Blog Archive

ಕದ್ರಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಒಂದು ಕೋಟಿ ಹದಿನಾರು ಲಕ್ಷ ರೂಪಾಯಿ: ವೇದವ್ಯಾಸ ಕಾಮತ್

Saturday, December 1st, 2018
vedvyas-kamath

ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಮಾರು ಒಂದು ಕೋಟಿ ಹದಿನಾರು ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು. ಕದ್ರಿ ಪಾರ್ಕಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಶಾಸಕರು, ವಾಕಿಂಗ್ ಟ್ಯಾಕ್ ಗೆ ಈಗಾಗಲೇ ಇಂಟರ್ ಲಾಕ್ ಅಳವಡಿಸಲಾಗಿದ್ದು, ಇದು ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಅದರೊಂದಿಗೆ ಮಡ್ ವಾಯಿಂಗ್ ಟ್ರಾಕ್ ಕಾಮಗಾರಿಗೆ 15 […]

ಡ್ರಗ್ಸ್ ಜಾಲವನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ: ಶಾಸಕ ವೇದವ್ಯಾಸ ಕಾಮತ್

Thursday, November 29th, 2018
vedvyas-kamath

ಮಂಗಳೂರು: ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಘಟನೆಯ ಮಾಹಿತಿ ತಿಳಿದ ತಕ್ಷಣ ಮಂಗಳೂರಿನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇಂತಹ ಕೆಟ್ಟ ಘಟನೆಗಳಿಗೆ ಯುವಕರು ಗಾಂಜಾ, ಅಫೀಮು, ಚರಸ್ ನಂತಹ ಡ್ರಗ್ಸ್ ಸೇವಿಸುತ್ತಿರುವುದೇ ಕಾರಣ. ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಕೊನೆಗೊಳಿಸದಿದ್ದರೆ […]

ಶಾಸಕ ವೇದವ್ಯಾಸ ಕಾಮತ್‌ರಿಂದ ಪ್ರಕೃತಿ ವಿಕೋಪ ಪರಿಹಾರನಿಧಿಯ ಚೆಕ್ ವಿತರಣೆ

Thursday, November 22nd, 2018
vedvyas-kamath

ಮಂಗಳೂರು: ಕಳೆದ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ತೀವ್ರ ನಷ್ಟ ಅನುಭವಿಸಿದ 32 ನೇ ಮರೋಳಿ ವಾರ್ಡಿನ ದೊಡ್ಡಮನೆ ನಿವಾಸಿ ಹರೀಶ್ ಚಂದ್ರ ಅವರಿಗೆ ಶಾಸಕ ವೇದವ್ಯಾಸ ಕಾಮತ್ ಪರಿಹಾರ ನಿಧಿಯ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಅವರು ಕಳೆದ ಬಾರಿ ಸುರಿದ ಭಾರಿ ಮಳೆಗೆ ಮಂಗಳೂರು ನಗರ ದಕ್ಷಿಣದಲ್ಲಿ ಅನೇಕ ಮನೆಗಳು ಭಾಗಶ: ಕುಸಿದು ಹೋಗಿದ್ದವು. ಅಲ್ಲಿ ತಾವು ಸ್ವತ: ಪರಿಶೀಲಿಸಿ ಸರಕಾರದಿಂದ ಪರಿಹಾರನಿಧಿಗೆ ಹೆಚ್ಚಿನ ಬೇಡಿಕೆ ಕೂಡ ಇಡಲಾಗಿತ್ತು. ಬಂದಿರುವ ಪರಿಹಾರನಿಧಿಯಲ್ಲಿ […]

ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಕುಟುಂಬಕ್ಕೆ ಬೆಳಕಾದ ವೇದವ್ಯಾಸ ಕಾಮತ್..!

Wednesday, October 24th, 2018
vedavyas-kamath

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಅಕ್ಷರಶ: ಆ ಕುಟುಂಬಕ್ಕೆ ಬೆಳಕಾಗಿದ್ದಾರೆ. ಮಂಗಳೂರಿನ ಬಿಜೈ ಕಾಪಿಕಾಡ್ ಪರಿಸರದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ವಾಸವಿರುವ ಜಯಮ್ಮ ಎನ್ನುವ ಹಿರಿಯ ಜೀವ ಕಳೆದ ನಲ್ವತ್ತು ವರ್ಷಗಳಿಂದ ವಿದ್ಯುತ್ ಇಲ್ಲದೆ ಚಿಮಣಿ ದೀಪದಲ್ಲಿ ದಿನ ದೂಡುತ್ತಿದ್ದರು. ಈ ವಿಷಯ ಭಾರತೀಯ ಜನತಾ ಪಾರ್ಟಿಯ ಸ್ಥಳೀಯ ಕಾರ್ಯಕರ್ತರಿಂದ ಶಾಸಕ ವೇದವ್ಯಾಸ ಕಾಮತ್ ಅವರ ಗಮನಕ್ಕೆ ಬಂತು. ಜಯಮ್ಮ […]

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ

Tuesday, October 16th, 2018
vadvyas-kamath

ಮಂಗಳೂರು: ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ ನಡೆಯಿತು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಿ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಎಸ್ ಅಂಗಾರ, ಉಮಾನಾಥ ಕೋಟ್ಯಾನ್, ಸಂಜೀವ್ ಮಠಂದೂರು ಡಾ|ಭರತ್ ಶೆಟ್ಟಿ, ಹರೀಶ್ ಪೂಂಜಾ ಹಾಗೂ ಮತ್ತಿತ್ತರರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಬಜರಂಗ ದಳ ಕಾರ್ಯಕರ್ತರಿಗೆ 4 ಲಕ್ಷ ರೂ. ನಗದು ನೀಡಿದ ಸಚಿವ ಜಮೀರ್ ಅಹ್ಮದ್

Thursday, October 11th, 2018
zameer

ಮಂಗಳೂರು: ಕೊಡಗು ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ನಾಲ್ವರು ಬಜರಂಗದಳ ಕಾರ್ಯಕರ್ತರಿಗೆ ಸಚಿವ ಜಮೀರ್ ಅಹ್ಮದ್ ತಮ್ಮ ಸ್ವಂತ 4 ಲಕ್ಷ ರೂ. ನಗದು ನೀಡಿ ಅಭಿನಂದಿಸಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆ ದ.ಕ. ಇದರ ವತಿಯಿಂದ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಕಚೇರಿಗಳ ಸಂಕೀರ್ಣ ಮಾಪನ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಜಮೀರ್ ಅಹ್ಮದ್ ಈ ನಗದು ಕೊಡುಗೆಯನ್ನು ನೀಡಿದರು. ಈ ಸಂದರ್ಭ ಸಚಿವ ಜಮೀರ್ ಅಹ್ಮದ್ ಮಾತನಾಡಿ, ಇತ್ತೀಚೆಗೆ ಕೊಡಗಿನಲ್ಲಿ ನಡೆದ ಪ್ರಕೃತಿ […]

ವಾಜಪೇಯಿ ನಿಧನರಾದ ಹಿನ್ನೆಲೆ..ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ!

Friday, August 17th, 2018
nalin-kumar

ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಶೃದ್ದಾಂಜಲಿ ಅರ್ಪಿಸಲಾಯಿತು. ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಶೃದ್ದಾಂಜಲಿ ಸಭೆಯಲ್ಲಿ ವಾಜಪೇಯಿ ಅವರಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಸಲ್ಲಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್ ಮೊದಲಾದವರು ನುಡಿನಮನ ಸಲ್ಲಿಸಿದರು.

ಪಾರ್ಕಿಂಗ್ ಸ್ಥಳಗಳಲ್ಲಿ ಡೋರ್ ನಂಬರ್ ನೀಡಿ ಕಟ್ಟಡ ಕಟ್ಟಲು ಅನುಮತಿ ನೀಡಬೇಡಿ

Thursday, June 28th, 2018
VV Kamath

ಮಂಗಳೂರು  : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೇ ಅಧಿಕಾರಿಗಳು ಕಾರ‍್ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ, ನಗರ ಯೋಜನೆ ಮತ್ತು ಲೆಕ್ಕಪತ್ರ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಹೋರ‍್ಡಿಂಗ್ಸ್, ಹೋರ‍್ಡಿಂಗ್ಸ್ ಏಜೆನ್ಸಿಯವರಿಂದ ಬಾಕಿ ಇರುವ ಶುಲ್ಕ, ವಸೂಲಿ ಮಾಡಲು ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ಶೀಘ್ರದಲ್ಲಿ […]

ಪ್ರಕೃತಿ ವಿಕೋಪದ ನಷ್ಟಕ್ಕೆ ಪರಿಹಾರದ ಚೆಕ್ ಸಂತ್ರಸ್ತರಿಗೆ ಶೀಘ್ರ ನೀಡಿ : ವೇದವ್ಯಾಸ ಕಾಮತ್

Saturday, June 23rd, 2018
Vedavyas Kamath

ಮಂಗಳೂರು : ಮಳೆ, ನೆರೆ ಮತ್ತು ಪ್ರಕೃತಿ ವಿಕೋಪದಲ್ಲಿ ಆದ ನಷ್ಟಕ್ಕೆ ಪರಿಹಾರದ ಚೆಕ್ ಸಂತ್ರಸ್ತರಿಗೆ ಹಸ್ತಾಂತರಿಸುವ ಪ್ರಕ್ರಿಯೆಗೆ ಮಂಗಳೂರು ಮಹಾನಗರ ಪಾಲಿಕೆಯ ಕಡೆಯಿಂದ ವೇಗ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ ವೇದವ್ಯಾಸ ಕಾಮತ್ ಪಾಲಿಕೆ ಆಯುಕ್ತರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಅವರು ಕಮೀಷನರ್, ಇಂಜಿನಿಯರಿಂಗ್ ಮತ್ತು ಆರೋಗ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿದರು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡ್ರೈನೇಜ್ ಗೆ ಸಂಬಂಧಪಟ್ಟ ಯಾವ ಅಭಿವೃದ್ಧಿ […]

ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಿ: ವೇದವ್ಯಾಸ ಕಾಮತ್

Friday, June 15th, 2018
desh-vedavyas

ಮಂಗಳೂರು: ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಂದಾಯ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಬಳಿಕ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮಂಗಳೂರು ನಗರ ದಕ್ಷಿಣದಲ್ಲಿ ಆಗಿರುವ ಹಾನಿಯ ಸಂಪೂರ್ಣ ವರದಿಯನ್ನು ನೀಡಿ ವೇದವ್ಯಾಸ ಕಾಮತ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಳೆಯಿಂದ ನಷ್ಟಕ್ಕೊಳಗಾದ ಸುಮಾರು 110 ಮನೆಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದೇನೆ.ಅನೇಕ […]