Blog Archive

ಯಡವಟ್ಟು ಮಾಡಿ ನಂತರ ತಿದ್ದಿಕೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

Wednesday, February 21st, 2018
amit-shaha

ಸುರತ್ಕಲ್: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ ಹಲ್ಲೆ ನಡೆಸಿ ಗಾಯಗೊಳಿಸಿರುವ ವಿದ್ವತ್ ಬಿಜೆಪಿ ಕಾರ್ಯಕರ್ತ ಎಂದಿದ್ದ ಅಮಿತ್ ಶಾ ತಮ್ಮ ಹೇಳಿಕೆ ತಪ್ಪು ಎಂದು ಸಮಜಾಯಿಷಿ ನೀಡಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕುಕ್ಕೆಯಲ್ಲಿ ಮಾತನಾಡುತ್ತಾ ಶಾಸಕ ಹ್ಯಾರಿಸ್ ಪುತ್ರ ಹಲ್ಲೆ ಮಾಡಿದ್ದ ವಿದ್ಯತ್ ಬಿಜೆಪಿ ಕಾರ್ಯಕರ್ತ ಹಾಗಾಗಿ ಹಲ್ಲೆಕೋರನ ಮೇಲೆ ಕೇಸು ದಾಖಲಿಸಲು ತಡಮಾಡಿದ್ದಾರೆ, ಅಷ್ಟೆ ಅಲ್ಲ ಆತ ಅಲ್ಪಸಂಖ್ಯಾತ ಎಂಬ ಕಾರಣಕ್ಕೆ ಕೇಸು ದಾಖಲಿಸಲು […]

ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಬಸ್‌ ಮೇಲೆ ದಾಳಿ… ಇಬ್ಬರಿಗೆ ಗಾಯ

Wednesday, February 21st, 2018
assulted

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದೆ. ಮಂಗಳೂರಿನ ಬೆಂಗ್ರೆ ಬಳಿ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಬಸ್‌ನಲ್ಲಿದ್ದವರ ಮೇಲೆ ಚೂರಿಯಿಂದ ಹಲ್ಲೆ ನಡೆಸಲಾಗಿದೆ. ಮಲ್ಪೆಯಲ್ಲಿ ಮೀನುಗಾರರ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಕಾರ್ಯಕರ್ತರ ಬಸ್ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದ್ದು, ಈ ವೇಳೆ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನೂ ಘಟನೆಯಲ್ಲಿ ಡಿಸಿಪಿ, ಎಸಿಪಿ, ಪಿಎಸ್ […]

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಶತಸಿದ್ಧ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

Tuesday, February 20th, 2018
yedeyorappa

ಮಂಗಳೂರು: ಪರಿವರ್ತನಾ ಯಾತ್ರೆಯ ಮೂಲಕ‌ ರಾಜ್ಯದ‌ ಉದ್ದಗಲಕ್ಕೆ ಪ್ರವಾಸ ಮಾಡಿದ್ದೇನೆ. ಆಯಾ ಭಾಗದ ಜ್ವಲಂತ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಜನರ ಆಶಯಗಳನ್ನು‌ ಆಲಿಸಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ಬಂಟ್ವಾಳದಲ್ಲಿ‌ ನವಶಕ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಬೂತ್ ಗಳನ್ನು ಬಲಪಡಿಸಬೇಕು. ಬೂತ್ ಮಟ್ಟದಲ್ಲಿ ಶೇ 60ರಷ್ಟು ಮತ ಪಡೆಯುವಲ್ಲಿ ಯಶಸ್ವಿಯಾಗಬೇಕು.‌‌ ಕಾಂಗ್ರೆಸ್ ನವರು‌ ಎಷ್ಟೇ ಪ್ರಬಲರಾಗಿದ್ದರೂ ತಲೆ ಕೆಡಿಸಿಕೊಳ್ಳಬೇಡಿ. ಬೂತ್ ಗಳನ್ನು ಬಲಪಡಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಕರ್ನಾಟಕ‌‌ದಲ್ಲಿ ಮಾತ್ರ ಅಧಿಕಾರದಲ್ಲಿದೆ.‌ ಮೂರುವರೆ ವರ್ಷದಲ್ಲಿ […]

