ಸುಳ್ಯ : ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಮಾಣಿ-ಮೈಸೂರು ಹೆದ್ದಾರಿ ಮಧ್ಯೆದಲ್ಲಿರುವ ಜೋಡುಪಾಲ ಎಂಬಲ್ಲಿ ರಸ್ತೆಯು ಇಬ್ಭಾಗವಾಗಿದೆ. ಇಬ್ಬರು ಮೃತಪಟ್ಟಿದ್ದು, ಅಲ್ಲದೆ 3 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ . ರಾಷ್ಟ್ರೀಯ ವಿಪತ್ತು ನಿಗ್ರಹ ದಳದ 26 ಮಂದಿ, 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ 100ಕ್ಕೂ ಅಧಿಕ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಭೂ ಕುಸಿತದಿಂದಾಗಿ ಮೂರು ಮನೆಗಳು ಮಳೆಯಲ್ಲಿ ಕೊಚ್ಚಿಹೋಗಿವೆ. ಮಳೆಯು ಕಾರ್ಯಚರಣೆಗೆ ಅಡ್ಡಿಪಡಿಸುತ್ತಿದ್ದು ಅಲ್ಲದೆ ಹೆಲಿಕಾಪ್ಟರ್ ಮೂಲಕವು […]
ಮಂಗಳೂರು: ಪಶ್ಚಿಮಘಟ್ಟದಲ್ಲಿ ಬುಧವಾರದಿಂದ ಮಳೆ ಸುರಿಯುತ್ತಿದ್ದು ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ, ಸುಳ್ಯದಲ್ಲಿಯೂ ವರುಣನ ಆರ್ಭಟ ಜೋರಾಗಿದೆ. ಭಾರಿ ಮಳೆಯ ಪರಿಣಾಮ ಕುಮಾರಧಾರ, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಳೆಯ ಪರಿಣಾಮ ಪುತ್ತೂರು ತಾಲೂಕಿನ ಗುಂಡ್ಯಾ ಸಮೀಪದ ಉದನೆಯಲ್ಲಿ ಸೇತುವೆಯ ಮೇಲೆ ನೀರು ಹರಿಯುತ್ತಿದೆ. ಶಿರಾಡಿ ಗ್ರಾಮದ ಹಲವು ಮನೆಗಳು ಜಲಾವೃತವಾಗಿದ್ದು, ಉಪ್ಪಿನಂಗಡಿಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಹೊಸ್ಮಠ ಸೇತುವೆಯೂ ಮುಳುಗಡೆಯಾಗಿದೆ.
ಮಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಓರ್ವನನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಳ್ಯ ತಾಲೂಕಿನ ಸಂಪಾಜೆ ನಿವಾಸಿ ಮೋಹನ್ ನಾಯ್ಕ್ ಎಂಬಾತನನ್ನು ಎಸ್ಐಟಿ ವಶಕ್ಕೆ ತೆಗೆದುಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಈತ ಹತ್ಯೆ ಆರೋಪಿಗೆ ಗನ್ ನೀಡಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ವಶಕ್ಕೆ ಪಡೆದಿದೆ. ಮಡಿಕೇರಿಯಲ್ಲಿ ಗನ್ ವ್ಯಾಪಾರ ನಡೆಸುತ್ತಿದ್ದ ಮೋಹನ್ ನಾಯ್ಕ್ನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಕಿ ವಶಕ್ಕೆ ಎಸ್ಐಟಿ ಅಧಿಕಾರಿಗಳು […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ರಾತ್ರಿಯಿಂದ ಈ ಮೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಮಂಗಳೂರು: ಅಪ್ರಾಪ್ತೆಯೋರ್ವಳನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕನೋರ್ವನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ಯುವಕ ಲೋಹಿತ್ ಎಂಬಾತನ ವಿರುದ್ಧ ಯುವತಿಯ ತಾಯಿ ದೂರು ನೀಡಿದ್ದಾರೆ. ಮೇ 14ರಂದು ಆರೋಪಿ ಲೋಹಿತ್, ಅಪ್ರಾಪ್ತೆಯನ್ನು ಬೈಕಿನಲ್ಲಿ ಕುಳ್ಳಿರಿಸಿಕೊಂಡು ಅರಂಬೂರು, ಉಬರಡ್ಕ ಕಡೆಗಳಲ್ಲಿ ಸಂಚರಿಸಿ, ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಎಂಬಲ್ಲಿಯ ಕಾಡಿಗೆ ಕರೆದುಕೊಂಡು ಹೋಗಿ ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ದೂರಿನಲ್ಲಿ […]
