Blog Archive

ವಿದ್ಯಾರ್ಥಿನಿಯರಿಗೆ ಉಚಿತ ಕಾಲೇಜು ಶಿಕ್ಷಣ.

Wednesday, February 26th, 2014
R.V-Deshpande

ಬೆಳ್ತಂಗಡಿ: ಉಜಿರೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಉದ್ಘಾಟಿಸಿದರು. ಧರ್ಮಸ್ಥಳದ ಧಮರ್ಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಮಂಗಳೂರು ವಿ.ವಿ. ಕುಲಪತಿ ಡಾ. ಟಿ.ಸಿ. ಶಿವಶಂಕರಮೂರ್ತಿ, ಪ್ರೊ.ಎಸ್. ಪ್ರಭಾಕರ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಯೋಗಾನಂದ ಉಪಸ್ಥಿತರಿದ್ದರು. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಮತ್ತು […]

ಮೇ 2ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

Tuesday, February 18th, 2014
Virender-Hegde

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಮೇ 2ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವರದಕ್ಷಿಣೆ, ವಿವಾಹಕ್ಕಾಗುವ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದು, ಪ್ರತಿವರ್ಷ ಸಾಮೂಹಿಕ ವಿವಾಹ ಏರ್ಪಡಿಸಲಾಗುತ್ತದೆ. ಕಳೆದ ವರ್ಷದವರೆಗೆ ಧರ್ಮಸ್ಥಳದಲ್ಲಿ 11,465 ಜೋಡಿ ಸಾಮೂಹಿಕ ವಿವಾಹವಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಕೊಡಲಾಗುವುದು. ವಿವಾಹವಾಗಲು ಇಚ್ಚಿಸುವವರು ಏ.28ರೊಳಗೆ ಧರ್ಮಸ್ಥಳದ ವಿವಾಹ ನೋಂದಣಿ ಕಚೇರಿಯಲ್ಲಿ ಹೆಸರು ದಾಖಲಿಸಲು […]

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರಿಂದ ಮೂರು ಸ್ವರ್ಣ ಶಿಖರಗಳ ಸಮರ್ಪಣೆ

Monday, January 7th, 2013
Vittal Panchalingeshwara Temple

ಮಂಗಳೂರು : ರವಿವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಕ್ಷೇತ್ರದಿಂದ 1.2 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಸ್ವರ್ಣ ಶಿಖರಗಳ ಸಮರ್ಪಣಾ ಸಮಾರಂಭವು ಏರ್ಪಟ್ಟಿದ್ದು ಇದರ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಸಮಾರಂಭವನ್ನು ಕುರಿತಂತೆ ಮಾತನಾಡಿದ ಅವರು ದೇವಾಲಯಗಳ ಮೂಲರೂಪ ಮತ್ತು ಅವುಗಳ ಸಂರಕ್ಷಣೆ ದೊಡ್ಡ ಕಾರ್ಯವಾಗಿದ್ದು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮೂಲ ಸ್ವರೂಪದಲ್ಲೇ ನಿರ್ಮಾಣವಾಗಿರುವುದು ನಿಜಕ್ಕೂ ಅದ್ಭುತ. ಪರಂಪರೆ ರೂಪ ಉಳಿಸಿಕೊಂಡು ಪುನರ್‌ನವೀಕರಣ ನಡೆಯಬೇಕು. ವಿಟ್ಲ […]

“ಭಾರತದಲ್ಲಿ ಧರ್ಮದ ಪುನರ್‌ಚಿಂತನೆ” ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ

Wednesday, November 28th, 2012
Re Thinking religion in Ind

ಮಂಗಳೂರು :ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ‘ಭಾರತದಲ್ಲಿ ಧರ್ಮದ ಪುನರ್‌ಚಿಂತನೆ’ ಎಂಬ ವಿಷಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ದಿನವಾದ ಮಂಗಳವಾರ ಬೆಳಗ್ಗೆ ‘ಲೀಗಲ್‌ ಓಪಸ್‌ ಮತ್ತು ಪರ್ಲ್ಸ್‌ ಆಫ್‌ ವಿಸ್ಡಮ್‌ ಜರ್ನಲ್‌’ ಪುಸ್ತಕವನ್ನು ಡಾ| ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಧರ್ಮದ ಹೆಸರಿನಲ್ಲಿ ಪರಸ್ಪರ ದ್ವೇಷ ಅಸೂಯೆಗಳು ಮೂಡಿ ಯುದ್ಧಕ್ಕೆ ಕಾರಣವಾದ ಉದಾಹರಣೆಗಳಿವೆ. ಈ ನೆಲೆಯಲ್ಲಿ ಧರ್ಮದ ಕುರಿತು ಆಳವಾದ ಅಧ್ಯಯನ ನಡೆಯುವ ಅನಿವಾರ್ಯತೆ ಇದೆ. ಪ್ರತಿಯೊಂದು […]

