Blog Archive

ಅಲ್ಪಸಂಖ್ಯಾತರ ಓಲೈಕೆಗೆ ಕೇಂದ್ರ ಸರ್ಕಾರ ಯತ್ನ ಆರೋಪ, ಪ್ರತಿಭಟನೆ

Tuesday, March 27th, 2018
hindu-janagrate

ಮಂಗಳೂರು: ಹಜ್ ಯಾತ್ರೆ ಅನುದಾನ ರದ್ದುಗೊಳಿಸಿ ವಿಮಾನ ಪ್ರಯಾಣದಲ್ಲಿ ಅಗಾಧ ರಿಯಾಯಿತಿ ಘೋಷಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ಅಲ್ಪಸಂಖ್ಯಾತರ ಒಲೈಕೆ ಮಾಡಲು ಮುಂದಾಗಿದೆ ಎಂದು ಆರೋಪಿಸಿ ಹಿಂದೂ ಜನಜಾಗೃತಿ ಸಮಿತಿಯವರು ಪುತ್ತೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕ ಜನಾರ್ಧನ ಗೌಡ, ಸುಪ್ರೀಂ ಕೋರ್ಟ್‌ನ ಆದೇಶವಿದ್ದರೂ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹಜ್ ಯಾತ್ರೆಗೆ ನೀಡಲಾಗುತ್ತಿದ್ದ ಅನುದಾನವನ್ನು ರದ್ದು ಪಡಿಸಿರಲಿಲ್ಲ. ಕಳೆದ ಮೂರು ವರ್ಷಗಳಿಂದ […]

ಬಿಜೆಪಿಗೆ ಹೋಗುವ ಗೇಟ್‌ ಬಂದ್‌ ಆಗಿದ್ರೆ ಹೋಗುವುದು ಹೇಗೆ?

Thursday, March 22nd, 2018
Udupi-Pramod

ಉಡುಪಿ: ‘ನಾನು ಉಡುಪಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. ಪಕ್ಷದ ಟಿಕೇಟ್‌ಗಾಗಿ ಅರ್ಜಿಯನ್ನು ಸಲ್ಲಿಸಿದ್ದು 1 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದೇನೆ’ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಗುರುವಾರ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ನಡೆಸಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಬಿಜೆಪಿ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ‘ಬಿಜೆಪಿಗೆ ಹೋಗುವ ಗೇಟ್‌ ಬಂದ್‌ ಆಗಿದ್ರೆ ಹೋಗುವುದು ಹೇಗೆ? ಬಿಜೆಪಿಗೆ ಹೋಗಲು ನನಗೆ ಇಬ್ಬರುನಾಯಕರು ತಡೆ ಹಾಕಿದ್ದಾರೆ. ಒಬ್ಬರು […]

ಬಿಜೆಪಿಗೆ ಭ್ರಷ್ಟಾಚಾರವೇ ಶಕ್ತಿ: ರಾಹುಲ್‌ ಗಾಂಧಿ

Wednesday, March 21st, 2018
rahul-mangaluru

ಮಂಗಳೂರು: ಬಿಜೆಪಿಗೆ ಅಧಿಕಾರ ಗಳಿಸುವುದೊಂದೇ ಗುರಿಯಾಗಿದ್ದು, ಅದಕ್ಕಾಗಿ ಎಲ್ಲ ಕುತಂತ್ರಗಳನ್ನೂ ಅವರು ಅನುಸರಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕಾಂಗ್ರೆಸ್‌ಗೆ ಮಾತ್ರ ಸತ್ಯ, ನ್ಯಾಯಗಳೇ ಮುಖ್ಯ, ದೇಶದ ರಕ್ಷಣೆ ಕಾಂಗ್ರೆಸ್‌ನ ಪ್ರಥಮ ಆದ್ಯತೆ ಎಂದು ನೆಹರೂ ಮೈದಾನದಲ್ಲಿ ಇಂದು ಜರಗಿದ ಸಾರ್ವಜನಿಕ ಸಭೆಯಲ್ಲಿ ಅವರು ಹೇಳಿದರು. ಮೋದಿ ಸರಕಾರ ಕಳೆದ 4 ವರ್ಷಗಳ ಅವಧಿಯಲ್ಲಿ ದೇಶವನ್ನು ಸಂಪೂರ್ಣ ಅಧಃಪತನಗೊಳಿಸಿದೆ. ಹಣ ಬಲ, ತೋಳ್ಬಲ, ಒಳಸಂಚುಗಳನ್ನೇ ಅಸ್ತ್ರಗಳಾಗಿ ಬಳಸಿ ಅನ್ಯಾಯದಿಂದ ಅಧಿಕಾರಕ್ಕೆ ಏರುತ್ತಿದೆ. ಆದರೆ […]

