Blog Archive

ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 5 ದಿನ ಧಾರಕಾರ ಮಳೆ‌..ಹವಾಮಾನ ಇಲಾಖೆ ಮುನ್ನೆಚ್ಚರಿಕೆ!

Saturday, August 11th, 2018
mangaluru

ಮಂಗಳೂರು: ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್15 ರವರಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ‌ ತೆರಳುವಂತೆ ಸೂಚನೆ ನೀಡಲಾಗಿದೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಭಾಗದಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳೂ ಸೇರಿದಂತೆ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಈ ಭಾಗದ ಜಲಾಶಯಗಳು […]

ಭೂಮಿ ಒಳಗಿಂದ ಭಾರೀ ಸದ್ದು.. ಆತಂಕಗೊಂಡ ಜನ!

Friday, August 10th, 2018
chikmagaluru

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ‌ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಒಳಗಿಂದ ಬಂದ ಭಾರೀ ಸದ್ದು ಕೇಳಿ ಆತಂಕಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದೆರಡು ತಿಂಗಳಿಂದ ಆಗಾಗ ಇಂತಹ ಅನುಭವ ಆಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಶಬ್ದದಿಂದ ಮನೆಯಲ್ಲಿನ ಪಾತ್ರೆಗಳು, ಗೃಹಪಯೋಗಿ ವಸ್ತುಗಳು ಕೆಳಗೆ‌ ಬೀಳುತ್ತಿವೆ. ಒಂದೆಡೆ ಮಳೆ, ಮತ್ತೊಂದೆಡೆ ಭೂಮಿಯೊಳಗಿಂದ ಬರುತ್ತಿರುವ ಸದ್ದಿನಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದಿದ್ದ ಇಂಜಿನಿಯರ್..ಶವವಾಗಿ ಪತ್ತೆ!

Thursday, August 9th, 2018
engineer

ಚಿಕ್ಕಮಗಳೂರು: ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದಿದ್ದ ಇಂಜಿನಿಯರ್ವೋರ್ವರು 15 ದಿನಗಳ ಬಳಿಕ ಶವವಾಗಿ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದಾರೆ. ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುವಾಗ ಕಾಲು ಜಾರಿ ಕಿರಣ್ ನದಿಗೆ ಬಿದ್ದಿದ್ದರು. ಇಂದು ಮಾಗುಂಡಿ ಸಮೀಪದಲ್ಲಿರುವ ಭದ್ರಾ ನದಿಯಲ್ಲಿ ಕಿರಣ್ ಮೃತದೇಹ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆ‌ ಸುರಿಯುತ್ತಿರುವ ಹಿನ್ನಲೆ ಭದ್ರಾ ನದಿಯಲ್ಲಿ ‌ಕಿರಣ್ ಮೃತ ದೇಹ ತೇಲಿ ಬಂದಿದೆ. ಭದ್ರಾನದಿಯಲ್ಲಿ ಸೆಲ್ಫಿ ಸಾವು ಪ್ರಕರಣ… ಇನ್ನೂ ಪತ್ತೆಯಾಗದ ಪ್ರವಾಸಿಯ ದೇಹ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ […]

ವೀಲ್ ಚೇರ್ ಸಿಗದೇ ರೋಗಿಯನ್ನು ಕೈಯಲ್ಲಿಯೇ ಹೊತ್ತು ನಿಂತ ಅಮಾನವೀಯ ಘಟನೆ..!

Tuesday, July 24th, 2018
chikmagaluru

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಡ ರೋಗಿಗಳು ಪರದಾಟ ಪಡುತ್ತಿದ್ದು ವೀಲ್ ಚೇರ್ ಸಿಗದೇ ರೋಗಿಯನ್ನು ಕೈಯಲ್ಲಿಯೇ ಹೊತ್ತು ನಿಂತ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ನರಳಾಡುತ್ತಿದ್ದ ವೃದ್ಧೆಯನ್ನು ವೀಲ್ ಚೇರ್ ಸಿಗದೇ ಕೈಯಲ್ಲಿಯೇ ಎತ್ತಿಕೊಂಡು ಡಾಕ್ಟರ್ ಬಳಿ ಸಂಬಂಧಿಕರು ಕರೆದುಕೊಂಡು ಬಂದಿದ್ದಾರೆ. ಸುಮಾರು 10 ನಿಮಿಷಗಳ ಕಾಲ ವೃದ್ಧೆಯನ್ನು ಎತ್ತಿಕೊಂಡೇ ನಿಂತಿದ್ದಾರೆ. ವೀಲ್ ಚೇರ್ ಇದ್ದರೂ ರೋಗಿಗಳಿಗೆ ವೀಲ್ ಚೇರ್ ನೀಡದೇ ಸಿಬ್ಬಂದಿಗಳು ಸತಾಯಿಸುತ್ತಿದ್ದಾರೆ,ಲಂಚ […]

ಮನೆ ಮೇಲೆ ಬಿದ್ದ ಕಾರು… ಮನೆ, ಕಾರು ಜಖಂ!

