Blog Archive

ಬಿಜೆಪಿ ಪಕ್ಷ ಸೇರ್ಪಡೆಗೆ 15 ರಿಂದ 20 ಕಾಂಗ್ರೆಸ್ ಶಾಸಕರು ಸಿದ್ಧರಿದ್ದಾರೆ : ನಳಿನ್ ಕುಮಾರ್ ಕಟೀಲ್

Wednesday, February 17th, 2021
nalin-kumar

ಮಂಗಳೂರು  : ಬಿಜೆಪಿ ಪಕ್ಷ ಸೇರ್ಪಡೆಗೆ 15 ರಿಂದ 20 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದು ಸದ್ಯ ಸರಕಾರಕ್ಕೆ ಯಾವುದೇ ಧಕ್ಕೆ ಇಲ್ಲದ ಕಾರಣ ಅವರ ಸಂಪರ್ಕ ಮಾತ್ರ ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಸಚಿವ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್ ಐದಾರು ಶಾಸಕರು ರಾಜೀನಾಮೆ ಕೊಡಿಸುವ ಬಗ್ಗೆ ಮಾತನಾಡಿದ್ದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಹೇಳಿದ್ದು ಕೇವಲ 4-5 ಶಾಸಕರನ್ನು ರಾಜೀನಾಮೆ ಕೊಡಿಸುವ ಶಕ್ತಿಯಿದೆ […]

ಸುರತ್ಕಲ್ ಟೋಲ್ ಗೇಟ್ ಶೀಘ್ರದಲ್ಲೇ ತೆರವು

Thursday, February 11th, 2021
tollgate

ಮಂಗಳೂರು : ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ.ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಇಂದು ರಾಜ್ಯದ ಸಂಸದರ ಸಭೆ ಮಾನ್ಯ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ಶ್ರೀ. ನಿತಿನ್ ಗಡ್ಕರಿಯವರ ನಿವಾಸದಲ್ಲಿ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ರಾಜ್ಯದ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮುಖ್ಯವಾಗಿ ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವುದರ ಬಗ್ಗೆ ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸಿದರು. ರಾಷ್ಟ್ರೀಯ ಹೆದ್ದಾರಿ 169 […]

ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಯತ್ನ, ಹಲವರ ಬಂಧನ

Saturday, December 26th, 2020
pfi

ಮಂಗಳೂರು : ಸಿಎಫ್ಐ ಕಾರ್ಯಕರ್ತರು‌ ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ಡಿಸಿ‌ ಕಚೇರಿಯ ‌ಮುಂದೆ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ‌ಘೋಷಣೆ‌ ಕೂಗಿದರು.‌ ಅಲ್ಲದೆ ಡಿಸಿ ಕಚೇರಿ ದಾಟಿ ಸಂಸದರ ಕಚೇರಿಗೆ ಮುತ್ತಿಗೆ‌ ಹಾಕಲು ಯತ್ನಿಸಿದರು. ಈ ವೇಳೆ‌ ಪೊಲೀಸರು ಪ್ರತಿಭಟನಾಕಾರರ ಪೈಕಿ‌ ನಾಯಕರು‌ ಹಾಗೂ ಹಲವು ಕಾರ್ಯಕರ್ತರನ್ನು‌ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ […]

ಕಾಂಗ್ರೆಸ್ ಮುಖಂಡ ಮಾಧವ ಮಾವೆ ಹಾಗೂ ಪತ್ನಿ ಬಿಜೆಪಿಗೆ ಸೇರ್ಪಡೆ

Saturday, December 19th, 2020
Madhava Mave

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿದ್ದ ಮಾಧವ ಮಾವೆ ಹಾಗೂ ಪತ್ನಿ ಜಿಪಂ ಸದಸ್ಯೆ ಮಂಜುಳಾ ಮಾಧವ ಮಾವೆ, ಸೇರಿದಂತೆ ಹಲವಾರು ಮಂದಿ ಕಾರ್ಯಕರ್ತರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಲ್ಲರಿಗೂ ಬಿಜೆಪಿ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿಗೆ ಸೇರ್ಪಡೆಯಾಗಿರುವ ಮಾಧವ ಮಾವೆ ಮಾತನಾಡಿ, ಕಟೀಲ್ ಅವರು ಯಾವಾಗಲೂ ಬೆನ್ನುತಟ್ಟಿ ಬಿಜೆಪಿಗೆ ಬರಬೇಕೆಂದು ಆಹ್ವಾನ ನೀಡುತ್ತಿದ್ದರು‌. ಅವರ ಕೈಯ ಸ್ಪರ್ಶ ದಿಂದ  ಇಂದು ನಾವು […]

ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದ ಶಾಸಕ ಕಾಮತ್

Tuesday, December 8th, 2020
vedavyas kamath

ಮಂಗಳೂರು : ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ತಮ್ಮ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜನ್ಮದಿನವನ್ನು ಬಡ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಆಚರಿಸಿಕೊಂಡಿದ್ದಾರೆ. ಮರೋಳಿಯ ಗೀತಾ ಎಂಬವರ ಮನೆಗೆ ವಿದ್ಯುತ್ ಸಂಪರ್ಕವಿಲ್ಲದೆ ಚಿಮಿಣಿ ಹಾಗೂ ಕ್ಯಾಂಡಲ್ ಮೂಲಕ ಬದುಕು ಸಾಗಿಸುತ್ತಿದ್ದರು. ಈ ವಿಚಾರವಾಗಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಶಾಸಕರ ಗಮನಕ್ಕೆ ತಂದು ವಿದ್ಯುತ್ ಸಂಪರ್ಕ ಒದಗಿಸುವಂತೆ ಕೋರಿದ್ದರು. ತಕ್ಷಣವೇ ಸ್ಪಂದಿಸಿದ ವೇದವ್ಯಾಸ್ ಕಾಮತ್ ಅವರು ಸಂಪರ್ಕ ಒದಗಿಸಲು […]