ಯೋಗಿ, ಅಮಿತ್ ಶಾ ಬಂದರೂ ಬಿಜೆಪಿ ಗೆಲ್ಲುವುದಿಲ್ಲ : ಸಿದ್ದರಾಮಯ್ಯ

Wednesday, March 21st, 2018
siddaramaih

ಮಂಗಳೂರು: ‘ಕರ್ನಾಟಕ ಶಿಶುನಾಳ ಷರೀಫ, ಬಸವಣ್ಣ ಅವರ ನಾಡು. ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಎಷ್ಟು ಬಾರಿ ಬೇಕಾರೂ ಬರಲಿ, ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸಂಜೆ ಮಂಗಳೂರಿನ ನೆಹರು ಮೈದಾನದಲ್ಲಿ ಜನಾಶೀರ್ವಾದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬೃಹತ್ ಸಮಾವೇಶ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು. ಕಾಂಗ್ರೆಸ್ ಪಾಂಡವರಂತೆ, ಬಿಜೆಪಿ ಕೌರವರಂತೆ : ರಾಹುಲ್ ಗಾಂಧಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ […]

ಶಾಸಕ ನಡಹಳ್ಳಿ, ಮಾಜಿ ಸಚಿವರ ಪುತ್ರ ಬಿಜೆಪಿಗೆ ಸೇರ್ಪಡೆ

Wednesday, March 21st, 2018
yedeyorappa

ಬೆಂಗಳೂರು: ಸ್ಥಳೀಯ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ದೇವರಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್‍ ನಡಹಳ್ಳಿ, ಮಾಜಿ ಸಚಿವ ವೆಂಕಟರಮಣಪ್ಪ ಅವರ ಪುತ್ರ ಕುಮಾರಸ್ವಾಮಿ ಹಾಗೂ ಮಧುಗಿರಿ ಮಾಜಿ ಶಾಸಕ ಗಂಗಹನುಮಯ್ ಮತ್ತಿತರರು ಬಿಜೆಪಿಗೆ ಇಂದು ಅಧಿಕೃತವಾಗಿ ಸೇರ್ಪಡೆಯಾದರು. ಮಲ್ಲೇಶ್ವರಂನ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಲವು ಮುಖಂಡರ ಸಮ್ಮುಖದಲ್ಲಿ ಈ ಮೂವರನ್ನು ಬಿಜೆಪಿ ಬಾವುಟ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಇಂದು ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಆರಂಭದಲ್ಲೇ ಭಾರೀ ವಿರೋಧ ವ್ಯಕ್ತವಾಯಿತು. […]

ರಾಹುಲ್ ಪ್ರವಾಸದ ಬೆನ್ನಲ್ಲೇ ಮಾ.26 ರಿಂದ ಅಮಿತ್‌ ಶಾ ರಾಜ್ಯ ಪ್ರವಾಸ

Wednesday, March 21st, 2018
amit-shah

ಬೆಂಗಳೂರು: ಒಂದೆಡೆ ಕರಾವಳಿ ಜಿಲ್ಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಸಂಘಟನೆಗೆ ರಾಜ್ಯ ಪ್ರವಾಸ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾ. 26 ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಚುನಾವಣಾ ಆಯೋಗ ಯಾವುದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಪಡಿಸಲು ಸಜ್ಜಾಗಿದೆ. ಇದರ ಸುಳಿವು ಅರಿತಿರುವ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಸರಣಿ ಸಮಾರಂಭಗಳನ್ನು ಹಮ್ಮಿಕೊಂಡಿದೆ. ಮಾ. 26ರಿಂದ ಮೂರು ದಿನಗಳ ಕಾಲ ಅಮಿತ್ ಶಾ ಅವರು […]

ಬಿಜೆಪಿಯದ್ದು ಕೌರವರ ಪಕ್ಷ, ಕಾಂಗ್ರೆಸ್‌ ಪಾಂಡವರ ಪಕ್ಷ: ರಾಹುಲ್‌ ಗಾಂಧಿ ವಾಗ್ದಾಳಿ

Wednesday, March 21st, 2018
rahul-gandhi

ಮಂಗಳೂರು: ಬಿಜೆಪಿ ಕೌರವರ ಪಕ್ಷ, ಕಾಂಗ್ರೆಸ್ ಪಾಂಡವರ ಪಕ್ಷ. ಬಿಜೆಪಿಯದ್ದು ಸುಳ್ಳಿನ ಹಾದಿ, ಕಾಂಗ್ರೆಸ್‌ನದ್ದು ಸತ್ಯದ ನಡೆ ಎಂದು ಇಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಬ್ಬರಿಸಿದರು. ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ರಾಹುಲ್, ಜನಾಶೀರ್ವಾದ ರೋಡ್ ಶೋ ನಡೆಸಿದ ಬಳಿಕ ನೆಹರೂ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕೌರವರಿಗೆ ಯುದ್ಧ ಗೆಲ್ಲಲು ಬೇಕಾದ ಎಲ್ಲ ತಂತ್ರಗಳು, ಸೈನ್ಯ ಬಲವೂ ಇತ್ತು. ಕೊನೆಗೆ ಸತ್ಯದ ಹಾದಿಯಲ್ಲಿ ಪಾಂಡವರು ಗೆದ್ದರು […]

