Blog Archive

ಕನ್ನಡಿಗರಿಗೇ ಕನ್ನಡ ಬಾಷೆಯ ಮೇಲೆ ಅಭಿಮಾನ ಇಲ್ಲ !

Thursday, December 4th, 2014
Kannada

ಮಂಗಳೂರು : ಕರ್ನಾಟಕ ರಾಜ್ಯ ಸರಕಾರ ಭ್ರಮೆಯಲ್ಲಿ ಇದೆಯೋ ಅಥವಾ ವಾಸ್ತವಿಕತೆಯನ್ನು ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿದೆಯೋ ಗೊತ್ತಾಗುತ್ತಿಲ್ಲ. ಇಲ್ಲದೇ ಹೋದರೆ 1994 ರಿಂದ ಬಂದ ಅಷ್ಟೂ ಸರಕಾರಗಳು ತಮ್ಮ ಜೋಳಿಗೆಯಲ್ಲಿದ್ದ ಭಾಷಾ ನೀತಿಯನ್ನು ನ್ಯಾಯಾಲಯದ ಅಂಗಳದಲ್ಲಿ ಬಿಚ್ಚಿಟ್ಟು ಖುಷಿ ನೋಡುತ್ತಿರಲಿಲ್ಲ. ಪ್ರತಿ ಸಾರಿ ನ್ಯಾಯಾಲಯದಿಂದ ಪೆಟ್ಟು ತಿಂದರೂ ಮತ್ತೇ ಮತ್ತೇ ಮೇಲ್ಮನವಿಯನ್ನು ಸಲ್ಲಿಸುವುದರ ಮೂಲಕ ಭಾಷಾ ನೀತಿಯನ್ನು ಗಾಳಿಗೆ ಬಿಟ್ಟ ಅಪವಾದದಿಂದ ದೂರ ಉಳಿಯುವ ಯತ್ನ ಮಾಡುತ್ತಿದೆ. ಆದರೆ ಈ ಬಾರಿ ರಾಜ್ಯ ಸರಕಾರಕ್ಕೆ ಅಂತಹ ಅವಕಾಶ ಸಿಗುವ […]

ಉಡುಪಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Tuesday, July 30th, 2013
udupi rape accused

ಉಡುಪಿ : ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಯೋಗೇಶ, ಹರಿಪ್ರಸಾದ್ ಮತ್ತು ಆನಂದನನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರಿಗೆ ನ್ಯಾಯಾಧೀಶರು ಆಗಸ್ಟ್ 12 ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ. ಈ ಮೂವರೂ ಆರೋಪಿಗಳನ್ನು  ಜುಲೈ 15 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ನ್ಯಾಯಾಧೀಶರ ತೀರ್ಪಿನಂತೆ ಜುಲೈ 29 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು . ಕಾನೂನಿನಂತೆ ಆರೋಪಿಗಳನ್ನು ಪ್ರತೀ 15 ದಿವಸಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ನ್ಯಾಯಾಧೀಶರು ಸೂಚಿಸುತ್ತಾರೆ. ಅವರನ್ನು ಇಂದು ಈ […]

ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದ ಆರೋಪಿ ಯೋಗೀಶ್ ಡಿಸ್ಚಾರ್ಜ್, ಬಂಧನ

Thursday, July 11th, 2013
Yogish Manipal

ಉಡುಪಿ : ಜೂನ್ 20ರ ರಾತ್ರಿ ಮಣಿಪಾಲದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ನನ್ನು ಮಣಿಪಾಲ ಪೋಲೀಸರು ಗುರುವಾರ ಬಂಧಿಸಿದ್ದಾರೆ.  ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಯೋಗೀಶ್ ಡಿಸ್ಚಾರ್ಜ್ ಆದಾಗ ಪೋಲೀಸರು ಬಂಧಿಸಿದರು. ಯೋಗೀಶ್ ನನ್ನು ಇಂದು ಸಂಜೆ 4 ಗಂಟೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಜೂನ್ 27ರಂದು ಐಜಿಪಿ ಪ್ರತಾಪ್ ರೆಡ್ಡಿ ಅವರಿಗೆ ಕರೆ ಮಾಡಿದ್ದ ಯೋಗೀಶ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಣಿಪಾಲ […]

ಮಣಿಪಾಲ ಅತ್ಯಾಚಾರದ ಆರೋಪಿಗಳ ಡಿಎನ್ಎ ಪರೀಕ್ಷೆಗೆ ನ್ಯಾಯಾಲಯದ ಅನುಮತಿ

Monday, July 1st, 2013
Hariprasad and Anand,

ಉಡುಪಿ: ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರದ ಆರೋಪಿಗಳಾದ  ಹರಿಪ್ರಸಾದ್ ಮತ್ತು ಆನಂದನನ್ನು ಸೋಮವಾರ ಉಡುಪಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ಐದು ದಿನ ನ್ಯಾಯಾಂಗ ಬಂಧನ  ವಿಧಿಸಿದೆ ಹಾಗೂ ಇಬ್ಬರ ಡಿಎನ್ ಎ ಪರೀಕ್ಷೆಗೆ ಅನುಮತಿ ನೀಡಿದೆ. ಅತ್ಯಾಚಾರದ ಆರೋಪಿ ಆನಂದ ಬಂಧನಕ್ಕೆ ಮೊದಲು ಆತ್ಮಹತ್ಯಗೆ ಯತ್ನಿಸಿದ್ದರಿಂದ ಮಣಿಪಾಲದ ಕೆ.ಎಂಸಿ ಆಸ್ಪತ್ರೆಗೆ ದಾಖಲು ಪಡಿಸಲಾಗಿತ್ತು.  ಆತ ನಿನ್ನೆ ಬಿಡುಗಡೆಗೊಂಡಿದ್ದರಿಂದ, ಪೊಲೀಸರು ಅಧಿಕೃತವಾಗಿ ಮತ್ತೊಮ್ಮೆ ಬಂಧಿಸಿದರು. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಮಗನಿಗೆ ಬಾಯಿಮುಚ್ಚಿ ಕುಳಿತು ಕೊಳ್ಳಲು ಆದೇಶ ನೀಡಿದ : ದೇವೇಗೌಡ

