Blog Archive

ನೀತಿ ಸಂಹಿತೆ ಜಾರಿ ಭಯ ಕಡತಗಳಿಗೆ ತರಾತುರಿ ಸಹಿ, 18 ಕೈಗಾರಿಕೆಗಳಿಗೆ ಸಿದ್ದು ಗ್ರೀನ್ ಸಿಗ್ನಲ್

Wednesday, March 5th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಯೋಜನೆಗಳ ಕಡತ ವಿಲೇವಾರಿ ತ್ವರಿತಗೊಳಿಸಿದ್ದು, ಮಂಗಳವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ 13770 ಕೋಟಿ ಮೊತ್ತದ 18 ಕೈಗಾರಿಕಾ ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ನಂತರ ಯೋಜನೆ ಆರಂಭಕ್ಕೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ವಿಶೇಷ ಒತ್ತು ನೀಡುತ್ತಿದ್ದಾರೆ. ಮಂಗಳವಾರ ಇದಕ್ಕೆ ಇನ್ನಷ್ಟು ವೇಗ ನೀಡಿದ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಹಲವು […]

ನಟಿ ವಿಂದ್ಯಾ ಆತ್ಮಹತ್ಯೆ ಯತ್ನ

Wednesday, March 5th, 2014
Vindhya

ಬೆಂಗಳೂರು: ಚಿತ್ರರಂಗಕ್ಕೆ ಈಗಷ್ಟೆ ಚಿಗುರುತ್ತಿದ್ದ ಯುವ ನಟಿ, ‘ಮನದ ಮರೆಯಲ್ಲಿ’ ಚಿತ್ರದ ನಾಯಕಿ ವಿಂದ್ಯಾ (24) 85 ಮಧುಮೇಹ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಿಯಕರನ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್ ಆತ್ಮಹತ್ಯೆ ಯತ್ನಕ್ಕೆ ಮೂಲ ಕಾರಣ ಎಂದು ಆಕೆಯ ತಾಯಿ ಆರೋಪಿಸಿದ್ದಾರೆ. ಮಾಗಡಿ ರಸ್ತೆ ದಾಸರಹಳ್ಳಿಯಲ್ಲಿರುವ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಮನೆಯಲ್ಲಿದ್ದ 85 ಮಧುಮೇಹ ಮಾತ್ರೆಗಳನ್ನು ಸೇವಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿರುವ ವಿಂದ್ಯಾರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ತಿಂಗಳಿಂದ ಮಂಜುನಾಥ ಎಂಬಾತನನ್ನು ವಿಂದ್ಯಾ ಪ್ರೀತಿಸುತ್ತಿದ್ದರು. ಇತ್ತೀಚೆಗೆ […]

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಜಯಮಾಲ?

Tuesday, March 4th, 2014
Jayalalitha

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಹಿರಿಯ ನಟಿ ಡಾ. ಜಯಮಾಲ ಅವರು ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಜಯಮಾಲ ಅವರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಒಂದೆರಡು ದಿನಗಳಲ್ಲಿ ಸರ್ಕಾರದ ಅಧಿಕೃತ ಅದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಿಜೆಪಿ ಸರ್ಕಾರ ವಿಧಾನ ಪರಿಷತ್ ಸದಸ್ಯರೂ ಆಗಿರುವ ನಟ ತಾರಾ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, […]

ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ

Saturday, March 1st, 2014
Petrol

ಬೆಂಗಳೂರು: ಪೀಣ್ಯದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆವರೆಗಿನ ‘ನಮ್ಮ ಮೆಟ್ರೋ’ ಸಂಚಾರಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಬಿಎಂಆರ್‌ಸಿಎಲ್, ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಶನಿವಾರ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದು, ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿನ ಪ್ರಮಾಣ ದರವನ್ನು 2 ರುಪಾಯಿ ಹೆಚ್ಚಿಸಲಾಗಿದೆ. ಮೆಟ್ರೋ ನೂತನ ದರ ಇಂದಿನಿಂದಲೇ ಜಾರಿಗೆ ಬಂದಿದ್ದು, ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಈ ಮುಂಚೆ 15 ರುಪಾಯಿ ಇದ್ದ ಪ್ರಯಾಣ ದರ […]

ಸರ್ಕಾರದಿಂದ ಚಿಕಿತ್ಸಾ ವೆಚ್ಚ ಪಾವತಿ: ಉಮಾಶ್ರೀ

Saturday, March 1st, 2014
Umashree

ಬೆಂಗಳೂರು: ರಂಗಕರ್ಮಿ ಮತ್ತು ಹಿರಿಯ ಚಿತ್ರ ನಟ ಸಿ.ಆರ್. ಸಿಂಹ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಸಿಂಹ ಅವರ ಇದುವರೆಗಿನ ವೈದ್ಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಹೇಳಿದ್ದಾರೆ. ಸಿಂಹ ಅವರ ನಿಧನ ವಾರ್ತೆ ಕೇಳಿ ನನಗೆ ದಿಗ್ಭ್ರಮೆಯಾಗಿದೆ. ಅವರ ಅಗಲಿಕೆಯಿಂದ ಕನ್ನಡ ಕಲಾ ಜಗತ್ತು ಒಬ್ಬ ಮೇರು ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ. ನಟರಂಗದ ಮೂಲಕ ಕನ್ನಡ ರಂಗಭೂಮಿಗೆ ಹೊಸ ಆಯಾಮವನ್ನು ನೀಡಿದ್ದ ಸಿಂಹ, ಕನ್ನಡ ಚಿತ್ರರಂಗದಲ್ಲಿ […]

