Blog Archive

ಕಾಂಗ್ರೆಸ್ ನವರು ಭಯಭೀತರಾಗಿ ಹತಾಶರಾಗಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಆರೋಪ

Sunday, October 24th, 2021
Sindgi

ಕನ್ನೋಳಿ: ಸಿಂದಗಿ: ಕಾಂಗ್ರೆಸ್ ಪಕ್ಷದ ನಾಯಕರಿಗೆ ಪ್ರಾಚರಕ್ಕೆ ವಿಷಯಗಳೇ ಸಿಗುತ್ತಿಲ್ಲ. ಸೋತಮೇಲೆ ನೀಡುವಂತಹ ಹೇಳಿಕೆಗಳನ್ನು ಚುನಾವಣಾ ಆರಂಭದಲ್ಲೇ ನೀಡುತ್ತಿದೆ.‌ ಕಾಂಗ್ರೆಸ್ ಸಂಪೂರ್ಣವಾಗಿ ಹತಾಶವಾಗಿ ಇಂತಹ ಹೇಳಿಕೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ ಅದ್ಭುತವಾದ ಬೆಂಬಲವನ್ನು ನೋಡಿ ಕಾಂಗ್ರೆಸ್ ಪಕ್ಷ ಭಯ ಗೊಂಡಿದೆ. ಸೋಲಿನ ಅನುಭವ ಆರಂಭದಲ್ಲಿ ಆಗಿರುವುದರಿಂದ ಚುನಾವಣಾ ನಂತರದ ಹೇಳಿಕೆಗಳನ್ನು ಈಗಲೇ ಆ ಪಕ್ಷದ ನಾಯಕರು ನೀಡುತ್ತಿದ್ದಾರೆ ಎಂದರು. ಅವರು ಸಿಂದಗಿ ವಿಧಾನಸಭೆ ಕ್ಷೇತ್ರದ ಕನ್ನೊಳಿ ಗ್ರಾಮದ ಪ್ರಚಾರದ ಸಂದರ್ಭದಲ್ಲಿ […]

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ವಿಶ್ವಾಸ

Sunday, October 3rd, 2021
Bommai

ಬಳ್ಳಾರಿ :  ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು ಬೂತ್ ಮಟ್ಟದಿಂದ ರಾಜ್ಯ […]

ನಂದಿನಿ‌ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆ ಮಾಡಿ : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

Thursday, September 30th, 2021
Nandini

ಬೆಂಗಳೂರು: ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಹಾಲಿನ‌ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ದೊರೆತರೆ ಹೆಚ್ಚು ಹಾಲು ಉತ್ಪಾದನೆ ಆಗುತ್ತದೆ. […]

ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ

Tuesday, September 28th, 2021
SM Krishana

ಬೆಂಗಳೂರು  : ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಾಧ್ಯಮದವರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ದಸರಾ ದಿನದಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದಸರಾ ಉದ್ಘಾಟನೆ ಮಾಡಲು ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು. ಅವರು ಮುಖ್ಯಮಂತ್ರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು […]

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ

Thursday, September 23rd, 2021
Sharavathi

ಬೆಂಗಳೂರು : ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ& ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ

Sunday, September 19th, 2021
Dhavanagere

ದಾವಣಗೆರೆ : ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆ ಇಂದು ಶಿಲ್ಯಾನ್ಯಾಸ ನೆರವೇರಿಸಿ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿಎಲ್ ಐ ಯೋಜನೆಯಡಿ ಕೇಂದ್ರ ಸರ್ಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]

ಅದ್ಯಾಕೆ ಹಿಂದೂ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿವೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ?

Saturday, September 18th, 2021
Dharmendra

ಮಂಗಳೂರು : ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸುತ್ತಿದ್ದೀರಾ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಧರ್ಮೇಂದ್ರ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ […]

ಅವಸರದಿಂದ ದೇವಸ್ಥಾನ ಒಡೆಯಬೇಡಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ, 2 ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ದೆಶನ

Wednesday, September 15th, 2021
Bommai

ಬೆಂಗಳೂರು :  ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ […]

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ

Saturday, September 11th, 2021
CM Forest

ಬೆಂಗಳೂರು : ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಅರಣ್ಯ ನಮಗಿಂತ ಮೊದಲು […]

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಉದ್ಘಾಟಿಸಿದ ಸಿಎಂ

Thursday, September 9th, 2021
Chinna Swamy

ಬೆಂಗಳೂರು :  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ ಫುಟ್ಬಾಲ್, ಹಾಕಿ ಕ್ರೀಡಾಂಗಣಗಳು ಉತ್ತಮವಾಗಿ ರೂಪುಗೊಳ್ಳಲು ಕಾರಣವಾಗಿವೆ. ಇಡೀ ಕ್ರೀಡಾ […]