ಸಮನ್ಸ್ ಗೆ ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ಕೊಡಿ : ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಡಿಕೆ ಶಿವಕುಮಾರ್
Friday, August 30th, 2019ಬೆಂಗಳೂರು : ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಇ.ಡಿ. ಸಮನ್ಸ್ ನೀಡಿದ್ದು, ಮೇಲ್ಮನವಿ ಸಲ್ಲಿಸಲು ನಮಗೆ ಕಾಲಾವಕಾಶ ಬೇಕು. ಅಲ್ಲಿವರೆಗೆ ಡಿಕೆ ಶಿವಕುಮಾರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಡಿಕೆಶಿ ಪರ ವಕೀಲರಾದ ಬಿವಿ ಆಚಾರ್ಯ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು. […]