Blog Archive

ದ.ಕ. ಜಿಲ್ಲೆಯಲ್ಲಿ ಹೊಸದಾಗಿ 12 ಮಂದಿಗೆ ಕೊರೋನ ದೃಢ

Wednesday, June 24th, 2020
DK-corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ  ಹೊಸದಾಗಿ 12 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇವರಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ಸೈ ಕೂಡ ಸೇರಿದ್ದಾರೆ. ಇದೇ ಮೊದಲ ಬಾರಿಗೆ ಒಂದೇ ದಿನ 45 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಉಳ್ಳಾಲ ಪೊಲೀಸ್ ಠಾಣಾ ಎಸ್‌ಐ ಸೇರಿದಂತೆ 12 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ. ಬುಧವಾರ ದೃಢಪಟ್ಟ ಪ್ರಕರಣಗಳ ಪೈಕಿ ನಾಲ್ಕು ಮಂದಿ (29 ವರ್ಷದ ಯುವಕ, 25, 51, 24 ವರ್ಷದ ಮಹಿಳೆಯರು) […]

ಕೋವಿಡ್-19 ಪಾಸಿಟಿವ್ : ಸೋಮವಾರ ಉಡುಪಿ ಜಿಲ್ಲೆಯಲ್ಲಿ- 45, ದ.ಕ. ಜಿಲ್ಲೆಯಲ್ಲಿ-3 ಪ್ರಕರಣಗಳು

Monday, June 8th, 2020
corona

ಉಡುಪಿ: ಜಿಲ್ಲೆಯಲ್ಲಿ ಸೋಮವಾರ  45 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 947ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಜನರಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿತ್ತು. ಉಡುಪಿ ಜಿಲ್ಲೆಗೆ ಎಂಟು ಸಾವಿರಕ್ಕೂ ಹೆಚ್ಚು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದ್ದರು. ಇವರಲ್ಲಿ ಬಹುತೇಕ ಗಂಟಲು ದ್ರವ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈ ಸೇರಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಲಿದೆ ಎನ್ನಲಾಗಿದೆ. ಜಿಲ್ಲೆಯ ಇಂದಿನ ಎಲ್ಲಾ 44 ಪ್ರಕರಣಗಳು ಮಹಾರಾಷ್ಟ್ರದಿಂದ […]

ಮಂಗಳವಾರ ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಿಲ್ಲ,113 ಮಂದಿಯ ವರದಿಗಳು ನೆಗೆಟಿವ್

Tuesday, June 2nd, 2020
no-corona

ಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಮಂಗಳವಾರ ಲಭ್ಯವಾದ ಎಲ್ಲಾ 113 ಮಂದಿಯ ವರದಿಗಳು ನೆಗೆಟಿವ್ ಆಗಿದೆ. ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲಾಡಳಿತ ಸೋಂಕಿನ ಮೂಲ ಪತ್ತೆ ಹಚ್ಚಿದೆ.

ದ.ಕ. ಜಿಲ್ಲೆಯಲ್ಲಿ ರವಿವಾರದಂದು 14 ಮಂದಿಯಲ್ಲಿ ಕೊರೊನಾ ಪತ್ತೆ, ಒಂದೇ ದಿನ 12 ಮಂದಿ ಬಿಡುಗಡೆ

Sunday, May 31st, 2020
Dk corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಜೊತೆಗೆ  ಒಂದೇ ದಿನ 12 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸೋಂಕಿತರ ಪೈಕಿ 9 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಒಬ್ಬರು ದುಬೈನಿಂದ ಬಂದಿದ್ದು, ಮತ್ತೊಬ್ಬರು ಮಲೇಶ್ಯಾದಿಂದ ಮರಳಿದವರಾಗಿದ್ದಾರೆ. ಇನ್ನು ಮೂರು ಮಂದಿ ಮಹಾರಾಷ್ಟ್ರದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ. 3 ಹಾಗೂ 11 ವರ್ಷದ ಬಾಲಕಿಯರು, 71 ಹಾಗೂ 76 ವರ್ಷದ ವ್ಯಕ್ತಿಗಳು ಕೂಡ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನುಳಿದಂತೆ 69, 41, 36 ವರ್ಷದ […]

ಮೇ 17 ರವರೆಗೆ ದ.ಕ. ಜಿಲ್ಲೆಯಾದ್ಯಂತ ರಾತ್ರಿ ನಿಷೇಧಾಜ್ಞೆ

Thursday, May 7th, 2020
Sindhu-roopesh

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿರುತ್ತಾರೆ.

ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

Wednesday, May 6th, 2020
ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

ಮಂಗಳೂರು : ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಸದ್ಯ 13 ಸಕ್ರಿಯಕೊರೊನಾ ಪ್ರಕರಣಗಗಳಿವೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ ಇಬ್ಬರಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢಪಟ್ಟಿದೆ. ಬಂಟ್ವಾಳದ ಪಿ – 360 ರ ಸಂಪರ್ಕದಲ್ಲಿದ್ದ ಮೃತ ಮಹಿಳೆಯ 16 ವರ್ಷದ ಮಗಳಿಗೂ […]

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

Thursday, April 30th, 2020
kasaba death

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದೆ. ಬುಧವಾರದಂದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ಮಹಿಳೆ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಮಹಿಳೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ದ.ಕ. ಜಿಲ್ಲಾಡಳಿತ ಮಾಹಿತಿ ನೀಡಿದೆ. ಬಂಟ್ವಾಳ ಕಸಬಾ  ನಿವಾಸಿಗಳು ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. […]

ದ.ಕ. ಜಿಲ್ಲೆಯಲ್ಲಿ ಮೇ 3 ರವರೆಗೆ ಲಾಕ್ ಡೌನ್ ಯಥಾ ಸ್ಥಿತಿಯಲ್ಲಿ ಮುಂದುವರಿಕೆ

Thursday, April 23rd, 2020
Kota Poojary

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮೇ 3 ರವರೆಗೆ ಹಾಲಿ‌ ನಿರ್ಬಂಧಗಳನ್ನು ಯಥಾ ಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಲಾಕ್ ಡೌನ್ ಸಡಿಲಿಕೆ ಇಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಇಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅಂಗಡಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿ ಬೆಳಿಗ್ಗೆ 7 ರಿಂದ 12 ರವರೆಗೆ ತೆರೆಯಲಿವೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಸಂಬಂಧಿಸಿದಂತೆ ಬುಧವಾರದಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ […]

ದ.ಕ.ಜಿಲ್ಲೆ ಕೊರೋನ ಹಾಟ್‌ಸ್ಪಾಟ್ ಆಗಿರುವುದರಿಂದ ಸಡಿಲಿಕೆ ಇಲ್ಲ

Thursday, April 23rd, 2020
srinivaspoojary

ಮಂಗಳೂರು : ದ.ಕ.ಜಿಲ್ಲೆ ಕೊರೋನ ಹಾಟ್‌ಸ್ಪಾಟ್ ಆಗಿರುವುದರಿಂದ ಯಾವ ರೀತಿ ಮುಂದಿನ ಹೆಜ್ಜೆ ಇರಿಸಬೇಕು ಎಂಬ ಬಗ್ಗೆ ಇಲ್ಲಿಯ ತನಕ ನಿರ್ಧಾರ ಕೈಗೊಳ್ಳಲಾಗಿಲ್ಲ.  ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ರಾಜ್ಯ ಸರಕಾರ ಹೊಸ ನಿರ್ದೇಶನಗಳನ್ನು ನೀಡಿದೆ. ಎಪ್ರಿಲ್ 23ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಹದಿನಾರು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಕಂಟೈನ್ಮೆಂಟ್ ವಾರ್ಡ್ ಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ […]

ದ.ಕ. ಜಿಲ್ಲೆಯ ಮೊದಲ ಕೊರೊನಾ ಪ್ರಕರಣದ ಯುವಕ, ಡಿಸ್ಚಾರ್ಜ್ ಆಗಿ ಮನೆಗೆ  

Monday, April 6th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಕರೋನಾ ಪ್ರಕರಣ ವರದಿಯಾಗಿದ್ದ ಭಟ್ಕಳದ ಯುವಕ ಸಂಪೂರ್ಣಗುಣಮುಖನಾಗಿ ಸೋಮವಾರ ಮುಂಜಾನೆ ತನ್ನ ಊರಿಗೆ ತೆರಳಿದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಈ ಯುವಕನು ಮಾರ್ಚ್ 19 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದನು. ಅಲ್ಲಿತಪಾಸಣೆ ಸಂದರ್ಭರೋಗ ಲಕ್ಷಣಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿಅಲ್ಲಿಂದಲೇ ಆಂಬುಲೆನ್ಸ್  ನಲ್ಲಿ  ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿ, ಮಾ.22 ರಂದು ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಬಳಿಕ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ಮಾಡಿ […]