Blog Archive

ಮಾಜಿ ಸಚಿವ ಹಿರಿಯ ರಾಜಕಾರಣಿ ಬಿ.ಎ. ಮೊಹಿದಿನ್ ನಿಧನ..!

Tuesday, July 10th, 2018
b-a-mohuiddian

ಮಂಗಳೂರು: ಇತ್ತೀಚಿಗೆ ಭಾರಿ ಚರ್ಚೆಗೆ ಒಳಗಾಗಿದ್ದ ಕಾಂಗ್ರೆಸ್ ಒಳಗಿನ ಕಚ್ಚಾಟದ ಕೃತಿ  ‘ನನ್ನೊಳಗಿನ ನಾನು’ ಬಿಡುಗಡೆಗೆ ಮುನ್ನವೇ ಬಿ.ಎ.ಮೊಹಿದಿನ್ ಕೊನೆಯುಸಿರೆಳೆದಿದ್ದಾರೆ. ‘ನನ್ನೊಳಗಿನ ನಾನು’ ಕೃತಿ ಇದೇ ತಿಂಗಳು 20 ಕ್ಕೆ ಬಿಡುಗಡೆಯಾಗಬೇಕಿತ್ತು. ತನ್ನ ಬದುಕಿನ ನೆನಪುಗಳನ್ನು ಅವರು ಅದರಲ್ಲಿ ಹಂಚಿಕೊಂಡಿದ್ದರು. ತಾನು ಅನುಭವಿಸಿದ ರಾಜಕೀಯದ ಏರಿಳಿತಗಳನ್ನು ‘ನನ್ನೊಳಗಿನ ನಾನು’ ಕೃತಿಯಲ್ಲಿ ಬರೆದಿದ್ದರಲ್ಲದೆ. ಕಾಂಗ್ರೆಸ್ ಒಳಗಿನ ವೈರತ್ವವನ್ನು ಲೇಖನ ಮೂಲಕ ಹೊರಹಾಕಿದ್ದಾರೆ. ಬಜ್ಪೆ ಸಮೀಪದ ಕುಗ್ರಾಮವಾದ ಪೇಜಾವರ  ಎಂಬಲ್ಲಿ ಜೂನ್ 5, 1938ರಲ್ಲಿ ಆರ್ಥಿಕವಾಗಿ ತೀರಾ ಹಿಂದುಳಿದ ಕುಟುಂಬದಲ್ಲಿ ಸಾಮಾನ್ಯ ವ್ಯಕ್ತಿಯಾಗಿ  ಬಿ.ಎ. ಮೊಹಿದಿನ್ (ಬಜ್ಪೆ ಅಬ್ದುಲ್ ಖಾದರ್ […]

ಮಂಗಳೂರು ನಲ್ಲಿ ಗಾಳಿ ಮಳೆ, ರಸ್ತೆಯಲ್ಲಿ ನೀರು, ವಾಹನ ಸಂಚಾರ ಅಸ್ತವ್ಯಸ್ತ..!

Tuesday, May 29th, 2018
rain-mangaluru

ಮಂಗಳೂರು: ಒಂದೆಡೆ ಮುಂಗಾರು ಪ್ರವೇಶದ ಮುನ್ಸೂಚನೆ, ಇನ್ನೊಂದೆಡೆ ಮೆಕ್ನು ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ. ಮಂಗಳವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ನಗರದ ಎಂ.ಜಿ.ರಸ್ತೆ, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟಾ ಪ್ರದೇಶದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಧಕ್ಕೆ ಉಂಟಾಗಿದೆ. ಆಕಾಶವೇ ತೂತಾದಂತೆ ಕರಾವಳಿಯಲ್ಲಿ […]

ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಎಚ್ಚರಿಕೆ

Saturday, February 10th, 2018
suresh

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್‌‌ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ. ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ತಮ್ಮ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯನ್ನು ಪಡೆದು ಬಂಟಿಂಗ್ಸ್‌ಗಳನ್ನು ಹಾಕಲು ಸೂಚನೆ ನೀಡಿದ್ದಾರೆ. ಅನುಮತಿ ಪಡೆಯದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಅಂತಹ […]