Saturday, July 21st, 2018
car-fell-down

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರೊಂದು ರಸ್ತೆಯ ಕೆಲಭಾಗದಲ್ಲಿದ್ದ ಮನೆ ಮೇಲೆ ಬಿದ್ದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದ ಹಳುವಳ್ಳಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿ ಪ್ರವಾಸಿಗರಿದ್ದು ಮಾರುತಿ ಕಾರು ಸಂಪೂರ್ಣ ಜಖಂ ಆಗಿದೆ. ಕಾರು ಹೊರನಾಡು ದೇವಸ್ಥಾನದಿಂದ ಬರುವ ವೇಳೆಯಲ್ಲಿ ಈ ಅವಘಡ ಜರುಗಿದೆ. ಕಾರಿನಲ್ಲಿದ್ದ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಾಳಾಗಿದ್ದು, ಗಾಯಾಳುಗಳಿಗೆ ಕಳಸ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳೀಯರ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದ್ದು, ಕಳಸ ಪೋಲಿಸರು ಸ್ಥಳಕ್ಕೆ ಆಗಮಿಸಿ […]

ಕಳೆದ 9 ದಿನಗಳಿಂದ ವರುಣನ ಅಬ್ಬರ..ಮಲೆನಾಡು ತತ್ತರ!

Saturday, July 14th, 2018
chik-magaluru

ಚಿಕ್ಕಮಗಳೂರು: ಸರಿ ಸುಮಾರು ಒಂದು ತಿಂಗಳು, ಅದ್ರಲ್ಲೂ ಕಳೆದ 9 ದಿನಗಳಿಂದ ಮಲೆನಾಡಲ್ಲಿ ಸೂರ್ಯನ ಕಿರಣಗಳು ನೆಲಕ್ಕೆ ಬೀಳದಂತೆ ಮೋಡಗಟ್ಟಿ ಸುರಿಯುತ್ತಿರುವ ವರುಣನ ಅಬ್ಬರಕ್ಕೆ ಅಕ್ಷರಶಃ ಮಲೆನಾಡು ತತ್ತರಿಸಿ ಹೋಗಿದೆ. ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಮಕ್ಕಳ ಆಟದ ಮೈದಾನವಾಗಿದ್ದ ಕೆರೆ, ಹಳ್ಳ-ಕೊಳ್ಳ, ನದಿಗಳೆಲ್ಲಾ ಮೈದುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹೌದು, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿಯಲ್ಲಿ ಸುರಿಯುತ್ತಿರೋ ಮಹಾಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇತ್ತ ಮಲೆನಾಡಿನಾದ್ಯಂತ ಅಸಂಖ್ಯಾತ ಕೃತಕ ಫಾಲ್ಸ್ಗಳು ಜನ್ಮತಾಳಿವೆ. ಗುಡ್ಡದಿಂದ ಹರಿಯೋ ನೀರು ಒಂದೆಡೆ […]

ಮುಂದುವರೆದ ಧಾರಾಕಾರ ಮಳೆ..ಇಂದು ಕೂಡಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Friday, July 13th, 2018
chikk-magaluru

ಚಿಕ್ಕಮಗಳೂರು: ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮೂರು ತಾಲೂಕು ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ಇಂದು ಕೂಡಾ ರಜೆ ಘೋಷಿಸಲಾಗಿದೆ. ಶೃಂಗೇರಿ, ಕೊಪ್ಪ, ಕಳಸ, ಕುದುರೆಮುಖ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ನಿವಾಸಿಗಳು ಆತಂಕದಲ್ಲಿ ಬದುಕುವಂತಾಗಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ […]

ಕಳೆದ ಮೂರು ದಿನಗಳಿಂದ ಭಾರಿ ಮಳೆ..ಶಾಲೆಗಳಿಗೆ ರಜೆ ಘೋಷಣೆ!