ಬಿಜೆಪಿಯ ಒರಿಜನಲ್ ಮತ್ತು ಡೂಪ್ಲಿಕೇಟ್‌ಗಳ ಮಧ್ಯೆ ಪೈಪೋಟಿ : ಐವನ್ ಡಿ. ಸೋಜಾ

Tuesday, March 20th, 2018
ivan-dsouza

ಮಂಗಳೂರು: ಬಿಜೆಪಿ, ಕೆಜೆಪಿ ಇನ್ನೂ ಜೀವಂತವಾಗಿದೆ. ಬಿಜೆಪಿಯ ಒರಿಜನಲ್ ಮತ್ತು ಡೂಪ್ಲಿಕೇಟ್‌ಗಳ ಮಧ್ಯೆ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಬೇರೆಯವರ ಹುಳುಕು ಹುಡುಕುವುದಕ್ಕಿಂತ ಆಂತರಿಕ ಸಮಸ್ಯೆಯನ್ನು ಬಗೆಹರಿಸಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ. ಸೋಜಾ ವಾಗ್ದಾಳಿ ನಡೆಸಿದರು. ಮೂಡುಬಿದಿರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಟಿಕೆಟ್ ಹಂಚಿಕೆಯಲ್ಲಿ ಹಣದ ಪ್ರಭಾವದ ಕುರಿತು ವೀರಪ್ಪ ಮೊಯ್ಲಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದೊಳಗಿನ ಸಮಸ್ಯೆಯನ್ನು ಹೈಕಮಾಂಡ್ ಸರಿಪಡಿಸಲಿದೆ. ಪ್ರತಿಯೊಂದರಲ್ಲಿಯೂ ಬಿಜೆಪಿ ಹುಳುಕು ಹುಡುಕುವುದು ಜಾಯಮಾನವಾಗಿದೆ ಎಂದು ಕಿಡಿಕರಿದರು.

ಮೋದಿ ಆರೋಪಕ್ಕೆ ಮೊಯ್ಲಿ ಸಾಕ್ಷಿ ನೀಡಿದ್ದಾರೆ: ವಾಮನ್‌ ಆಚಾರ್ಯ

Friday, March 16th, 2018
vaman-acharya

ಬೆಂಗಳೂರು: ಕರ್ನಾಟಕ ಸರ್ಕಾರ ಪರ್ಸೆಂಟೇಜ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಆರೋಪಕ್ಕೆ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಟ್ವೀಟ್ ಮೂಲಕ ಸಾಕ್ಷಿ ಒದಗಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಡಾ. ವಾಮನ್ ಆಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣ ಆದ ತಕ್ಷಣವೇ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರ ಮನೆಯಲ್ಲಿ ಗರಿ ಗರಿ ನೋಟುಗಳು ಸಿಕ್ಕಾಗಲೇ ಪರ್ಸೆಂಟೇಜ್ ವ್ಯವಹಾರದ ಸಾಕ್ಷಿ ಸಿಕ್ಕಿತ್ತು. […]

ಯೋಗಿ ಆಟ ಕರ್ನಾಟಕದಲ್ಲಿ ನಡೆಯಲ್ಲ: ರಮಾನಾಥ ರೈ

Friday, March 16th, 2018
ramanath-rai

ಮಂಗಳೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ತನ್ನ ಸ್ಟಾರ್ ಪ್ರಚಾರಕ ಎಂದು ಬಿಂಬಿಸುತ್ತಾ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಅವರನ್ನು ಬಳಸಿಕೊಂಡು ಮತ ಪಡೆಯಲು ನಿರ್ಧರಿಸಿದೆ. ಆದರೆ, ಈಗ ಆದಿತ್ಯನಾಥ್ ಅವರು ಮುಗ್ಗರಿಸಿ ಬಿದ್ದಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕ ಇನ್ನು ಸುಲಭದಲ್ಲಿ ಏಳೋದು ಕಷ್ಟ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಲೇವಡಿ ಮಾಡಿದರು. ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂವತ್ತು ವರ್ಷಗಳಿಂದ ಬಿಜೆಪಿಯನ್ನೇ ಗೆಲ್ಲಿಸುತ್ತಾ ಬಂದಿರುವ ಮತ್ತು ಯೋಗಿ […]