Blog Archive

ಧರ್ಮಸ್ಥಳ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Friday, March 30th, 2018
dharmastala

ಧರ್ಮಸ್ಥಳ: ದಿನಾಂಕ 29-03-18 ನೇ ಗುರುವಾರದಂದು ಧರ್ಮಸ್ಥಳ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿಯನ್ನು ಆಚರಿಸಲಾಯಿತು. ಸ್ವಾಮಿಗೆ ಜನ್ಮಾಭಿಷೇಕ, ಮಕ್ಕಳಿಂದ ಅಷ್ಟವಿಧಾರ್ಚನೆ ಪೂಜೆ, ನಾಮಕರಣ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಕುಟುಂಬದವರ ಮಾರ್ಗದರ್ಶನದಲ್ಲಿ ಬಾಹುಬಲಿ ಮಹಿಳಾ ಸೇವಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಊರ ಶ್ರಾವಕ ಶ್ರಾವಿಕಿಯರು ಪಾಲ್ಗೊಂಡು ಪುಣ್ಯಭಾಗಿಗಳಾದರು.

ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಕರ್ನಾಟಕ ಜೈನ್ ಪತ್ರಿಕೆ ಬಿಡುಗಡೆ

Wednesday, March 21st, 2018
veerendra-hegdde

ಬೆಳ್ತ೦ಗಡಿ: ಕರ್ನಾಟಕ ಜೈನ್ ಸ್ವಯ೦ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆರ೦ಭಿಸಿರುವ ರಾಜ್ಯ ಮಟ್ಟದ ಕರ್ನಾಟಕ ಜೈನ್ ಪತ್ರಿಕೆ ಯನ್ನು (ಪಾಕ್ಷಿಕ) ಪದ್ಮವಿಭೂಷಣ ರಾಜರ್ಷಿ ಪೂಜ್ಯ ಡಾ.ಡಿ ವೀರೇ೦ದ್ರ ಹೆಗ್ಗಡೆಯವರು ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಮಾರ್ಚ್ 21ರ೦ದು ಬಿಡುಗಡೆ ಮಾಡಿದರು. ಕರ್ನಾಟಕ ಜೈನ್ ಸ್ವಯ೦ ಸೇವಾ ಚಾರಿಟೇಬಲ್ ಟ್ರಸ್ಟ್, ಅಧ್ಯಕ್ಷ ನೇಮಿರಾಜ ಅರಿಗ, ಪತ್ರಿಕೆ ಸ೦ಪಾದಕ ಶರದ್ ವಿಜಯ, ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಎ.ವಿ.ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಮತ್ತು ಶಮ೦ತ್ ಕುಮಾರ್, ಪುಷ್ಪರಾಜ್ […]

ದೇವಸ್ಥಾನಗಳು ಊರಿನ ಸಮೃದ್ಧಿಗೆ ಸಾಕ್ಷಿ: ವೀರೇಂದ್ರ ಹೆಗ್ಗಡೆ

Wednesday, December 27th, 2017
virendra-hegde

ಮಂಗಳೂರು: ‘ದೇವಸ್ಥಾನಗಳು ಊರಿನ ಸಮೃದ್ಧಿಗೆ ಸಾಕ್ಷಿಯಾಗುತ್ತವೆ. ಆಯಾ ಊರಿನಲ್ಲಿರುವ ಒಗ್ಗಟ್ಟು, ಅಭಿವೃದ್ಧಿ ಚಟುವಟಿಕೆಗಳನ್ನು ಪ್ರತಿಬಿಂಬಿಸುತ್ತವೆ’ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಉತ್ತರ ದಿಕ್ಕಿನ ಪೌಳಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿದ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಒಂದು ಊರಿನಲ್ಲಿರುವ ದೇವಸ್ಥಾನಗಳು ಹೇಗಿವೆ ಎನ್ನುವುದನ್ನು ನೋಡಿದ ಬಳಿಕ ಅಲ್ಲಿನ ಜನರ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಪರಿಸ್ಥಿತಿಯ ಬಗ್ಗೆ ನಿರ್ಧಾರಕ್ಕೆ ಬರಬಹುದು’ ಎಂದರು. […]

