Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆ

Sunday, July 12th, 2020
journalist

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಖಾಸಗಿ ಚಾನಲ್ಗಳ ಕ್ಯಾಮೆರಾಮೆನ್ಗಳಾಗಿರುವ ಇಬ್ಬರಿಗೆ ಮೊನ್ನೆ ತಲೆನೋವು ಜ್ವರದ ಲಕ್ಷಣ ಕಂಡು ಬಂದಿದ್ದು, ಈ ಹಿನ್ನೆಲೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ವರದಿ ಬಂದಿದ್ದು, ಇವರಲ್ಲಿ ಸೋಂಕು ಇರುವುದು ದೃಢಗೊಂಡಿದೆ. ಇದೀಗ ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರ ಆರೋಗ್ಯ ಪರಿಸ್ಥಿತಿಯೂ ಉತ್ತಮವಾಗಿದೆ. ಪತ್ರಕರ್ತರು ಗುರುಪುರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ ನಂತರ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ. ಕೊರೊನಾ ಪ್ರಕರಣಗಳು ದ.ಕ.ಜಿಲ್ಲೆಯಲ್ಲಿ‌ ಕಾಣಿಸಿಕೊಳ್ಳುತ್ತಿದ್ದ […]

ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ : ಪತ್ರಕರ್ತ ಸುರೇಶ್ ಬೆಳಗಜೆ

Wednesday, July 1st, 2020
press day

ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಆದರೆ, ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಇಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಕಾರದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು `ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ ‘ವಿಷಯದಲ್ಲಿ […]

ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ : ಪತ್ರಕರ್ತ ಸುರೇಶ್ ಬೆಳಗಜೆ

Wednesday, July 1st, 2020
press day

ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಆದರೆ, ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಇಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಕಾರದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು `ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ ‘ವಿಷಯದಲ್ಲಿ ಉಪನ್ಯಾಸ ನೀಡಿದರು. ಮುದ್ರಣ ಮಾಧ್ಯಮ ಮುಂದಿನ ದಿನಗಳಲ್ಲಿ ಸೀಮಿತ ಚೌಕಟ್ಟಿನಲ್ಲಿ ಮುಂದುವರಿಯಲಿದೆ. ಸಂಪೂರ್ಣ ಸ್ಥಗಿತಗೊಳ್ಳುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದವರು ಹೇಳಿದರು. ಮಂಗಳೂರು ವಿವಿ ಪರಿಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸವಾಲುಗಳ ನಡುವೆ ಮಾಹಿತಿಯನ್ನು ನೀಡುವ ಪತ್ರಕರ್ತರ ಸೇವೆ ಮಹತ್ತರ. ಇದು ಹೋಲಿಕೆ ಮಾಡಲಾಗದ ಬಹು ದೊಡ್ಡ ಕಾರ್ಯ ಎಂದರು. ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಕೃಷ್ಣಮೂರ್ತಿ ಅವರು ಪತ್ರಕರ್ತ ಮುಹಮ್ಮದ್ ಅನ್ಸಾರ್ ಇನೋಳಿ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಿದರು. ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯ ತೀರ್ಪುಗಾರರಲ್ಲೊಬ್ಬರಾದ ಸ್ಮಿತಾ ಶೆಣೈ ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾವಾರ್ತಾಧಿಕಾರಿ ಖಾದರ್ ಷಾ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯ ಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಪ್ರಶಸ್ತಿ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

