Blog Archive

ಅತ್ತು ಕರೆದರೂ ಶಾಸಕ ಬಾವಾ ಪರಿಹಾರದ ಚೆಕ್ ತಿರಸ್ಕರಿಸಿದ ದೀಪಕ್ ರಾವ್ ತಾಯಿ

Saturday, January 6th, 2018
MLA-Bava

ಮಂಗಳೂರು: ತಮ್ಮ ವೈಯಕ್ತಿಕ ನೆಲೆಯಲ್ಲಿ ದೀಪಕ್ ರಾವ್ ಕುಟಂಬಕ್ಕೆ ಪರಿಹಾರದ ಚೆಕ್ ನೀಡಲು ಹೋದ ಸ್ಥಳೀಯ ಶಾಸಕ ಶಾಸಕ ಮೋಯ್ದೀನ್ ಬಾವಾ ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಾತ್ರವಲ್ಲ ದೀಪಕ್ ರಾವ್ ಕಟುಂಬ ಬಾವಾ ಅವರ ಚೆಕ್ ಸ್ಥೀಕರಿಸಲು ನಿರಾಕರಿಸಿ ವಾಪಸ್ ಕಳುಹಿಸಿದೆ. ಸುರತ್ಕಲ್ ನ ಕಾಟಿಪಳ್ಳದಲ್ಲಿ ಬರ್ಬರವಾಗಿ ಹತ್ಯೆಗೊಳಗಾದ ದೀಪಕ್ ರಾವ್ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮೊಯ್ದಿನ್ ಬಾವಾ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಘೋಷಿಸಿದ್ದರು. ಈ […]

ಟಾರ್ಗೆಟ್‌ ಗುಂಪಿನ ಇಲ್ಯಾಸ್‌ ಜತೆಗಿರುವ ಫೋಟೊ ವೈರಲ್‌… ಸಚಿವ ಖಾದರ್‌ ಸ್ಪಷ್ಟನೆ ಏನು?

Friday, January 5th, 2018
U-T-Kader

ಮಂಗಳೂರು: ಕೆಲವರು ನನ್ನನ್ನು ಜೈಲಿಗೆ ಕಳುಹಿಸಲು ಮುಂದಾಗಿದ್ದರು. ಆದರೆ, ಕ್ಷೇತ್ರದ ಜನತೆ ನನ್ನನ್ನು ವಿಧಾನಸೌಧಕ್ಕೆ ಕಳುಹಿಸಿದರು ಎಂದು ಆಹಾರ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ. ಟಾರ್ಗೆಟ್ ಗುಂಪಿನ ಸದಸ್ಯ ಇಲ್ಯಾಸ್ ಜತೆ ತಾನು ಊಟ ಮಾಡುತ್ತಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕುರಿತು ಮತ್ತು ಸುರತ್ಕಲ್‌ನಲ್ಲಿ ನಡೆದ ದೀಪಕ್ ರಾವ್ ಪ್ರಕರಣ ಹಿನ್ನೆಲೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ ರಾಜಕೀಯ ತೇಜೋವಧೆ ಮಾಡುವ ಕೆಲಸ ಬಹಳ ಹಿಂದಿನಿಂದಲೇ ನಡೆಯುತ್ತಿದೆ. ನಾನು ಶಾಸಕನಾಗುವ ಮೊದಲು ನನ್ನ […]

ದೀಪಕ್ ರಾವ್ ಹತ್ಯೆ ಹಿಂದೆ ಬಿಜೆಪಿ ಕೈವಾಡ: ಶಾಸಕ ಮೊಯ್ದಿನ್ ಬಾವಾ ಆರೋಪ

Friday, January 5th, 2018
MLA-Bava

ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆಯ ಹಿಂದೆ ಬಿಜೆಪಿಯ ರಾಜಕೀಯ ಉದ್ದೇಶವಿದೆ ಎಂದು ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವಾ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಯನ್ನು ಕೋರಲಾಗಿದೆ ಎಂದು ಹೇಳಿದರು. ದೀಪಕ್ ರಾವ್ ಹತ್ಯೆ ಆರೋಪಿಗಳಾದ ಪಿಂಕಿ ನವಾಜ್‍ನ ಸಹೋದರ ಲಾದನ್ ಇಸ್ಮಾಯಿಲ್ ಹಾಗೂ ಆತನ ಅಕ್ಕನ ಗಂಡ (ಬಾವ) ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹತ್ಯೆಯ ಹಿಂದೆ ಇರಬಹುದಾದ ಬಿಜೆಪಿಯ […]

ಕರಾವಳಿಯಲ್ಲಿ ಮತ್ತೆ ರಕ್ತಪಾತ: ಸಹನೆಯ ಕಟ್ಟೆಯೊಡೆದ ಆಕ್ರೋಶ

Thursday, January 4th, 2018
strike

ಮಂಗಳೂರು: ಮಂಗಳೂರು ಹೊರವಲಯದ ಕಾಟಿಪಳ್ಳ ಬಳಿ ಬರ್ಬರವಾಗಿ ಕೊಲೆಯಾದ ಭಜರಂಗ ದಳ ಕಾರ್ಯಕರ್ತ ದೀಪಕ್ ರಾವ್(32) ಹತ್ಯೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ ವ್ಯಕ್ತವಾಗಿದೆ. ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕಾಟಿಪಳ್ಳದ ಬಳಿ ಬೈಕಿನಲ್ಲಿ ಹೋಗುತ್ತಿದ್ದ ಅವರನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದರು. ಇತ್ತೀಚೆಗಷ್ಟೇ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯಿಂದ ಪ್ರಕ್ಷುಬ್ಧವಾಗಿದ್ದ ಕರಾವಳಿ, ಮತ್ತೊಮ್ಮೆ ಅಶಾಂತಿಯಲ್ಲಿ ಬೇಯುತ್ತಿದೆ. ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ ಮೃತ ದೀಪಕ್ ಶವದೆದುರು ಅವರ ಕುಟುಂಬಸ್ತರು ಮುಗಿಲುಮುಟ್ಟುವಂತೆ […]