ಪುತ್ತೂರು :ಕೃಷಿ ಯಂತ್ರಮೇಳ 2012 ರ ಉದ್ಘಾಟನಾ ಸಮಾರಂಭ

Saturday, November 3rd, 2012
Krushi Yantra Mela

ಪುತ್ತೂರು: ಪ್ರತಿಷ್ಠಿತ ಸಹಕಾರ ಸಂಸ್ಥೆ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಶುಕ್ರವಾರದಿಂದ ರವಿವಾರ ತನಕ ವಿವೇಕಾನಂದ ತಾಂತ್ರಿಕ ಮಹಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕೃಷಿ ಯಂತ್ರಮೇಳ -2012 ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಸಾರ್ವಜನಿಕ ರಂಗದಲ್ಲಿ ವಿಶೇಷವಾದ ಸಾಧನೆ ಮಾಡಿದ ಕ್ಷೇತ್ರವಾಗಿದ್ದು ಕೃಷಿ ರಂಗಕ್ಕೆ ಅಗತ್ಯವಾದ ಆಧುನಿಕತೆಯನ್ನು ಪರಿಚಯಿಸುವಲ್ಲಿ ಐಟಿ ಕ್ಷೇತ್ರದ […]

ಧರ್ಮಸ್ಥಳದಲ್ಲಿ 13ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉದ್ಘಾಟನೆ

Tuesday, September 13th, 2011
Darmasthala Bajana Kammata

ಬೆಳ್ತಂಗಡಿ :  ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ 13ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉದ್ಘಾಟನಾ ಸಮಾರಂಭವನ್ನು ಸೋಮವಾರ ಹೇಮಾವತಿ ವೀ. ಹೆಗ್ಗಡೆ ಅವರು ಉದ್ಘಾಟಿಸಿದರು. ಕಮ್ಮಟ ಉದ್ಘಾಟಿಸಿದ ಹೇಮಾವತಿ ವೀ. ಹೆಗ್ಗಡೆ ಅವರು, ಭಗವಂತನ ಜತೆ ಸಂವಾದ ನಡೆಸುವ, ಭಗವಂತನನ್ನು ಒಲಿಸಿಕೊಳ್ಳುವ ಯತ್ನ ಭಜನೆ. ನಮ್ಮ ಧ್ವನಿಯನ್ನು ವಿಶ್ವದ ಧ್ವನಿ ಜತೆಗೆ ಸೇರಿಸುವ ಭಜನೆಯಿಂದ ಸಾಮಾಜಿಕ ಅಂತಸ್ತು, ಮೇಲು ಕೀಳೆಂಬ ಭಾವ ಮರೆಸಿ ಸಾಮಾಜಿಕ ಧ್ವನಿಯಾಗುತ್ತದೆ ಎಂದರು. ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ […]

ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಂಡರೆ ಅಭಿವೃದ್ಧಿ ಸಾಧಿಸಲು ಸಾಧ್ಯ: ಹೆಗ್ಗಡೆ

Sunday, August 21st, 2011
D Veerendrahegde/ಡಾ| ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ವಶಿಕ್ಷಣ ಅಭಿಯಾನದ ಆಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರಿಯಾಶೀಲ ಆಡಳಿತ ಕುರಿತ ಶೈಕ್ಷಣಿಕ ಸಮಾವೇಶ ಹಾಗೂ ಮಾಹಿತಿ ಕಾರ್ಯಾಗಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಬಳಿಕ ದೇಶ ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿದ ಕ್ರಾಂತಿ ದೇಶದ ಒಟ್ಟು ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿದೆ ಸುಮಾರು 40 ವರ್ಷಗಳ […]

ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಪುರಭವನದಲ್ಲಿ ಸಿಂಹಗಳ ನಡುವೆ ಕನ್ನಡದ ಕಲರವ

Friday, December 17th, 2010
ಸಿಂಹಗಳ ನಡುವೆ ಕನ್ನಡದ ಕಲರವ

ಮಂಗಳೂರು : ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಇಂದು  ಬೆಳಗ್ಗೆ ಸಿಂಹಗಳ ನಡುವೆ ಕನ್ನಡದ ಕಲರವ ಎನ್ನುವ ಶೀರ್ಷಿಕೆಯಡಿ ಲಯನ್ಸ್ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವು    ನಡೆಯಿತು.    ಸಮ್ಮೇಳನಾಧ್ಯಕ್ಷರನ್ನು ಹಾಗೂ ಉದ್ಘಾಟಕರನ್ನೂ ಮೆರವಣಿಗೆ ಮೂಲಕ ಪುರಭವನಕ್ಕೆ ಕರೆ ತರಲಾಯಿತು. ಬಳಿಕ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಲಯನ್ಸ್ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.  ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯನ್ನು ಹಿರಿಯ  ಸಾಹಿತಿ ಹೆಚ್.ದುಂಡಿರಾಜ್ ಅವರು ವಹಿಸಿದ್ದರು. ಉದ್ಘಾಟನೆ ಬಳಿಕ […]

ಸ್ಥಳೀಯ ಆದ್ಯತೆ ಗಮನದಲ್ಲಿರಿಸಿ ಕಾರ್ಯಕ್ರಮ ರೂಪಿಸಿ-ಸುಭೋದ್ ಯಾದವ್

Saturday, November 13th, 2010
DC Subhod Yadav

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಕಲೆ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಸ್ಥಳೀಯರ ಅಭಿರುಚಿಯನ್ನು ಗಮನದಲ್ಲಿರಿಸಿ ಉತ್ಸವ ಅಚರಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  ಡಿಸೆಂಬರ್ 22 ರಿಂದ ಉತ್ಸವ ಆಚರಿಸಲು ಸಕಲ ಸಿದ್ಧತೆಗಳು ನಡೆಸಿರುವ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಕರಾವಳಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ್ ಯಾದವ್ ಅವರು ಪರಿಶೀಲಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಈ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಬಾರಿಯ ಕರಾವಳಿ […]