ಗುತ್ತಿಗೆದಾರರು ಸಿಗದೆ ಸಾರ್ವಜನಿಕ ಶೌಚಾಲಯಗಳಿಗೆ ಬೀಗ

Thursday, February 1st, 2018
toilet

ಮಂಗಳೂರು: ಇಲ್ಲಿಯ ಬಸ್‌ ನಿಲ್ದಾಣದ ಸಮೀಪ ಇಟ್ಟ ಇ-ಟಾಯ್ಲೆಟ್‌ ಗೆ ಹೋಗಲು ಮಹಿಳೆಯರು, ವಿದ್ಯಾರ್ಥಿಗಳು ಮುಜುಗರ ಪಡುತ್ತಾರೆ. ಕಾರಣ ಎಲ್ಲರಿಗೂ ಕಾಣುವಂತೆ ಒಳಹೋಗಲು ಸಾರ್ವಜನಿಕರು ಅದರಲ್ಲಿಯೂ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ. ಸುರತ್ಕಲ್‌ ಬಸ್‌ ನಿಲ್ದಾಣದ ಬಳಿ ಇಡಲಾದ ಇ-ಟಾಯ್ಲೆಟ್‌ ಎತ್ತರದಲ್ಲಿದ್ದು, ವಯೋವೃದ್ಧರು ಹತ್ತಲಾರದ ಸ್ಥಿತಿಯಲ್ಲಿದೆ. ಇನ್ನು ಇದಕ್ಕೆ ಎದುರು ಬದಿ ತಡೆಯಿಲ್ಲದ ಕಾರಣ ಎಲ್ಲರ ಮುಂಭಾಗದಲ್ಲಿ ಶೌಚಕ್ಕೆ ಒಳ ಹೋಗಲು ಸಾರ್ವಜನಿಕರು ಮುಜುಗರವಾಗುತ್ತದೆ. ಸುರತ್ಕಲ್‌, ಬೈಕಂಪಾಡಿ ಮತ್ತಿತರೆಡೆ ಲಕ್ಷ ಲಕ್ಷ ಖರ್ಚು ಮಾಡಿ ಸಾರ್ವಜನಿಕ ಶೌಚಾಲಯ ಕಟ್ಟಿದರೂ […]

‘ನನ್ನ ಅವಧಿಯಲ್ಲಿ ಅವ್ಯವಹಾರ ನಡೆದಿಲ್ಲ’

Monday, January 1st, 2018
surathkal

ಮಂಗಳೂರು: ಎಡಿಬಿ ಮೊದಲ ಹಂತದ ಯೋಜನೆಯಡಿ ಸುರತ್ಕಲ್‌ ಭಾಗದಲ್ಲಿ ಕೈಗೆತ್ತಿಕೊಳ್ಳಲಾದ ಒಳಚರಂಡಿ ಅವ್ಯವಸ್ಥೆಯ ಕುರಿತು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಶನಿವಾರ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ವಾಗ್ವಾದ ನಡೆಯಿತು. ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕ ಗಣೇಶ್‌ ಹೊಸಬೆಟ್ಟು, ಸುರತ್ಕಲ್‌ನ ಮಧ್ವನಗರದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ತೆರೆದಿಡಲಾಗಿದೆ. ತ್ಯಾಜ್ಯ ನೀರಿನ ಮರುಬಳಕೆಗೆ ಪಾಲಿಕೆಯು ಎಂಆರ್‌ಪಿಎಲ್ ಜತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಆದರೆ, ಎಂಆರ್‌ಪಿಎಲ್‌ವರೆಗೆ ಪೈಪ್‌ಲೈನ್‌ ಅಳವಡಿಕೆ ಆಗಿಲ್ಲ. ಹೀಗಾಗಿ ಸಂಸ್ಕರಿಸಿದ ನೀರು ಚರಂಡಿ […]

ಮೇಯರ್‌ ಬಂಗಲೆ ಕರೆಂಟ್‌ ಕಟ್‌; ಮೆಸ್ಕಾಂನಿಂದ ನೋಟಿಸ್‌!

Thursday, December 21st, 2017
mahanagara

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತರ ಮನೆ ಸಮೀಪದಲ್ಲೇ ಮೇಯರ್‌ ಅವರ ಅಧಿಕೃತ ನಿವಾಸ ಸಹಿತ ಒಟ್ಟು ಮೂರು ಬಂಗಲೆಗಳು ಹಲವು ವರ್ಷಗಳಿಂದ ಪಾಳು ಬಿದ್ದಿದ್ದು, ಅವುಗಳ ನಿರ್ವಹಣೆ ಅಥವಾ ಸದ್ಬಳಕೆ ಕಡೆಗೆ ಗಾಢ ನಿರ್ಲಕ್ಷ್ಯ ಮುಂದುವರಿದಿದೆ. ಇವುಗಳ ಪೈಕಿ ಮೇಯರ್‌ ಅವರ ಅಧಿಕೃತ ನಿವಾಸವನ್ನು ಲಕ್ಷಾಂತರ ರೂ. ವ್ಯಯಿಸಿ ಕೆಲವು ತಿಂಗಳ ಹಿಂದೆಯಷ್ಟೇ ನವೀಕರಿಸಲಾಗಿದ್ದರೂ, ಅದೂ ನಿರುಪಯುಕ್ತವಾಗಿದೆ. ಬಹುತೇಕ ಸರಕಾರಿ ಕಚೇರಿಗಳು, ಪಾಲಿಕೆ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗ ಮಣ್ಣಗುಡ್ಡೆ ಸಮೀಪದ ಮೇಯರ್‌ ಬಂಗಲೆ, ಪಾಲಿಕೆ […]