ಅರ್ಸೆನಿಕಂ ಅಲ್ಬಂ-30 ಮಾತ್ರೆಯಿಂದ ಕೊರೊನಾ ಗುಣಮುಖ, ಪತ್ರಕರ್ತರಿಗೆ ಉಚಿತ ವಿತರಣೆ

Tuesday, May 19th, 2020
corona-medicine

ಮಂಗಳೂರು : ಪ್ರತಿಯೊಬ್ಬ ವ್ಯಕ್ತಿಯು ತನ್ನಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಳ ಮಾಡುವುದೇ ಕೊರೊನಾ ಸೋಂಕು ತಡೆಗೆ ಪರಿಹಾರ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಶೀಲರಾದಾಗ ಖಂಡಿತಾ ಕೊರೊನಾ ನಿಯಂತ್ರಣ ಸಾಧ್ಯವಿದೆ ಎಂದು ಇಂಡಿಯಾನ್ ಹೋಮಿಯೋಪಥಿ ಮೆಡಿಕಲ್ ಅಸೋಸಿಯೇಷನ್ ಅವಿಭಜಿತ ದ.ಕ. ಜಿಲ್ಲಾ ಅಧ್ಯಕ್ಷ ಡಾ. ಪ್ರವೀಣ್ ಕುಮಾರ್ ರೈ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಕೊರೊನಾ ಜಾಗೃತಿ ಅಂಗವಾಗಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಹೋಮಿಯೋಪತಿ ಕ್ಲಿನಿಕ್ ರಿಸರ್ಚ್ ಸೆಂಟರ್ ಅಧ್ಯಯನ […]

ಮೇ 19: ಪತ್ರಕರ್ತರಿಗೆ ರೋಗ ನಿರೋಧಕ ಔಷಧಿ ವಿತರಣೆ, ಜಾಗೃತಿ ಕಾರ್ಯಕ್ರಮ

Monday, May 18th, 2020
Homeopathy

ಮಂಗಳೂರು  : ಭಾರತೀಯ ಹೋಮಿಯೋಪತಿ ವೈದ್ಯರ ಸಂಘದ ಆಶ್ರಯದಲ್ಲಿ ಪತ್ರಕರ್ತರಿಗೆ ರೋಗನಿರೋಧಕ ಔಷಧಿ ವಿತರಣೆ , ಸಾಂಕ್ರಾಮಿಕ ಮತ್ತು ಸೊಳ್ಳೆ ಗಳಿಂದ ಹರಡುವ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಮಂಗಳೂರು ಪತ್ರಿಕಾಭವನದಲ್ಲಿ ಮೇ 19 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಾಂಕ್ರಾಮಿಕ ರೋಗ ಕೋವಿಡ್ -19, ಮತ್ತು ಡೆಂಗ್ಯು ಮಲೇರಿಯಾ ಮತ್ತಿತರ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಪಾರಾಗಲು ಕೈಗೊಳ್ಳಬೇಕಾದ ವಿಧಾನಗಳ ಬಗ್ಗೆ ತಜ್ಞ ವೈದ್ಯರು ಈ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದಾರೆ. ಭಾರತೀಯ ಹೋಮಿಯೋಪತಿ ವೈದ್ಯರ […]

ಮುಂಬಯಿಯಲ್ಲಿ 53 ಪತ್ರಕರ್ತರಿಗೆ ಕೊರೋನಾ ಪೋಸಿಟಿವ್

Monday, April 20th, 2020
Mumbai-covid

ಮುಂಬಯಿ ; ಮಹಾಮಾರಿ ಕೊರೋನಾ ಸಾಂಕ್ರಾಂಮಿಕದ ವರದಿ ಮಾಡಲು ಹೋದ 53 ಪತ್ರಕರ್ತರಿಗೆ ಕೊರೋನಾ ಪೋಸಿಟಿವ್ ಆಗಿದೆ ಎಂದು ಬಿಎಂಸಿಯ ಆರೋಗ್ಯ ಸಮಿತಿ ಸದಸ್ಯ ಅಮೆ ಘೋಲ್ ಖಚಿತಪಡಿಸಿದ್ದಾರೆ ಪತ್ರಕರ್ತರುಗಳಿಗಾಗಿಯೇ ಏರ್ಪಡಿಸಿದ್ದ ವಿಶೇಷ ಕೋವಿಡ್ 19 ತಪಾಸಣೆಗಳ ಪರೀಕ್ಷಾ ವರದಿಗಳು ಬಂದಿದ್ದು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ವೆಭ್ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿ 53 ಮಂದಿ ಪತ್ರಕರ್ತರಿಗೆ ಕೊರೋನಾ ಪೋಸಿಟಿವ್ ಆಗಿದೆ. ಇವರಲ್ಲಿ ಹೆಚ್ಚಿನವರು ಕಸ್ತೂರ್ ಬಾ ಆಸ್ಫತ್ರೆ ಹಾಗೂ ಧಾರಾವಿ ಯಲ್ಲಿಂದ ವರದಿ ಮಾಡುತ್ತಿದ್ದರು. ಮಹಿಳಾ ವರದಿಗಾರರೊಬ್ಬರೂ ಇದರಲ್ಲಿ ಸೇರಿರಿವರು ಎಂದು ತಿಳಿದು ಬಂದಿದೆ. […]