ಉಳಿತಾಯ ಮನೋಭಾವದಿಂದ ಬದುಕು ಸದೃಢವಾಗಲು ಸಾಧ್ಯ: ಡಾ. ಡಿ. ವೀರೇಂದ್ರ ಹೆಗ್ಗಡೆ

Monday, December 18th, 2017
virendra-hegde

ಮಂಗಳೂರು: ಒಬ್ಬ ವ್ಯಕ್ತಿ ತನ್ನ ದುಡಿಮೆಯಲ್ಲಿ ಕಿಂಚಿತ್ತಾದರೂ ಉಳಿತಾಯ ಮಾಡುವುದರಿಂದ ಮುಂದಿನ ಬದುಕು ಸದೃಢವಾಗಲು ಹಾಗೂ ಸಣ್ಣ ಮೊತ್ತದ ಆರೋಗ್ಯ ವಿಮೆ ಮಾಡಿಸುವುದರಿಂದ ಕಾಯಿಲೆ ಬಂದ ಸಂದರ್ಭ ಚಿಕಿತ್ಸೆಗೆ ಸಹಾಯವಾಗುತ್ತದೆ. ಉತ್ತಮ ಆರೋಗ್ಯ ಹಾಗೆಯೇ ಆಯುಷ್ಯ ಗಟ್ಟಿಯಾಗಿರಬೇಕಾದರೆ ಸಣ್ಣ ಉಳಿತಾಯ ಹಾಗೂ ಆರೋಗ್ಯ ವಿಮೆ ಅತ್ಯಗತ್ಯವಾಗಿದ್ದು, ಚಿಕಿತ್ಸೆಯ ಸಂದರ್ಭ ಹಣಕ್ಕಾಗಿ ಕಷ್ಟಪಡುವುದಕ್ಕೆ ಮುಕ್ತಿ ಕೊಡಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘದ […]

ಗುರುವಾಯನಕೆರೆ: ರಾಜ್ಯಮಟ್ಟದ ಸಮಾಲೋಚನಾ ಸಭೆ

Friday, November 10th, 2017
gurvaynkere

ಮಂಗಳೂರು: ’ಮಂಜುನಾಥಸ್ವಾಮಿ ಹೆಸರಿನಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿರುವುದೇ ದೊಡ್ಡ ಸೇವೆ ಎಂದು ವೀರೇಂದ್ರ ಹೆಗ್ಗಡೆಯವರು ಪ್ರಚಾರ ಮಾಡುತ್ತಿರುವುದನ್ನೇ ಸತ್ಯವೆಂದು ನಂಬಿ ಪ್ರಧಾನ ಮಂತ್ರಿಗಳು ಅವರನ್ನು ಉಜಿರೆಯಲ್ಲಿ ಭಾರೀ ಹೊಗಳಿದ್ದು ಸರಿಯಲ್ಲ. ಇವರ ಮೈಕ್ರೋಫೈನಾನ್ಸ್ ಕಾರ್ಪೊರೇಟ್‌ಗಿಂತ ಅಪಾಯಕಾರಿ. ಇದರ ವಿರುದ್ಧ ರಾಜ್ಯದ 30 ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಲು ನಮ್ಮ ಒಕ್ಕೂಟದ ಮತ್ತು ಪ್ರಜಾಧಿಕಾರ ವೇದಿಕೆ-ಕರ್ನಾಟಕದ ನೂರಾರು ಎನ್‌ಜಿಒಗಳು ನಿರ್ಧರಿಸಿದೆ ಎಂದು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ-ಕರ್ನಾಟಕ (ಫೆವಾರ್ಡ್-ಕೆ)ದ ಉಪಾಧ್ಯಕ್ಷ ಎಸ್.ಕುಮಾರ್ ಹೇಳಿದರು. ಜಂಟಿ ಕ್ರಿಯಾ ಸಮಿತಿ, […]

ವೀರೇಂದ್ರ ಹೆಗ್ಗಡೆ ನಿಷ್ಕಾಮ ಕರ್ಮಯೋಗಿ :ಪ್ರಧಾನಿ ಮೋದಿ

Monday, October 30th, 2017
darmasthala

ಮಂಗಳೂರು:ಸಂಸ್ಕೃತದಲ್ಲಿ ಹೇಳಿದಂತೆ ಅವರು ನಿಷ್ಕಾಮ ಕರ್ಮಯೋಗಿ ಎಂದು ಧರ್ಮಸ್ಥಳ ಧರ್ಮಾಧಿಕಾರಿಯನ್ನು ಪ್ರಧಾನಿ ಮೋದಿ ಬಣ್ಣಿಸಿದರು. ವೀರೇಂದ್ರ ಹೆಗ್ಗಡೆಯವರ 50 ವರ್ಷದ ಸುದೀರ್ಘ ಸೇವೆ ಕೋಟ್ಯಂತರ ಜನರಿಗೆ ಪ್ರೇರಣೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ರುದ್ರಾಭಿಷೇಕ ನೆರವೇರಿಸಿದ ನಂತರ ಉಜಿರೆಯಲ್ಲಿ ನಡೆದ ರುಪೇ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದರು. ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, ಧರ್ಮಸ್ಥಳದ ನನ್ನ ಪ್ರೀತಿಯ ಅಭಿಮಾನಿಗಳಿಗೆ ಅಭಿನಂದನೆಗಳು. ಹೆಗ್ಗಡೆಯವರ 50 ವರ್ಷಗಳ ಸಾಧನೆ ಬಣ್ಣನೆಗೆ ನಿಲುಕದ್ದು. ಅವರನ್ನು ಗೌರವಿಸುವ ಕ್ಷಣ […]