ಆದಾಯ ತೆರಿಗೆ ಕಚೇರಿ ಮಂಗಳೂರಿನಿಂದ ತೆರವುಗೊಳಿಸದಂತೆ ನಿರ್ಮಲಾ ಸೀತಾರಾಮನ್ ಗೆ ಮನವಿ

Sunday, September 6th, 2020
nalinKumar

ಮಂಗಳೂರು: ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಗೋವಾದೊಂದಿಗೆ ವಿಲೀನ ಮಾಡದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಆಡಳಿತ) ಕಚೇರಿಯನ್ನು ಗೋವಾದ ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯೊಂದಿಗೆ ವಿಲೀನಗೊಳಿಸಲಾಗುತ್ತಿರುವ ವಿಷಯವು ಕರಾವಳಿ ಕರ್ನಾಟಕದ ಉದ್ಯಮಿಗಳಲ್ಲಿ ಹಾಗೂ ವೃತ್ತಿಪರ ಚಾರ್ಟರ್ಡ್ ಅಕೌಂಟೆಂಟ್ ಗಳಲ್ಲಿ ಸಂಪೂರ್ಣ ಅಸಮಾಧಾನವನ್ನುಂಟು ಮಾಡಿದ್ದು, ಆದಾಯ ತೆರಿಗೆ ಪ್ರಧಾನ […]

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ : ನಳಿನ್ ಕುಮಾರ್ ಕಟೀಲ್

Saturday, September 5th, 2020
Nalin Kumar

ಮಂಗಳೂರು : ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಸಂಸದ  ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ ಎಂದು  ಅವರು ಹೇಳಿದ್ದಾರೆ ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು […]

39.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಗುರುಪುರ ಸೇತುವೆ ಉದ್ಘಾಟನೆ

Friday, June 12th, 2020
gurupura bridge

ಮಂಗಳೂರು:  ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಜೂ. 12 ರ ಶುಕ್ರವಾರ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಮಂಗಳೂರು ಉತ್ತರ ಶಾಸಕ ಡಾ.ಭಾರತ್ ವೈ ಶೆಟ್ಟಿ  ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ  “175 ಮೀಟರ್ ಗುರುಪುರ ಸೇತುವೆಯನ್ನು ಪೂರ್ಣಗೊಳಿಸಲು ಟೆಂಡರ್ ಪ್ರಕಾರ ಎರಡು ವರ್ಷಗಳ ಗಡುವು ನೀಡಲಾಗಿದ್ದರೂ 16 […]

ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾದ ಗುರುಪುರ ಹೊಸ ಸೇತುವೆ

Saturday, June 6th, 2020
gurupura-bridge

ಮಂಗಳೂರು : ಮಂಗಳೂರಿನಿಂದ ಮೂಡಬಿದ್ರೆ ಮೂಲಕ ಕಾರ್ಕಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುರುಪುರ ನದಿಗೆ ಸುಮಾರು 39.4 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಎರಡೂ ಕಡೆ ಸೇತುವೆಯ ಅಗಲ 16 ಮೀ. ಸೇತುವೆ ರಸ್ತೆ ಅಗಲ 11 ಮೀ., ಕಾಲುದಾರಿ ಅಗಲ 2.50 ಮೀ., ಫೈಲ್‌ ಫೌಂಡೇಶನ್‌, ಮೇಲ್ಕಟ್ಟಡಕ್ಕೆ ಪಿಎಸ್‌ಸಿ ಗರ್ಡರ್‌ ಬೀಮ್‌ ಮತ್ತು ಸ್ಪ್ಯಾಬ್‌, ಎರಡೂ ಕಡೆ ತಲಾ 500 ಮೀ. ಉದ್ದದ ಸಂಪರ್ಕ ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದೆ. […]

ಕೂಳೂರು ಹಳೇ ಸೇತುವೆ ದುರಸ್ತಿ ಬಳಿಕ ಉದ್ಘಾಟನೆ, ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ : ನಳಿನ್

Wednesday, May 20th, 2020
kulooru-bridge

ಕೂಳೂರು:  ನೂತನ ತಂತ್ರಜ್ಞಾನದೊಂದಿಗೆ ಕೂಳೂರು ಹಳೇ ಸೇತುವೆ ದುರಸ್ತಿಯಾಗಿದ್ದು ಬುಧವಾರ ಸಾಂಕೇತಿಕವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ಇದನ್ನು 38ಲಕ್ಷ ರೂ.ವೆಚ್ಚದಲ್ಲಿ ದುರಸ್ತಿ ಗೊಳಿಸಲಾಗಿದ್ದು ಈ ಸೇತುವೆ ಜೀರ್ಣಾವಸ್ಥೆಯಲ್ಲಿತ್ತು.ಇದನ್ನು ದುರಸ್ತಿ ಮಾಡದೆ ನೂತನ ಸೇತುವೆ ನಿರ್ಮಾಣಕ್ಕಿಳಿದರೆ ವಾಹನ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇದನ್ನು ದುರಸ್ತಿ ಗೊಳಿಸಲಾಗಿದೆ, ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಗುರುಪುರ ಸೇತುವೆ ಕುರಿತಂತೆ ಉತ್ತರಿಸಿದ ಅವರು ಸೇತುವೆ ಕೆಲಸ […]