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವ ಸಮುದಾಯದಲ್ಲಿ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿದಂತಾಗಿದೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಸಾಧ್ಯವಾಗದೇ ಹತಾಶೆಗೆ ಒಳಗಾಗಿರುವ […]

ಸಂಜೆವಾಣಿ ಮಂಗಳೂರಿನ ಬ್ರಾಂಚ್ ಮ್ಯಾನೇಜರ್ ಕೋವಿಡ್ ಗೆ ಬಲಿ

Friday, May 14th, 2021
vijaya Rao

ಮಂಗಳೂರು : ‌ ಸಂಜೆವಾಣಿ ಮಂಗಳೂರಿನ ಬ್ರಾಂಚ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ವಿಜಯ್ ರಾವ್ ಗುರುವಾರ ರಾತ್ರಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ವಿಜಯ್ ರಾವ್ (56) ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಉಸಿರಾಟದ ತೀವ್ರ ಸಮಸ್ಯೆಯಿಂದ ನಿನ್ನೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಕಾರ್ಕಳ ಬೈಲೂರು ನಿವಾಸಿ ಯಾಗಿರುವರ ಇವರು ಮಂಗಳೂರಿನ ಎಕ್ಕೂರು ಸಮೀಪ ನೆಲೆಸಿದ್ದರು. ಮೊದಲಿಗೆ ನೇತ್ರಾವತಿ ವಾರ್ತಾ ಪತ್ರಿಕೆಯಲ್ಲಿ ಮಾರ್ಕೆಟಿಂಗ್ ಹುದ್ದೆಯಲ್ಲಿದ್ದ ಇವರು ಹಲವು ವರ್ಷಗಳ ಕಾಲ ಸಂಜೆವಾಣಿ  ಪತ್ರಿಕೆಯಲ್ಲಿ […]

ಕೋವಿಡ್‌ನಿಂದ ಶ್ರೀನಿವಾಸ ಕಾಲೇಜಿನ ಉಪನ್ಯಾಸಕ ನಿಧನ

Thursday, May 13th, 2021
Deepakraj

ಪುತ್ತೂರು:  ಕೆಮ್ಮಿಂಜೆ ಗ್ರಾಮದ ಬೆದ್ರಾಳ ನಿವಾಸಿ, ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ದೀಪಕ್‌ರಾಜ್ (32) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೋವಿಡ್‌ ತಗುಲಿ ಅಸ್ಪತ್ರೆಗೆ ದಾಖಲಾಗಿದ್ದ ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಪುತ್ರಿ, ತಂದೆ, ತಾಯಿ ಹಾಗೂ ಸಹೋದರನನ್ನು  ಅಗಲಿದ್ದಾರೆ.

ಕೋವಿಡ್ ಎರಡನೇ ಅಲೆಗೆ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಬಲಿ, 10 ಲಕ್ಷ ರೂ. ಪರಿಹಾರ ನೀಡಿದ ಆಡಳಿತ ಮಂಡಳಿ

Thursday, May 13th, 2021
Basavaraj

ಚಿತ್ರದುರ್ಗ: ಕಳೆದ 5 ವರ್ಷಗಳಿಂದ  ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ (43) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಎರಡನೇ ಅಲೆಗೆ ತುತ್ತಾಗಿ ಕಳೆದ ಹದಿನೈದು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತ ಬಸವರಾಜ ಕೋಟಿ ಅವರಿಗೆ ಹತ್ತು ವರ್ಷದ ಓರ್ವ ಪುತ್ರ ಮತ್ತು ಹನ್ನೆರಡು ವರ್ಷದ ಖುಷಿ ಎಂಬ ಇಬ್ಬರು ಮಕ್ಕಳಿದ್ದರು, ಪತ್ನಿಯಾದ ಶಾಂತ ಸೇರಿದಂತೆ ಹೆತ್ತವರು ಹಾಗೂ ಅಪಾರ ಬಂಧಗಳನ್ನು ಅಗಲಿದ್ದಾರೆ. ಮೃತ ಬಸವರಾಜ್ […]

ದ.ಕ. ಜಿಲ್ಲೆಯಲ್ಲಿ ರವಿವಾರ 1,694 ಮಂದಿಗೆ ಕೊರೋನ ಸೋಂಕು ದೃಢ, 2 ಸಾವು, ಉಡುಪಿ ಜಿಲ್ಲೆಯಲ್ಲಿ 692 ಸೋಂಕಿತರು, 5 ಸಾವು,

Sunday, May 9th, 2021
Corona Virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ 1,694 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 854 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರವಿವಾರ 2 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 785ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ 56,376 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 43,034 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಸಿದ 52,519 ಮಂದಿಯಿಂದ 54,86,130 ರೂ. ದಂಡ ವಸೂಲು ಮಾಡಲಾಗಿದೆ. ಸುಳ್ಯ […]