ದೀಪಗಳ ಹಬ್ಬ ದೀಪಾವಳಿಯಲ್ಲಿ ಕತ್ತಲು ಬದುಕಿಗೆ ಬೆಳಕು ಮೂಡಲಿ
Tuesday, November 13th, 2012ಮಂಗಳೂರು :ಹಬ್ಬ ಎಂದಾಕ್ಷಣ ಮುಖ್ಯವಾಗಿ ನೆನಪಿಗೆ ಬರುವುದೇ ದೀಪಾವಳಿ. ಬಹುಶಃ ಪಟಾಕಿ ಸಿಡಿಸಲು ಅವಕಾಶವಿದೆ ಎಂಬ ಕಾರಣಕ್ಕೆ ಬಾಲ್ಯದಿಂದಲೂ ಮಕ್ಕಳಿಗೆ ಅತ್ಯಂತ ಪ್ರಿಯವಾಗಿ ಬಿಟ್ಟಿರುವುದೇ ಮನದಂಗಳದಲ್ಲಿ ಈ ಮನಸ್ಥಿತಿ ಚಿರಸ್ಥಾಯಿಯಾಗಲು ಕಾರಣವೂ ಇರಬಹುದು. ಸಮಾಜದ ಎಲ್ಲ ವರ್ಗದವರೂ, ಜಾತಿ-ಸಮುದಾಯದವರೂ ಭೇದ-ಭಾವ ಮರೆತು ಭ್ರಾತೃತ್ವ, ಸೌಹಾರ್ದತೆಯ ಪ್ರತೀಕವಾಗಿ ಆಚರಿಸುವ ಹಬ್ಬಗಳಲ್ಲಿ ಅತ್ಯಂತ ಪ್ರಮುಖವಾದದ್ದು ಕೂಡ ದೀಪಾವಳಿಯೇ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಸಂದೇಶವನ್ನು ಸಾರುತ್ತದೆ. ಅದೇ ರೀತಿ ದೀಪಾವಳಿ ಕೂಡ ಅಜ್ಞಾನದ ಕತ್ತಲನ್ನು ಹೋಗಲಾಡಿಸಿಕೊಳ್ಳುವ ಮನಸ್ಸು ಬೆಳೆಸಿಕೊಳ್ಳಬೇಕೆಂಬ ಸಂದೇಶ […]