Blog Archive

ಧಾರಾಕಾರ ಮಳೆ..ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ..!

Monday, July 9th, 2018
huge-rock

ಚಿಕ್ಕಮಗಳೂರು : ಧಾರಾಕಾರ ಮಳೆಗೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿದಿದ್ದು, ಭಾರಿ ಗಾತ್ರದ ಬಂಡೆ ರಸ್ತೆಗುರುಳಿದೆ. ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಈಗಾಗಲೇ ನಾಲ್ಕು ಕಡೆ ಗುಡ್ಡ ಕುಸಿದಿದೆ. ಮಣ್ಣು ಕುಸಿಯುತ್ತಿರುವ ಪರಿಣಾಮ ವಾಹನ ಸಂಚಾರಕ್ಕೆ ಚಾಲಕರು ಭಯ ಪಡುತ್ತಿದ್ದು, ಪ್ರವಾಸಿಗರು ಆತಂಕದಲ್ಲೇ ಸಂಚರಿಸುವಂತಾಗಿದೆ. ನಿರಂತರ ಮಳೆ ರಭಸಕ್ಕೆ ಗಿರಿಯ ಎತ್ತರದಿಂದ ಬಂಡೆ ಕಲ್ಲುಗಳು ಉರುಳಿ ಬೀಳುತ್ತಿರುವುದು ಕಂಡು ಬಂದಿದೆ. ಕೇರಳ ಮೂಲದ ಮಿನಿ ಬಸ್ವೊಂದು ಚಲಿಸುತ್ತಿರುವ ಸಂದರ್ಭದಲ್ಲಿ ಬಸ್ ಮುಂಭಾಗಕ್ಕೆ ಬಂಡೆ ಬಿದ್ದಿದ್ದು, ಭಾರಿ ಅನಾಹುತದಿಂದ […]

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಮುಂದುವರಿದ ಮಳೆ ಅಬ್ಬರ..!

Friday, June 29th, 2018
heavy-rain

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಕೂಡಾ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ. ಮಳೆಗೆ ಹಲವೆಡೆ ತಗ್ಗು ಪ್ರದೇಶದ ಮನೆಗಳು ಜಲಾವೃತವಾಗಿವೆ. ಮಳೆ ಅಧಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಕೊಂಚ ಅಸ್ತವ್ಯಸ್ತವಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕೊಂಚ ವಿರಾಮ ನೀಡಿದ್ದ ವರುಣ ಮುಂಜಾನೆ ಮತ್ತೆ ತುಂತುರು ಹನಿಗಳೊಂದಿಗೆ ಪ್ರವೆಶ ನೀಡಿದ್ದಾನೆ. ತಾಲೂಕಿನಾದ್ಯಂತ ಸುರಿಯುತ್ತಿರುವ […]

ಸತತ ಎರಡನೇ ದಿನವೂ ಮುಂದುವರಿದ ಧಾರಾಕಾರ ಮಳೆ..!

Wednesday, June 20th, 2018
heavy-rain

ಮಂಗಳೂರು: ಮಂಗಳೂರಿನಲ್ಲಿ ಸತತ ಎರಡನೇ ದಿನವೂ ಧಾರಾಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಕರಾವಳಿ ತತ್ತರಿಸಿ ಹೋಗಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಮತ್ತೆ ಪ್ರವಾಹದ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ನಗರದಲ್ಲಿ ಮತ್ತೆ ವರುಣನ ಅಬ್ಬರ..ಹವಾಮಾನ ಇಲಾಖೆಯಿಂದ ಮುನ್ಸೂಚನೆ..!

Tuesday, June 19th, 2018
rain-manlore

ಮಂಗಳೂರು: ನಗರದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಇಂದು ಮಂಗಳೂರಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಹೆಚ್ಚು ಮಳೆಯಾಗಿದ್ದು, ವಾಹನ ಸವಾರರು, ಜನರು ಓಡಾಟಕ್ಕೆ ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ‌ ಅಧಿಕ ಮಳೆಯಾಗುವ ಎಚ್ಚರಿಕೆಯ ಮುನ್ಸೂಚನೆಯನ್ನೂ ನೀಡಿದೆ.

ಕರಾವಳಿಯಲ್ಲಿ ಧಾರಾಕಾರ ಮಳೆ… ಸುಳ್ಯ, ಬೆಳ್ತಂಗಡಿಯಲ್ಲಿ ತಂಪೆರೆದ ವರುಣ

Thursday, March 15th, 2018
karavali

ಮಂಗಳೂರು: ಬೇಸಿಗೆಯ ಬಿಸಿ ಆರಂಭವಾಗುತ್ತಿರುವಂತೆಯೇ ಕರಾವಳಿಯಲ್ಲಿ ವರುಣ ಪ್ರತ್ಯಕ್ಷನಾಗಿದ್ದಾನೆ. ಇಂದು ಅಪರಾಹ್ನ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ಕರಾವಳಿಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಒತ್ತಡದಿಂದ ವಾಯುಭಾರ ಕುಸಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆ ಸುರಿಯುತ್ತಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ

Monday, March 12th, 2018
bangaluru

ಬೆಂಗಳೂರು: ಬಿರುಬೇಸಿಗೆಯಲ್ಲಿ ಬೆಂದು ಹೋಗಿರುವ ಬೆಂಗಳೂರಿಗರಿಗೆ ಸದ್ಯದಲ್ಲೇ ವರುಣನ ಸ್ಪರ್ಶವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯ ತಮಿಳುನಾಡು ಹಾಗೂ ಶ್ರೀಲಂಕಾ ನಡುವಿನ ಕೊಮರಿನೇರಿಯಾವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನ ಬೆಂಗಳೂರು ಸೇರಿದಂತೆ ಎಲ್ಲೆಡೆ ಮಂಗಳವಾರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ಪ್ರಸಕ್ತ ಉಂಟಾಗಿರುವ ವಾಯುಭಾರ […]