ಮೋದಿ ಸಮಾವೇಶಕ್ಕೆ ಪೊಲೀಸ್ ಸರ್ಪಗಾವಲು
Monday, February 17th, 2014ಮಂಗಳೂರು: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಫೆ.18ರಂದು ಮಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ನೆಹರೂ ಮೈದಾನ ಹಾಗೂ ನಗರದಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೋಮವಾರ ಸಂಜೆಯಿಂದ ಸಮಾವೇಶ ನಡೆಯುವ ಸ್ಥಳ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಿದ್ದು, ನಗರದೆಲ್ಲೆಡೆ ಪೊಲೀಸ್ ಸರ್ಪಕಾವಲು ಹಾಕಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಆರ್.ಹಿತೇಂದ್ರ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೈದಾನ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ, ಕಾರ್ಯಕ್ರಮದಂದು ವಿಐಪಿ ಮಾರ್ಗ ಮತ್ತು ಕಾರ್ಯಕ್ರಮ ಸ್ಥಳದ ಸುತ್ತ […]