ಸಿಎಂ ಓಲೈಕೆ ರಾಜಕಾರಣ ಯಶಸ್ವಿಯಾಗದು: ಅಮಿತ್ ಶಾ

Tuesday, February 20th, 2018
speech

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಪಕ್ಕದ ಕುಲ್ಕುಂದದಲ್ಲಿ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಮತ್ತು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಓಲೈಕೆ ರಾಜಕಾರಣ ಯಶಸ್ವಿಯಾಗುತ್ತದೆ ಎಂದು ಸಿದ್ದರಾಮಯ್ಯ ಅಂದುಕೊಂಡಿದ್ದರೆ ಅದು ಅವರ ತಪ್ಪು ಭಾವನೆ ಅಷ್ಟೆ. ಅವರ ಓಲೈಕೆ ಮತ್ತು ಧ್ರುವೀಕರಣ ರಾಜಕಾರಣವನ್ನು ಎನ್.ಎ.ಹ್ಯಾರಿಸ್ ಮಗನ ಪ್ರಕರಣದಲ್ಲಿ ಗಮನಿಸಬಹುದು. ಎಮ್ಎಲ್ಎ […]

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಅಮಿತ್ ಶಾ

Tuesday, February 20th, 2018
janata-party

ಸುಬ್ರಹ್ಮಣ್ಯ: ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಈ ಗೆಲುವು ದಕ್ಷಿಣ ಭಾರತದಲ್ಲಿ ಪಕ್ಷದ ಗೆಲುವಿಗೆ ಹೆಬ್ಬಾಗಿಲು ಆಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿರುವ ನವ ಕರ್ನಾಟಕ ನಿರ್ಮಾಣಕ್ಕಾಗಿ ‘ನವಶಕ್ತಿ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯ ಸರಕಾರದಲ್ಲಿ ಭ್ರಷ್ಟಾಚಾರಿಗಳಿದ್ದಾರೆ ಎಂದು ಆರೋಪಿಸಿದರು. ಶಾಸಕ ಹಾರಿಸ್ ಪುತ್ರನ […]

ಬಿಜೆಪಿ ರಾಷ್ಟ್ರಾಧ್ಯಕ್ಷರ ರಾಜ್ಯ ಪ್ರವಾಸ: ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ ಶಾ

Tuesday, February 20th, 2018
amit-shah

ಮಂಗಳೂರು: ರಾಜ್ಯದಲ್ಲಿ ಚುನಾವಣಾ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭಗೊಂಡಿದೆ. ಎರಡು ತಾಸು ವಿಳಂಬವಾಗಿ ಇಂದು ಸಂಜೆ ಸುಮಾರು 7.45ರ ವೇಳೆಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಅಮಿತ್ ಶಾ ಆಗಮಿಸಿದರು. ಶಾ ಅವರಿಗೆ ವಿಮಾನ ನಿಲ್ದಾಣದ ಕೆಂಜಾರಿನಲ್ಲಿ ಬಿಜೆಪಿ ಕಾರ್ಯಕರ್ತರು ಅಭೂತಪೂರ್ವ ಸ್ವಾಗತ ನೀಡಿ ಬರಮಾಡಿಕೊಂಡರು. ಸೇರಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರತ್ತ ಶಾ ಕೈ ಬೀಸಿ ಕುಕ್ಕೆ ಸುಬ್ರಹ್ಮಣ್ಯದತ್ತ ನಿರ್ಗಮಿಸಿದರು. ಈ ಸಂದರ್ಭ […]

ಬಿಜೆಪಿಯವರು ಚುನಾವಣಾ ಆಯೋಗವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದಾರಾ?

Monday, February 19th, 2018
u-t-kader

ಮಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆ ಘೋಷಣೆಯ ದಿನಾಂಕವನ್ನು ಮಾರ್ಚ್‌ ಅಂತ್ಯದವರೆಗೆ ಮುಂದೂಡುವಂತೆ ಆಹಾರ ಸಚಿವ ಯು.ಟಿ. ಖಾದರ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಚುನಾವಣೆ ಘೋಷಣೆ ದಿನಾಂಕವನ್ನು ಮುಂದೂಡಿದಂತೆ ಇಲ್ಲಿಯೂ ಮುಂದೂಡಬೇಕು. ಗುಜರಾತ್‌‌ನಲ್ಲಿ ಕೇವಲ 20 ದಿನ ಇರುವಾಗ ಹಾಗೂ ಹಿಮಾಚಲ ಪ್ರದೇಶದಲ್ಲಿ 30 ದಿನ ಇರುವಾಗ ಚುನಾವಣೆ ಘೋಷಣೆಯಾಗಿತ್ತು. ಇನ್ನು ಚುನಾವಣೆಗೆ ಒಂದು ವಾರ ಇರುವಾಗ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿತ್ತು […]

ಈ ಬಾರಿಯ ಚುನಾವಣೆಯಲ್ಲಿ ರೈ ಟಾರ್ಗೆಟ್‌: ಯಶಸ್ವಿಯಾಗುತ್ತಾ ಬಿಜೆಪಿ ತಂತ್ರ!?

Wednesday, February 14th, 2018
ramanath-rai

ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಮಟ್ಟಿಗೆ ಬಿಜೆಪಿಗೆ ಸಚಿವ ರಮಾನಾಥ ರೈಯವರೇ ಟಾರ್ಗೆಟ್‌ ಎನ್ನಲಾಗುತ್ತಿದೆ. ಕರಾವಳಿ ಜಿಲ್ಲೆಯ ಕಾಂಗ್ರೆಸ್‌ನ ಹೈಕಮಾಂಡ್ ಆಗಿರುವ ಸಚಿವ ರೈ ಅದ್ಯಾಕೋ ಗೊತ್ತಿಲ್ಲ ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದನ್ನೇ ಲಾಭ ಮಾಡಿಕೊಂಡಿರುವ ಬಿಜೆಪಿ ಗೆಲುವಿನ ತಂತ್ರ ಹೂಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಜಿಲ್ಲೆ ಮಾತ್ರವಲ್ಲ, ರಾಜ್ಯ, ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗುತ್ತಿವೆ. ಅಧಿಕಾರಿಗಳ ವರ್ಗಾವಣೆ, ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಗಳು […]

ಕಾರ್ಕಳದಲ್ಲಿ ಮಾದರಿ ಆಡಳಿತ: ಮಟ್ಟಾರು

Saturday, February 10th, 2018
karkala

ಕಾರ್ಕಳ: ಅನೇಕ ವಿಚಾರಗಳಲ್ಲಿ ಕಾರ್ಕಳ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಕಾಲದಲ್ಲಿ ವಿ. ಸುನಿಲ್‌ ಕುಮಾರ್‌ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಆಡಳಿತಾವಧಿಯಲ್ಲಿ ಅಚ್ಚರಿಯ ರೀತಿಯಲ್ಲಿ ಕ್ಷೇತ್ರ ಅಭಿಚೃದ್ಧಿಯಾಗಿದೆ. ಮಾದರಿ ಆಡಳಿತದಿಂದಾಗಿ ಪ್ರಸ್ತುತ ಕಾರ್ಕಳ ರಾಜ್ಯದಲ್ಲಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ತಾ.ಪಂ. ಕಚೇರಿ ಸಮೀಪ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್‌ ಕಾರ್ಡ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಸಕ ವಿ. […]

ರಾಜ್ಯದಲ್ಲಿ ನಾಳೆಯಿಂದ ಕೈ, ಬಿಜೆಪಿ ರಾಷ್ಟ್ರೀಯ ನಾಯಕರಿಂದ ರ‍್ಯಾಲಿಗಳ ಭರಾಟೆ

Friday, February 9th, 2018
narendra-modi

ಬೆಂಗಳೂರು: ಶತಾಯಗತಾಯ ರಾಜ್ಯ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲೇಬೇಕೆಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಷ್ಟ್ರೀಯ ಮುಖಂಡರು ಒಬ್ಬರಾದ ನಂತರ ಒಬ್ಬರು ರಾಜ್ಯದಲ್ಲಿ ರ‍್ಯಾಲಿಗಳನ್ನು ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆ. ನಾಳೆ (10) ಯಿಂದ ಮೂರು ದಿನ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಫೆ.18 ರಿಂದ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮುನ್ನ […]