Wednesday, July 11th, 2018
heavy-rain

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆ ಕಳೆದ ರಾತ್ರಿಯಿಂದ ಮತ್ತೆ ಮುಂದುವರೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕಳಸ, ಬಾಳೆಹೊನ್ನೂರಿನಲ್ಲಿ ಇಡೀ ರಾತ್ರಿ ಮಳೆಯಾಗಿದೆ. ಶೃಂಗೇರಿಯಲ್ಲಿ ಕಳೆದ ಮೂರು ದಿನಗಳಿಂದಲೂ ಅಧಿಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಶೃಂಗೇರಿ ತಾಲೂಕಿನ ನದಿಪಾತ್ರ, ತಗ್ಗುಪ್ರದೇಶ ಹಾಗೂ ಪ್ರವಾಹ ಪೀಡಿತ ಪ್ರದೇಶದ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನ ಬಿಇಒ ಉಮೇಶ್ ಶಾಲೆಯ ಆಡಳಿತ ಮಂಡಳಿಗೆ ವಹಿಸಿದ್ದಾರೆ. ಉಳಿದಂತೆ ಕೊಪ್ಪ, ಎನ್.ಆರ್.ಪುರದಲ್ಲೂ ಮಳೆಯಾಗುತ್ತಿದ್ದು, ಬಿಟ್ಟು-ಬಿಟ್ಟು ಸುರಿಯುತ್ತಿರುವ […]

ಜಿಲ್ಲೆಯಲ್ಲಿ ಮಳೆ ಅವಾಂತರ..ಕೊಟ್ಟಿಗೆಯ ಗೋಡೆ ಕುಸಿದು ಮಹಿಳೆ ಬಲಿ!

Tuesday, July 10th, 2018
chikmagaluru

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಅವಾಂತರ ಸೃಷ್ಠಿ ಮಾಡಿದೆ. ರಾತ್ರಿ ಸುರಿದ ಭಾರೀ ಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕೊಟ್ಟಿಗೆಯ ಗೋಡೆ ಕುಸಿದು ಮಹಿಳೆ ಅಸುನೀಗಿದ್ದಾರೆ. ವನಜಾ (48) ಮೃತ ಮಹಿಳೆ. ಮಳೆಯಿಂದ ಕೊಟ್ಟಿಗೆಯ ಗೋಡೆ ಸಂಪೂರ್ಣ ಶಿಥಿಲಗೊಂಡಿತ್ತು ಎನ್ನಲಾಗಿದೆ. ಇದನ್ನು ಅರಿಯದ ಮಹಿಳೆ ಹಸು ಕಟ್ಟಿ ಹಾಕಲು ಕೊಟ್ಟಿಗೆಗೆ ತೆಗರಳಿದ್ದಾರೆ. ಈ ವೇಳೆ ಗೋಡೆ ಕುಸಿದು ಮೃತರಾಗಿದ್ದಾರೆ. ಇನ್ನು ಕೊಪ್ಪ ತಾಲೂಕಿನಲ್ಲೂ ಕೂಡ ವರುಣ ತನ್ನ ಆರ್ಭಟ ಮುಂದುವರೆಸಿದ್ದಾನೆ. ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ದೇವರಮನೆ ಗ್ರಾಮದಲ್ಲಿನ ರಘು […]

ಧಾರಾಕಾರ ಮಳೆ..ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ..!

Monday, July 9th, 2018
huge-rock

ಚಿಕ್ಕಮಗಳೂರು : ಧಾರಾಕಾರ ಮಳೆಗೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿದಿದ್ದು, ಭಾರಿ ಗಾತ್ರದ ಬಂಡೆ ರಸ್ತೆಗುರುಳಿದೆ. ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಈಗಾಗಲೇ ನಾಲ್ಕು ಕಡೆ ಗುಡ್ಡ ಕುಸಿದಿದೆ. ಮಣ್ಣು ಕುಸಿಯುತ್ತಿರುವ ಪರಿಣಾಮ ವಾಹನ ಸಂಚಾರಕ್ಕೆ ಚಾಲಕರು ಭಯ ಪಡುತ್ತಿದ್ದು, ಪ್ರವಾಸಿಗರು ಆತಂಕದಲ್ಲೇ ಸಂಚರಿಸುವಂತಾಗಿದೆ. ನಿರಂತರ ಮಳೆ ರಭಸಕ್ಕೆ ಗಿರಿಯ ಎತ್ತರದಿಂದ ಬಂಡೆ ಕಲ್ಲುಗಳು ಉರುಳಿ ಬೀಳುತ್ತಿರುವುದು ಕಂಡು ಬಂದಿದೆ. ಕೇರಳ ಮೂಲದ ಮಿನಿ ಬಸ್ವೊಂದು ಚಲಿಸುತ್ತಿರುವ ಸಂದರ್ಭದಲ್ಲಿ ಬಸ್ ಮುಂಭಾಗಕ್ಕೆ ಬಂಡೆ ಬಿದ್ದಿದ್ದು, ಭಾರಿ ಅನಾಹುತದಿಂದ […]