ಹೆಚ್ಚಿನ ಚಿಕಿತ್ಸೆಗಾಗಿ ನಟ ಅಂಬರೀಷ್ ಸಿಂಗಾಪುರಕ್ಕೆ ಶಿಫ್ಟ್

Saturday, March 1st, 2014
Ambarish

ಬೆಂಗಳೂರು: ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಾಪುರಕ್ಕೆ ಶನಿವಾರ ಸ್ಥಳಾಂತರಿಸಲಾಗಿದೆ. ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕರೆದೊಯ್ಯಲು ಖ್ಯಾತ ನಟ ಚಿತ್ರನಟ ರಜನಿಕಾಂತ್ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಂಬರೀಷ್ ಅವರನ್ನು ಇಂದು ಬೆಳಗ್ಗೆ 6.45ರ ಸುಮಾರಿಗೆ ವಿಕ್ರಂ ಆಸ್ಪತ್ರೆಯಿಂದ ಸಿಂಗಾಪುರಕ್ಕೆ ಕರೆದೊಯ್ಯೂಲಾಗಿದೆ. ಅಂಬರೀಷ್ ಅವರ ಜೊತೆಗೆ ಪತ್ನಿ ಸುಮಲತಾ, ಹಾಗೂ ವಿಕ್ರಂ ಆಸ್ಪತ್ರೆಯ ಇಬ್ಬರು ವೈದ್ಯರ ತಂಡ ಇಂದು ಬೆಳಗ್ಗೆ ವಿಶೇಷ […]

ಖ್ಯಾತ ನಟ,ರಂಗಕರ್ಮಿ ಸಿ.ಆರ್.ಸಿಂಹ ವಿಧಿವಶ

Friday, February 28th, 2014
C.R.Simha

ಬೆಂಗಳೂರು: ಖ್ಯಾತ ಚಿತ್ರನಟ ಮತ್ತು ರಂಗಕರ್ಮಿ ಸಿ.ಆರ್.ಸಿಂಹ ಅವರು ವಿಧಿವಶರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಸಿ.ಆರ್.ಸಿಂಹ ಅವರು ಬೆಂಗಳೂರಿನ ಜಯನಗರದಲ್ಲಿರುವ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸಿಂಹ ಅವರು ಕಳೆದ ಹತ್ತು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ನಾಲ್ಕು ದಿನಗಳ ಹಿಂದೆ ಅವರನ್ನು ಜಯನಗರದ ರಾಗಿಗುಡ್ಡದ ಸೇವಾಕ್ಷೇತ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಖ್ಯಾತ ನಟ ಶ್ರೀನಾಥ್ ಅವರ ಸಹೋದರ […]

ಸದ್ಯಕ್ಕೆ ಅಂಬರೀಷ್ ಸಿಂಗಾಪುರಕ್ಕೆ ಸ್ಥಳಾಂತರ ಇಲ್ಲ: ಡಾ.ಗುಲೇರಿಯಾ

Friday, February 28th, 2014
Ambarish

ಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯುವ ನಿರ್ಧಾರವನ್ನು ಸದ್ಯಕ್ಕೆ ಕೈ ಬಿಡಲಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ರಣದೀಪ್ ಗುಲೇರಿಯಾ ಅವರು ಶುಕ್ರವಾರ ಹೇಳಿದ್ದಾರೆ. ಅಂಬರೀಷ್ ಚಿಕಿತ್ಸೆ ಪಡೆಯುತ್ತಿರುವ ವಿಕ್ರಂ ಆಸ್ಪತ್ರೆಗೆ ಭೇಟಿ, ಅಂಬಿ ಆರೋಗ್ಯ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಲೇರಿಯಾ, ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಇನ್ನು ಕೆಲವು ವರದಿಗಳು ಬರಬೇಕಿದೆ. […]

ಹೆಚ್ಚಿನ ಚಿಕಿತ್ಸೆಗಾಗಿ ಅಂಬಿ ವಿದೇಶಕ್ಕೆ?

Friday, February 28th, 2014
Ambarish

ಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ. ಕಳೆದ ಒಂದು ವಾರದಿಂದ ಅಂಬರೀಷ್ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರು ದಿನಗಳ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಂಬಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ವೈದ್ಯರು ಹಾಗೂ ಅಂಬರೀಷ್ ಅವರ ಪತ್ನಿ ಸುಮಲತಾ ಅವರೊಂದಿಗೆ ಮಾತುಕತೆ ನಡೆಸಿದ ರಜನಿ, ಹೆಚ್ಚಿನ ಚಿಕಿತ್ಸೆಗಾಗಿ ಅಂಬರೀಷ್ ಅವರನ್ನು ಸಿಂಗಾಪುರದ […]

ಹಿರೇಮಠ ವಿರುದ್ಧ ಮಾನನಷ್ಟ ಮೊಕದ್ದಮೆ

Tuesday, February 25th, 2014
S.R.Hiremath

ಬೆಂಗಳೂರು: ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ವಿರುದ್ಧ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಂಗಳವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹಿರೇಮಠ ಅವರು ಪ್ರಚಾರಕ್ಕಾಗಿ ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ರಮೇಶ್ ಕುಮಾರ್, ಈ ಸಂಬಂಧ ನಗರದ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ. ಕೋರ್ಟ್ ರಮೇಶ್ ಕುಮಾರ್ ಅವರ ಅರ್ಜಿಯನ್ನು ಸ್ವೀಕರಿಸಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಸಲಿದೆ. ಈ ಮೂಲಕ ಹಿರೇಮಠ ಹಾಗೂ ರಮೇಶ್ […]