Blog Archive

ಶಿವಮೊಗ್ಗ : ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿ

Saturday, August 31st, 2019
shivamugga

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪರನ್ನು ಸಿಎಂ ಬಿ ಎಸ್ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಪ್ರವಾಹ ಪರಿಹಾರ ಸಭೆಯಲ್ಲಿ ಭಾಗಿಯಾಗಿ ಸಿಎಂ ಈ ಘೋಷಣೆ ಮಾಡಿದರು. ಇನ್ನು ಮುಂದೆ ಈಶ್ವರಪ್ಪ ಜಿಲ್ಲೆಯ ಎಲ್ಲಾ ಸಭೆಗಳನ್ನು ನಡೆಸಲಿದ್ದು, ಅವರಿಗೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು. ಇದೇ ವೇಳೆ ನೆರೆ ಪರಿಹಾರದ ಕುರಿತು ಅಧಿಕಾರಿಗಳಿಂದ ಮಾಹಿತಿ […]

ಕೊಲ್ಲೂರು – ಹೊಸನಗರ ರಾ.ಹೆದ್ದಾರಿ ಸಂಪರ್ಕ ಕಡಿತ

Wednesday, August 14th, 2019
kolluru---hosanagara

ಕೊಲ್ಲೂರು : ನಾಗೋಡಿಯ ಬಳಿ ಭೂ ಕುಸಿತದಿಂದ ರಾ. ಹೆದ್ದಾರಿಯ ಕಾಂಕ್ರಿಟ್ ರಸ್ತೆಯ ಅಡಿ ಭಾಗವು ಕುಸಿದಿದ್ದು ಈ ಮಾರ್ಗವಾಗಿ ಘನ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಮುಖ್ಯರಸ್ತೆಯ ತಿರುವಿನ ಒಂದು ಪಾರ್ಶ್ವದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯು ಬಹುತೇಕ ಕುಸಿದಿದ್ದು ಇದೇ ರೀತಿ ಮಳೆ ಮುಂದುವರಿದಲ್ಲಿ ಸಂಪೂರ್ಣ ಕುಸಿಯುವ ಭೀತಿ ಇದೆ. ಕೊಲ್ಲೂರು ಹಾಗೂ ಶಿವಮೊಗ್ಗ ನಡುವಿನ ನೇರ ಸಂಪರ್ಕದ ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದೆ. ಶಿವಮೊಗ್ಗ ಸಹಿತ ಇನ್ನಿತರ ಕಡೆಗಳಿಂದ ತರಕಾರಿ […]

ಹೊಸನಗರ – ಶಿವಮೊಗ್ಗ ‌ಸಂಪರ್ಕ‌ ಸ್ಥಗಿತ

Saturday, August 10th, 2019
hosanagara---shivamugga

ಶಿವಮೊಗ್ಗ : ಜಿಲ್ಲೆ ಸೇರಿದಂತೆ ಮಲೆನಾಡಿನಾಧ್ಯಂತ ಭಾರಿ ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸೂಡೂರು ಗೇಟ್ ಸೇತುವೆ ಮುಳುಗಡೆಯಾಗಿದ್ದು, ಹೊಸನಗರ – ಶಿವಮೊಗ್ಗ ‌ರಸ್ತೆ ಸಂಪರ್ಕ‌ ಸ್ಥಗಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ- ಭದ್ರಾವತಿ ರೋಡ್ ನಲ್ಲಿ ರಸ್ತೆ ಸಂಚಾರ ಕಡಿತಗೊಳಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ತುಂಗಾ ಜಲಾಶಯಕ್ಕೆ 1 ಲಕ್ಷದ 15 ಸಾವಿರ ಕ್ಯುಸೆಕ್ ಒಳ ಹರಿವು ನೀರು ಬರುತ್ತಿದೆ. ಅಷ್ಟೇ‌ ಪ್ರಮಾಣದ ‌ನೀರನ್ನ ನದಿಗೆ ಬಿಡಲಾಗುತ್ತಿದೆ. ತುಂಗಾ ನದಿ ಆಪಾಯ ಮಟ್ಟ […]

ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿ ಪಲ್ಟಿ: ಕ್ಲೀನರ್​ ಸಾವು

Tuesday, December 18th, 2018
tanker

ಮಂಗಳೂರು: ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಟ್ರಾಫಿಕ್ ಪೊಲೀಸ್ ನಿಲ್ಲಿಸಲು ಹೋದಾಗ ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ ಕ್ಲೀನರ್ ಸಾವಿಗೀಡಾದ ಘಟನೆ ಮಂಗಳೂರಿನ ಹೊರವಲಯದ ತೊಕ್ಕೊಟ್ಟು ಜಂಕ್ಷನ್ನಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದಾಗ ಲಾರಿ ಚಾಲಕ ಲಾರಿಯನ್ನು ಬದಿಗೆ ತಂದು ನಿಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿಗೆ ಹಾಸಲಾದ ಕಾಂಕ್ರೀಟ್ ಸ್ಲಾಬ್ ಮೇಲೆ ಲಾರಿ ನಿಂತ ಪರಿಣಾಮ ಸ್ಲಾಬ್ ತುಂಡಾಗಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುವ ಸಂದರ್ಭದಲ್ಲಿ ಅದೇ ಬದಿಯಲ್ಲಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದನು. […]

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ: ಜಿ.ಟಿ.ದೇವೆಗೌಡ

Saturday, October 27th, 2018
g-t-devegowda

ಶಿವಮೊಗ್ಗ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೆಗೌಡ ಹೇಳಿದ್ದಾರೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಬದಲಾವಣೆ ಸಹಜ, ರಾಜಕೀಯ ಹರಿಯುವ ನೀರು ಇದ್ದಂತೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಮೇ ತಿಂಗಳಲ್ಲಿ ಸಂಸದ ಸ್ಥಾನಕ್ಕೆ ಮೂರು ಜನ ರಾಜೀನಾಮೆ ನೀಡಿದ್ರು. ರಾಜೀನಾಮೆ ನೀಡಿದ 6 ತಿಂಗಳ ನಂತರ ಚುನಾವಣೆ ಘೋಷಣೆ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ […]

ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಒ ಮೇಲೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಆರೋಪ..!

Tuesday, September 25th, 2018
police

ಶಿವಮೊಗ್ಗ: ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಒ ಮೇಲೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಗ್ರಾಮಾಂತರ ಠಾಣೆಯ ಪಿಎಸ್ಐ ನೂರ್ ಅಹಮದ್ರನ್ನು ಅಮಾನತು ಮಾಡಲಾಗಿದೆ. ಹನಸವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನ ಹಾಗೂ ಪಿಡಿಒ ಸ್ಟ್ಯಾನಿ ಫರ್ನಾಂಡಿಸ್ ಅವರ ಮೇಲೆ ಠಾಣೆಯಲ್ಲಿಯೇ ಪಿಎಸ್ಐ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹಾಗಾಗಿ ಈ ಸಂಬಂಧ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಪಿಎಸ್ಐ ನೂರ್ ಅಹಮದ್ ಸೇರಿದಂತೆ ಇದೇ ಠಾಣೆಯ ಮುಖ್ಯ […]

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವುದು ಕಷ್ಟಕರವಾಗಿದ್ದರೂ ಕೂಡ ಕಟ್ಟೆ ತೀರುತ್ತೇವೆ: ಮಂಜುನಾಥ್ ಗೌಡ

Saturday, August 18th, 2018
shivmogga

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವುದು ಕಷ್ಟಕರವಾಗಿದ್ದರೂ ಕೂಡ ಕಟ್ಟೆ ತೀರುತ್ತೇವೆ ಎಂದು ಜೆಡಿಎಸ್ನ ನೂತನ ಜಿಲ್ಲಾಧ್ಯಕ್ಷ ಡಾ.ಆರ್.ಎಂ. ಮಂಜುನಾಥ್ ಗೌಡ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇಲ್ಲಿ ಜೆಡಿಎಸ್ಗೆ ಉತ್ತಮ ಭವಿಷ್ಯವಿದೆ. ಈ ಹಿಂದೆ ಪಕ್ಷವನ್ನು ಬಿಟ್ಟು ಹೋದವರನ್ನು ಮತ್ತೆ ಕರೆತಂದು ಪಕ್ಷ ಕಟ್ಟುತ್ತೇವೆ ಎಂಬ ಭರವಸೆ ವ್ಯಕ್ತಪಡಿಸಿದರು. ಜೆ.ಹೆಚ್. ಪಟೇಲರ ಕಾಲದಲ್ಲಿ ಜನತಾ ಪಕ್ಷ ನಗರ ಸಭೆ ಹಾಗೂ ಜಿ.ಪಂ.ಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, ಈಗಲೂ ಕೂಡ ಜಿ.ಪಂ. ಹಾಗೂ ಮಹಾನಗರ ಪಾಲಿಕೆ ಜೆಡಿಎಸ್ […]

ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 5 ದಿನ ಧಾರಕಾರ ಮಳೆ‌..ಹವಾಮಾನ ಇಲಾಖೆ ಮುನ್ನೆಚ್ಚರಿಕೆ!

Saturday, August 11th, 2018
mangaluru

ಮಂಗಳೂರು: ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್15 ರವರಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ‌ ತೆರಳುವಂತೆ ಸೂಚನೆ ನೀಡಲಾಗಿದೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಭಾಗದಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳೂ ಸೇರಿದಂತೆ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಈ ಭಾಗದ ಜಲಾಶಯಗಳು […]

ಆಗುಂಬೆ ಘಾಟ್ ನಲ್ಲಿ ಬಸ್ ಸಂಚಾರಕ್ಕೆ ಅನುಮತಿ..!

Saturday, June 30th, 2018
agumbe-gatt

ಉಡುಪಿ: ಆಗುಂಬೆ ಘಾಟ್ ನಲ್ಲಿ ಭೂ ಕುಸಿತದಿಂದಾಗಿ ಕಳೆದೆರಡು ದಿನಗಳ ಹಿಂದೆ ಭಾರೀ ವಾಹನಗಳ ಸಂಚಾರ ನಿಷೇಧವಾಗಿತ್ತು. ಆದರೆ ಇಂದು ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆಗುಂಬೆ ಘಾಟ್ ನಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದಿದೆ. ಆದ್ದರಿಂದಾಗಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ. ಉಡುಪಿಯಿಂದ ಶಿವಮೊಗ್ಗ- ಚಿಕ್ಕಮಗಳೂರು ಮಾರ್ಗವಾಗಿ ಬಸ್ ಓಡಾಟ ಶುರುವಾಗಲಿದೆ.

ತಲೆಸುತ್ತು ಬಂದು ಸ್ಟಿಯರಿಂಗ್ ಕೈಬಿಟ್ಟ ಚಾಲಕ..ನದಿ ಪಾಲಾಗುತ್ತಿದ್ದ 25 ಮಂದಿ ರಕ್ಷಿಸಿದ ಕಂಡಕ್ಟರ್!

Tuesday, June 26th, 2018
conductor

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರು ಕಡೆ ಹೊರಟಿದ್ದ ಕ್ರಿಸ್ತರಾಜ ಬಸ್‍ನ ಪ್ರಯಾಣಿಕರು ಜಲಸಮಾಧಿಯಾಗುತ್ತಿದ್ದರು. ಆದರೆ ಕಂಡಕ್ಟರ್ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಸುಮಾರು 25 ಮಂದಿಯ ಪ್ರಾಣ ಉಳಿದಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು ನಿರ್ವಾಹಕ ಭಗವಾನ್ ಸಮಯಪ್ರಜ್ಞೆಗೆ ಪ್ರಯಾಣಿಕರಿಗೆ ಕಂಡಕ್ಟರ್ ಇಂದು ದೇವರಂತೆ ಕಾಪಾಡಿದ್ದಾರೆ. ಇಂದು ಮಳೆ ಪುನಃ ಆರಂಭವಾಗಿದೆ. ಮಂಡಗದ್ದೆ ಸಮೀಪ ರಸ್ತೆಯೆಲ್ಲಾ ಜಾರುಬಂಡೆಯಾಗಿದೆ. ಇಂತಹ ಸಮಯದಲ್ಲಿ ಇಲ್ಲಿನ ಅಪಗಘಾತ ವಲಯ 17ನೇ ಮೈಲುಗಲ್ಲು ಬಳಿ ಬಂದ ಕಿಸ್ತರಾಜ’ ಬಸ್‍ಗೆ ಗ್ರಹಚಾರ ಕಾದಿತ್ತು. ಬಸ್‍ನ ಚಾಲಕ […]