ಪತ್ರಕರ್ತನಿಗೆ ಬೇಕು ಬಹುಮುಖಿ ಚಿಂತನೆ : ಹಿರಿಯ ಪತ್ರಕರ್ತ ಡಾ. ಗಣೇಶ್ ಅಮೀನ್‌ಗಡ ಅಭಿಪ್ರಾಯ

Tuesday, March 10th, 2020
alangaru

ಮೂಡಬಿದಿರೆ : ಪತ್ರಿಕೋದ್ಯಮ ವಿದ್ಯಾರ್ಥಿಗಳು ತಮ್ಮಜ್ಞಾನದ ಪರಿಧಿಯನ್ನು ಒಂದೇ ವಿಷಯಕ್ಕೆ ಸೀಮಿತವಾಗಿಸದೇ ಎಲ್ಲ ವಿಚಾರಗಳನ್ನು ಅರಿಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕ ಡಾ. ಗಣೇಶ್ ಅಮೀನ್‌ಗಡ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಅಲಂಗಾರಿನ ಪಂಡಿತ್ ರೆಸಾರ್ಟ್‌ನಲ್ಲಿ ಆಯೋಜಿಸಲಾದ ಒಂದು ದಿನದ ಬರಹ ಕೌಶಲ ಕಾರ್ಯಗಾರದಲ್ಲಿ ಮಾತನಾಡಿದರು. ಸತತ ಓದು ಹಾಗೂ ಜಿಜ್ಞಾಸೆಯ ಮನೋಭಾವದಿಂದ ಬರವಣಿಗೆ ಸಾಧ್ಯ. ಪ್ರತಿಯೊಬ್ಬರೂ ತಮ್ಮದೇ ಶೈಲಿಯ ಬರವಣಿಗೆ ಬೆಳೆಸಿಕೊಳ್ಳಬೇಕು. ವಿವಿಧ ಪತ್ರಿಕೆಯ ಅಂಕಣಗಳಿಗೆ ತಮ್ಮ ಬರಹಗಳನ್ನು […]

ಉಡುಪಿ : ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಇನ್ನಿಲ್ಲ

Wednesday, January 8th, 2020
raviraj

ಉಡುಪಿ : ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ(44) ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ‌ ಹೊಂದಿದ್ದಾರೆ. ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆ‌ನೋವು‌ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಖಾಸಗಿ ಅಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.‌ ಉಡುಪಿಯಲ್ಲಿ ಈ‌ಟಿವಿ ವರದಿಗಾರರಾಗಿ ಹಲವು ವರುಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ಪೊಲಿಟಿಕಲ್ ವರದಿಗಾರರಾಗಿದ್ದರು. ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು‌ಮಿತ್ರರನ್ನು ಆಗಲಿದ್ದಾರೆ.  

ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿ ಎಸ್ ಯಡಿಯೂರಪ್ಪರವರಲ್ಲಿ ಮನವಿ

Wednesday, December 25th, 2019
srinivas-naik

ಮಂಗಳೂರು : ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಮನವಿ ಸಲ್ಲಿಸಿದರು . ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್,ಉಡುಪಿ ಚಿಕ್ಕ ಮಗಳೂರು ಸಂಸದೆ ಶೋಭಾ ಕರಂದ್ಲಾಜೆ ,ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್,ಜಿಲ್ಲಾಧಿಕಾರಿ […]

ಸುಳ್ಯ : ಡಿ.22 ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

Wednesday, December 4th, 2019
Sulya

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ 22 ರಂದು ನಡೆಯಲಿದೆ. ಈ ಕುರಿತು ಚರ್ಚಿಸಲು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು. ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು ಅಪರಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಎಸ್‌.ಅಂಗಾರ ಗ್ರಾಮ ವಾಸ್ತವ್ಯದ ಯಶಸ್ವಿಗೆ […]