ಕಾರ್ಮಿಕರಿಂದ ಸ್ವಚ್ಛ ಗೊಳಿಸಲಾದ ಮ್ಯಾನ್ ಹೋಲ್

Thursday, October 19th, 2017
manhole

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಸಿದ ಮ್ಯಾನ್ ಹೋಲ್ ನೊಳಗೆ ಕಾರ್ಮಿಕರನ್ನು ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಬಂದರು ವಾರ್ಡ್ ಮ್ಯಾನ್‌ ಹೋಲ್‌ ಅನ್ನು ಕಾರ್ಮಿಕರಿಂದ ಸ್ವಚ್ಛ ಗೊಳಿಸಲಾಗಿದೆ.  ಕಾರ್ಮಿಕರು ಮ್ಯಾನ್ ಹೋಲ್ ಸ್ವಚ್ಛ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾರ್ವಜನಿಕರು ಇದನ್ನು ಟೀಕಿಸಿದ್ದಾರೆ. ಕುಸಿದ ಮ್ಯಾನ್ ಹೋಲ್ ಸರಿ ಪಡಿಸುತ್ತಿದ್ದೆವು. ಸ್ವಚ್ಛಮಾಡಿಸಿಲ್ಲ ಎಂದು ಪಾಲಿಕೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಮ್ಯಾನ್ ಹೋಲ್ ಹಳೇ ಸಂಪರ್ಕದ್ದಾಗಿದ್ದು, ಇಂದು ಏಕಾಏಕಿ ಮ್ಯಾನ್ ಹೋಲ್ […]

ಜನವರಿ 1ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭ

Tuesday, October 17th, 2017
indira canteen

ಮಂಗಳೂರು: ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ. ಖಾದರ್, ಮುಂದಿನ ವರ್ಷದ ಜನವರಿ 1ರಿಂದ ಜಿಲ್ಲೆಯ ಹತ್ತು ಕಡೆ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿಯಲ್ಲಿ ತಲಾ 1 ಕ್ಯಾಂಟೀನ್ ತೆರೆಯಲಾಗುವುದು ಎಂದು ಮಾಹಿತಿ ನೀಡಿದರು. 45 ಸಾವಿರದಿಂದ […]

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

Monday, October 16th, 2017
kavitha sanil

ಮಂಗಳೂರು:ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಜೆ.ಆರ್.ಲೋಬೋ ಹಾಗೂ ಮೇಯರ್ ಕವಿತಾ ಸನಿಲ್ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5.14 ಕೋ.ರೂ. ವೆಚ್ಚದಲ್ಲಿ  ಶಿಲಾನ್ಯಾಸ ನಡೆಸಿದರು. ಲೇಡಿಹಿಲ್ ವೃತ್ತ ಅಭಿವೃದ್ದಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು, ಮಂಗಳೂರು ನಗರ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 2,500 ಕೋ.ರೂ., ಅನುದಾನ ಬೇರೆ ಬೇರೆ ಮೂಲಗಳಿಂದ ಲಭ್ಯವಾಗಲಿದೆ ಹಾಗೂ ವಿವಿಧ ಮೂಲಗಳಿಂದ ವಿವಿಧ ಯೋಜನೆಗಳಿಗಾಗಿ ಅನುದಾನ ದೊರೆಯಲಿದೆ. ಹೀಗಾಗಿ ಮುಂದಿನ ಮೂರು ವರ್ಷದಲ್ಲಿ ಮಂಗಳೂರು ನಗರದ […]

ಮೇಯರ್ ಅವರಿಗೆ ಅವರ ಪಾಲಿಕೆ ವ್ಯಾಪ್ತಿಗೆ ಬರುವ ರಸ್ತೆಗಳ ದುಸ್ಥಿತಿ ಏಕೆ ಕಾಣುತ್ತಿಲ್ಲ ?

Friday, October 13th, 2017
mayor kavitha sanil

  ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಅಕ್ರಮ ಮಸಾಜ್ ಪಾರ್ಲರ್ ಗಳ ವಿರುದ್ಧ ಸಮರ ಸಾರಿದ್ದ ಮಂಗಳೂರಿನ ಮೇಯರ್ ಕವಿತಾ ಸನಿಲ್ ಇತ್ತೀಚೆಗೆ ಅಕ್ರಮ ಫ್ಲಾಟ್ ಗಳ ಮೇಲೆ ದಾಳಿ ಆರಂಭಿಸಿದ್ದಾರೆ. ಮಂಗಳೂರು ಮೇಯರ್ ಅವರ ಈ ಡೇರ್ ಡೆವಿಲ್ ವ್ಯಕ್ತಿತ್ವಕ್ಕೆ ಹ್ಯಾಟ್ಸ್ ಆಫ್ ಅನ್ನಲೇಬೇಕು . ಆದರೆ ಈ ಎಲ್ಲ ಅಕ್ರಮಗಳ ವಿರುದ್ಧ ತಿರುಗಿ ಬಿದ್ದಿರುವ ಮೇಯರ್ ಅವರಿಗೆ ಅವರ ಪಾಲಿಕೆ ವ್ಯಾಪ್ತಿಗೆ ಬರುವ ರಸ್ತೆಗಳ ದುಸ್ಥಿತಿ ಏಕೆ ಕಾಣುತ್ತಿಲ್ಲ ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ಮಂಗಳೂರು ಮಹಾನಗರ […]