Friday, September 2nd, 2011
Devegowda/ಎಚ್.ಡಿ.ದೇವೇಗೌಡ

ಬೆಂಗಳೂರು : ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರನ್ನು ಟೀಕಿಸುವ ಮೂಲಕ ಸಾರ್ವಜನಿಕವಾಗಿ ಮುಜುಗರಕ್ಕೆ ಗುರಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಇನ್ನು ಮುಂದಾದರೂ ಬಾಯಿ ಬಿಡದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಪಕ್ಷದ ನಾಯಕರು ತಾಕೀತು ಮಾಡಿದ್ದಾರೆ. ಲೋಕಾಯುಕ್ತ ವರದಿಯ ಕುರಿತು ನ್ಯಾಯಾಲಯದಲ್ಲಿಯೇ ಹೋರಾಟ ಮಾಡಬೇಕಾದ ಸಂದರ್ಭದಲ್ಲಿ ಆ ವರದಿಯನ್ನೇ ಸಂಶಯ ಪಡುವ ರೀತಿಯಲ್ಲಿ ಹೆಗ್ಡೆ ಅವರ ಬಗ್ಗೆ ಹೇಳಿಕೆ ನೀಡಬಾರದಿತ್ತು. ಒಮ್ಮೆ ದೇವೇಗೌಡರು ಕ್ಷಮೆಯಾಚಿಸಿದ ನಂತರ ಮತ್ತೊಮ್ಮೆ ಟೀಕೆ ಮಾಡುವಂತಹ ಅಗತ್ಯವಿರಲಿಲ್ಲ ಎಂದು ಸ್ವತಃ ದೇವೇಗೌಡ, […]

ಜನರಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸಿ ಜಾಗೃತಿ ಮೂಡಿಸಬೇಕು

Saturday, April 30th, 2011
ನ್ಯಾಯಾಲಯ ಹಾಗೂ ನ್ಯಾಯಾಂಗ ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ

ಮಂಗಳೂರು : ತನ್ನ ಸುತ್ತ ನಡೆಯುತ್ತಿರುವ  ಅನ್ಯಾಯ ಶೋಷಣೆ,ಭ್ರಷ್ಠಾಚಾರ,ಕೊಲೆಸುಲಿಗೆಗಳು ನಿಲ್ಲಬೇಕಾದರೆ ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಬೇಕು.ಆಗ ಮಾತ್ರ ಭ್ರಷ್ಠಾಚಾರಿಗಳು,ಸ್ವಜನ ಪಕ್ಷಪಾತಿಗಳು,ಕೊಲೆಗಡುಕರು ಮುಂತಾದವರು ಸಮಾಜದಿಂದ ದೂರ ಹೋಗುತ್ತಾರೆ.ಇದರಿಂದ ಸಮಾಜದಲ್ಲಿ ನೆಮ್ಮದಿ ಶಾಂತಿ ಸೌಹಾರ್ಧತೆ ಮೂಡಿ ಜನರ ಜೀವನ ಸುಖಮಯವೂ,ಪ್ರಗತಿದಾಯಕವೂ ಆಗಿರುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶ್ರೀ ಎಚ್.ಎನ್.ನಾಗಮೋಹನದಾಸ್ ಅವರು ತಿಳಿಸಿದ್ದಾರೆ. ಅವರು ಇಂದು ಮೂಡಬಿದ್ರೆಯಲ್ಲಿ ರೂ.4ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಿಕದಂಡಾಧಿಕಾರಿಗಳ ನ್ಯಾಯಾಲಯ ಹಾಗೂ […]

ಲೋಕಾಯುಕ್ತ ಪೊಲೀಸರಿಂದ ಸಿ.ಎಂ. ಕುಟುಂಬದ ಭೂ ಹಗರಣ ತನಿಖೆ ಆರಂಭ

Thursday, March 24th, 2011
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೂಹಗರಣಗಳ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಪೊಲೀಸರಿಗೆ ಗುರುವಾರ ಮಹತ್ವದ ಆದೇಶ ನೀಡಿದೆ. ವಕೀಲ ಸಿರಾಜುದ್ದೀನ್ ಬಾಷಾ ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ಸದಸ್ಯರ ಭೂ ಹಗರಣಗಳ ವಿರುದ್ಧ ಸಲ್ಲಿಸಿರುವ ಮೊದಲ ದೂರಿನ ಆಧಾರದ ಮೇಲೆ 23ನೇ ಅಧೀನ ಕೋರ್ಟ್‌ನ ನ್ಯಾಯಾಧೀಶ ಸಿ.ಬಿ.ಹಿಪ್ಪರಗಿ ಮಾ.24ಕ್ಕೆ ಆದೇಶ ನೀಡುವುದಾಗಿ ತಿಳಿಸಿದ್ದರು. ಸಿಎಂ ಕುಟುಂಬದ ಭೂ ಹಗರಣಗಳ ಮೊದಲ ದೂರಿನ ವಿಚಾರಣೆ ಪೂರ್ಣಗೊಳಿಸಿದ ನಂತರ ಈ ತೀರ್ಪು ನೀಡಿದ ನ್ಯಾಯಾಧೀಶರು, […]