ದೀಪಕ್ ರಾವ್ ಕೊಲೆ ಪ್ರಕರಣ: ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ

Thursday, January 4th, 2018
ramanath

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೃತ ದಿಪಕ್ ರಾವ್ ಅವರ ಶವಯಾತ್ರೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ಮುಂಚೆಯೂ ಮೆರವಣಿಗೆಗಳು ನಡೆದ ಸಂದರ್ಭದಲ್ಲಿ ಘರ್ಷಣೆಗಳಾಗಿರುವ ಉದಾಹರಣೆಗಳು ಜಿಲ್ಲೆಯಲ್ಲಿ ಇವೆ ಹಾಗಾಗಿ ಪೊಲೀಸರು ಶವ ಯಾತ್ರೆಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದರು. ದೀಪಕ್ ಮೃತ ದೇಹ ಗೌಪ್ಯವಾಗಿ ಮನೆಗೆ ಶಿಫ್ಟ್, ಶವಯಾತ್ರೆಗೆ ಬಿಗಿಪಟ್ಟು ಮಾಧ್ಯಮದ ಪೋನ್ ಇನ್ ನಲ್ಲಿ ಎದುರುಬದುರಾದ ಸಚಿವ ರಮಾನಾಥ […]

ಮುಸ್ಲಿಂ ತುಷ್ಠೀಕರಣ ನೀತಿಯಿಂದ ಹಿಂದೂಗಳ ಹತ್ಯೆ ಹೆಚ್ಚುತ್ತಿದೆ: ಸಂಸದ ನಳಿನ್‌ ಆರೋಪ

Thursday, January 4th, 2018
Nalin-kumar

ಮಂಗಳೂರು: ರಾಜ್ಯ ಸರ್ಕಾರದ ಮುಸ್ಲಿಂ ತುಷ್ಠೀಕರಣ ನೀತಿಯಿಂದ ಹಿಂದೂಗಳ ಹತ್ಯೆ ಹೆಚ್ಚುತ್ತಿದೆ. ಇದೀಗ ಕಾಟಿಪಳ್ಳದಲ್ಲಿ ದೀಪು ಯಾನೆ ದೀಪಕ್‌ ರಾವ್‌‌ ಹತ್ಯೆ ಕೂಡಾ ನಡೆದಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ದಿಲ್ಲಿಯಲ್ಲಿ ಸಂಸತ್‌‌ ಅಧಿವೇಶನದಲ್ಲಿರುವ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ನಡೆದ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸದೆ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದಲೇ ಕೊಲೆಗಳು ಹೆಚ್ಚುತ್ತಿದೆ. ಸರ್ಕಾರದ ನಿರ್ಲಕ್ಷ್ಯ ಹಾಗೂ ಮುಸ್ಲಿಂ ತುಷ್ಠೀಕರಣದಿಂದ ಮತ್ತೊಂದು ಹೆಣ ಉರುಳಿದೆ. […]

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

Thursday, January 4th, 2018
T-R-Suresh

ಮಂಗಳೂರು: ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ದೀಪಕ್ ರಾವ್ ಬರ್ಬರ ಹತ್ಯೆ ನಡೆದ ಬಳಿಕ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ಸಂಭವಿಸಲು ಆರಂಭವಾದ ಹಿನ್ನಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತಗೆ ಕ್ರಮಕೈಗೊಳ್ಳಲಾಗಿದೆ. ಮಂಗಳೂರಿಗೆ ಎಡಿಜಿಪಿ ಕಮಲ್‌ ಪಂತ್ ದೌಡು, ಬಿಗಿ ಬಂದೋಬಸ್ತ್ ಮಂಗಳೂರು ನಗರವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35 ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜನವರಿ 3 ರಾತ್ರಿ 10 ಗಂಟೆಯಿಂದ ಜನವರಿ 4 […]

ಮಂಗಳೂರಿನಲ್ಲಿ ಮತ್ತೆ ರಕ್ತಪಾತ… ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ

Wednesday, January 3rd, 2018
mangaluru

ಮಂಗಳೂರು: ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತನೋರ್ವನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆಗೈದು ಪರಾರಿಯಾದ ಘಟನೆ ಇಲ್ಲಿನ ಕಾಟಿಪಳ್ಳದಲ್ಲಿ ನಡೆದಿದೆ. ದೀಪಕ್ ರಾವ್ (28) ಕೊಲೆಗೀಡಾದ ಕಾರ್ಯಕರ್ತ. ಮೊಬೈಲ್‌ ಕಂಪೆನಿಯೊಂದರ ಎಕ್ಸಿಕ್ಯೂಟಿವ್‌ ಆಗಿದ್ದ ದೀಪಕ್‌ ರಾವ್, ಎಂದಿನಂತೆ ಕಲೆಕ್ಷನ್‌ ಆಗಿದ್ದ ದಿನದ ಹಣವನ್ನು ತನ್ನ ಕಚೇರಿಗೆ ಸಲ್ಲಿಸಿ ಬೈಕ್‌ನಲ್ಲಿ ಬರುತ್ತಿದ್ದ. ಆಗ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬೈಕ್‌ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಿಂದ ದೀಪಕ್ ರಾವ್ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ದೀಪಕ್ ಅವಿವಾಹಿತರಾಗಿದ್ದು, ತಾಯಿ […]