ವೀರೇಂದ್ರ ಹೆಗ್ಗಡೆಯವರ 50ನೇ ಪಟ್ಟಾಭಿಷೇಕ ವರ್ಧಂತ್ಯೋತ್ಸವ

Tuesday, October 24th, 2017
hegde Pattabhisheka

ಮಂಗಳೂರು : ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ 50ನೇ ಪಟ್ಟಾಭಿಷೇಕ ವರ್ಧಂತ್ಯೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆಯಿತು. ಪಟ್ಟಾಭಿಷಿಕ್ತರಾಗಿ 49 ವರ್ಷ ನ್ಯಾಯದೇಗುಲವೆಂದೇ ಹೆಸರು ಗಳಿಸಿರುವ ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಹೆಗ್ಗಡೆ ಧರ್ಮಾಧಿಕಾರಿ ಪಟ್ಟ ಅಲಂಕರಿಸಿ 49 ವರ್ಷ ಪೂರೈಸಿದ್ದಾರೆ.  1968ರ ಅಕ್ಟೋಬರ್ 24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ವೀರೇಂದ್ರ ಹೆಗ್ಗಡೆಯವರು ಪಟ್ಟಾಭಿಷಿಕ್ತರಾಗಿದ್ದರು. ಉತ್ಸವಕ್ಕೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಪ್ರಮುಖ ಆಕರ್ಷಣೆಯಾಗಿತ್ತು. ಮೈಸೂರು ಮಹಾರಾಜರನ್ನು ದೇವಸ್ಥಾನದ […]

ಧರ್ಮಸ್ಥಳ: ಹೆಗ್ಗಡೆ ಪಟ್ಟಾಭಿಷೇಕದ ಸುವರ್ಣ ಮಹೋತ್ಸವಕ್ಕೆ ಸಿದ್ಧತೆ

Saturday, October 14th, 2017
veerendra heghde

ಉಜಿರೆ: ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ 1968ರ ಅ. 24ರಂದು ಸಂಪ್ರದಾಯದಂತೆ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಡಿ. ವೀರೇಂದ್ರ ಹೆಗ್ಗಡೆ ಅವರು 50 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ವರ್ಧಂತ್ಯುತ್ಸವವು ಇದೇ 24ರಂದು ನಡೆಯಲಿದೆ. ಧರ್ಮಸ್ಥಳದ ಸಿಬ್ಬಂದಿ, ಊರಿನ ನಾಗರಿಕರು ಹಾಗೂ ಭಕ್ತಾಭಿಮಾನಿಗಳು ಸರಳ ರೀತಿಯಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದ್ದಾರೆ. ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. 24ರಂದು ಸಂಜೆ 5.30ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ […]

ಯೋಗದಿಂದ ಆರೋಗ್ಯ, ಆಯುಷ್ಯ ವೃದ್ಧಿ ಟಿ. ಶ್ಯಾಮ್ ಭಟ್

Wednesday, June 21st, 2017
yoga

ಉಜಿರೆ: ಮಾನಸಿಕ, ದೈಹಿಕ ಹಾಗೂ ಸಾಮಾಜಿಕ ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ. ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ. ಎಲ್ಲರೂ ಶ್ರದ್ಧೆಯಿಂದ ನಿತ್ಯವೂ ಯೋಗಾಭ್ಯಾಸ ಮಾಡಬೇಕು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಆಯೋಜಿಸಲಾದ ಮೂರನೇ ವಿಶ್ವಯೋಗ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು. ಉತ್ತಮ ಜ್ಞಾನ, ಪ್ರೀತಿ-ವಿಶ್ವಾಸ ಮತ್ತು ನಿಸ್ಪೃಹ ಸೇವಾ ಮನೋಭಾವ ಹೊಂದಿದವರು ಪರಿಶುದ್ಧರಾಗುತ್ತಾರೆ. ಇಂದು ಆಧುನಿಕ ಜೀವನ ಶೈಲಿ, ಆಹಾರ […]

ಧರ್ಮಸ್ಥಳ: ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆ

Friday, November 25th, 2016
veerendra heggade

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆಯನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ಸರಳವಾಗಿ ಆಚರಿಸಲಾಯಿತು. ಊರ-ಪರವೂರ ಅಭಿಮಾನಿಗಳು ಬಂದು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮೂಡಬಿದ್ರೆಯ ಡಾ. ಎಂ. ಮೋಹನ ಆಳ್ವ, ಜಿಲ್ಲಾ ಕೃಷಿಕ ಸಮಾಜದ ಆಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ, ಮಂಗಳೂರಿನ ಕೆ. ರಾಜವರ್ಮ ಬಳ್ಳಾಲ್, ಎಸ್.ಡಿ.ಎಂ. ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ರಾಜೇಂದ್ರ ಶೆಟ್ಟಿ ಮೊದಲಾದ ಗಣ್ಯರು […]