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಅಂಗಾರ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯದ ಬಿಜೆಪಿ ಚುನಾವಣಾ ಕಚೇರಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಅಂಗಾರ ಅವರು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಬಿ.ಟಿ. ಮಂಜುನಾಥರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಅಂಗಾರ, ಕಳೆದ 5 ಬಾರಿಯ ಚುನಾವಣೆಗಳಲ್ಲಿ ಬಿಜೆಪಿಯನ್ನಿ ಇಲ್ಲಿನ ಜನತೆ ಗೆಲ್ಲಸಿಕೊಂಡು ಬಂದಿದ್ದಾರೆ. ಈ ಬಾರಿಯ ಚುನಾವಣೆ ನನ್ನ ದೃಷ್ಟಿಯಲ್ಲಿ ವಿಶೇಷವಾದ ಚುನಾವಣೆ. ವಾತಾವರಣ ಸಂಪೂರ್ಣ ಬದಲಾಗಿದೆ, ಜನಾಭಿಪ್ರಾಯ ಬಿಜೆಪಿಯ ಮೇಲೆ […]
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪ್ರಕಟಿಸಿರುವ ತನ್ನ ಮೊದಲ ಅಭ್ಯರ್ಥಿ ಎಸ್. ಅಂಗಾರರದ್ದು ಇದು ಏಳನೇ ಬಾರಿಯ ಸ್ಪರ್ಧೆ. ತನ್ನ ಭದ್ರ ನೆಲೆ ಎಂದು ಪರಿಗಣಿಸಿರುವ ಸುಳ್ಯದಲ್ಲಿ ಬಿಜೆಪಿ, ಈ ಬಾರಿ ಇತರ ಮೂರ್‍ನಾಲ್ಕು ಹೆಸರುಗಳು ಚರ್ಚೆಯಲ್ಲಿದ್ದರೂ ಹಾಲಿ ಶಾಸಕರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರದಲ್ಲಿ 1994ರ ಬಳಿಕ ಬಿಜೆಪಿ ನಿರಂತರವಾಗಿ ಗೆಲುವಿನ ಓಟ ದಾಖಲಿಸಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದ ಎಸ್. ಅಂಗಾರ ಬಳಿಕ ಬಿಜೆಪಿ ಕಾರ್ಯಕರ್ತರಾಗಿ ಪಕ್ಷದ ಸಂಘಟನೆ ಯಲ್ಲಿ ತೊಡಗಿದರು. ನಿತ್ಯ ಜೀವನ ನಿರ್ವಹಣೆಗೆ ಸ್ವತಃ […]
ಸುಳ್ಯ: ಬೇಸಗೆ ಕಾಲಿಟ್ಟ ಬೆನ್ನಲ್ಲೇ ಸುಳ್ಯ ತಾಲೂಕಿನಲ್ಲಿ ಕೊಳವೆಬಾವಿ ಕೊರೆಯುವ ಯಂತ್ರಗಳ ಸದ್ದು ಕೇಳಿ ಬರುತ್ತಿದೆ. ಪಕ್ಕದ ರಾಜ್ಯಗಳ ನೋಂದಣಿಯಿರುವ ಲಾರಿಗಳು ತಾಲೂಕಿನಲ್ಲಿ ಬೀಡುಬಿಟ್ಟಿವೆ. ಕಾನೂನನ್ನು ಉಲ್ಲಂ ಸಿ ಬೇಕಾಬಿಟ್ಟಿ ಭೂಮಿಗೆ ಕನ್ನ ಇಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ. ನಗರ ಮಾತ್ರವಲ್ಲ, ಕುಗ್ರಾಮದಲ್ಲೂ ನೀರಿಗೆ ಬಂಗಾರದ ಬೆಲೆ ಬಂದಿದೆ. ಅದ ರಲ್ಲೂ ಕೃಷಿ ಅವಲಂಬಿತ ಸುಳ್ಯದ ಜನತೆಗೆ ನೀರಿನ ಅವಶ್ಯ ಹೆಚ್ಚೇ ಇದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ನದಿ, ಹಳ್ಳ, ಕೊಳ್ಳ, ಕೆರೆ, ಬಾವಿ, […]
ಮಂಗಳೂರು: ಕೃಷಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ ಪರಿಣಾಮ ಅಡಿಕೆ, ಬಾಳೆ ತೋಟ ಸಂಪೂರ್ಣ ನಾಶಗೊಂಡಿರುವ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾರ್ಕೋಡಿನಲ್ಲಿ ನಡೆದಿದೆ. ಕಳೆದ ಐದು ದಿನಗಳಿಂದ ಕಾಡಾನೆಗಳು ತೋಟಕ್ಕೆ ನುಗ್ಗುತ್ತಿದ್ದು, ಲಕ್ಷಾಂತರ ರೂ. ಮೌಲ್ಯದ ಬೆಳೆಗಳುನ್ನು ನಾಶ ಪಡಿಸುತ್ತಿವೆ. ಕೃಷಿಕರ ದೂರಿಗೆ ಅರಣ್ಯಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನಲಾಗಿದೆ. ಇನ್ನು ದೂರು ನೀಡಿದರೂ ಸಹ ಸ್ಥಳಕ್ಕೆ ಸುಳ್ಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿಲ್ಲ. ಹೀಗಾಗಿ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು ಹರಿಹಾಯ್ದಿದ್ದಾರೆ.