Blog Archive

ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ: ಜನಾರ್ದನ ಪೂಜಾರಿ

Tuesday, September 13th, 2016
janardhan-pujary

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ನಡೆದ ಸರ್ವಪಕ್ಷ ಸಭೆಯ ನಿರ್ಧಾರವನ್ನು ಪಾಲಿಸಲು ಮುಖ್ಯಮಂತ್ರಿಯವರು ಬದ್ಧತೆ ತೋರಿಸಿಲ್ಲ. 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದ ಜನರಿಗೆ ತಮ್ಮ ನಿರ್ಧಾರ ಸ್ಪಷ್ಟಪಡಿಸಬೇಕು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರೂ ಈವರೆಗೆ ಮಾತಾಡಿಲ್ಲ. ರಾಜ್ಯದ ಜನರ ಭಾವನೆ […]

ರಾಜ್ಯ ಸರ್ಕಾರ ದೊಣ್ಣೆ ಕೊಟ್ಟು ಹೊಡೆಸಿಕೊಂಡಿದೆ: ಮಾಜಿ ಡಿಸಿಎಂ ಅಶೋಕ್‌‌‌

Tuesday, September 13th, 2016
r-ashok

ಬೆಂಗಳೂರು: ಕರ್ನಾಟಕದ ಪಾಲಿಗೆ ಈ ತೀರ್ಪು ದೊಡ್ದ ನೋವುಂಟು ಮಾಡಿದೆ. ಇದೊಂದು ಮಾರಣಾಂತಿಕ ತೀರ್ಪು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದೊಣ್ಣೆ ಕೊಟ್ಟು ಹೊಡೆಸಿಕೊಂಡಿದೆ. ಈ ಹಿಂದೆ ನೀಡಿದ ತೀರ್ಪಿನಲ್ಲಿ 15 ಸಾವಿರ ಕ್ಯೂಸೆಕ್‌‌ ನೀರು ಬಿಡಲು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈಗ ಮತ್ತೊಂದು ಅಘಾತ ನೀಡಿದೆ. ಸರ್ಕಾರ ಪ್ರಾರಂಭದಲ್ಲಿ ತಪ್ಪು ಮಾಡಿದೆ. ಇದು ಎರಡನೇ ಮುಖಭಂಗ ಎಂದು ದೂರಿದರು. ಸರ್ಕಾರದ ತಪ್ಪು […]

ದೆಹಲಿಯಲ್ಲಿ ಡೀಸೆಲ್ ಕಾರು ಬ್ಯಾನ್

Friday, December 11th, 2015
diesel car

ನವದೆಹಲಿ: ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲಿನ್ಯ ಹಿನ್ನೆಲೆಯಲ್ಲಿ ಇನ್ಮುಂದೆ ಹೊಸ ಡೀಸೆಲ್ ಕಾರುಗಳ ನೋಂದಣಿ ಬೇಡ. ಅಲ್ಲದೇ 10 ವರ್ಷಗಳ ಹಳೆಯ ಡೀಸೆಲ್ ಕಾರುಗಳನ್ನು ನಿಷೇಧಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಪೀಠ ಶುಕ್ರವಾರ ಆದೇಶ ಹೊರಡಿಸುವ ಮೂಲಕ ಸೂಚನೆ ನೀಡಿದೆ. ಸರ್ಕಾರ ಕೂಡ ತಮ್ಮ ಇಲಾಖೆಗಳಿಗಾಗಿ ಡೀಸೆಲ್ ವಾಹನಗಳನ್ನು ಖರೀದಿಸಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನಿರ್ದೇಶನ ನೀಡಿದೆ. ಹೊಸ ಡೀಸೆಲ್ ವಾಹನಗಳನ್ನು ಖರೀದಿಸಬಾರದು. ಹೊಸ ಡೀಸೆಲ್ ಕಾರುಗಳ ನೋಂದಣಿಯೂ […]

‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ

Monday, February 24th, 2014
Rajeev-Gandhi

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]

ರಾಜೀವ್ ಹಂತಕರ ಬಿಡುಗಡೆ ಏಕೆ?

Thursday, February 20th, 2014
Rahul-Gandhi

ನವದೆಹಲಿ/ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಿಡಿಯಾಗಿದ್ದಾರೆ. ಪ್ರಧಾನಮಂತ್ರಿಗಳ ಹಂತಕರನ್ನೇ ಬಿಡುಗಡೆ ಮಾಡಿದರೆ ಇನ್ನು ಜನಸಾಮಾನ್ಯರಿಗೆ ಹೇಗೆ ನ್ಯಾಯ ಸಿಗಲು ಸಾಧ್ಯ? ನಮ್ಮ ದೇಶದಲ್ಲಿ ಪ್ರಧಾನಿಗೂ ನ್ಯಾಯ ಸಿಗುವುದಿಲ್ಲವೇ? ನನ್ನ ತಂದೆಯ ಹಂತಕರಿಗೆ ಗಲ್ಲುಶಿಕ್ಷೆಯಾಗಬೇಕೆಂದು ನಾನೇನು ಆಗ್ರಹಿಸುತ್ತಿಲ್ಲ. ಅದರಿಂದ ನನ್ನ ತಂದೆ ಹಿಂತಿರುಗಿ ಬರುವುದೂ ಇಲ್ಲ. ಇದು ಇಡೀ ದೇಶಕ್ಕೆ ಸಂಬಂಧಪಟ್ಟ ವಿಚಾರ. ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ […]